ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಇನ್ನೂ ಅಭಿವೃದ್ಧಿಗೊಳ್ಳಬೇಕಾಗಿದೆ: ಡಾ. ಜಗದೀಶ್

Thursday, December 15th, 2016
Tourism

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಬೆಳೆಯಬೇಕು ಎಂಬ ಕೂಗು ಕೇಳಿಬರುತ್ತಿದ್ದರೂ ಇನ್ನೂ ಅಭಿವೃದ್ಧಿಗೊಳ್ಳಬೇಕಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಡಾ. ಜಗದೀಶ್ ಅಧ್ಯಕ್ಷತೆಯಲ್ಲಿ ಸಾರ್ವಜನಿಕ ಸಂವಾದ, ಸಮಾಲೋಚನಾ ಸಭೆ ನಡೆಯಿತು. ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಫುಲ ಅವಕಾಶಗಳಿದ್ದರೂ ಇದರ ಸದುಪಯೋಗವಾಗುತ್ತಿಲ್ಲ. ಆ ನಿಟ್ಟಿನಲ್ಲಿ ಪ್ರವಾಸಿ ತಾಣಗಳಲ್ಲಿ ಮೂಲಭೂತ ಸೌಕರ್ಯಗಳೊಂದಿಗೆ ಸುಸಜ್ಜಿತ ಸಂಪರ್ಕ ವ್ಯವಸ್ಥೆ, ಶುಚಿತ್ವಕ್ಕೆ ಗಮನಹರಿಸಬೇಕು ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು. ಜಿಲ್ಲೆಯ ಪ್ರವಾಸಿ ತಾಣಗಳಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಲು ಮತ್ತು ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾದ ಯೋಜನೆ ಅನುಷ್ಠಾನಗೊಳಿಸಲು […]

ನಿಯಮ ಉಲ್ಲಂಘಿಸಿ ಮರಳುಗಾರಿಕೆ ನಡೆಸಿದರೆ ಅಂತಹವರ ಪರವಾನಗಿಯನ್ನು ಅಮಾನತುಗೊಳಿಸಲಾಗುವುದು: ಜಗದೀಶ್

Monday, October 3rd, 2016
jagadeesh

ಮಂಗಳೂರು: ನಿಯಮ ಉಲ್ಲಂಘಿಸಿ ಮರಳುಗಾರಿಕೆ ನಡೆಸಿದರೆ ಅಂತಹವರ ಪರವಾನಗಿಯನ್ನು ಅಮಾನತುಗೊಳಿಸುವುದಾಗಿ ಜಿಲ್ಲಾಧಿಕಾರಿ ಡಾ.ಜಗದೀಶ್ ಎಚ್ಚರಿಕೆ ನೀಡಿದ್ದಾರೆ. ಮರಳುಗಾರಿಕೆಗೆ ಮತ್ತೆ ಅನುಮತಿ ನೀಡಿದ್ದಾರೆಂಬ ಶಂಕೆಗೆ ಸುದ್ದಿಗೋಷ್ಠಿಯಲ್ಲಿ ಉತ್ತರ ನೀಡಿದ ಅವರು, ಪರವಾನಗಿ ನಿಯಮದಂತೆ ಮರಳುಗಾರಿಕೆ ನಡೆಸುವ ಬಗ್ಗೆ ಗುತ್ತಿಗೆದಾರರಿಗೆ ನೋಟಿಸ್ ನೀಡಿದ್ದೆ. ಆಗ ಕೆಲವು ಮಂದಿ ನಿಯಮದಲ್ಲಿ ವಿನಾಯ್ತಿ ನೀಡುವಂತೆ ಆಗ್ರಹಿಸಿದ್ದರು. ಆದರೆ ಅದಕ್ಕೆ ಒಪ್ಪದ ಕಾರಣ, ಎಲ್ಲ ಷರತ್ತುಗಳಿಗೆ ಬದ್ಧವಾಗಿರುತ್ತೇವೆ ಎಂದು ಗುತ್ತಿಗೆದಾರರು ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಷರತ್ತು ಮೀರದಂತೆ ಮರಳುಗಾರಿಕೆ ನಡೆಸುವಂತೆ ಸೂಚಿಸಲಾಗಿದೆ ಎಂದು […]

ಪ್ರವಾಸಿ ಕೇಂದ್ರಗಳಿಗೆ ಮೂಲಭೂತ ಸೌಕರ್ಯ ಸಹಿತ ಎಲ್ಲಾ ರೀತಿಯ ಸೌಲಭ್ಯ ಒದಗಿಸಲು ಸರ್ಕಾರ ಬದ್ಧ: ರಮಾನಾಥ ರೈ

Wednesday, September 28th, 2016
world-tourism-day

ಮಂಗಳೂರು: ಪ್ರವಾಸೋದ್ಯಮ ಅಭಿವೃದ್ಧಿಗೆ ದ.ಕ. ಜಿಲ್ಲೆಯಲ್ಲಿ ವಿಫುಲ ಅವಕಾಶವಿದೆ. ಪ್ರವಾಸಿ ಕೇಂದ್ರಗಳಿಗೆ ಮೂಲಭೂತ ಸೌಕರ್ಯ ಸಹಿತ ಎಲ್ಲಾ ರೀತಿಯ ಸೌಲಭ್ಯ ಒದಗಿಸಲು ಸರ್ಕಾರ ಬದ್ಧವೆಂದು ಸಚಿವ ಬಿ.ರಮಾನಾಥ ರೈ ಹೇಳಿದರು. ಪ್ರವಾಸೋದ್ಯಮ ಇಲಾಖೆ ಮತ್ತು ಜಿಲ್ಲಾಡಳಿತ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಪ್ರವಾಸೋದ್ಯಮದ ಬಗ್ಗೆ ಜನರಲ್ಲಿ ಮಾಹಿತಿಯ ಕೊರತೆಯಿದೆ. ಈ ನಿಟ್ಟಿನಲ್ಲಿ ಅರಿವು ಮೂಡಿಸುವ ಅವಶ್ಯಕತೆ ಇದೆ ಎಂದರು. ಜಿಲ್ಲಾಧಿಕಾರಿ ಡಾ.ಜಗದೀಶ್ ಮಾತನಾಡಿ, ಜಿಲ್ಲೆಯಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಸಂಬಂಧಿಸಿದಂತೆ […]