ಖಾಸಗಿ ಶಾಲೆ ಪರ ಲಾಬಿಗಳಿಂದ ಪಂಜಿಮೊಗರು ಶಾಲೆ ಮುಚ್ಚಿಸುವ ಪ್ರಯತ್ನ : ಪೋಷಕರ ಪ್ರತಿಭಟನೆ

Tuesday, December 21st, 2021
panjimogaru

ಮಂಗಳೂರು  : ಪಂಜಿಮೊಗರು ಸರಕಾರಿ ಶಾಲೆಯಲ್ಲಿ ಶಿಕ್ಷಣ ಪೂರಕ ವಾತಾವರಣ ಇಲ್ಲವಾಗಿದ್ದು, ಇಲ್ಲಿನ ಮುಖ್ಯೋಪಾದ್ಯಾಯಿನಿ ಹಾಗೂ ಶಿಕ್ಷಕರ ಗುಂಪೊಂದು ಪೋಷಕರ, ಎಸ್.ಡಿ.ಎಂ.ಸಿ ಸದಸ್ಯರ ಯಾವುದೇ ಮಾತಿಗೆ ಬೆಲೆ ಕೊಡದೆ ಸರ್ವಾಧಿಕಾರಿ ವರ್ತನೆ ತೋರುತ್ತಿದ್ದಾರೆ, ಮಕ್ಕಳಿಗೆ ತಾರತಮ್ಯ, ದೈಹಿಕ ಹಲ್ಲೆ, ದೂರು ನೀಡಿದ ವಿದ್ಯಾರ್ಥಿಗಳಿಗೆ ಮಾನಸಿಕ ಹಿಂಸೆ, ಗುಣಮಟ್ಟದ ಶಿಕ್ಷಣದ ಕೊರತೆ ಹಲವಾರು ದೋಷಗಳಿದ್ದು ಈ ಬಗ್ಗೆ ಶಿಕ್ಷಣ ಇಲಾಖೆಗೆ ಹಲವಾರು ಮನವಿ ನೀಡಿದರೂ ಯಾವೂದೇ ಕ್ರಮ ಕೈಗೊಳ್ಳದ ಕಾರಣ ಇಂದು ಕೊಟ್ಟಾರ ಡಿಡಿಪಿಐ ಕಛೇರಿ ಮುಂಭಾಗ ಮಕ್ಕಳೊಂದಿಗೆ […]

ಶಾಲಾ ಫೀಸು ಕಟ್ಟಲು ಒತ್ತಡ ಹೇರಿದರೆ ನಿರ್ದಾಕ್ಷಿಣ್ಯ ಕ್ರಮ – ಡಿಡಿಪಿಐ ಎಚ್ಚರಿಕೆ

Friday, June 12th, 2020
school-fees

ಮಂಗಳೂರು : ಸರಕಾರ ಸುತ್ತೋಲೆಯಂತೆ, ಶಾಲಾ ಫೀಸು ಪಾವತಿಸಲು ಸಾಧ್ಯವಿಲ್ಲದ ಅಥವಾ ಪಾವತಿಸಲು ನಿರಾಕರಿಸುವ ಪೋಷಕರಿಂದ ಮುಂದಿನ ಆದೇಶದವರೆಗೆ ಯಾವುದೇ ಕಾರಣಕ್ಕೂ ಶುಲ್ಕ ವಸೂಲು ಮಾಡುವಂತಿಲ್ಲ. ಶಾಲೆಗಳು ಫೀಸು ಕಟ್ಟುವ ವಿಷಯದಲ್ಲಿ ವಿದ್ಯಾರ್ಥಿ ಪೋಷಕರಿಗೆ ಯಾವುದೇ ರೀತಿಯ ಒತ್ತಡ ಹೇರಬಾರದು. ಶುಲ್ಕವನ್ನು ಪಾವತಿಸದ ವಿದ್ಯಾರ್ಥಿಗಳನ್ನು ಶಾಲೆಯಿಂದ ಹೊರಹಾಕಿರುವ ಕುರಿತು ಯಾವುದೇ ದೂರುಗಳು ಬಂದಲ್ಲಿ ಅಂತಹ ಶಾಲೆಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಶಿಕ್ಷಣ ಹಕ್ಕು ಕಾಯಿದೆಯಡಿ ಶಿಸ್ತುಕ್ರಮ ಕೈಗೊಳ್ಳುವುದಾಗಿ ದ.ಕ. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಖಾಸಗೀ ಶಾಲೆಗಳಿಗೆ ಎಚ್ಚರಿಸಿದ್ದಾರೆ. […]