ಪೊಲೀಸ್ ಹೆಡ್ ಕಾನ್ಸ್‌ ಟೇಬಲ್ ಸುನೀಲ್ (50) ನಿಧನ

Tuesday, September 10th, 2024
sunil

ಮಂಗಳೂರು : ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹಿರಿಯ ಪೊಲೀಸ್ ಕಾನ್ಸ್‌ ಟೇಬಲ್ ಸುನೀಲ್ (50) ಅವರು ಅಲ್ಪ ಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕರಿಯಾಗದೇ ನಗರ ಖಾಸಾಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೂಲತಃ ಕಾಸರಗೋಡಿನವರಾದ ಸುನೀಲ್ ಅವರು 1996 ರಲ್ಲಿ ಪೊಲೀಸ್ ಸೇವೆಗೆ ಭರ್ತಿಯಾಗಿದ್ದರು ಬಳಿಕ ಉಡುಪಿ ಹಾಗೂ ಮಂಗಳೂರಿನ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಪ್ರಸ್ತುತ ಮಂಗಳೂರು ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ […]

ವಾರಾಂತ್ಯದ ಕರ್ಫ್ಯೂ ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಿ: ಡಾ.ರಾಜೇಂದ್ರ ಕೆ.ವಿ

Thursday, June 24th, 2021
KV Rajendra

ಮಂಗಳೂರು : ಕೊರೋನ ನಿಯಂತ್ರಣಕ್ಕೆ ವಾರಾಂತ್ಯದ  ಕರ್ಫ್ಯೂ ನಲ್ಲಿ ಸಂಪೂರ್ಣ ಲಾಕ್‍ಡೌನ್ ಇದ್ದು ಪರಿಣಾಮಕಾರಿಯಾಗಿ ಅನುಷ್ಟಾನಕ್ಕೆ ತರಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಸೂಚನೆ ನೀಡಿದರು. ಅವರು ಗುರುವಾರ  ತಮ್ಮ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಹಾಲ್‍ನಲ್ಲಿ ತಾಲೂಕುಗಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ತಹಶೀಲ್ದಾರ್‍ಗಳು, ತಾಲೂಕು ಆರೋಗ್ಯಾಧಿಕಾರಿಗಳ ಜೊತೆಗೆ ಕೊರೋನಾ ನಿಯಂತ್ರಣ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜೂನ್ 25ರ ಶುಕ್ರವಾರ ಸಂಜೆ 7ರಿಂದ ಜೂನ್ 28ರ ಸೋಮವಾರ ಬೆಳಗ್ಗೆ 7ರವರೆಗೆ ಜಿಲ್ಲೆಯಾದ್ಯಂತ ಸಂಪೂರ್ಣ […]

ಶಾಸಕ ವೇದವ್ಯಾಸ್ ಕಾಮತ್ ಅವರಿಗೆ ಕೋವಿಡ್ ದೃಢ

Friday, June 4th, 2021
vedavyas kamath

ಮಂಗಳೂರು: ಶಾಸಕ ವೇದವ್ಯಾಸ್ ಕಾಮತ್ ಅವರಿಗೆ ಕೋವಿಡ್ ದೃಢಪಟ್ಟಿದ್ದು, ಹೋಂ ಐಸೋಲೇಷನ್‌ನಲ್ಲಿದ್ದಾರೆ. ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಶಾಸಕರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ಈ ಕುರಿತು, ನನಗೆ ಸ್ವಲ್ಪ ಜ್ವರ ಬಂದ ಕಾರಣ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದೆ. ನನಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ ಎಂದು ಸಾಮಾಜಿಕ ತಾಣದಲ್ಲಿ ಮೆಸೇಜ್ ಹಾಕಿದ್ದರು. ಹೋಂ ಐಸೋಲೇಷನ್‌ನಲ್ಲಿರುವ ಬಗ್ಗೆ ಶಾಸಕರು ಮಾಹಿತಿ ಹಂಚಿಕೊಂಡಿದ್ದು, ಸಾರ್ವಜನಿಕರು ಆರೋಗ್ಯದ ಕಡೆ ಗಮನಹರಿಸುವಂತೆ ಮನವಿ ಮಾಡಿದ್ದು, ಸಾಂಕ್ರಾಮಿಕ ವಿರುದ್ಧ ಹೋರಾಟದಲ್ಲಿ ಗೆಲುವು ನಮ್ಮದೆ ಆಗಲಿದೆ ಎಂದು ತಿಳಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕೊರೋನಾ ಸೋಂಕು ದೃಢ

Tuesday, August 4th, 2020
Siddaramaiah

ಬೆಂಗಳೂರು: ಕರ್ನಾಟಕ ಮುಖ್ಯ ಮಂತ್ರಿ ಯಡಿಯೂರಪ್ಪಕೊರೋನಾ ಪಾಸಿಟಿವ್ ಆದ ಬೆನ್ನಲ್ಲೇ, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೂ ಕೊರೋನಾ ಸೋಂಕು ದೃಢವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನನ್ನ ಕೊರೋನಾ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ. ಯಾವುದೇ ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ […]

ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿಗೆ ಕೊವೀಡ್ -19 ಸೋಂಕು ದೃಢ

Tuesday, July 21st, 2020
Sugunendra Thirtha swamy

ಉಡುಪಿ :  ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಗೆ  ಕೊವೀಡ್ -19 ಸೋಂಕು ತಗುಲಿರುವುದು ದೃಢವಾಗಿದೆ. ಸೋಮವಾರ ರಾತ್ರಿ  ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಸುಗುಣೇಂದ್ರ ಶ್ರೀಗಳಿಗೆ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಸೋಮವಾರ ರಾತ್ರಿ ತಪಾಸಣೆಗೆಂದು ಆಸ್ಪತ್ರೆಗೆ ತೆರಳಿದ್ದರು. ಈ ವೇಳೆ ಅವರ ಗಂಟಲ ದ್ರವ ಪರೀಕ್ಷೆಗೆ ರವಾನಿಸಲಾಗಿತ್ತು. ಮಂಗಳವಾರ ವರದಿ ಕೈ ಸೇರಿದ್ದು, ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ಶ್ರೀಗಳನ್ನು ದಾಖಲಿಸಲಾಗಿದೆ. ಸ್ವಾಮೀಜಿಗಳು ಇಂದಿನಿಂದ ಪಾಡಿಗಾರು ಮಠದಲ್ಲಿ ಚಾರ್ತುಮಾಸ […]

ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯನ್ನು ತನ್ನ ವಾಹನದಲ್ಲಿ ಆಸ್ಪತ್ರೆಗೆ ಸೇರಿಸಿದ ಬೆಳ್ತಂಗಡಿ ತಹಶೀಲ್ದಾರ್

Friday, August 23rd, 2019
Tahshidar

 ಬೆಳ್ತಂಗಡಿ : ಪ್ರವಾಹಪೀಡಿತ ಪ್ರದೇಶಕ್ಕೆ ತಲೆ ಮೇಲೆ ಸಾಮಗ್ರಿ ಹೊತ್ತು ಸಾಗಿಸಿದ ಬೆಳ್ತಂಗಡಿ ತಹಶೀಲ್ದಾರ್ ಗಣಪತಿ ಶಾಸ್ತ್ರಿ ಮತ್ತೆ ಸುದ್ದಿಯಾಗಿದ್ದಾರೆ. ಈ ಬಾರಿ ಪ್ರವಾಹಪೀಡಿತ ಪ್ರದೇಶದಲ್ಲಿ ಅನಾರೋಗ್ಯದಿಂದ ನರಳುತ್ತಿದ್ದ ವ್ಯಕ್ತಿಯೊಬ್ಬರನ್ನು ತಮ್ಮ ವಾಹನದಲ್ಲಿ ಆಸ್ಪತ್ರೆಗೆ ತಲುಪಿಸಿ ಚಿಕಿತ್ಸೆ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದಿದ್ದಾರೆ. ಇತ್ತೀಚೆಗೆ ಸುರಿದ ಭಾರೀ ಮಳೆಗೆ ಸೇತುವೆ ಕೊಚ್ಚಿಹೋಗಿರುವ ಬಾಂಜಾರು ಮಲೆಯ ಮಲೆಕುಡಿಯರ ಕಾಲನಿಯಲ್ಲಿ ಐತಪ್ಪ ಎಂಬುವರು ಅನಾರೋಗ್ಯಕ್ಕೆ ತುತ್ತಾಗಿದ್ದರು. ಆದರೆ ಐತಪ್ಪ ಅವರನ್ನು ಆಸ್ಪತ್ರೆಗೆ ಸಾಗಿಸಲು ಯಾವುದೇ ವಾಹನ ವ್ಯವಸ್ಥೆ ಇಲ್ಲದೆ ಐತಪ್ಪ […]

ನ್ಯೂಮೋನಿಯಾ ದಿಂದ ಉಪ್ಪಳದ ವ್ಯಕ್ತಿ ಸಾವು

Tuesday, July 2nd, 2019
ramesh-shetty

ಕಾಸರಗೋಡು : ಉಪ್ಪಳ ಜೋಡುಕಲ್ಲು ಓಪತ್ತಿಮೂಲೆಯ ರಮೇಶ್ ಶೆಟ್ಟಿ(44)  ನ್ಯೂಮೋನಿಯಾ ದಿಂದ ಸೋಮವಾರ  ಸಾವನ್ನಪ್ಪಿದ್ದಾರೆ . ಪೈಂಟಿಂಗ್ ಕಾರ್ಮಿಕನಾಗಿದ್ದ ರಮೇಶ್ ಶೆಟ್ಟಿ ಒಂದು ವರ್ಷದ ಹಿಂದೆ ಮುಂಬೈಯ ಹೋಟೆಲ್ ನಲ್ಲಿ ಕಾರ್ಮಿಕನಾಗಿ ಕೆಲಸಮಾಡಿದ್ದರು. ಬಳಿಕ ಊರಿಗೆ ಬಂದು ಪೈಂಟಿಂಗ್ ಕೆಲಸ ಮಾಡುತ್ತಿದ್ದರು. ಕೆಲ ದಿನಗಳ ಹಿಂದೆ ಕಲ್ಲಿಕೋಟೆಯಲ್ಲಿ ಕಟ್ಟಡವೊಂದರ ಪೈಂಟಿಂಗ್ ಕೆಲಸಕ್ಕೆ ತೆರಳಿದ್ದರು. ಜ್ವರದ ಹಿನ್ನಲೆಯಲ್ಲಿ ಊರಿಗೆ ಬಂದಿದ್ದ ರಮೇಶ್ ರವರು ಶುಕ್ರವಾರ ಉಪ್ಪಳದ ಖಾಸಗಿ ಆಸ್ಪತ್ರೆಯಿಂದ ಔಷದಿ ತೆಗೆದುಕೊಂಡರೂ ವಾಸಿಯಾಗದ ಕಾರಣ ಶನಿವಾರ ದೇರಳಕಟ್ಟೆ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. […]