ಹ್ಯಾಕರ್‌ಗಳ ಮೋಸಕ್ಕೆ ಸಿಲುಕಿ ಸೌದಿ ಅರೇಬಿಯಾದ ಜೈಲಿನಲ್ಲಿದ್ದ ಕಡಬ ನಿವಾಸಿ ಸ್ವದೇಶಕ್ಕೆ ವಾಪಾಸ್
Sunday, November 19th, 2023ಕಡಬ: ಸೌದಿ ಅರೇಬಿಯಾದ ರಿಯಾದ್‌ನ ಜೈಲಿನಲ್ಲಿ ಕಳೆದ 11 ತಿಂಗಳಿನಿಂದ ಬಂಧಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್ ನವೆಂಬರ್ 20ರಂದು ಸ್ವದೇಶಕ್ಕೆ ಆಗಮಿಸಿದ್ದಾರೆ. ನವೆಂಬರ್ 20ರಂದು ಬೆಳಗ್ಗೆ ರಿಯಾದ್‌ನಿಂದ ಅಲ್ಲಿನ ಪೊಲೀಸರು ಚಂದ್ರಶೇಖರ್ ಅವರನ್ನು ವಿಮಾನದಲ್ಲಿ ಮುಂಬಯಿಗೆ ಕಳುಹಿಸಿಕೊಡಲಿದ್ದು, ಅವರು ಮುಂಬಯಿನಿಂದ ಸಂಜೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ ಎಂದು ತಿಳಿದುಬಂದಿದೆ. ಚಂದ್ರಶೇಖರ್ 2022ರಲ್ಲಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು ಅದೇ ಕಂಪೆನಿಯ ಮೂಲಕ ಸೌದಿ ಅರೇಬಿಯಾಕ್ಕೆ ತೆರಳಿದ್ದರು. ಅಲ್ಲಿಅಲ್ಪಾನರ್ […]