Blog Archive

ವಿಧಾನಸಭೆಯ ವಿಪಕ್ಷ ನಾಯಕನಾಗಿ ಬಿಎಸ್ ಯಡಿಯೂರಪ್ಪ ಆಯ್ಕೆ?

Thursday, May 24th, 2018
yedeyurappa-bjp

ಬೆಂಗಳೂರು: ವಿಧಾನಸಭೆಯ ವಿಪಕ್ಷ ನಾಯಕನಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಆಯ್ಕೆಯಾಗುವ ಸಾಧ್ಯತೆಯಿದೆ. ಈಗಾಗಲೇ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಿರುವ ಬಿಎಸ್‌ವೈ ವಿಪಕ್ಷ ನಾಯಕನಾಗಿ ಆಯ್ಕೆಯಾಗಲಿದ್ದಾರೆ. ವಿಪಕ್ಷ ನಾಯಕನ ಜೊತೆಗೆ ರಾಜ್ಯಾಧ್ಯಕ್ಷ ಹುದ್ದೆಯಲ್ಲೂ ಬಿಎಸ್‌ವೈ ಮುಂದುವರಿಯಲಿದ್ದಾರೆ. ಈ ಕುರಿತು ಇಂದು ನಡೆಯುವ ಬಿಜೆಪಿ ಶಾಸಕಾಂಗ ಪಕ್ಷ ಸಭೆಯಲ್ಲಿ ಅಂತಿಮ ನಿರ್ಧಾರವಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಸಮ್ಮಿಶ್ರ ಸರಕಾರವನ್ನು ಸಮರ್ಥವಾಗಿ ಎದುರಿಸಲು ಬಿಎಸ್‌ವೈ ಉತ್ತಮ ಆಯ್ಕೆ ಎಂದು ತೀರ್ಮಾನಕ್ಕೆ ಬರಲಾಗಿದೆ. ಈ ಹಿಂದೆ ವಿಧಾನಸಭೆಯ ವಿಪಕ್ಷ […]

ಮೂಡಬಿದ್ರೆಯಲ್ಲಿ ಕಾಂಗ್ರೆಸ್, ಜೆಡಿಎಸ್ ವಿಜಯೋತ್ಸವ

Thursday, May 24th, 2018
moodbidre

ಮೂಡುಬಿದಿರೆ: ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಕಾರ್ಯಕರ್ತರು ಪ್ರತ್ಯೇಕವಾಗಿ ಪಟಾಕಿ ಸಿಡಿಸಿ ಕುಮಾರಸ್ವಾಮಿ ಪರ ಘೋಷಣೆ ಕೂಗಿ ವಿಜಯೋತ್ಸವ ಆಚರಿಸಿದರು. ಕಾಂಗ್ರೆಸ್ ವತಿಯಿಂದ ಪಕ್ಷದ ಕಚೇರಿಯಿಂದ ಬಸ್‌ನಿಲ್ದಾಣದ ವರೆಗೆ ಅಲ್ಲಲ್ಲಿ ಪಟಾಕಿ ಸಿಡಿಸಲಾಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ, ಪ್ರಧಾನ ಕಾರ್ಯದರ್ಶಿ ರತ್ನಾಕರ ಮೊಯ್ಲಿ, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಪ್ರಿಯಾ ಡಿ ಶೆಟ್ಟಿ, ಪುರಸಭಾ ಸದಸ್ಯರಾದ ಸುರೇಶ್ ಕೋಟ್ಯಾನ್, ಕೊರಗಪ್ಪ, ಮೂಡಾ ಅಧ್ಯಕ್ಷ ಸುರೇಶ್ ಪ್ರಭು ಮತ್ತಿತರರು […]

ಇಂದು ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ

Thursday, May 24th, 2018
yedeyurappa

ಬೆಂಗಳೂರು: ಇಂದು ಸಂಜೆ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಸಂಜೆ 6ಗಂಟೆಗೆ ಮಾಜಿ ಸಿಎಂ ಹಾಗೂ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಯಲಿದೆ. ಪಕ್ಷದ ರಾಜ್ಯಮಟ್ಟದ ನಾಯಕರು ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದು, ಶುಕ್ರವಾರ ನಡೆಯುವ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ವಿಶ್ವಾಸಮತದಲ್ಲಿ ಪಾಲ್ಗೊಳ್ಳಬೇಕೋ, ಬೇಡವೋ ಎಂಬ ಬಗ್ಗೆ ಚರ್ಚೆ ನಡೆಯಲಿದೆ. ಅಲ್ಲದೇ ಅತ್ಯಂತ ಸಮೀಪದಲ್ಲೇ ಇರುವ ಚುನಾವಣೆಗಳಲ್ಲಿ ಗೆಲ್ಲುವ ಸಂಬಂಧ ಕೈಗೊಳ್ಳಬೇಕಾದ ತಂತ್ರವನ್ನು ಹೆಣೆಯಲಾಗುತ್ತದೆ. ಒಂದರ ಹಿಂದೆ ಒಂದು ಚುನಾವಣೆ ಬರುತ್ತಿದ್ದು, ಸಮ್ಮಿಶ್ರ […]

ರಾಜ್ಯಾದ್ಯಂತ ಕರಾಳ ದಿನಾಚರಣೆ ಆಚರಿಸಿ ಬಿಜೆಪಿ ಪ್ರತಿಭಟನೆ

Wednesday, May 23rd, 2018
strike-bjp

ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ರಚನೆ ವಿರೋಧಿಸಿ ಬಿಜೆಪಿ ಇಂದು ರಾಜ್ಯಾದ್ಯಂತ ಕರಾಳ ದಿನಾಚರಣೆ ಆಚರಿಸುತ್ತಿದೆ. ಇಂದು ಸಂಜೆ ಹೆಚ್‌.ಡಿ.ಕುಮಾರಸ್ವಾಮಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಜಿಲ್ಲೆಗಳಲ್ಲಿ ಬಿಜೆಪಿ ಕಾರ್ಯಕರ್ತರು ಕಪ್ಪು ಪಟ್ಟಿ ಧರಿಸಿ, ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ವಿಜಯಪುರದ ಗಾಂಧಿ ವೃತ್ತದಲ್ಲಿ ಜಮಾಯಿಸಿದ್ದ ಬಿಜೆಪಿ ಮುಖಂಡರು, ಕಾರ್ಯಕರ್ತರು ಕೈಗೆ ಕಪ್ಪು ಪಟ್ಟಿ ಧರಿಸಿ, ಕೈಯಲ್ಲಿ ಕಪ್ಪು ಧ್ವಜ ಹಿಡಿದು ಕಾಂಗ್ರೆಸ್-ಜೆಡಿಎಸ್ ಮುಖಂಡರ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನೆಯಿಂದ ಕೆಲ ಹೊತ್ತು ಸಂಚಾರ ಅಸ್ತವ್ಯಸ್ತವಾಗಿತ್ತು. […]

ಮಾತು ತಪ್ಪಿದರೆ ಕುಮಾರಸ್ವಾಮಿಗೆ ತಕ್ಕ ಪಾಠ: ರೈತ ಸಂಘ ಎಚ್ಚರಿಕೆ

Wednesday, May 23rd, 2018
formers

ಮೈಸೂರು: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಹೆಚ್‌‌. ಡಿ. ಕುಮಾರಸ್ವಾಮಿ, ಮಾತು ತಪ್ಪದೇ ರೈತರ ಸಾಲ ಮನ್ನಾ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಗ್ರಹಿಸಿವೆ. ನ್ಯಾಯಾಲಯದ ಮುಂಭಾಗವಿರುವ ಪಾರ್ಕ್‌ ಆವರಣದಲ್ಲಿ ಪ್ರತಿಭಟನೆ ನಡೆಸಿದ ಕೃಷಿಕರು, ಜೆಡಿಎಸ್ ಪಕ್ಷಕ್ಕೆ ಮತದಾರರು ಬಹುಮತ ನೀಡದೇ ಇರಬಹುದು. ಆದರೆ, ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡವರು ರಾಜ್ಯದ ರೈತರ ಹಿತದೃಷ್ಟಿಯಿಂದ ಸಾಲ ಮನ್ನಾಕ್ಕೆ ಎಲ್ಲ ಸಹಕಾರ ನೀಡುತ್ತಾರೆ. ಎಲ್ಲರ ಸಹಕಾರ ಪಡೆದು ರೈತರ ಸಾಲ ಮಾಡಬೇಕು ಎಂದು […]

ರಾಜ್ಯದ 25ನೇ ಸಿಎಂ ಆಗಿ ಎಚ್ ಡಿ ಕುಮಾರಸ್ವಾಮಿ ಪ್ರಮಾಣ ವಚನ!

Wednesday, May 23rd, 2018
pramana-vachana

ಬೆಂಗಳೂರು: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಮೂರನೇ ಪುತ್ರ, ಎಚ್ ಡಿ ಕುಮಾರಸ್ವಾಮಿ (58) ಅವರು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಮೇ 23ರಂದು 4.32 ನಿಮಿಷದ ಸುಮಾರಿಗೆ ದೇವರು ಹಾಗೂ ಕನ್ನಡ ನಾಡಿನ ಜನರೆ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೂಲಕ ವಿಧಾನಸೌಧದ ಮುಂಭಾಗದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಯ ನೂತನ ಸರ್ಕಾರದ ಪದಗ್ರಹಣವಾಗಿದೆ. ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಾಳಯದಲ್ಲಿ ಸಂಭ್ರಮಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ಕಂಡು ಬಂದಿತ್ತು. ಮಳೆಯ ಕಣ್ಣಾಮುಚ್ಚಾಲೆಯ ನಡುವೆ ಕಿವಿಗಡಕಿಚ್ಚಿನ ಶಬ್ದ, […]

ಸ್ಥಿರ ಸರ್ಕಾರ ರಚನೆಗೆ ಹೆಚ್‌ಡಿಕೆ ಕಾರ್ಯತಂತ್ರ!

Tuesday, May 22nd, 2018
jds-kumarswamy

ಬೆಂಗಳೂರು: ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಯಾವುದೇ ವಿವಾದ, ಗೊಂದಲಗಳಿಗೆ ಅವಕಾಶ ಕೊಡದೆ ಐದು ವರ್ಷಗಳ ಸ್ಥಿರ ಸರ್ಕಾರ ನೀಡಬೇಕೆಂದು ಹೆಚ್.ಡಿ. ಕುಮಾರಸ್ವಾಮಿಯವರು ಕಾರ್ಯತಂತ್ರ ರೂಪಿಸುತ್ತಿದ್ದಾರೆ ಎನ್ನಲಾಗಿದೆ. ಸರ್ಕಾರ ರಚನೆ, ಸಚಿವ ಸಂಪುಟ ವಿಸ್ತರಣೆಯಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ಮಾಡಿಕೊಡದೆ ಐದು ವರ್ಷಗಳ ಕಾಲ ಸುಗಮವಾಗಿ ಸರ್ಕಾರ ನೀಡಲು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಮುಂದಾಗಿದ್ದಾರೆ. ಅಧಿಕಾರ ಹಂಚಿಕೆಯಲ್ಲಿ ತುಸು ಎಡವಟ್ಟು ಮಾಡಿಕೊಂಡರೂ ಅಪಾಯ ಕಟ್ಟಿಟ್ಟ ಬುತ್ತಿ ಎನ್ನುವುದನ್ನು ಅರಿತಿರುವ ಉಭಯ ಪಕ್ಷಗಳ ನಾಯಕರು ಅಂತಹ […]

ಸ್ಪೀಕರ್ ಸ್ಥಾನಕ್ಕಾಗಿ ಜೆಡಿಎಸ್ ಬಿಗಿ ಪಟ್ಟು?

Tuesday, May 22nd, 2018
devegowda

ಬೆಂಗಳೂರು: ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಮುಂದಿನ ದಿನಗಳಲ್ಲಿ ಸದನದಲ್ಲಿ ಏನಾದರು ಗೊಂದಲ ಇಲ್ಲವೆ, ಮೈತ್ರಿ ಪಕ್ಷದಲ್ಲಿ ಅಪಸ್ವರ ಕಂಡು ಬಂದರೆ ನೆರವಿಗೆ ಇರಲಿ ಎಂಬ ಕಾರಣಕ್ಕೆ ಜೆಡಿಎಸ್ ಪಕ್ಷ ಸ್ಪೀಕರ್ ಸ್ಥಾನ ತಮಗಿರಲಿ ಎಂಬ ಲೆಕ್ಕಾಚಾರದಲ್ಲಿ ಬಿಗಿ ಪಟ್ಟು ಹಿಡಿದಿದೆ ಎಂದು ತಿಳಿದುಬಂದಿದೆ. ಸಂಪುಟ ಸ್ಥಾನ ಹಂಚಿಕೆ ಗೊಂದಲದಲ್ಲಿರುವ ಕಾಂಗ್ರೆಸ್‌ಗೆ ಸ್ಪೀಕರ್ ಸ್ಥಾನ ಬಿಟ್ಟುಕೊಡಬೇಕೇ ಅಥವಾ ಬೇಡವೇ ಎನ್ನುವ ಹೊಸ ಗೊಂದಲ ಈಗ ಆರಂಭವಾಗಿದೆ. ಎರಡು ದಿನದೊಳಗೆ ನೂತನ ಸ್ಪೀಕರ್ ಪ್ರಮಾಣವಚನ ನಡೆಯಬೇಕಿರುವುದರಿಂದ ಆದಷ್ಟು […]

ಪ್ರಮಾಣವಚನಕ್ಕೂ ಮುನ್ನ ಹೆಚ್‌ಡಿಕೆ ಕುಟುಂಬದಿಂದ ಚಾಮುಂಡೇಶ್ವರಿಗೆ ವಿಶೇಷ ಪೂಜೆ

Tuesday, May 22nd, 2018
kumardevegowda

ಮೈಸೂರು: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಮುನ್ನ ನಾಡ ಅಧಿ ದೇವತೆ ಚಾಮುಂಡೇಶ್ವರಿಗೆ ನಿಯೋಜಿತ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಾಳೆ ಸಂಜೆ 4.30ಕ್ಕೆ ವಿಧಾನಸೌಧದ ಮುಂಭಾಗದಲ್ಲಿ ಪ್ರಮಾಣ ಸ್ವೀಕರಿಸುವ ಸಮಾರಂಭ ನಿಗದಿಯಾಗಿದ್ದು, ಇದಕ್ಕೂ ಮುನ್ನ ನಾಡ ಅಧಿ ದೇವತೆ ಚಾಮುಂಡಿ ತಾಯಿಗೆ ಬೆಳಗ್ಗೆ 8.45ರ ಶುಭ ಲಗ್ನದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಬೆಳಗ್ಗೆ ಹೆಲಿಕಾಪ್ಟರ್ ಮೂಲಕ ಲಲಿತ್ ಮಹಲ್ ಹೆಲಿಪ್ಯಾಡ್‌‌ಗೆ ಆಗಮಿಸಲಿರುವ ಕುಮಾರಸ್ವಾಮಿ, ನಂತರ ಅಲ್ಲಿಂದ ನೇರವಾಗಿ ನಾಡ ಅಧಿ ದೇವತೆ ಶ್ರೀ ಚಾಮುಂಡೇಶ್ವರಿಯತ್ತ ಪ್ರಯಾಣ ಬೆಳೆಸಲಿದ್ದಾರೆ. […]

ರೈತರ ಸಾಲ ಮನ್ನಾ ವಿಷಯ..ಧರ್ಮಸ್ಥಳದಲ್ಲಿ ಹೆಚ್‌ಡಿಕೆ ಗೊಂದಲದ ಹೇಳಿಕೆ..!

Tuesday, May 22nd, 2018
kumarswamy

ಮಂಗಳೂರು: ನನ್ನ ತಂದೆಯವರು ಧರ್ಮಸ್ಥಳ ಕ್ಷೇತ್ರದ ಭಕ್ತರು. ನನಗೆ ದೇವರ ಅನುಗ್ರಹ ಇದೆ. ಸಮ್ಮಿಶ್ರ ಸರ್ಕಾರಕ್ಕೆ ದೈವ ಪ್ರೇರಣೆ ಇದೆ. ಹಾಗಾಗಿ ದೇವರ ದರ್ಶನ ಮತ್ತು ಗುರು ಹಿರಿಯ ಆಶೀರ್ವಾದ ಪಡೆಯುತ್ತಿದ್ದೇನೆ ಎಂದು ನಿಯೋಜಿತ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಧರ್ಮಸ್ಥಳದಲ್ಲಿ ಮಂಜುನಾಥನ ದರ್ಶನ ಪಡೆದ ಬಳಿಕ ಮಾತನಾಡಿದ ಅವರು, ನಾಡಿನ‌ ನಿರೀಕ್ಷೆಗಳ ಬಗ್ಗೆ ದೇವರ ಬಳಿ ಪ್ರಾರ್ಥನೆ ಮಾಡಿರುವೆ. ನಾಡಿನಲ್ಲಿ ರೈತರಿಗೆ ಉತ್ತಮವಾದ ಮಳೆ-ಬೆಳೆ ಬಂದು ನಾಡಿನ ಸಮಸ್ಯೆಗಳು ಪರಿಹಾರವಾಗಬೇಕೆಂದು ದೇವರಲ್ಲಿ ಕೇಳಿಕೊಂಡಿದ್ದೇನೆ ಎಂದರು. ಕಾಂಗ್ರೆಸ್ ಮತ್ತು […]