Blog Archive

ರಾಜ್ಯ ಕಾಂಗ್ರೆಸ್‍ನಲ್ಲಿ ಸದ್ಯ ಉಳಿದೆಲ್ಲಾ ಅಸಮಾಧಾನ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ!

Friday, June 22nd, 2018
dinesh-gundurao

ಬೆಂಗಳೂರು: ರಾಜ್ಯ ಕಾಂಗ್ರೆಸ್‍ನಲ್ಲಿ ಸದ್ಯ ಉಳಿದೆಲ್ಲಾ ಅಸಮಾಧಾನ, ಅತೃಪ್ತಿ ತಾತ್ಕಾಲಿಕವಾಗಿ ಶಮನವಾಗಿದ್ದು, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆದಿರುವ ಹೋರಾಟ ಸದ್ಯ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಉಪ ಮುಖ್ಯಮಂತ್ರಿ, ಗೃಹ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿರುವ ಕೆಪಿಸಿಸಿ ಅಧ್ಯಕ್ಷ ಡಾ. ಜಿ.ಪರಮೇಶ್ವರ್ ಕಡೆಗೂ ತಮ್ಮ 8 ವರ್ಷದ ಕೆಪಿಸಿಸಿ ಸಾರಥ್ಯವನ್ನು ಮುಗಿಸಬೇಕಿದೆ. ಹಲವು ಹುದ್ದೆ ಒಬ್ಬರಿಗೇ ನೀಡುವ ಪರಿಪಾಠ ಕಾಂಗ್ರೆಸ್‍ನಲ್ಲಿ ಇಲ್ಲ. ಪಕ್ಷ ಇಲ್ಲವೇ ಸರ್ಕಾರ ಎರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳಬೇಕಿದೆ. ಸದ್ಯ ಈ ಆಯ್ಕೆ ವಿಚಾರ ಬಂದಾಗ […]

ಘಟಾನುಘಟಿಗಳನ್ನೇ ಸಂಪುಟದಿಂದ ಕೈಬಿಟ್ಟ ಕಾಂಗ್ರೆಸ್-ಜೆಡಿಎಸ್..!

Wednesday, June 6th, 2018
congress-JDs

ಬೆಂಗಳೂರು: ಹಲವು ಕಸರತ್ತಿನ ಮೂಲಕ ರಚನೆಗೊಂಡ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವು ಕೊನೆಗೂ ಸಚಿವ ಸಂಪುಟ ರಚನೆಯ ಕಸರತ್ತು ಪೂರ್ಣಗೊಳಿಸಿದೆ. ಸಮ್ಮಿಶ್ರ ಸರ್ಕಾರದ ಸಚಿವರಾಗಿ ಜೆಡಿಎಸ್ ನ 10 ಮಂದಿ ಮತ್ತು ಕಾಂಗ್ರೆಸ್ ನ 15 ಮಂದಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅತ್ತ ಸಂಪುಟದಲ್ಲಿ ಸ್ಥಾನ ಪಡೆದವರು ಸಂಭ್ರಮಿಸುತ್ತಿದ್ದರೆ, ಹಲವು ಲಾಬಿಗಳನ್ನು ನಡೆಸಿದ ಹೊರತಾಗಿಯೂ ಸ್ಥಾನ ವಂಚಿತರಾದವರು ಬಹಿರಂಗವಾಗಿಯೇ ತಮ್ಮ ಅಸಮಾಧಾನಗಳನ್ನು ಹೊರಹಾಕುತ್ತಿದ್ದಾರೆ. ಸಚಿವ ಸಂಪುಟಕ್ಕೆ ಆಯ್ಕೆ ಸಂದರ್ಭದಲ್ಲಿ ಎರಡೂ ಪಕ್ಷಗಳಲ್ಲಿ ಹಲವು ಹಿರಿಯರನ್ನು ದೂರ ಇಡಲಾಗಿದೆ. ಅವರ ಸ್ಥಾನದಲ್ಲಿ […]

ಶಾಸಕ ಯು.ಟಿ.ಖಾದರ್ ಅವರಿಗೆ ಸಚಿವ ಸ್ಥಾನ ಖಚಿತ

Wednesday, June 6th, 2018
u-t-kader

ಮಂಗಳೂರು: ಸಚಿವ ಸಂಪುಟ ರಚನೆ ಹಿನ್ನೆಲೆಯಲ್ಲಿ ಸ್ಥಾನಗಳ ಹಂಚಿಕೆ ಬಗ್ಗೆ ಕುತೂಹಲ ಮೂಡಿರುವ ನಡುವೆಯೇ ಮಂಗಳೂರು ಶಾಸಕ ಯು.ಟಿ.ಖಾದರ್ ಅವರಿಗೆ ಸಚಿವ ಸ್ಥಾನ ಖಚಿತಗೊಂಡಿದೆ ಎನ್ನಲಾಗಿದೆ. ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿಯಾಗಿ ಡಾ.ಜಿ.ಪರಮೇಶ್ವರ್ ಪ್ರಮಾಣವಚನ ಸ್ವೀಕರಿಸಿದ ಬಳಿಕ ಸಚಿವ ಸಂಪುಟ ರಚನೆ ತೀವ್ರ ಕುತೂಹಲ ಸೃಷ್ಟಿಸಿತ್ತು. ಈ ಹಿಂದಿನ ಕಾಂಗ್ರೆಸ್ ಸರಕಾರದಲ್ಲಿದ್ದ ಹಲವು ಘಟಾನುಘಟಿಗಳು ಸಚಿವ ಸ್ಥಾನದಿಂದ ವಂಚಿತರಾಗಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಅಲ್ಲದೆ ಯು.ಟಿ. ಖಾದರ್ ರಿಗೆ ಸಚಿವ ಸ್ಥಾನ ಈ ಬಾರಿ ಸಿಗುವುದು ಸುಲಭದ […]

ಖಾತೆ ಹಂಚಿಕೆಯಲ್ಲಿ ಯಾವುದೇ ಅಸಮಾಧಾನ ಆಗದಂತೆ ಮೈತ್ರಿ ಸರ್ಕಾರ ನಡೆಸ್ತೀವಿ: ಡಾ. ಜಿ. ಪರಮೇಶ್ವರ್

Monday, June 4th, 2018
parameshwar

ಬೆಂಗಳೂರು: ಖಾತೆ ಹಂಚಿಕೆ ವಿಚಾರ, ಜಿಲ್ಲಾ ಉಸ್ತುವಾರಿ ಸಚಿವರ ನೇಮಕದಲ್ಲಿ ಯಾವುದೇ ಅಸಮಾಧಾನ ಇಲ್ಲ. ಯಾವುದೇ ಅಸಮಾಧಾನ ಆಗದಂತೆ ಮೈತ್ರಿ ಸರ್ಕಾರ ನಡೆಸ್ತೀವಿ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು ವಿದೇಶದಿಂದ ರಾಹುಲ್ ಗಾಂಧಿ ‌ಇಂದು ದೆಹಲಿಗೆ ಬಂದು ನಮ್ಮನ್ನು ಕರೆದ ನಂತರ ದೆಹಲಿಗೆ ಹೋಗುತ್ತೇವೆ. ಇಂದು ಸಂಜೆ ಅಥವಾ ನಾಳೆ ದೆಹಲಿಗೆ ತೆರಳುತ್ತೇವೆ. ಬುಧವಾರ ನೂತನ ಸಚಿವರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ವಿವರಿಸಿದರು. ಸಚಿವ […]

ಜನತೆಗೆ ಕೊಟ್ಟ ಮಾತಿನಂತೆ ರೈತರ ಸಾಲಮನ್ನಾ ಮಾಡುವ ವಿಷಯದಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ: ಕುಮಾರಸ್ವಾಮಿ

Wednesday, May 30th, 2018
cm-kumarswamy

ಬೆಂಗಳೂರು: ನಾಡಿನ ಜನತೆಗೆ ಕೊಟ್ಟ ಮಾತಿನಂತೆ ರೈತರ ಸಾಲಮನ್ನಾ ಮಾಡುವ ವಿಷಯದಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಕಾಂಗ್ರೆಸ್‌ ಹಾಗೂ ನಮ್ಮ ನೇತೃತ್ವದ ಸಹಭಾಗಿತ್ವದಲ್ಲಿ ಕೊಟ್ಟ ಭರವಸೆಗಳನ್ನು ಈಡೇರಿಸಲು ಪ್ರಯತ್ನಿಸುತ್ತೇವೆ ಎಂದು ಹೇಳಿದರು. ಬೆಂಗಳೂರಿನಲ್ಲಿ ರೈತ ನಾಯಕರು ಹಾಗೂ ಪ್ರತಿಪಕ್ಷಗಳ ಸಭೆ ಕರೆದು ಸಾಲ ಮನ್ನಾ ಕುರಿತು ಚರ್ಚಿಸುತ್ತಿದ್ದು, ಸಭೆ ಉದ್ದೇಶಿಸಿ ಸಿಎಂ ಮಾತನಾಡುತ್ತಿದ್ದಾರೆ. ರೈತರ ಸಾಲಮನ್ನಾ ಮಾಡುತ್ತೋ ಇಲ್ಲವೋ ಎಂಬ ಗೊಂದಲವಿತ್ತು. ಈ ಹಿನ್ನೆಲೆಯಲ್ಲಿ ಈ ಸಭೆ ಕರೆಯಲಾಗಿದ್ದು, ಸರ್ಕಾರ […]

ಸ್ಥಿರ ಸರ್ಕಾರ ರಚನೆಗೆ ಹೆಚ್‌ಡಿಕೆ ಕಾರ್ಯತಂತ್ರ!

Tuesday, May 22nd, 2018
jds-kumarswamy

ಬೆಂಗಳೂರು: ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಯಾವುದೇ ವಿವಾದ, ಗೊಂದಲಗಳಿಗೆ ಅವಕಾಶ ಕೊಡದೆ ಐದು ವರ್ಷಗಳ ಸ್ಥಿರ ಸರ್ಕಾರ ನೀಡಬೇಕೆಂದು ಹೆಚ್.ಡಿ. ಕುಮಾರಸ್ವಾಮಿಯವರು ಕಾರ್ಯತಂತ್ರ ರೂಪಿಸುತ್ತಿದ್ದಾರೆ ಎನ್ನಲಾಗಿದೆ. ಸರ್ಕಾರ ರಚನೆ, ಸಚಿವ ಸಂಪುಟ ವಿಸ್ತರಣೆಯಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ಮಾಡಿಕೊಡದೆ ಐದು ವರ್ಷಗಳ ಕಾಲ ಸುಗಮವಾಗಿ ಸರ್ಕಾರ ನೀಡಲು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಮುಂದಾಗಿದ್ದಾರೆ. ಅಧಿಕಾರ ಹಂಚಿಕೆಯಲ್ಲಿ ತುಸು ಎಡವಟ್ಟು ಮಾಡಿಕೊಂಡರೂ ಅಪಾಯ ಕಟ್ಟಿಟ್ಟ ಬುತ್ತಿ ಎನ್ನುವುದನ್ನು ಅರಿತಿರುವ ಉಭಯ ಪಕ್ಷಗಳ ನಾಯಕರು ಅಂತಹ […]

6 ದಿನಗಳಲ್ಲಿ ಮನೆಗೆ ಹೋಗಲಿರುವ ಸಿಎಂ ಬಗ್ಗೆ ಮಾತನಾಡಲ್ಲ: ಬಿಎಸ್‌ವೈ

Monday, May 7th, 2018
yedeyurappa

ಕೊಪ್ಪಳ: ಇನ್ನು ಕೇವಲ ಆರು ದಿನಗಳಲ್ಲಿ ಸಿದ್ದರಾಮಯ್ಯ ಮನೆಗೆ ಹೋಗುತ್ತಾರೆ. ಮನೆಗೆ ಹೋಗುವವರ ಬಗ್ಗೆ ನಾನು ಏನೂ ಮಾತನಾಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ. ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮಸಾಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ಯೋಗ್ಯತೆ ಇದ್ದರೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾತ್ರ ಸ್ಪರ್ಧಿಸಬೇಕಿತ್ತು. ಆದರೆ, ಬಾದಾಮಿಗೆ ಯಾಕೆ ಬಂದು ಸ್ಪರ್ಧಿಸಿದ್ದಾರೆ. ಚಾಮುಂಡೇಶ್ವರಿ ಹಾಗೂ ಬಾದಾಮಿ ಎರಡೂ ಕ್ಷೇತ್ರದಲ್ಲಿ ಸಿದ್ದರಾಮಯ್ಯಗೆ ಸೋಲು ನಿಶ್ಚಿತ ಎಂದರು. ನಾನು ಗೆಲ್ಲುತ್ತೇನೆ, ನಾನೇ […]

ಬಿಜೆಪಿಯದ್ದು ಕೌರವರ ಪಕ್ಷ, ಕಾಂಗ್ರೆಸ್‌ ಪಾಂಡವರ ಪಕ್ಷ: ರಾಹುಲ್‌ ಗಾಂಧಿ ವಾಗ್ದಾಳಿ

Wednesday, March 21st, 2018
rahul-gandhi

ಮಂಗಳೂರು: ಬಿಜೆಪಿ ಕೌರವರ ಪಕ್ಷ, ಕಾಂಗ್ರೆಸ್ ಪಾಂಡವರ ಪಕ್ಷ. ಬಿಜೆಪಿಯದ್ದು ಸುಳ್ಳಿನ ಹಾದಿ, ಕಾಂಗ್ರೆಸ್‌ನದ್ದು ಸತ್ಯದ ನಡೆ ಎಂದು ಇಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅಬ್ಬರಿಸಿದರು. ಕರಾವಳಿ ಭಾಗದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿರುವ ರಾಹುಲ್, ಜನಾಶೀರ್ವಾದ ರೋಡ್ ಶೋ ನಡೆಸಿದ ಬಳಿಕ ನೆಹರೂ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಬಿಜೆಪಿ ವಿರುದ್ಧ ಹರಿಹಾಯ್ದರು. ಕೌರವರಿಗೆ ಯುದ್ಧ ಗೆಲ್ಲಲು ಬೇಕಾದ ಎಲ್ಲ ತಂತ್ರಗಳು, ಸೈನ್ಯ ಬಲವೂ ಇತ್ತು. ಕೊನೆಗೆ ಸತ್ಯದ ಹಾದಿಯಲ್ಲಿ ಪಾಂಡವರು ಗೆದ್ದರು […]

ಅಧಿಕೃತವಾಗಿ ‘ಕೈ’ ಹಿಡಿದ ನೈಸ್‌‌‌ ಮುಖ್ಯಸ್ಥ, ಶಾಸಕ ಅಶೋಕ್‌ ಖೇಣಿ

Monday, March 5th, 2018
congress

ಬೆಂಗಳೂರು: ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ನೈಸ್ ಮುಖ್ಯಸ್ಥ ಅಶೋಕ್ ಖೇಣಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ. ಜಿ.ಪರಮೇಶ್ವರ್, ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಪಕ್ಷದ ಧ್ವಜ ಹಾಗೂ ಶಾಲು ಸ್ವೀಕರಿಸುವ ಮೂಲಕ ಕಾಂಗ್ರೆಸ್ ಸೇರ್ಪಡೆಯಾದರು. ಖೇಣಿ ಸೇರ್ಪಡೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಾ. ಜಿ.ಪರಮೇಶ್ವರ್, ಶಾಸಕ ಹಾಗೂ ಮಿತ್ರರಾದ ಅಶೋಕ್ ಖೇಣಿ ಯಾವುದೇ ಷರತ್ತಿಲ್ಲದೆ, ಪಕ್ಷದ ನಾಯಕತ್ವ ಹಾಗೂ ತತ್ವ […]

ಕಾವೇರಿ ನದಿ ನೀರು ಪ್ರಕರಣ ನಾಳೆ ವಿಚಾರಣೆ: ಅಹಿತಕರ ಘಟನೆ ನಡೆಯದಂತೆ ಮುಂಜಾಗೃತಾ ಕ್ರಮ

Thursday, September 29th, 2016
kaveri

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದ ಸಂಬಂಧದ ಪ್ರಕರಣ ನಾಳೆ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಅಗತ್ಯ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ. ಚಿತ್ರಕಲಾ ಪರಿಷತ್‌‌ನಲ್ಲಿ ಸುಧ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ನಮಗೆ ಈ ಬಾರಿ ನ್ಯಾಯ ಸಿಗುವ ಭರವಸೆ ಇದೆ. ಕೇಂದ್ರ ಸರ್ಕಾರ ಕರೆದ ಸಭೆಯಲ್ಲಿ ಸಿಎಂ ಭಾಗವಹಿಸಿದ್ದಾರೆ. ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮನವರಿಕೆ ಮಾಡಿಕೊಡುತ್ತದೆ. ಕೇಂದ್ರ ಸರ್ಕಾರಕ್ಕೂ ವಸ್ತು ಸ್ಥಿತಿ […]