ಜ್ಯುವೆಲರ್ಸ್ ಸಿಬ್ಬಂದಿಯ ಕೊಲೆ ಆರೋಪಿಯ ಬಂಧನ
Friday, March 3rd, 2023
ಕಾಸರಗೋಡು : ಮಂಗಳೂರು ನಗರದ ಜ್ಯುವೆಲರ್ಸ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಕಾಸರಗೋಡು ಡಿವೈಎಸ್ಪಿ ಪಿ.ಕೆ ಸುಧಾಕರನ್ ಹಾಗೂ ಅಪರಾಧ ಪತ್ತೆದಳದ ಡಿವೈಎಸ್ಪಿ ಅಬ್ದುಲ್ ರಹೀಮ್ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ. ಕೋಜಿಕ್ಕೋಡ್ ಕೊಯಿಲಾಂಡಿ ತೂವಕ್ಕಾಡ್ ನ ಶಿಫಾಜ್ ( 33) ಬಂಧಿತ ಆರೋಪಿ. ಮಂಗಳೂರಿನಲ್ಲಿ ಒಂದು ತಿಂಗಳ ಹಿಂದೆ ಜ್ಯುವೆಲ್ಲರಿ ನೌಕರನನ್ನು ಹತ್ಯೆಗೈದ ಆರೋಪಿಯನ್ನು ಕಾಸರಗೋಡು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಕೋಯಿಕ್ಕೋಡ್ ಜಿಲ್ಲೆಯ ಕೊಯಿಲಾಂಡಿ ಸಮೀಪದ ತುವಕ್ಕೋಡ್ […]