ಮಂಗಳೂರು : ಸ್ಯಾಕ್ಸೊಫೋನ್ ವಾದಕ ಡಾ. ಕದ್ರಿ ಗೋಪಾಲನಾಥ್ ರವರು ನಿಧನ

Friday, October 11th, 2019
Kadri-Gopalnath

ಮಂಗಳೂರು : ಖ್ಯಾತ ಸ್ಯಾಕ್ಸೋಪೋನ್ ವಾದಕ ಕದ್ರಿ ಗೋಪಾಲನಾಥ್ (70) ವಯೋಸಹಜ ಅನಾರೋಗ್ಯದಿಂದ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕದ್ರಿಯವರು ಮಂಗಳೂರು ಎ.ಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವಿಶ್ವವಿಖ್ಯಾತ ಸ್ಯಾಕ್ಸೊಫೋನ್ ವಾದಕರಾದ ಗೋಪಾಲನಾಥ್‌ರವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪಾಣಿ ಮಂಗಳೂರಿನಲ್ಲಿ. ತಂದೆ ತನಿಯಪ್ಪ ನಾಗಸ್ವರ ವಿದ್ವಾಂಸರು. ಆಕಾಶವಾಣಿ ‘ಎ’ ಟಾಪ್ ಶ್ರೇಣಿಯ ಕಲಾವಿದರಾಗಿದ್ದರು. ವಿದೇಶಿ ವಾದ್ಯವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಂಡು , ಅದಕ್ಕೆ ಭಾರತೀಯ ಸಂಗೀತವನ್ನು ಕರಗತ ಮಾಡಿಸಿದವರಲ್ಲಿ ಕದ್ರಿ […]

ದಕ್ಷಿಣ ಕನ್ನಡ ಜಿಲ್ಲಾ ಕರಾವಳಿ ಉತ್ಸವಕ್ಕೆ ಚಾಲನೆ

Saturday, December 24th, 2016
Karavali-Uthsava

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕರಾವಳಿ ಉತ್ಸವಕ್ಕೆ ನಗರದ ಕದ್ರಿ ಉದ್ಯಾನವನದಲ್ಲಿ ನಿನ್ನೆ ಸಂಜೆ ಚಾಲನೆ ದೊರೆಯಿತು. ಉತ್ಸವಕ್ಕೆ ಕಲಾಮಾಮಣಿ ಪದ್ಮಶ್ರೀ ಡಾ. ಕದ್ರಿ ಗೋಪಾಲನಾಥ್ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ನಾವು ನಮ್ಮ ಜೀವನಶೈಲಿ ಹಾಗೂ ನಾವು ಮಾಡುವ ಕಾರ್ಯಗಳಲ್ಲಿ ಪರಿಪೂರ್ಣತೆ ಮತ್ತು ನ್ಯಾಯವನ್ನು ಪಾಲಿಸಿದರೆ ನ್ಯಾಯ ಮತ್ತು ಯಶಸ್ಸು ನಮ್ಮದಾಗುತ್ತದೆ. ಅನೇಕ ಸೌಂದರ್ಯಭರಿತ ಕಲೆಗಳನ್ನು ಹೊಂದಿರುವ ಅವಿಭಜಿತ ಜಿಲ್ಲೆಯಲ್ಲಿ ಕಲಾಪ್ರಕಾರಗಳ ಉತ್ಸವವನ್ನಾಚರಿಸುತ್ತಿರುವುದು ಸಂತೋಷದ ವಿಚಾರ ಎಂದರು. ರಾಜ್ಯ ಮತ್ತು ಪಶ್ಚಿಮ ಕರಾವಳಿಯನ್ನು ಪ್ರತಿಬಿಂಬಿಸುವ […]