ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಡಾ ಪಿ ಎಸ್ ಹರ್ಷ ಅಧಿಕಾರ ಸ್ವೀಕಾರ

Monday, June 29th, 2020
psHarsha

ಬೆಂಗಳೂರು, : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಮಂಗಳೂರು ಪೊಲೀಸ್ ಕಮಿಷನರ್ ಆಗಿದ್ದ ಹಿರಿಯ ಪೊಲೀಸ್ ಅಧಿಕಾರಿ ಡಾ ಪಿ ಎಸ್ ಹರ್ಷ ಅವರು ಸೋಮವಾರ ಇಲ್ಲಿ ಅಧಿಕಾರ ಸ್ವೀಕರಿಸಿದರು. ಡಾ ಪಿ ಎಸ್ ಹರ್ಷ ಅವರು ಈ ಹಿಂದೆಯೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಎಸ್ ಎನ್ ಸಿದ್ದರಾಮಪ್ಪ ಅವರು ಡಾ ಪಿ ಎಸ್ ಹರ್ಷ ಅವರಿಗೆ ಅಧಿಕಾರ […]

ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ. ಪಿ.ಎಸ್. ಹರ್ಷ ಬೆಂಗಳೂರಿಗೆ ವರ್ಗಾವಣೆ

Friday, June 26th, 2020
Harsha IPS

ಮಂಗಳೂರು : ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ. ಪಿ.ಎಸ್. ಹರ್ಷ ಐಪಿಎಸ್., ಅವರು ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ (ಡಿಐಜಿ) ಮತ್ತು ಕಮಿಷನರ್, ಆಗಿ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕಇಲಾಖೆ, ಬೆಂಗಳೂರಿಗೆ ವರ್ಗಾವಣೆಗೊಂಡಿದ್ದು, ತೆರವಾದ ಸ್ಥಾನಕ್ಕೆ ವಿಕಾಸ್ ‌ಕುಮಾರ್ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ. ನಕ್ಸಲ್ ನಿಗ್ರಹ ಪಡೆಯ ಆಯುಕ್ತರಾಗಿದ್ದ ವಿಕಾಸ್ ‌ಕುಮಾರ್ ಅವರನ್ನು ಮಂಗಳೂರು ಪೊಲೀಸ್ ಆಯುಕ್ತರನ್ನಾಗಿ ನೇಮಕ ಮಾಡಲಾಗಿದ್ದು, ತಕ್ಷಣದಿಂದಲೇ ಜಾರಿ ಬರುವಂತೆ ಆದೇಶ ಹೊರಡಿಸಲಾಗಿದೆ. ಸರ್ಕಾರಿ ಸಚಿವಾಲಯದ ಆದೇಶದ ಪ್ರಕಾರ 24 […]

ಮಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಸುದ್ದಿ ರವಾನೆ ಮಾಡುವವರ ವಿರುದ್ಧ ಕಠಿಣ ಕ್ರಮ; ಡಾ. ಪಿ.ಎಸ್. ಹರ್ಷ

Wednesday, December 18th, 2019
harsha

ಮಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದಂತೆ ಪ್ರತಿಭಟನೆಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಸಂದೇಶ ರವಾನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಡಾ. ಪಿ.ಎಸ್. ಹರ್ಷ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಡಿ.20 ಮತ್ತು ಡಿ. 23ರಂದು ವಿವಿಧ ಸಂಘಸಂಸ್ಥೆಗಳು ಮಂಗಳೂರಿನಲ್ಲಿ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಯನ್ನು ಕೈಬಿಡಲು ನಿರ್ಧರಿಸಿದ್ದಾರೆ. ಹಾಗಾಗಿ ಅದಕ್ಕೆ ವಿರುದ್ಧವಾಗಿ ಇತರ ಸಂಘಟನೆಗಳು, ವ್ಯಕ್ತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಭಟನೆ ನಡೆಸುವುದಾಗಿ ಹೇಳುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗುವುದು, ಸುಮಾರು 7 ಸಂಘಟನೆಗಳಿಗೆ […]

ಕೊಣಾಜೆ : ಕದ್ದ ಜಾನುವಾರುಗಳ ಸಾಗಾಟ : ಮೂವರು ಆರೋಪಿಗಳ ಬಂಧನ

Tuesday, December 17th, 2019
Konaje

ಕೊಣಾಜೆ : ದನಗಳ್ಳರು 1 ಲಕ್ಷದ 4 ಸಾವಿರ ಮೌಲ್ಯದ ಜಾನುವಾರುಗಳನ್ನು ಕದ್ದು ಮಾರುತಿ ಓಮ್ನಿ ಕಾರಿನಲ್ಲಿ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಕೊಣಾಜೆ ಠಾಣಾ ಪೊಲೀಸರು ಬಂಧಿಸಿದ್ದಾರೆ. ಹಾಗೆಯೇ ಕದ್ದ ಜಾನುವಾರುಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ಮೂಡುಬಿದ್ರೆಯ ಗಂಟಲಕಟ್ಟೆ ನಿವಾಸಿ ಶಾಫಿ ಯಾನೆ ಕಲಂದರ್‌ ಶಾಫಿ (28), ದಬ್ಬೇಲಿ ಲಚ್ಚಿಲ್‌ ಮನೆ ನಿವಾಸಿ ಸಾಧಿಕ್‌ ಯಾನೆ ಮೊಹಮ್ಮದ್ ಸಾಧಿಕ್ (30), ಬಂಟ್ವಾಳ ನರಿಂಗಾನ ಗ್ರಾಮ ನಿವಾಸಿ ಆಸಿಫ್‌ ಯಾನೆ ಮೊಹಮ್ಮದ್‌ ಕಲಂದರ್‌ (24) ಅನ್ನು ಪೊಲೀಸರು ಬಂಧಿಸಿದ್ದಾರೆ. […]

ಡಿ.6ರಂದು ನಿರ್ಬಂಧಕಾಜ್ಞೆ ಜಾರಿ : ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಆದೇಶ

Thursday, December 5th, 2019
Harsha

ಮಂಗಳೂರು : ಮಂಗಳೂರು ಕಮಿಶನರೇಟ್ ವ್ಯಾಪ್ತಿಯಲ್ಲಿ ಡಿಸೆಂಬರ್ 6ರಂದು ನಿರ್ಬಂಧಕಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಆದೇಶ ಹೊರಡಿಸಿದ್ದಾರೆ. ಬಾಬರಿ ಮಸೀದಿ ಧ್ವಂಸ ದಿನವಾದ ಡಿ.6ರಂದು ಯಾವುದೇ ಅಹಿತಕರ ಘಟನೆ ನಡೆಯುದಂತೆ ತಡೆಗಟ್ಟಲು ಮುನ್ನೆಚ್ಚರಿಕಾ ಕ್ರಮವಾಗಿ ಅಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ನಿರ್ಬಂಧಕಾಜ್ಞೆ ಜಾರಿಯಲ್ಲಿರುತ್ತದೆ ಎಂದು ಡಾ.ಹರ್ಷ ಪ್ರಕಟನೆಯಲ್ಲಿ ತಿಳಿಸಿದ್ದಾರೆ.    

ಅಯೋಧ್ಯೆ ತೀರ್ಪು : ಮಂಗಳೂರಿನಲ್ಲಿ ಸಾವಿರ ಪೊಲೀಸರ ನಿಯೋಜನೆ; ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ

Saturday, November 9th, 2019
Harsha

ಮಂಗಳೂರು : ಅಯೋಧ್ಯೆ ರಾಮಜನ್ಮಭೂಮಿ-ಬಾಬರಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದ ತೀರ್ಪನ್ನು ಸುಪ್ರೀಂ ಕೋರ್ಟ್ ನ.09ರಂದು ಪ್ರಕಟಿಸಲಿದ್ದು, ಮಂಗಳೂರಿನಲ್ಲಿ ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ತಿಳಿಸಿದ್ದಾರೆ. ನಗರದಾದ್ಯಂತ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಅಂತರ್ ರಾಜ್ಯ ಗಡಿಗಳಲ್ಲಿ ವಿಶೇಷ ತಪಾಸಣೆ ನಡೆಸಲಾಗುತ್ತಿದೆ ಎಂದರು. ಬಂದೋಬಸ್ತ್‌ನಲ್ಲಿ ಇಬ್ಬರು ಡಿಸಿಪಿಗಳು, 15 ಇನ್‌ಸ್ಪೆಕ್ಟರ್‌ಗಳು, 40 ಪಿಎಸ್‌ಐಗಳು, 100 ಎಎಸ್‌ಐ, 5 ಕೆಎಸ್‌ಆರ್‌ಪಿ ತುಕಡಿ, ಒಂದು ಕೇಂದ್ರೀಯ ಅರೆಸೇನಾ ಪಡೆ, ಒಂದು […]

ಮಹಿಳೆಯರು, ವಿದ್ಯಾರ್ಥಿನಿಯರ ದೂರಿನ ತ್ವರಿತ ಪರಿಶೀಲನೆಗೆ ಪಿಂಕ್​ಗ್ರೂಪ್​ ರಚನೆ : ಡಾ.ಪಿ.ಎಸ್.ಹರ್ಷ

Friday, October 11th, 2019
harsha

ಮಂಗಳೂರು : ಬ್ರ್ಯಾಂಡ್ ಮಂಗಳೂರು ಕಾರ್ಯಕ್ರಮದ ಅಂಗವಾಗಿ ಶಾಲಾ ಕಾಲೇಜುಗಳಲ್ಲಿ ಮಾದಕ ದ್ರವ್ಯ, ಸೈಬರ್ ಕ್ರೈಂ ವಿರುದ್ಧ ಅಭಿಯಾನ ನಡೆಸಲಾಗುತ್ತಿದ್ದು, ಈ ಕಾರ್ಯಕ್ರಮವನ್ನು ಮಂಗಳೂರು ನಗರ ಪೊಲೀಸ್ ಕಮೀಷನರ್ ಡಾ.ಪಿ.ಎಸ್. ಹರ್ಷ ಉದ್ಘಾಟಿಸಿದರು. ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘ, ದ.ಕ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ಬೆಸೆಂಟ್ ಮಹಿಳಾ ಕಾಲೇಜ್ ಸಹಯೋಗದೊಂದಿಗೆ ಈ ಬ್ರ್ಯಾಂಡ್ ಮಂಗಳೂರು ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಮಾತನಾಡಿದ ಕಮೀಷನರ್ ಡಾ.ಪಿ.ಎಸ್ .ಹರ್ಷ, […]

ಮಂಗಳೂರು : ಕುದ್ರೋಳಿ ದಸರಾ ಆಚರಣೆ ಸೆಪ್ಟೆಂಬರ್ 29 ರಿಂದ ಪ್ರಾರಂಭ

Saturday, September 28th, 2019
kudroli

ಮಂಗಳೂರು: ಮಂಗಳೂರು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ನವರಾತ್ರಿ ಮಹೋತ್ಸವ ಮತ್ತು ಮಂಗಳೂರು ದಸರಾದ ಸಿದ್ಧತೆ ಬಿರುಸಿನಿಂದ ನಡೆಯುತ್ತಿದೆ. ಪ್ರತಿವರ್ಷವೂ ನವರಾತ್ರಿ ಸಂದರ್ಭದಲ್ಲಿ ಕುಡ್ಲದ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ನವರಾತ್ರಿ ಮಹೋತ್ಸವ ಮತ್ತು ಮಂಗಳೂರು ದಸರಾ ವಿಜೃಂಭಣೆಯಿಂದ ನಡೆಯುತ್ತದೆ. ಈ ಬಾರಿ ಸೆಪ್ಟೆಂಬರ್‌ 29ರಿಂದ ಆರಂಭವಾಗುವ ನವರಾತ್ರಿ ಮಹೋತ್ಸವ ಅಕ್ಟೋಬರ್‌ 9ರವರೆಗೆ ನಡೆಯಲಿದೆ. ನವದುರ್ಗೆಯರ ಮತ್ತು ಶಾರದಾ ಮೂರ್ತಿ ಪ್ರತಿಷ್ಠಾಪನೆಯೊಂದಿಗೆ ನವರಾತ್ರಿ ಉತ್ಸವ ಆರಂಭವಾಗಲಿದ್ದು, ಉತ್ಸವಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಡಾ. ಪಿ ಎಸ್ ಹರ್ಷ ಚಾಲನೆ […]

ಮಾದಕ ವ್ಯಸನದ ವಿರುದ್ದ ಜಾಗೃತಿ ಮನೆಯಿಂದಲೇ ಆರಂಭವಾಗಬೇಕು : ನ್ಯಾಯಾಧೀಶ ಸತ್ಯನಾರಾಯಣಾಚಾರ್ಯ

Wednesday, September 25th, 2019
ಮಾದಕ ವ್ಯಸನದ ವಿರುದ್ದ ಜಾಗೃತಿ ಮನೆಯಿಂದಲೇ ಆರಂಭವಾಗಬೇಕು : ನ್ಯಾಯಾಧೀಶ ಸತ್ಯನಾರಾಯಣಾಚಾರ್ಯ

ಮಂಗಳೂರು : ಮಾದಕ ವ್ಯಸನದ ವಿರುದ್ದ ಜಾಗೃತಿ ಮನೆಯಿಂದಲೇ ಆರಂಭವಾಗಬೇಕು ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಕಡ್ಲೂರ್ ಸತ್ಯನಾರಾಯಣಾಚಾರ್ಯ ಕಿವಿಮಾತು ಹೇಳಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ದ.ಕ.ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಹಭಾಗಿತ್ವದಲ್ಲಿ ಮಂಗಳೂರಿನ ಕೆನರಾ ಕಾಲೇಜಿನಲ್ಲಿ ನಡೆದ ಬ್ರ್ಯಾಂಡ್ ಮಂಗಳೂರು ಯೋಜನೆ ಅಂಗವಾಗಿ `ಶಾಲಾ ಕಾಲೇಜುಗಳಲ್ಲಿ ಕೋಮು ಸೌಹಾರ್ದತೆ ಜಾಗೃತಿ ಹಾಗೂ ಮಾದಕ ದ್ರವ್ಯ, ಸೈಬರ್ ಕ್ರೈಂ ವಿರುದ್ಧ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. […]

ಮಂಗಳೂರು : ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ

Wednesday, August 14th, 2019
nantoor

ಮಂಗಳೂರು : ಶಾಲಾ ಬಸ್ ಮೇಲೆ ಧರೆ ಕುಸಿದು ಭಾರೀ ಗಾತ್ರದ ಮರ ಬಿದ್ದ ಘಟನೆ ಆ. 14 ರ ಬುಧವಾರ ನಗರದ ನಂತೂರು ಸರ್ಕಲ್ ಬಳಿ ಮುಂಜಾನೆ ನಡೆದಿದೆ. ಬಸ್ಸಿನಲ್ಲಿ 17 ಶಾಲಾ ಮಕ್ಕಳು ಪ್ರಯಾಣಿಸುತ್ತಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆ ನಡೆದ ತಕ್ಷಣ ಸ್ಥಳಕ್ಕೆ ಪೊಲೀಸರು ಸ್ಥಳಕ್ಕೆ ಧಾವಿಸಿ ಮಕ್ಕಳನ್ನು ಸುರಕ್ಷಿತವಾಗಿ ಬಸ್ಸಿನಿಂದ ತೆರವುಗೊಳಿಸಿ ಆ ಬಳಿಕ ಸಂಬಂಧಪಟ್ಟ ಶಾಲೆಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸ್ ಆಯುಕ್ತ ಡಾ.ಪಿ.ಎಸ್‌.ಹರ್ಷ ತಿಳಿಸಿದ್ದಾರೆ. ಬಸ್ಸು ಮಾತ್ರವಲ್ಲದೆ ಬುಲೆಟ್ […]