ಕೊಡಗು ಪ್ರವೇಶದ ಚೆಕ್ ಪೋಸ್ಟ್‌ಗಳಲ್ಲಿ ಪೊಲೀಸ್ ಕಣ್ಗಾವಲು
Friday, November 8th, 2019ಮಡಿಕೇರಿ : ಈದ್ ಮಿಲಾದ್, ಟಿಪ್ಪು ಜಯಂತಿ ಹಾಗೂ ಸಧ್ಯದಲ್ಲಿಯೇ ಅಯೋಧ್ಯೆ ವಿವಾದದ ತೀರ್ಪು ಹೊರ ಬರಲಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ಅಗತ್ಯ ಭದ್ರತಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಕೊಡಗು ಪ್ರವೇಶದ ಚೆಕ್ ಪೋಸ್ಟ್‌ಗಳಲ್ಲಿ ಪೊಲೀಸ್ ಕಣ್ಗಾವಲು ಇರಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ.ಸುಮನ ತಿಳಿಸಿದ್ದಾರೆ. ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‌ಪಿ, ಕೇರಳ ರಾಜ್ಯದ ಕಣ್ಣೂರು, ವಯನಾಡು, ಕಾಸರಗೂಡು ಹಾಗೂ ಹಾಸನ, ಮೈಸೂರು ಜಿಲ್ಲೆಗಳ ಗಡಿಭಾಗಗಳಿಗೆ ಹೊಂದಿಕೊಂಡಂತೆ ೧೪ ಚೆಕ್ ಪೋಸ್ಟ್‌ಗಳನ್ನು ತೆರೆದಿದ್ದು, ವಾಹನ […]