ಸಚಿವರುಗಳಾದ ಜೆ.ಸಿ. ಮಾಧುಸ್ವಾಮಿ ಮತ್ತು ಅಂಗಾರ ಧರ್ಮಸ್ಥಳ ಭೇಟಿ

Sunday, January 17th, 2021
S Angara

ಉಜಿರೆ : ಸಚಿವರುಗಳಾದ ಜೆ.ಸಿ. ಮಾಧುಸ್ವಾಮಿ ಮತ್ತು ಅಂಗಾರ ಶನಿವಾರ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ ಸೇವೆ ಸಲ್ಲಿಸಿದರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಹೆಗ್ಗಡೆಯವರು ಉಭಯ ಸಚಿವರಿಗೂ ಶುಭ ಹಾರೈಸಿ ಗೌರವಿಸಿದರು. ಶಾಸಕ ಹರೀಶ್ ಪೂಂಜ ಮತ್ತು ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಉಪಸ್ಥಿತರಿದ್ದರು.

174 ಕೋಟಿ ರೂ. ವೆಚ್ಚದಲ್ಲಿ ನೇತ್ರಾವತಿ ನದಿಗೆ ಸೇತುವೆ ಸಹಿತ ಉಪ್ಪು ನೀರು ತಡೆ ಅಣೆಕಟ್ಟು ನಿರ್ಮಾಣ – ಜೆ.ಸಿ. ಮಾಧುಸ್ವಾಮಿ

Tuesday, November 24th, 2020
maduswami

ಮಂಗಳೂರು : ಗ್ರಾಮಗಳಿಗೆ ಕುಡಿಯುವ ನೀರು, ಕೃಷಿ ಚಟುವಟಿಕೆ ಹಾಗೂ ಅಂತರ್ಜಾಲ ಅಭಿವೃದ್ಧಿಗೆ ಪೂರಕವಾಗಿ ಅಂದಾಜು 174 ಕೋಟಿ ಮೊತ್ತದಲ್ಲಿ ನೇತ್ರಾವತಿ ನದಿಗೆ ಸೇತುವೆ ಸಹಿತ ಉಪ್ಪು ನೀರು ತಡೆ ಅಣೆಕಟ್ಟು ನಿರ್ಮಾಣವಾಗಲಿದೆ ಎಂದು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸಕ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು ಜೆ.ಸಿ. ಮಾಧುಸ್ವಾಮಿ ಹೇಳಿದರು. ಅವರು ಮಂಗಳವಾರ ಹರೇಕಳ ಸಮೀಪವಿರುವ ನೇತ್ರಾವತಿ ನದಿಗೆ ಸೇತುವೆ ಸಹಿತ ಉಪ್ಪು ನೀರು ತಡೆ ಅಣೆಕಟ್ಟು ನಿರ್ಮಾಣ ಕಾಮಗಾರಿಯ ಪರಿವೀಕ್ಷಣೆ ಮಾಡಿ, ಬಳಿಕ ಪತ್ರಕರ್ತರೊಂದಿಗೆ […]

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಜೆ.ಸಿ.ಮಾಧುಸ್ವಾಮಿ

Saturday, October 26th, 2019
madhu-swamy

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ನೆರೆ ಹಾವಳಿಯಿಂದ ಹಾನಿಗೀಡಾದ ಪ್ರದೇಶಕ್ಕೆ ಶನಿವಾರ ಭೇಟಿ ನೀಡುವ ಮುನ್ನ ರಾಜ್ಯ ಸರಕಾರದ ಕಾನೂನು, ಸಂಸದೀಯ ವ್ಯವಹಾರ ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ ಅವರು ಇಂದು ಬೆಳಿಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಈ ವೇಳೆ ಶಾಸಕ ಹರೀಶ್ ಪೂಂಜ ಮತ್ತಿರರು ಇದ್ದರು. ಬಳಿಕ ನೆರೆ ಹಾವಳಿಯಿಂದ ಹಾನಿಗೀಡಾದ ಕುಕ್ಕಾವು ಸೇತುವೆ ಪ್ರದೇಶಕ್ಕೆ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.