ವಿದ್ಯಾರ್ಥಿ ದೆಸೆಯಲ್ಲೇ ಚಾರಿತ್ರಿಕ ಜೀವನಕ್ಕೆ ಬುನಾದಿ ರೂಪಿಸಿಕೊಳ್ಳಿ: ಡಾ. ಕುಮಾರ್

Tuesday, November 30th, 2021
Alvas Nss

ಮೂಡುಬಿದಿರೆ: ಪೋಷಕರು, ಶಿಕ್ಷಕರು ವಿದ್ಯಾರ್ಥಿಗಳಿಗೆ ದಾರಿ ತೋರಿಸಬಹುದು ಆದರೆ ವಿದ್ಯಾರ್ಥಿಗಳೇ ತಮ್ಮ ಭವಿಷ್ಯದ ಶಿಲ್ಪಿಗಳು. ವಿದ್ಯಾರ್ಥಿ ದಿಸೆಯಿಂದಲೇ ತಮ್ಮ ಚಾರಿತ್ರಿಕ ಜೀವನಕ್ಕೆ ಬುನಾದಿ ರೂಪಿಸಿಕೊಳ್ಳಬೇಕು ಎಂದು ದ.ಕ. ಜಿಲ್ಲಾಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಹೇಳಿದರು. ಆಳ್ವಾಸ್ ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ಆಳ್ವಾಸ್  ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ 2021-22 ಸಾಲಿನ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಎನ್‌ಎಸ್‌ಎಸ್ ಧ್ಯೇಯಗಳನ್ನು ಅಳವಡಿಸಿಕೊಳ್ಳವ ಮೂಲಕ ಉತ್ತಮ ವೈಯಕ್ತಿಕ ಬದುಕನ್ನು ರೂಪಿಸಿಕೊಳ್ಳುವುದರೊಂದಿಗೆ ಸಾಮಾಜಿಕ ಜವಾಬ್ದಾರಿಯಿಂದ ಜೀವನದ ನಡೆಸಬಹುದು.  ಇದರಿಂದ […]

ಅಪರ ಜಿಲ್ಲಾಧಿಕಾರಿ ಡಾ ಕುಮಾರ್ – ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆ

Thursday, January 24th, 2019
Dr. Kumar

ಮಂಗಳೂರು : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2018 ರ ಪ್ರಕ್ರಿಯೆಯಲ್ಲಿ ಅತ್ಯುತ್ತಮವಾಗಿ ಚುನಾವಣಾ ಕಾರ್ಯವನ್ನು ನಿರ್ವಹಿಸಿದ್ದಕ್ಕಾಗಿ, ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿ, ದಕ್ಷಿಣ ಕನ್ನಡ ಜಿಲ್ಲೆ, ಡಾ ಕುಮಾರ್ ಕೆ.ಎ.ಎಸ್ ರವರು ಅತ್ಯುತ್ತಮ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ ಎಂಬ ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಜನವರಿ 25 ರಂದು ಬೆಂಗಳೂರಿನಲ್ಲಿ ಗೌರವಾನ್ವಿತ ಘನತೆವೆತ್ತ ರಾಜ್ಯಪಾಲರು ಡಾ. ಕುಮಾರ್ ಕೆ.ಎ.ಎಸ್ ರವರಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.