ಸಿದ್ದರಾಮಯ್ಯ ನವರು ಕೊಟ್ಟಿದ್ದು ಅಕ್ಕಿ ಅಲ್ಲ, ಕೇವಲ ಚೀಲ : ಡಾ.ಕೆ.ಸುಧಾಕರ್‌

Tuesday, January 24th, 2023
sudhakar K

ಚಿಕ್ಕಬಳ್ಳಾಪುರ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಟ್ಟಿದಾಗಲೇ ಕಾಂಗ್ರೆಸ್‌ನಲ್ಲಿರಲಿಲ್ಲ. ಜನತಾದಳದಲ್ಲಿದ್ದು ಎಲ್ಲಾ ಬಗೆಯ ಅಧಿಕಾರ ಅನುಭವಿಸಿದ ಅವರು, ಅಧಿಕಾರದ ಆಸೆಗಾಗಿಯೇ ಕಾಂಗ್ರೆಸ್‌ಗೆ ಬಂದರು. ಇವರು ಮಾಡಿದ ಪಾಪದ ಕೆಲಸದಿಂದಾಗಿಯೇ ನಾನು ಕಾಂಗ್ರೆಸ್‌ ಬಿಟ್ಟು ಬಿಜೆಪಿಗೆ ಬಂದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು. ಅಜ್ಜವಾರದಲ್ಲಿ 494 ಕುಟುಂಬಗಳಿಗೆ ನಿವೇಶನ ಹಂಚಿಕೆ ಕಾರ್ಯಕ್ರಮದ ವೇಳೆ ಅವರು ಮಾತನಾಡಿದರು. ಕಾಂಗ್ರೆಸ್‌ನವರು ಪ್ರಜಾ ಧ್ವನಿ ಯಾತ್ರೆಯ ಹೆಸರಿನಲ್ಲಿ ನನ್ನ ವಿರುದ್ಧ ಪ್ರಚಾರ ಸಭೆ ಮಾಡಿದ್ದಾರೆ. ಆದರೆ […]

ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ , ಸ್ಥಳ ಪರಿಶೀಲನೆ

Wednesday, October 12th, 2022
Dr Sudhakar

ಉತ್ತರ ಕನ್ನಡ : ಜಿಲ್ಲೆಯ ಜನರ ಒತ್ತಾಸೆಯಂತೆಯೇ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಕುಮಟದಲ್ಲಿ ಸ್ಥಳ ಪರಿಶೀಲನೆ ನಡೆಸಲಾಗಿದೆ. ಶೀಘ್ರದಲ್ಲೇ ಈ ಯೋಜನೆಗೆ ಅನುಮೋದನೆ ನೀಡಿ ಅನುದಾನ ನಿಗದಿ ಮಾಡಲಾಗುವುದು. ಈ ಹಿಂದೆ ಆಯ್ಕೆ ಮಾಡಿದ್ದ 3 ಸ್ಥಳಗಳ ಪೈಕಿ ಮಿರ್ಜಾನ್‌ ಬಳಿಯಿರುವ ಸ್ಥಳವನ್ನು ಅಂತಿಮ ಮಾಡಲು ಚರ್ಚೆಯಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು. ಉತ್ತರ ಕನ್ನಡ ಜಿಲ್ಲೆಯ ಕುಮಟದಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಸಂಬಂಧ […]

ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ, ಸಾಹಿತ್ಯ ಸಮ್ಮೇಳನದ 89 ನೆ ಅಧಿವೇಶನ

Friday, December 3rd, 2021
Dharmasthala-Deepothsava

ಉಜಿರೆ: ದೀಪ ಬೆಳಕಿನ ಸಂಕೇತ. ಲಕ್ಷದೀಪೋತ್ಸವ ಕೇವಲ ಉತ್ಸವ ಅಲ್ಲ. ಶಿಕ್ಷಣ, ಮಾಹಿತಿ ಮತ್ತು ಜಾಗೃತಿಯೊಂದಿಗೆ ಭಕ್ತಿ ಮತ್ತು ಶರಣಾಗತಿ ಮೂಲಕ ದೇವರಿಗೆ ಕೃತಜ್ಞತೆ ಸಲ್ಲಿಸುವ ಉತ್ಸವವಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್ ಹೇಳಿದರು. ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಸಂದರ್ಭದಲ್ಲಿ ಆಯೋಜಿಸಿದ ಸಾಹಿತ್ಯ ಸಮ್ಮೇಳನದ 89ನೆ ಅಧಿವೇಶನವನ್ನು ಉದ್ಘಾಟಿಸಿ ಮಾತನಾಡಿದರು. ದೇವರಿಗೆ ದೀಪ ಹಚ್ಚುವುದು ಭಾರತೀಯ ಸಂಸ್ಕೃತಿಯ ಲಕ್ಷಣವಾಗಿದೆ. ಲಕ್ಷದೀಪೋತ್ಸವ ಸಂಸ್ಕೃತಿ ಉಳಿಸುವ, ಅಜ್ಞಾನದ […]

ಮಕ್ಕಳ ವ್ಯಕ್ತಿತ್ವ ವಿಕಸನ ಮಾಡುವ ಗುರುಗಳೇ ಶಿಕ್ಷಕರು: ಸಚಿವ ಡಾ.ಕೆ.ಸುಧಾಕರ್

Monday, September 6th, 2021
Teachers Day

  ಚಿಕ್ಕಬಳ್ಳಾಪುರ :  ಮಕ್ಕಳ ವ್ಯಕ್ತಿತ್ವ ವಿಕಸನ ಮಾಡುವ ಗುರುಗಳಾಗಿ ಶಿಕ್ಷಕರು ಕಾರ್ಯನಿರ್ವಹಿಸಬೇಕು. ಶಿಕ್ಷಕ ವೃತ್ತಿಯು ಕೇವಲ ವೇತನಕ್ಕೆ ಕೆಲಸ ಮಾಡುವ ಉದ್ಯೋಗವಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಜಿಲ್ಲಾಡಳಿತದಿಂದ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡಿದ ಸಚಿವರು, ಪೊಲೀಸರು, ವೈದ್ಯರ ಕೆಲಸ ವೇತನಕ್ಕಾಗಿ ಮಾಡುವುದಲ್ಲ. ಅದೇ ರೀತಿ ಶಿಕ್ಷಕ ವೃತ್ತಿ ಕೂಡ ಒಂದು ಸೇವೆ. ಶಿಕ್ಷಕರು ಸುಮಾರು 30-35 ವರ್ಷಗಳ ವೃತ್ತಿ ಬದುಕಿನಲ್ಲಿ ಸಾವಿರಾರು ವಿದ್ಯಾರ್ಥಿಗಳನ್ನು ನೋಡುತ್ತಾರೆ. ಆ ವಿದ್ಯಾರ್ಥಿಗಳಲ್ಲಿ ಅನೇಕರು […]

ಹೊರಮಾವು ನರ್ಸಿಂಗ್ ಕಾಲೇಜು ತಾತ್ಕಾಲಿಕ ಬಂದ್, ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಎಚ್ಚರ ವಹಿಸಲು ಸೂಚನೆ: ಸಚಿವ ಡಾ.ಕೆ.ಸುಧಾಕರ್

Saturday, September 4th, 2021
Nursing-College

  ಬೆಂಗಳೂರು :  ಹೊರಮಾವು ನರ್ಸಿಂಗ್ ಕಾಲೇಜು ಹಾಗೂ ಕೆಜಿಎಫ್ ನ ನರ್ಸಿಂಗ್ ಕಾಲೇಜಿನಲ್ಲಿ ಕೋವಿಡ್ ಪ್ರಕರಣಗಳು ಕಂಡುಬಂದಿದೆ. ಹೊರರಾಜ್ಯದಿಂದ ವಿದ್ಯಾರ್ಥಿಗಳು ಬರುವುದರಿಂದ ಶಿಕ್ಷಣ ಸಂಸ್ಥೆಗಳು ಎಚ್ಚರ ವಹಿಸಬೇಕೆಂದು ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಹೊರಮಾವು ಕ್ರಿಸ್ಟಿಯನ್ ನರ್ಸಿಂಗ್ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 300 ಮಂದಿ ಪೈಕಿ 34 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ತಾತ್ಕಾಲಿಕವಾಗಿ ಕಾಲೇಜು ಮುಚ್ಚಿಸಿ ಸುರಕ್ಷತಾ ಕ್ರಮ […]

ಗಡಿಭಾಗಗಳಿಂದ ಬರುವವರಿಗೆ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ: ಸಚಿವ ಡಾ.ಕೆ.ಸುಧಾಕರ್

Tuesday, August 31st, 2021
Sudhakar

ಚಿಕ್ಕಬಳ್ಳಾಪುರ :  ಕೇರಳದಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರಿಗೆ ಕಡ್ಡಾಯವಾಗಿ ಒಂದು ವಾರ ಸಾಂಸ್ಥಿಕ ಕ್ವಾರಂಟೈನ್ ಮಾಡಲು ಮುಖ್ಯಮಂತ್ರಿಗಳ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ ಜಿಲ್ಲೆಗಳಲ್ಲಿ ಯಾವ ರೀತಿ ನಿಯಮ ಪಾಲಿಸಬೇಕೆಂದು ಚರ್ಚಿಸಬೇಕಿದೆ. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಲಾಗುವುದು. ಪ್ರತಿ ದಿನ ಗಡಿ ಜಿಲ್ಲೆಗಳಿಗೆ ಬರುವ ಜನರಿಗೆ ಯಾವ ರೀತಿ ನಿಯಮ ಪಾಲಿಸಬೇಕೆಂದು ಚರ್ಚಿಸಲಾಗುವುದು ಎಂದರು. ಕೇರಳದಿಂದ […]

ಕ್ಷಯರೋಗ ಪರೀಕ್ಷೆಗೆ ಸ್ವಯಂಪ್ರೇರಿತರಾಗಿ ಮುಂದೆ ಬನ್ನಿ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

Tuesday, August 17th, 2021
Sudhakar

  ಬೆಂಗಳೂರು :  ಕೋವಿಡ್ ನಿಂದ ಗುಣಮುಖರಾದವರು ಸ್ವಯಂಪ್ರೇರಿತರಾಗಿ ಮುಂದೆ ಬಂದು ಕ್ಷಯರೋಗ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕೋರಿದರು. ಆಗಸ್ಟ್ 31 ರವರೆಗೆ ನಡೆಯಲಿರುವ ಕ್ಷಯರೋಗ ಪತ್ತೆ ಆಂದೋಲನಕ್ಕೆ ವಿಧಾನಸೌಧದಲ್ಲಿ ಚಾಲನೆ ನೀಡಿ ಸಚಿವರು ಮಾತನಾಡಿದರು. ಕೋವಿಡ್ ಸೋಂಕಿನಿಂದ ಗುಣಮುಖರಾದವರಿಗೆ ಕ್ಷಯರೋಗ ಪತ್ತೆ ಮಾಡುವ ವಿನೂತನ ಕಾರ್ಯಕ್ರಮ ಮಾಡಲಾಗಿದೆ. ರಾಜ್ಯದಲ್ಲಿ 28 ಲಕ್ಷಕ್ಕೂ ಹೆಚ್ಚು ಜನರು ಕೋವಿಡ್ ನಿಂದ ಗುಣಮುಖರಾಗಿದ್ದು, ಅವರಲ್ಲಿ ಫಾಲೋ ಅಪ್ ಮಾಡಲಾಗುವುದು. ಕೋವಿಡ್ ಶ್ವಾಸಕೋಶಕ್ಕೆ ಹೆಚ್ಚು […]

ಕೋವಿಡ್ ನಿಂದ ಮೃತಪಟ್ಟವರ ಮನೆಗಳಿಗೆ ಭೇಟಿ ನೀಡಿ ₹1 ಲಕ್ಷ ಪರಿಹಾರ ವಿತರಿಸಿದ ಸಚಿವ ಡಾ.ಕೆ.ಸುಧಾಕರ್

Thursday, August 5th, 2021
Sudhakar

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹಾಗೂ ಸಾವಿನ ಪ್ರಮಾಣ ನಿಯಂತ್ರಣದಲ್ಲಿದ್ದು, ಮೂರನೇ ಅಲೆಯ ಆತಂಕವಿಲ್ಲ ಎಂದು ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದರು. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕೋವಿಡ್ ನಿಂದ ತಮ್ಮವರನ್ನು ಕಳೆದುಕೊಂಡ ಕುಟುಂಬಕ್ಕೆ ಸಾಯಿಕೃಷ್ಣ ಚಾರಿಟಬಲ್ ಟ್ರಸ್ಟ್ ನಿಂದ ‘ಆಸರೆ’ ಕಾರ್ಯಕ್ರಮದಡಿ 1 ಲಕ್ಷ ರೂ. ಸಹಾಯಧನ ವಿತರಣೆ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದರು. ನೊಂದ ಕುಟುಂಬಗಳ‌ ಮನೆಗೆ ಭೇಟಿ ಕೊಟ್ಟ ಸಚಿವರು ಪರಿಹಾರದ ಮೊತ್ತವನ್ನು ವಿತರಿಸಿ ಸಾಂತ್ವನ ನೀಡಿದರು. ಚಿಕ್ಕಬಳ್ಳಾಪುರ ಜನತೆಯ ಆಶೀರ್ವಾದದಿಂದ ಎರಡನೇ […]

ಪಾರ್ಕಿನ್‍ಸನ್ ರೋಗಿಗಳ ಪ್ರಮಾಣ 2030 ರ ವೇಳೆಗೆ ಹೆಚ್ಚಳ : ಸಚಿವ ಡಾ.ಕೆ.ಸುಧಾಕರ್

Sunday, July 25th, 2021
Sudhakar

ಬೆಂಗಳೂರು : ಪಾರ್ಕಿನ್‍ಸನ್ ರೋಗಕ್ಕೆ ಒಳಗಾಗುವವರ ಪ್ರಮಾಣ 2030 ರ ವೇಳೆಗೆ ಶೇ.200-300 ರಷ್ಟು ಹೆಚ್ಚಾಗಲಿದ್ದು, ಈ ದಿಕ್ಕಿನಲ್ಲಿ ಪರಿಹಾರ ಕ್ರಮ ಕೈಗೊಳ್ಳಬೇಕಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಕಿಂಗ್ಸ್ ಕಾಲೇಜ್ ಲಂಡನ್ ಮತ್ತು ಪಾರ್ಕಿನ್‍ಸನ್ಸ್ ರಿಸರ್ಚ್ ಅಲಯನ್ಸ್ ಆಫ್ ಇಂಡಿಯಾ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ದೇಶದಲ್ಲಿ ಒಂದು ಲಕ್ಷ ಜನರಲ್ಲಿ 350-400 ಜನರು ಪಾರ್ಕಿನ್‍ಸನ್ ರೋಗಕ್ಕೆ ಒಳಗಾಗುತ್ತಿದ್ದಾರೆ. ಈ ಪ್ರಮಾಣ 2030 ರ ವೇಳೆಗೆ ಶೇ.200-300 […]

ಮಕ್ಕಳ ಸುರಕ್ಷತೆಗಾಗಿ ಶಾಲಾ ಸಿಬ್ಬಂದಿಗೆ ಕೋವಿಡ್ ಲಸಿಕೆ : ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

Thursday, July 22nd, 2021
Dr Sudhakar

ಬೆಂಗಳೂರು : ಯಾವುದೋ ಒಂದು ದಿನ ಶಾಲೆಗಳನ್ನು ಆರಂಭಿಸಬೇಕಾಗುತ್ತದೆ. ಇದಕ್ಕೆ ಸಿದ್ಧತೆಯಾಗಿ ಶಾಲೆಗಳ ಎಲ್ಲ ಸಿಬ್ಬಂದಿಗೆ ಆದ್ಯತೆಯಲ್ಲಿ ಕೋವಿಡ್ ಲಸಿಕೆ ನೀಡಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಶಾಲೆಗಳನ್ನು ಯಾವುದೋ ಒಂದು ದಿನ ಆರಂಭಿಸಲೇಬೇಕು. ಮಕ್ಕಳು ಯಾವಾಗಲೂ ಆನ್ ಲೈನ್ ತರಗತಿಯ ಮುಂದೆ ಕುಳಿತುಕೊಳ್ಳಲು ಸಾಧ್ಯವಿಲ್ಲ. ಆನ್ ಲೈನ್ ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುವ ಅಪಾಯವಿದೆ. ಆದ್ದರಿಂದ ಎಲ್ಲವನ್ನೂ ಅಳೆದು ತೂಗಿ ನಿರ್ಧಾರ ಕೈಗೊಳ್ಳಲಾಗುತ್ತದೆ. […]