ಡಿ ಕೆ ಶಿವಕುಮಾರ್ ಗೆ ಮಾತನಾಡಲು ವಿಷಯವಿಲ್ಲ : ಸಿಎಂ ಬಸವರಾಜ ಬೊಮ್ಮಾಯಿ
Saturday, April 22nd, 2023
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಮಾತನಾಡಲು ಯಾವುದೇ ವಿಷಯ ಇಲ್ಲದಿರುವುದರಿಂದ ಅನಗತ್ಯ ಆರೋಪ ಮಾಡುತ್ತಿದ್ದು, ಯಾರ ನಾಮಪತ್ರವೂ ತಿರಸ್ಕೃತವಾಗಿಲ್ಲದಿರುವುದೇ ಆರೋಪ ಸುಳ್ಳು ಎನ್ನಲು ಸಾಕ್ಷಿ. ನಿನ್ನೆಯೇ ಎಲ್ಲಾ ಪ್ರಕ್ರಿಯೆ ಮುಗಿದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ಅಸಿಂಧು ಮಾಡಲು ಸಿಎಂ ಕಚೇರಿಯಿಂದ ಅಧಿಕಾರಿಗಳ ಮೇಲೆ ಒತ್ತಡ ಹೇರಲಾಗುತ್ತಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪದ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿ ಮಾತನಾಡಿದರು. ಸಿದ್ದರಾಮಯ್ಯನವರನ್ನು ಮುಗಿಸಲು ಹುನ್ನಾರ ಕೇಂದ್ರ […]