ಸ್ಕೂಟರ್ ಮತ್ತು ಟ್ಯಾಂಕರ್ ಡಿಕ್ಕಿ- ತಂದೆ ಮಗಳು ಸಾವು

Tuesday, September 29th, 2020
Karawar Accident

ಕಾರವಾರ: ಸ್ಕೂಟರ್ ಮತ್ತು ಟ್ಯಾಂಕರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ತಂದೆ ಹಾಗೂ ಮಗಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ಮಂಗಳವಾರ  ನಡೆದಿದೆ. ಯಲ್ಲಾಪುರದ ಅರೆಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಈ ಘಟನೆ ನಡೆದಿದೆ. ವಿನೋದ್ ಕಿಂದಳಕರ್ (56) ಹಾಗೂ ಅವರ ಮಗಳು ಸುನೇಹಾ ಕಿಂದಳಕರ್ (12) ಮೃತ ದುರ್ದೈವಿಗಳು. ವಿನೋದ್ ಕಿಂದಳಕರ್ ಯಲ್ಲಾಪುರದ ಅಗ್ನಿಶಾಮಕ ದಳ ಠಾಣೆಯಲ್ಲಿ ಪ್ರಮುಖ ಅಗ್ನಿಶಾಮಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಮಗಳನ್ನು ಯಲ್ಲಾಪುರದಿಂದ ತಮ್ಮ […]

ಉಪ್ಪಿನಂಗಡಿ : ಕರ್ವೇಲ್ ನಲ್ಲಿ ಟ್ಯಾಂಕರ್ ನ ವಾಲ್ ತೆರೆದು ಭಾರೀ ಪ್ರಮಾಣದಲ್ಲಿ ಅನಿಲ ಸೋರಿಕೆ

Monday, November 4th, 2019
Tyankar

ಉಪ್ಪಿನಂಗಡಿ : ಅನಿಲ ಟ್ಯಾಂಕರ್ ಒಂದರ ಮೇಲ್ಭಾಗದ ವಾಲ್ ಮುಚ್ಚಳ ಏಕಾಏಕಿ ತೆರೆದು ಭಾರೀ ಪ್ರಮಾಣದಲ್ಲಿ ಅನಿಲ ಸೋರಿಕೆಯಾಗಿ ಸ್ಥಳದಲ್ಲಿ ಆತಂಕ ಮೂಡಿಸಿದ ಘಟನೆ ಉಪ್ಪಿನಂಗಡಿ ಬಳಿಯ ಕರ್ವೇಲ್ ನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಮಂಗಳೂರಿನಿಂದ ಹಾಸನ ಕಡೆ ಹೋಗುವ ಟೋಟಲ್ ಗ್ಯಾಸ್ ಕಂಪೆನಿಯ ಅನಿಲ ಟ್ಯಾಂಕರ್ ನ ಮೇಲ್ಭಾಗದ ವಾಲ್ ಕರ್ವೇಲ್ ಬಳಿ ಬೆಳಗ್ಗೆ 8 ರ ಸುಮಾರಿಗೆ ಏಕಾಏಕಿ ತೆರೆದುಕೊಂಡಿತ್ತು. ಈ ಸಂದರ್ಭ ರಭಸದಿಂದ ನೀರು ಚಿಮ್ಮುವ ಶೈಲಿಯಲ್ಲಿ ಗ್ಯಾಸ್ ಮೇಲ್ಭಾಗಕ್ಕೆ ಚಿಮ್ಮಿ, ಗಾಳಿಯೊಂದಿಗೆ […]

ಉಪ್ಪಿನಂಗಡಿ : ಟ್ಯಾಂಕರ್‌ನ ಒಳಗೆ ಚಾಲಕನ ಮೃತದೇಹ ಪತ್ತೆ  

Saturday, September 21st, 2019
tyankar

ಉಪ್ಪಿನಂಗಡಿ : ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು – ಮಂಗಳೂರು ನಡುವಿನ ಕೆಂಪುಹೊಳೆ ಸಮೀಪ ಟಾರ್‌ ಅನ್ನು ಹೊತ್ತೂಯ್ಯುವ ಟ್ಯಾಂಕರ್‌ನಲ್ಲಿ ಚಾಲಕನ ಶವ ಪತ್ತೆಯಾದ ಘಟನೆ ನಡೆದಿದೆ. ಶುಕ್ರವಾರ ಮುಂಜಾನೆ 11ರ ಸುಮಾರಿಗೆ ಮಾರನಹಳ್ಳಿ ಕೆಂಪುಹೊಳೆಯಿಂದ 10 ಕಿ.ಮೀ. ದೂರದಲ್ಲಿ ಹೊಸೂರಿನಿಂದ ಮಂಗಳೂರಿಗೆ ಬರುತ್ತಿದ್ದ ಟ್ಯಾಂಕರ್‌ ನಿಂತಿರುವುದನ್ನು ಗಮನಿಸಿದ ಅದೇ ಕಂಪೆನಿಯ ಇನ್ನೋರ್ವ ಚಾಲಕ ಟ್ಯಾಂಕರ್‌ ಬಳಿ ಚಾಲಕನನ್ನು ಮಾತನಾಡಿಸುವ ಇರಾದೆಯಲ್ಲಿ ತೆರಳಿದಾಗ ಟ್ಯಾಂಕರ್‌ನಲ್ಲಿ ಚಾಲಕ ಕಂಡಿರಲಿಲ್ಲ. ಟ್ಯಾಂಕರ್‌ ಸುತ್ತ ಹುಡುಕಾಡಿದಾಗ ಟ್ಯಾಂಕರ್‌ನ ಮೇಲ್ಭಾಗದ ಮುಚ್ಚಳ ತೆಗೆದುಕೊಂಡಿದ್ದು […]

ಲಾರಿ ಮತ್ತು ಟ್ಯಾಂಕರ್ ಮುಖಾಮುಖಿ ಡಿಕ್ಕಿ : ಹೊತ್ತಿ ಉರಿದ ಲಾರಿ

Friday, August 30th, 2019
bhatkala

ಭಟ್ಕಳ : ಲಾರಿ ಮತ್ತು ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ಡೀಸೆಲ್ ಟ್ಯಾಂಕಿಗೆ ಬೆಂಕಿ ತಗುಲಿ ರಸ್ತೆ ಮಧ್ಯೆದಲ್ಲಿಯೇ ಟ್ಯಾಂಕರ್ ಮತ್ತು ಲಾರಿ ಹೊತ್ತಿ ಉರಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೈಲೂರು ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಕೇರಳ ಹಾಗೂ ಕರ್ನಾಟಕದ ಬಿಜಾಪುರ ಮೂಲದ ಲಾರಿ ಮತ್ತು ಟ್ಯಾಂಕರ್’ಗಳ ನಡುವೆ ಈ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಡೀಸೆಲ್ ಟ್ಯಾಂಕರ್ ಮತ್ತು ಲಾರಿಗೆ ಬೆಂಕಿ ತಗುಲಿ ಹೊತ್ತಿ ಉರಿದು ಸಂಪೂರ್ಣ ಭಸ್ಮವಾಗಿದೆ. […]

ಟ್ಯಾಂಕರ್​ ಹಾಗೂ ಬೈಕ್​ ನಡುವೆ ಅಪಘಾತ: ಬೈಕ್​ ಸವಾರ ಸ್ಥಳದಲ್ಲೇ ಸಾವು

Tuesday, October 30th, 2018
accident

ಮಂಗಳೂರು: ಟ್ಯಾಂಕರ್ ಹಾಗೂ ಬೈಕ್ ನಡುವೆ ಅಪಘಾತವಾಗಿರುವ ಕಾರಣ, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿರುವ ಘಟನೆ ಮೆಲ್ಕಾರ್ ಸಮೀಪದ ಬೋಲಂಗಡಿ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ವಿಟ್ಲ ಪಾತ್ರತೋಟ ಸಮೀಪದ ಕೆಲಿಂಜ ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ ಹಸನ್ ಶಾಹಿಕ್(28) ಮೃತವ ದುರ್ದೈವಿ. ಮೂಡುಬಿದಿರೆಯ ಬುರ್ಕಾ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಹಸನ್, ಎಂದಿನಂತೆ ರಾತ್ರಿ ಕೆಲಸ ಮುಗಿಸಿ ಮೂಡುಬಿದಿರೆಯಿಂದ ಬಸ್ನಲ್ಲಿ ಬಂದು ಬಿಸಿ ರೋಡ್ನಲ್ಲಿ ಇರಿಸಿದ್ದ ತನ್ನ ಬೈಕ್ನಲ್ಲಿ ಮನೆಗೆ ತೆರಳುತ್ತಿದ್ದರು. ಮೆಲ್ಕಾರ್ ಸಮೀಪ ಬೈಕ್ಗೆ […]

ಭೀಕರ ಅಪಘಾತ;ಓರ್ವ ಸಾವು,8 ಗಂಭೀರ

Thursday, March 29th, 2018
accident

ಮಂಗಳೂರು: ನಿಂತಿದ್ದ ಟ್ಯಾಂಕರ್‌ಗೆ ಇನ್ನೋವಾ ಕಾರೊಂದು ಢಿಕ್ಕಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದು, ಕಾರಿನಲ್ಲಿದ್ದ ಇತರ 8 ಮಂದಿ ಗಂಭೀರವಾಗಿ ಗಾಯಗೊಂಡಿರುವ ಭೀಕರ ಅವಘಡ ಗುರುವಾರ ಬೆಳಗ್ಗೆ ನಡೆದಿದೆ. ವರದಿಯಾದಂತೆ ಬೆಳಗಾವಿ ಮೂಲದವರು ಪ್ರಯಾಣಿಸುತ್ತಿದ್ದ ಕಾರು ಅವಘಡಕ್ಕೀಡಾಗಿದ್ದು ಚಾಲಕ ಹನುಮಂತಯ್ಯ ಸಾವನ್ನಪ್ಪಿರುವ ದುರ್ದೈವಿ. 8 ಮಂದಿಯ ಸ್ಥಿತಿ ಚಿಂತಾಜನಕವಾಗಿದ್ದು ಅವರನ್ನು ಎಜೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಮಂಗಳೂರು ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರಾವಳಿಯಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ.. ನಿವಾಸಿಗಳ ಆಕ್ರೋಶ

Wednesday, March 28th, 2018
water-problem

ಮಂಗಳೂರು: ಸಮರ್ಪಕವಾಗಿ ಕುಡಿಯುವ ನೀರು ಸರಬರಾಜು ಮಾಡುವಂತೆ ಆಗ್ರಹಿಸಿ ಅಚಾರಿ ಜೋರ, ದೊಡ್ಡಳಿಕೆ ಹಾಗೂ ಎಮರಾಳು ಬಡಾವಣೆಯ ನಾಗರಿಕರು ಖಾಲಿ ಕೊಡ ಹಿಡಿದು ಕುಕ್ಕೆಪದವು ಗ್ರಾಮ ಪಂಚಾಯಿತಿ ಎದುರು ಧರಣಿ ನಡೆಸಿದರು. ಧರಣಿ ನಿರತರು ಮಾತನಾಡಿ, ಈ ಹಿಂದೆ ಕುಡಿಯವ ನೀರಿಗಾಗಿ ಪ್ರತಿಭಟನೆ ನಡೆಸಿದ್ದರಿಂದ ನಮ್ಮ ಪ್ರದೇಶಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗಿತ್ತು. ಆದರೆ ಈಗ ಎಂಟು ದಿನಗಳಿಂದ ಟ್ಯಾಂಕರ್ ನೀರು ಇಲ್ಲ. ನೀರಿಗಾಗಿ ಹಾಹಾಕಾರ ಎದ್ದಿದ್ದು, ಮತ್ತೆ ಅತಂತ್ರ ಸ್ಥಿತಿ ಎದುರಾಗಿದೆ ಎಂದು ಅಳಲು […]

ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ಟ್ಯಾಂಕರ್‌-ಮಿನಿ ಲಾರಿ- ಬಸ್‌ ನಡುವೆ ಭೀಕರ ಅಪಘಾತ

Wednesday, August 31st, 2016
serial-accident

ಉಪ್ಪಿನಂಗಡಿ/ಪುತ್ತೂರು: ರಾ.ಹೆ. 75ರ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ಮಂಗಳವಾರ ನಸುಕಿನ ವೇಳೆ ಟ್ಯಾಂಕರ್‌-ಮಿನಿ ಲಾರಿ- ಬಸ್‌ ನಡುವಿನ ಅಪಘಾತದಲ್ಲಿ ಇಬ್ಬರು ಮೃತಪಟ್ಟು, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ. ಮಿನಿ ಲಾರಿ ಚಾಲಕ ಮೈಸೂರು ಮೂಲದ ನಿವಾಸಿ ಪುರಂ ಪಾಷಾ (32), ಕ್ಲೀನರ್‌ ಹಾಸನದ ರಾಮ ಅಲಿಯಾಸ್‌ ರಮೇಶ್‌ (40) ಮೃತಪಟ್ಟವರು. ಪ್ರಯಾಣಿಕ ಶರೀಫ್‌ ಗಾಯಾಳು. ಮಂಗಳವಾರ ನಸುಕಿನ ಐದು ಗಂಟೆಗೆ ಮಂಗಳೂರಿನಿಂದ ಹಾಸನದತ್ತ ಸಂಚರಿಸುತ್ತಿದ್ದ (407) ಮಿನಿಲಾರಿಗೆ ನೀರಕಟ್ಟೆಯಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಟ್ಯಾಂಕರ್‌ ಢಿಕ್ಕಿಯಾಗಿದೆ. […]

ಕುಮಾರಧಾರಾ ನದಿಗೆ ಬಿದ್ದ ಟ್ಯಾಂಕರ್

Wednesday, August 10th, 2016
Gas-Tanker

ಮಂಗಳೂರು: ಮಂಗಳೂರಿನಿಂದ ಬೆಂಗಳೂರಿಗೆ ಗ್ಯಾಸ್ ಸಾಗಣೆ ಮಾಡುತ್ತಿದ್ದ ಎಚ್‌ಪಿಸಿಎಲ್‌ ಕಂಪನಿಗೆ ಸೇರಿದ ಟ್ಯಾಂಕರ್ ಕುಮಾರಧಾರಾ ನದಿಗೆ ಬಿದ್ದಿದೆ. ಟ್ಯಾಂಕರ್‌ನಿಂದ ಭಾರೀ ಪ್ರಮಾಣದಲ್ಲಿ ಗ್ಯಾಸ್ ಸೋರಿಕೆಯಾಗುತ್ತಿದ್ದು, ಆತಂಕ ಸೃಷ್ಟಿಯಾಗಿದೆ. ಮಂಗಳವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಉಪ್ಪಿನಂಗಡಿ ಬಳಿಯ ಉದನೆ ನರ್ಸರಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್ ನದಿಗೆ ಉರುಳಿ ಬಿದ್ದಿದೆ. ಲಾರಿ ಸೇತುವೆಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಬ್ರೇಕ್ ಹಾಕಿದಾಗ ಟ್ಯಾಂಕರ್ ನದಿಗೆ ಉರುಳಿದೆ. ಕುಮಾರಧಾರಾ ನದಿಗೆ ಗ್ಯಾಸ್ ಸೋರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಕೆಲವು ಹೊತ್ತು […]