Blog Archive

ದಕ್ಷಿಣ ಕನ್ನಡದಲ್ಲಿ ಇಳಿಯದ ಕೋವಿಡ್ ಸೋಂಕಿನ ಪ್ರಮಾಣ, ಲಾಕ್‌ ಡೌನ್ ನಿಯಮ ಮತ್ತಷ್ಟು ಕಠಿಣ

Monday, June 7th, 2021
KV Rajendra

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಪ್ರಸ್ತುತ ಕೊರೋನ ಸೋಂಕಿನ ದರ ಶೇ. 20ರಿಂದ 21ರಷ್ಟಿದ್ದು ಸರಕಾರದ ಆದೇಶದಂತೆ ಜೂ. 14ರವರೆಗೂ ಪ್ರಸ್ತುತ ಜಾರಿಯಲ್ಲಿರುವ ಲಾಕ್‌ ಡೌನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಕೊರೋನ ಸೋಂಕಿನ ದರ ಶೇ. 5ಕ್ಕೆ ಇಳಿಸಿ ಅನ್‌ ಲಾಕ್‌ ಗೊಳಿಸುವಲ್ಲಿ ಜನರ ಸಹಕಾರ ಅಗತ್ಯವಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಹೇಳಿದ್ದಾರೆ. ಜಿಲ್ಲೆಯಲ್ಲಿ 50ಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳಿರುವ ಗ್ರಾಪಂಗಳಲ್ಲಿ ಪೂರ್ವ ನಿಗದಿತ ಮದುವೆ ಹಾಗೂ ಇತರ ಕಾರ್ಯಕ್ರಮಗಳನ್ನು ರದ್ದು […]

ಆಕ್ಸಿಜನ್ ಕೊರತೆಯನ್ನು ನೀಗಿಸಲು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಪ್ಲಾಂಟ್

Monday, April 26th, 2021
Mangalore DC

ಮಂಗಳೂರು : ಆಕ್ಸಿಜನ್ ಕೊರತೆಯನ್ನು ನೀಗಿಸಲು  ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಿಸಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಜಿಲ್ಲೆಯ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಹಾಗೂ ಸಕಾಲದಲ್ಲಿ ಆಕ್ಸಿಜನ್ ಪೂರೈಕೆಗೆ ಸಂಬಂಧಿಸಿ ದ.ಕ. ಜಿಲ್ಲಾಧಿಕಾರಿಯ ಕಚೇರಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ದೊಡ್ಡ ಪ್ರಮಾಣದಲ್ಲಿ ಆಕ್ಸಿಜನ್ ಉತ್ಪಾದಿಸಲು ವೆನ್ಲಾಕ್ ಆಸ್ಪತ್ರೆಯಲ್ಲಿ ಹೊಸದಾಗಿ ಆಕ್ಸಿಜನ್ ಪ್ಲಾಂಟ್ ನಿರ್ಮಾಣದ ಬಗ್ಗೆ ಯೋಜನೆ ರೂಪಿಸಲಾಗಿದೆ. ಮುಂದಿನ 50 […]

ಕೊರೋನ 2ನೇ ಅಲೆ : ಮಂಗಳೂರಿನಲ್ಲಿ 144 (3) ಸೆಕ್ಷನ್ ಜಾರಿ

Tuesday, March 30th, 2021
KV Rajendra

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೋನ ಸೋಂಕಿತರ ಸಂಖ್ಯೆಯಿಂದ ಸಾರ್ವಜನಿಕ ಆರೋಗ್ಯ ಕಾಪಾಡುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 144 (3) ಸೆಕ್ಷನ್ ಜಾರಿ ಮಾಡಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಆದೇಶ ಹೊರಡಿಸಿದ್ದಾರೆ. ಮಾರ್ಚ್‌ 29ರಿಂದಲೇ  ದ.ಕ. ಜಿಲ್ಲೆಯಲ್ಲಿ 144(3) ಸೆಕ್ಷನ್‌ ನಿಷೇಧಾಜ್ಞೆ ಜಾರಿಯಲ್ಲಿದ್ದು, ಮುಂಬರುವ ಧಾರ್ಮಿಕ ಹಬ್ಬಗಳಾದ ಯುಗಾದಿ, ಹೋಳಿಹಬ್ಬ, ಶಬೇ ಬರಾಅತ್ , ಗುಡ್ ಫ್ರೈಡೇ ಇತ್ಯಾದಿ ಸಂದರ್ಭದಲ್ಲಿ ಯಾವುದೇ ಸಾರ್ವಜನಿಕ ಸ್ಥಳಗಳು, ಸಾರ್ವಜನಿಕ ಮೈದಾನ, ಉದ್ಯಾನವನ, ಮಾರುಕಟ್ಟೆ, ಧಾರ್ಮಿಕ ಪ್ರದೇಶಗಳು ಇತ್ಯಾದಿ […]

ಕೇರಳದಲ್ಲಿ ಕೊರೋನ ಉಲ್ಬಣ ಜಿಲ್ಲೆಗೆ ಆಗಮಿಸುವ ಜನರಿಗೆ ತಪಾಸಣೆಗೊಳಪಡಸಲು ಕ್ರಮ

Monday, February 8th, 2021
KV Rajendra

ಮಂಗಳೂರು : ಪಕ್ಕದ ರಾಜ್ಯ ಕೇರಳದಲ್ಲಿ ಕೊರೋನ ಉಲ್ಬಣ ವಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಗೆ ಆಗಮಿಸುವ ಅಲ್ಲಿನವರನ್ನು ಸೂಕ್ತ ತಪಾಸಣೆಗೊಳಪಡಿಸಿ ಜಿಲ್ಲೆಯಲ್ಲಿ ಕೊರೋನ ಹರಡದಂತೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಆಯುಷ್ ಕಚೇರಿಯಲ್ಲಿ ಇಂದು ಪೊಲೀಸ್ ಆಯುಕ್ತರು, ಡಿಎಚ್‌ಒ ಜತೆ ನಡೆಸಲಾದ ತುರ್ತು ಸಭೆಯ ಬಳಿಕ ಸುದ್ದಿಗಾರರ ಪ್ರಶ್ನೆಗೆ ಡಾ. ರಾಜೇಂದ್ರ ಈ ಪ್ರತಿಕ್ರಿಯೆ ನೀಡಿದರು. ಸಾವಿರಾರು ಸಂಖ್ಯೆಯಲ್ಲಿ ದಿನನಿತ್ಯ ಕೆಲಸ ಕಾರ್ಯ, ಕಾಲೇಜುಗಳಿಗಾಗಿ ಕೇರಳದಿಂದ ಕರ್ನಾಟಕಕ್ಕೆ ಬರುವುದರಿಂದ ಕೋವಿಡ್ ಅನ್‌ಲಾಕ್ ಮಾರ್ಗಸೂಚಿಗಳನ್ನು […]

ಕೋವಿಡ್ ಸೋಂಕಿನ 2ನೇ ಅಲೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಿ – ಡಾ. ರಾಜೇಂದ್ರ ಕೆ.ವಿ

Saturday, January 16th, 2021
Rajendra KV

ಮಂಗಳೂರು : ಕೋವಿಡ್ ಸೋಂಕಿನ ಎರಡನೇ ಅಲೆ ಉಂಟಾಗದಂತೆ ತಡೆಯಲು ಜಿಲ್ಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದರು. ವಿದೇಶಗಳಲ್ಲಿ ಈಗಾಗಲೇ ಕೊರೋನಾದ ಎರಡನೇ ಅಲೆ ಬಾಧಿಸಿ ಹೆಚ್ಚು ಜನರು ಸೋಂಕಿತರಾಗಿದ್ದಾರೆ. ಈ ವರೆಗೆ ನಮ್ಮ ದೇಶದಲ್ಲಿ ಎರಡನೇ ಅಲೆ ಕಂಡುಬಂದಿರುವುದಿಲ್ಲ ಆದರೂ ಸಹ ನಿರ್ಲಕ್ಷ್ಯ ವಹಿಸದೇ ಕೊರೊನಾ ಎರಡನೇ ಅಲೆಯನ್ನು […]

ಮತ ಎಣಿಕಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ : ಜಿಲ್ಲಾಧಿಕಾರಿ

Tuesday, December 29th, 2020
KV Rajendra

ಮಂಗಳೂರು :  ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ-2020 ರ ಸಂಬಂಧ ಎಲ್ಲಾ ಮತ ಎಣಿಕಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ಡಿಸೆಂಬರ್ 29 ರಂದು ಮಧ್ಯರಾತ್ರಿ 12 ಗಂಟೆಯಿಂದ ಡಿಸೆಂಬರ್ 30 ರ ಮಧ್ಯರಾತ್ರಿ 12 ಗಂಟೆಯವರೆಗೆ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರಂತೆ ನಿಷೇಧಾಜ್ಞೆಯನ್ನು ವಿಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಈ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ, ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ ಮತ್ತು ಕಡಬ […]

ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ತಾಲೂಕು ಗಳಲ್ಲಿ ರವಿವಾರ ಎರಡನೇ ಹಂತದ ಚುನಾವಣೆ

Saturday, December 26th, 2020
vote

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ತಾಲೂಕಿನ 114 ಗ್ರಾಪಂಗಳಿಗೆ ರವಿವಾರ ಬೆಳಗ್ಗೆ 7ರಿಂದ ಸಂಜೆ 5ರವರೆಗೆ ಎರಡನೇ ಹಂತದ ಚುನಾವಣೆ ನಡೆಯಲಿದ್ದು, ಮತದಾನ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಹೇರಲಾಗಿದೆ. ಬೆಳ್ತಂಗಡಿಯ 46, ಪುತ್ತೂರಿನ 22, ಕಡಬದ 21, ಸುಳ್ಯದ 25 ಸಹಿತ 114 ಗ್ರಾಪಂಗಳ 1541 ಸ್ಥಾನಗಳಿಗೆ ಚುನಾವಣೆ ನಡೆಯಬೇಕಿತ್ತು. ಆ ಪೈಕಿ 41 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದ ಕಾರಣ ರವಿವಾರ 1,500 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಅಂತಿಮವಾಗಿ ಕಣದಲ್ಲಿರುವ […]

ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು : ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.

Saturday, September 5th, 2020
Teachers Day

ಮಂಗಳೂರು : ದಕ್ಷಿಣ ಕನ್ನಡ ಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆ, ದ.ಕ. ಜಿಲ್ಲಾ ಉಪನಿರ್ದೇಶಕರ ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಮಂಗಳೂರು ಉತ್ತರ ವಲಯ ಶಿಕ್ಷಕರ ದಿನಾಚರಣೆ ಸಮಿತಿ ಮತ್ತು ಶಿಕ್ಷಕರ ಕಲ್ಯಾಣ ನಿಧಿ,ಬೆಂಗಳೂರು  ಸಹಯೋಗದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನೋತ್ಸವ ಹಾಗೂ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಉರ್ವ ಕೆನರಾ ಹೈಸ್ಕೂಲ್ ಸಭಾಂಗಣದಲ್ಲಿ ನಡೆಯಿತು. ಮಕ್ಕಳಿಗೆ ಶಿಕ್ಷಕರೇ ಹೀರೋಗಳು, ಪ್ರತಿಯೋರ್ವರ ಯಶಸ್ಸಿನ ಹಿಂದೆ ಗುರುಗಳ ಪಾತ್ರ ಇದ್ದೇ ಇರುತ್ತದೆ. ಹಾಗಾಗಿ ಮಕ್ಕಳ ಭವಿಷ್ಯ […]

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ವರ್ಗಾವಣೆ

Tuesday, July 28th, 2020
sindhu b roopesh

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ‌ ಸಿಂಧೂ ಬಿ. ರೂಪೇಶ್ ಅವರು  ಬೆಂಗಳೂರಿಗೆ ವರ್ಗಾವಣೆ  ಆಗಿದೆ. ದ. ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ.ರಾಜೇಂದ್ರ ಕೆ.ವಿ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ. ಡಾ.ರಾಜೇಂದ್ರ ಕೆ.ವಿ ಅವರು ಬೆಳಗಾವಿ ಜಿಲ್ಲಾ ಪಂಚಾಯತ್ ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯನ್ನಾಗಿ ಸರ್ಕಾರ ನಿಯೋಜಿಸಿದೆ. ಸಿಂಧೂ ರೂಪೇಶ್ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಇ -ಆಡಳಿತ ವಿಭಾಗದ ನಿರ್ದೆಶಕಿಯನ್ನಾಗಿ ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ. ಡಾ. ರಾಜೇಂದ್ರ […]