ಮಂಗಳೂರು : ರಾಜ್ಯ ಸರಕಾರದ ಆದೇಶ ಕಟ್ಟುನಿಟ್ಟಾಗಿ ಪಾಲಿಸಲು ಡಿಸಿ ಸೂಚನೆ

Saturday, March 14th, 2020
Sindhu-B-Rupesh

ಮಂಗಳೂರು : ಕೊರೋನ ವೈರಸ್ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಸಾರ್ವಜನಿಕ ಸ್ಥಳಗಳಲ್ಲಿ ಕೆಲವು ನಿರ್ಬಂಧಗಳನ್ನು ಹೇರಿದ್ದು, ಇವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ದ.ಕ. ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಸೂಚಿಸಿದ್ದಾರೆ. ಮಾಲ್ ಗಳು, ಚಿತ್ರಮಂದಿರ, ನಾಟಕ, ರಂಗಮಂದಿರ, ಪಬ್, ನೈಟ್ ಕ್ಲಬ್ ಗಳು, ವಸ್ತುಪ್ರದರ್ಶನ, ಸಂಗೀತ ಕಾರ್ಯಕ್ರಮಗಳು, ಮ್ಯಾರಥಾನ್, ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಭಾಗವಹಿಸುವ ಕ್ರೀಡಾಕೂಟಗಳು, ಹೆಚ್ಚು ಜನರು ಭಾಗವಹಿಸುವ ಮದುವೆಗಳನ್ನು ರಾಜ್ಯ ಸರಕಾರ ನಿರ್ಬಂಧಿಸಿದೆ. ಜಾತ್ರೆ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಕಡಿಮೆ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರುವಂತೆ ಆಯೋಜಕರು ಗಮನಹರಿಸಬೇಕು. ಹೆಚ್ಚು […]

ಡಿಸಿ ಮನ್ನಾ ಭೂಮಿ ಒತ್ತುವರಿ ತೆರವುಗೊಳಿಸಲು ಕಂದಾಯ ಇಲಾಖೆಗೆ ಡಿಸಿ ಸೂಚನೆ

Monday, October 22nd, 2018
DC-Manna land

ಮಂಗಳೂರು : ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಮುದಾಯದವರ ಮೇಲೆ ದೌರ್ಜನ್ಯ ಎಸಗಿದ ಪ್ರಕರಣಗಳಲ್ಲಿ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಶಿಕ್ಷೆಯಾಗುವಂತೆ ಸಮಾಜ ಕಲ್ಯಾಣ ಇಲಾಖೆಯು ಪ್ರಕರಣ ವಿಚಾರಣಾ ಹಂತದಲ್ಲಿ ನಿರಂತರವಾಗಿ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸೂಚಿಸಿದ್ದಾರೆ. ಅವರು ಸೋಮವಾರ ತಮ್ಮ ಕಚೇರಿಯಲ್ಲಿ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ದೌರ್ಜನ್ಯ ಪ್ರಕರಣಗಳ ದೂರುಗಳು ಬಂದಾಗ ವಿಳಂಭವಿಲ್ಲದೇ ದಾಖಲಿಸಬೇಕು. ಪ್ರಕರಣಗಳು ದಾಖಲಾದ ನಂತರ ವಿಚಾರಣೆಯಾಗಿ, ನೈಜ ಪ್ರಕರಣಗಳಲ್ಲಿ ಆರೋಪಿಗಳಿಗೆ ಶಿಕ್ಷೆಯಾಗುವುದು […]

ಎಂಡೋ ಸಂತ್ರಸ್ತರಿಗೆ ಆದ್ಯತೆಯಲ್ಲಿ ಸೌಲಭ್ಯಗಳ ಮಂಜೂರು: ಡಿಸಿ ಸೂಚನೆ

Thursday, June 15th, 2017
endosulfan

ಮಂಗಳೂರು  :  ಎಂಡೋಸಲ್ಫಾನ್ ಸಂತ್ರಸ್ತರಿಗೆ ಮತ್ತು ಅವರ ಕುಟುಂಬದವರಿಗೆ ಸರಕಾರದಿಂದ ದೊರಕುವ ಸೌಲಭ್ಯಗಳನ್ನು ಆದ್ಯತೆಯಲ್ಲಿ ಮಂಜೂರುಗೊಳಿಸುವಂತೆ ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅವರು ಗುರುವಾರ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಅಂಬೇಡ್ಕರ್ ಭವನದಲ್ಲಿ ನಡೆದ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಕಾರ್ಯಕ್ರಮದ ಕಾರ್ಯನಿರ್ವಾಹಕ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯ ಸರಕಾರದ ವಿವಿಧ ಇಲಾಖೆಗಳಡಿ ಎಂಡೋ ಸಂತ್ರಸ್ತರು ಮತ್ತು ಅವರ ಕುಟುಂಬಸ್ಥರು ವಿವಿಧ ಫಲಾನುಭವಿ ಸೌಲಭ್ಯಗಳಿಗೆ ಅರ್ಜಿ ಸಲ್ಲಿಸಿದರೆ, ಅವರಿಗೆ ತ್ವರಿತಗತಿಯಲ್ಲಿ ಮಂಜೂರು ಮಾಡಬೇಕು. ಅಗತ್ಯ […]