50 ಕಿ.ಮೀ.ಗೆ ಇಸಿಜಿ ಸೌಲಭ್ಯ ಅಗತ್ಯ: ಡಾ.ಪದ್ಮನಾಭ ಕಾಮತ್
Thursday, November 11th, 2021ಮಂಗಳೂರು: ಕುಗ್ರಾಮಗಳು ಸೇರಿದಂತೆ ಗ್ರಾಮ ಪಂಚಾಯಿತಿಗಳ ಪ್ರತಿ 50 ಕಿ.ಮೀ. ವ್ಯಾಪ್ತಿಯಲ್ಲಿ ಇಸಿಜಿ ಸೌಲಭ್ಯ ಲಭ್ಯವಾದರೆ ಹೃದಯಾಘಾತದಿಂದ ಉಂಟಾಗುವ ಪ್ರಾಣಾಪಾಯ ತಡೆಯಲು ಸಾಧ್ಯವಾಗಲಿದೆ ಎಂದು ಮಂಗಳೂರು ಕೆಎಂಸಿಯ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ.ಪದ್ಮನಾಭ ಕಾಮತ್ ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ಗುರುವಾರ ಮಂಗಳೂರು ಪ್ರೆಸ್‌ಕ್ಲಬ್, ದ.ಕ. ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಪತ್ರಿಕಾ ಭವನ ಟ್ರಸ್ಟ್ ಆಶ್ರಯದಲ್ಲಿ ಪತ್ರಕರ್ತರು ಮತ್ತು ಅವರ ಕುಟುಂಬದ ಸದಸ್ಯರಿಗೆ ಆಯೋಜಿಸಿದ್ದ ಹೃದ್ರೋಗ ತಪಾಸಣೆ ಮತ್ತು ಮಾಹಿತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಹೃದಯ […]