ರೈತರ ಸಮಸ್ಯೆಗಳಿಗೆ ಪಕ್ಷಾತೀತವಾಗಿ ಸ್ಪಂದನೆ: ಡಾ. ಜಯಮಾಲಾ

Monday, December 24th, 2018
jayamala

ಉಡುಪಿ: ರೈತರು ದೇಶದ ಬೆನ್ನುಲುಬು, ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಪಕ್ಷಾತೀತವಾಗಿ ಪರಿಹರಿಸಲು ಎಲ್ಲಾ ಜನಪ್ರತಿನಿಧಿಗಳು ಪ್ರಯತ್ನಿಸಬೇಕು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ ತಿಳಿಸಿದ್ದಾರೆ. ಅವರು ಭಾನುವಾರ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ , ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಹಾಗೂ ಕೃಷಿ ಸಂಬಂದಿತ ಇಲಾಖೆಗಳು ಹಾಗೂ ಕೃಷಿಕ ಸಮಾಜದ ವತಿಯಿಂದ ಆಯೋಜಿಸಿದ್ದ ಅಂತಾರಾಷ್ಟ್ರೀಯ ರೈತರ ದಿನಾಚರಣೆ ಮತ್ತು […]

ಕನ್ನಡ ಮತ್ತು ಸಂಸ್ಕ್ರತಿ ಸಚಿವೆ ಡಾ. ಜಯಮಾಲಾರಿಗೆ ತುಳು ಅಕಾಡೆಮಿ ಅಭಿನಂದನೆ

Wednesday, June 13th, 2018
Tulu Academy

ಮಂಗಳೂರು: ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ನೂತನ ಸಚಿವರಾಗಿ ನೇಮಕಗೊಂಡಿರುವ ಡಾ. ಜಯಮಾಲಾರವರನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಸಚಿವರ ಗೃಹ ಕಛೇರಿಯಲ್ಲಿ ಭೇಟಿಯಾಗಿ ಅಭಿನಂಧಿಸಲಾಯಿತು. ಈ ಸಂದರ್ಭದಲ್ಲಿ ಅಕಾಡೆಮಿ ಅಧ್ಯಕ್ಷ ಎ.ಸಿ ಭಂಡಾರಿಯವರು ಮಂಗಳೂರಿನಲ್ಲಿರುವ ಅಕಾಡೆಮಿಯ ಸಾಂಸ್ಕ್ರತಿಕಭವನ ತುಳುಭವನಕ್ಕೆ ಭೇಟಿ ನೀಡಬೇಕೆಂದು ಸಚಿವರನ್ನು ವಿನಂತಿಸಿದರು. ಈಗಾಗಲೇ ತುಳುಭವನಕ್ಕೆ ಕಟ್ಟಡದ ಕಾಮಗಾರಿಗೆ 4.80 ಕೋಟಿ ಸರಕಾರದ ಅನುದಾನ ಬಿಡುಗಡೆಯಾಗಿದ್ದು 5 ಕೋಟಿಗೂ ಹೆಚ್ಚು ಮೊತ್ತ ಖರ್ಚಾಗಿರುತ್ತದೆ. ತುಳುಭವನದ ನೆಲ ಅಂತಸ್ತಿನ ಕಾಮಗಾರಿ ಪೂರ್ತಿ ಆಗಿದ್ದು […]