ಕೊರೊನಾದಂತಹ ಸಾಂಕ್ರಾಮಿಕ ರೋಗ ಎದುರಿಸಲು ಯೋಗ ಸಹಾಯಕ : ಸಚಿವ ಡಿ ವಿ ಸದಾನಂದ ಗೌಡ

Monday, June 21st, 2021
DVS-Yoga

ಬೆಂಗಳೂರು : ನಿಯಮಿತವಾಗಿ ಯೋಗಾಭ್ಯಾಸ ಮಾಡುವ ಮೂಲಕ ಕರೋನಾದಂತಹ ಸಾಂಕ್ರಾಮಿಕ ರೋಗವನ್ನು ಸಮರ್ಥವಾಗಿ ಎದುರಿಸಬಹುದಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಹೇಳಿದ್ದಾರೆ. ಸಚಿವರು ದೆಹಲಿಗೆ ಹೊರಡುವ ಮುನ್ನ ಪಕ್ಷದ ಜಿಲ್ಲಾ ಘಟಕದ ವತಿಯಿಂದ ಹೆಬ್ಬಾಳ ಕ್ಷೇತ್ರದಲ್ಲಿ ಇಂದು ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಏಳನೇ ವಿಶ್ವ ಯೋಗದಿನಾಚರಣೆ ಸಂದರ್ಭದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಮಾಡಿದ ಭಾಷಣವನ್ನು ಪ್ರಸ್ತಾಪಿಸಿದ ಸಚಿವರು ನಿಯಮಿತವಾಗಿ ಯೋಗ, ಪ್ರಾಣಾಯಾಮ ಮಾಡುವುದರಿಂದ ನಮ್ಮ […]

20 ದಿನಗಳಲ್ಲಿ ನಿರ್ಮಾಣವಾದ ಯಲಹಂಕ ಕೊವಿಡ್‌ ಆಸ್ಪತ್ರೆ ಲೋಕಾರ್ಪಣೆ

Sunday, June 20th, 2021
Covid care Hospital

ಬೆಂಗಳೂರು: ಕೊವಿಡ್‌ ಅಲೆಗಳನ್ನು ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ಬೋಯಿಂಗ್‌ ಸಂಸ್ಥೆಯು, ‘ಸೆಲ್ಕೋ’, ‘ಡಾಕ್ಟರ್ಸ್‌ ಫಾರ್‌ ಯು’ ಸಹಯೋಗದೊಂದಿಗೆ ಯಲಹಂಕದಲ್ಲಿ ನಿರ್ಮಿಸಿರುವ 100 ಹಾಸಿಗೆಗಳ ಅತ್ಯಾಧುನಿಕ ಕೊವಿಡ್‌-ಕೇರ್‌ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಶನಿವಾರ ಉದ್ಘಾಟಿಸಿದರು. ಆಸ್ಪತ್ರೆ ನಿರ್ಮಾಣಕ್ಕೆ ಕರ್ನಾಟಕ ವಿದ್ಯುತ್‌ ನಿಗಮ ತನ್ನ ಕ್ಯಾಂಪಸ್‌ನಲ್ಲಿ ಜಾಗ ನೀಡಿದ್ದು, ಸುಮಾರು ಅರ್ಧ ಎಕರೆ ಪ್ರದೇಶದಲ್ಲಿ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯ ಇರುವ ಆಸ್ಪತ್ರೆಯನ್ನು ಕೇವಲ 20 ದಿನದೊಳಗೆ ಪೂರ್ಣಗೊಳಿಸಿರುವುದು ವಿಶೇಷ. […]

ಆಡುಭಾಷೆಯನ್ನು ಮರೆತರೆ ನಮ್ಮ ಮೂಲವನ್ನು ಮರೆತಂತೆ: ಡಿ ವಿ ಸದಾನಂದ ಗೌಡ

Sunday, May 30th, 2021
DV Sadananda-gowda

ಮಂಗಳೂರು: ಜಾಗತೀಕರಣದ ಪ್ರಭಾವದಿಂದ ಇಂಗ್ಲಿಷ್‌ ಅನಿವಾರ್ಯ ಎಂಬಂತಾಗಿದೆ. ಇದರಿಂದ ತುಳು ಸೇರಿದಂತೆ ಹಲವು ಭಾಷೆಗಳು ನಲುಗುತ್ತಿವೆ. ಹೀಗಾಗಿ ತುಳುವರು ತಮ್ಮ ಭಾಷೆಯನ್ನು ಮರೆತು ಮೂಲವನ್ನೇ ಮರೆಯದಿರೋಣ, ಎಂದು ಮಾಜಿ ಮುಖ್ಯಮಂತ್ರಿ, ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ ವಿ ಸದಾನಂದ ಗೌಡ ಅಭಿಪ್ರಾಯಪಟ್ಟರು. ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ತುಳು ಸ್ನಾತಕೋತ್ತರ ಅಧ್ಯಯನ ವಿಭಾಗ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಪೀಠದ ಜಂಟಿ ಆಶ್ರಯದಲ್ಲಿ ನಡೆಯುತ್ತಿರುವ ತುಳು ಉಪನ್ಯಾಸ ಮಾಲಿಕೆಯ ವರ್ಷಾಚರಣೆಯ ಪ್ರಯುಕ್ತ ಶನಿವಾರ […]

ರಾಜ್ಯಕ್ಕೆ ಇಂದು ಮತ್ತೆ 5190 ವಯಲ್ಸ್ ಎಂಫೊಟೆರಿಸಿನ್-ಬಿ ಹಂಚಿಕೆ

Thursday, May 27th, 2021
DV sadanandagowda

ನವದೆಹಲಿ : ಕಪ್ಪು ಶಿಲೀಂದ್ರದ ಚಿಕಿತ್ಸೆಗಾಗಿ ಕೇಂದ್ರ ಸರ್ಕಾರವು ಇಂದು ಕರ್ಣಾಟಕಕ್ಕೆ ಹೆಚ್ಚುವರಿಯಾಗಿ 5190 ವಯಲ್ಸ್ ಎಂಫೊಟೆರಿಸಿನ್-ಬಿ ಚುಚ್ಚುಮದ್ದನ್ನು ಹಂಚಿಕೆ ಮಾಡಿದೆ ಎಂದು ಕೇಂದ್ರ ರಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ತಿಳಿಸಿದ್ದಾರೆ. ಇಂದು ಇಲ್ಲಿ ಪತ್ರಿಕಾ ಹೇಳಿಕೆಯೊಂದನ್ನು ನೀಡಿದ ಸಚಿವರು ರಾಜ್ಯಕ್ಕೆ ನಿನ್ನೆಯ ತನಕ ಅಂದರೆ 26 ಮೇ 2021ರವರೆಗೆ 5180 ವಯಲ್ಸ್ ಎಂಫೊಟೆರಿಸಿನ್-ಬಿ ಹಂಚಿಕೆ ಮಾಡಲಾಗಿತ್ತು. ಇಂದು ರಾಜ್ಯದ ಬೇಡಿಕೆಯನ್ನು ಪರಿಗಣಿಸಿ ಹೆಚ್ಚುವರಿಯಾಗಿ 5190 ವಯಲ್ಸ್ ನೀಡಲಾಗಿದೆ. ಇಲ್ಲಿಯ ತನಕ […]

ಮುಂದಿನ ವಾರಕ್ಕಾಗಿ ಕರ್ನಾಟಕಕ್ಕೆ ಮತ್ತೆ 4.25 ಲಕ್ಷ ಸೀಸೆ ರೆಮ್ಡೆಸಿವಿರ್ ಹಂಚಿಕೆ

Saturday, May 22nd, 2021
Sadananda Gowda

ಬೆಂಗಳೂರು: ದೇಶದ ವಿವಿಧ ಭಾಗಗಳಿಂದ ಒಟ್ಟು 8,848 ಕಂಪ್ಪುಶಿಲೀಂಧ್ರ (Mucormycosis/Black Fungus) ಪ್ರಕರಣಗಳು ವರದಿಯಾಗಿದ್ದು ಕೇಂದ್ರ ಸರಕಾರವು ಇಂದು ಬೇರೆಬೇರೆ ರಾಜ್ಯಗಳಿಗೆ ಒಟ್ಟು 23,680 ಸೀಸೆ ಅ್ಯಾಂಫೋಟೆರಿಸಿನ್-ಬಿ (Amphotericin-B) ಔಷಧವನ್ನು ಹಂಚಿಕೆ ಮಾಡಿದೆ. ಸುಮಾರು 500 ಕಪ್ಪುಶಿಲೀಂಧ್ರ ಪ್ರಕರಣರಣಗಳಿರುವ ಕರ್ನಾಟಕಕ್ಕೆ1270 ಸೀಸೆ ಅ್ಯಾಂಫೋಟೆರಿಸಿನ್-ಬಿ ಒದಗಿಸಲಾಗಿದೆ. ಈ ಹಿಂದೆ ರಾಜ್ಯಕ್ಕೆ ಕೇಂದ್ರ ಸರ್ಕಾರದ ಹಂಚಿಕೆ ಮೂಲಕ ಮೂರು ಕಂತಿನಲ್ಲಿ 1660 ಸೀಸೆ ಅ್ಯಾಂಫೋಟೆರಿಸಿನ್-ಬಿ ಒದಗಿಸಲಾಗಿತ್ತು. ಇಂದು ಇಲ್ಲಿ ಪತ್ರಿಕಾ ಹೇಳಿಕೆಯೊಂದರಲ್ಲಿ ಈ ವಿಷಯ ತಿಳಿಸಿರುವ ಕೇಂದ್ರ ರಾಸಾಯನಿಕ ಮತ್ತು […]

ನಾಳೆ ಭಾರತ ತಲುಪಲಿರುವ 40,000 ಸೀಸೆ ಕಪ್ಪುಶಿಲೀಂಧ್ರ ಔಷಧ

Friday, May 21st, 2021
medicine

ಬೆಂಗಳೂರು : ಕೇಂದ್ರವು ವಿವಿಧ ರಾಜ್ಯಗಳಿಗೆ ಬರುವ ವಾರದಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ರೆಮ್ಡೆಸಿವಿರ್ ಚುಚ್ಚುಮದ್ದಿನ ಹಂಚಿಕೆ ಮಾಡುವ ಪ್ರಕ್ರಿಯೆಯಲ್ಲಿದ್ದು ಸಕ್ರಿಯ ಪ್ರಕರಣಗಳನ್ನು ಆಧರಿಸಿ ರಾಜ್ಯಕ್ಕೆ ಸಿಂಹಪಾಲು ದೊರೆಯಲಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಅವರು ಹೇಳಿದ್ದಾರೆ. ಇಂದು ಇಲ್ಲಿ ಉಪಮುಖ್ಯಮಂತ್ರಿ ಡಾ ಸಿ ಎನ್ ಅಶ್ವತ್ಥನಾರಾಯಣ ಅವರೊಂದಿಗೆ ಜಂಟಿ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವರು ಈ ವಾರದ ಬಳಕೆಗಾಗಿ ರಾಜ್ಯಕ್ಕೆ ಅತಿಹೆಚ್ಚು 4.25 ಲಕ್ಷ ವಯಲ್ಸ್ […]

ಕರ್ನಾಟಕದಲ್ಲಿ 16.29 ಲಕ್ಷ ಟನ್ ರಸಗೊಬ್ಬರ ದಾಸ್ತಾನು, ಸಬ್ಸಿಡಿ ದರ ಹೆಚ್ಚಳ

Friday, May 21st, 2021
DV Sadananda Gowda

ಬೆಂಗಳೂರು: ಮುಂಗಾರು ಹಂಗಾಮಿಗಿನಲ್ಲಿ ಡಿಎಪಿ ಹಾಗೂ ಪಿ & ಕೆ ರಸಗೊಬ್ಬರ ಸಬ್ಸಿಡಿಯನ್ನು 50-ಕೆ.ಜಿ. ಚೀಲವೊಂದಕ್ಕೆ 511 ರೂಪಾಯಿಯಿಂದ 1211 ರೂಪಾಯಿಗೆ (ಶೇಕಡಾ 140) ಹೆಚ್ಚಳ ಮಾಡಿ ಕೇಂದ್ರ ರಸಗೊಬ್ಬರ ಇಲಾಖೆಯು ಇಂದು ಅಧಿಕೃತ ಆದೇಶ ಹೊರಡಿಸಿದೆ. ಪೋಷಕಾಂಶ ಆಧಾರಿತ ರಸಗೊಬ್ಬರ ಸಬ್ಸಿಡಿ (ಎನ್.ಬಿ.ಎಸ್.) ಯೋಜನೆಯಡಿ ಗುರುವಾರ ಹೊರಡಿಸಿದ ಪರಿಷ್ಕೃತ ಆದೇಶದ ಪ್ರಕಾರ ರಸಗೊಬ್ಬರದಲ್ಲಿ ಬಳಕೆಯಾಗುವ ಪ್ರತಿ ಟನ್ ನೈಟ್ರೋಜನ್ (Nitrogen – N)ಗೆ 18,789 ರೂ, ಫೊಸ್ಫೇಟ್ (Phosphate – P)ಗೆ 45,323 ರೂ, ಪೊಟಾಷ್ […]

ಮೊದಲು ಜೀವ ಉಳಿಯಬೇಕು ನಂತರ ಜೀವನ, ಲಾಖ್ಡೌನ್ ಮುಂದುವರಿಕೆಗೆ ಚಿಂತನೆ

Saturday, May 15th, 2021
DVS

ಬೆಂಗಳೂರು: ನಗರದಲ್ಲಿರುವ ಕೇಂದ್ರ ಆಯುಷ್ ಇಲಾಖೆಯ ಆಯುರ್ವೇದ ಸಂಶೋಧನಾ ಸಂಸ್ಥೆಯ ಆಸ್ಪತ್ರೆಯನ್ನು ಇನ್ನೆರಡು ವಾರಗಳಲ್ಲಿ 100 ಹಾಸಿಗೆಯ ಸುಸಜ್ಜಿತ ಕೋವಿಡ್ ಆರೈಕೆ ಕೇಂದ್ರವಾಗಿ ಪರಿವರ್ತಿಸಲಾಗುವುದು ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಅವರು ಹೇಳಿದ್ದಾರೆ. ಸ್ಥಳೀಯ ಶಾಸಕರೂ ಆಗಿರುವ ಸಹಕಾರ ಸಚಿವ ಎಸ್. ಟಿ. ಸೋಮಶೇಖರ ಅವರೊಂದಿಗೆ ಉತ್ತರಹಳ್ಳಿ ಹೋಬಳಿಯಲ್ಲಿರುವ ಆಯುಷ್ ಆಸ್ಪತ್ರೆಗೆ ಭೇಟಿ ನೀಡಿದ ಕೇಂದ್ರ ಸಚಿವರು ಸಂಸ್ಥೆಯ ನಿರ್ದೇಶಕಿ ಡಾ ಸುಲೋಚನಾ ಭಟ್, ಹಿರಿಯ ಅಧಿಕಾರಿಗಳು, ಲ್ಯಾಂಡ್ […]

ಡಿ.ವಿ.ಸದಾನಂದ ಗೌಡ ಅಶ್ವಸ್ಥ, ಆಸ್ಪತ್ರೆಗೆ ದಾಖಲು

Sunday, January 3rd, 2021
sadananda Gowda

ಚಿತ್ರದುರ್ಗ : ಕೇಂದ್ರ ಸಚಿವ, ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಅವರು ಲೋ ಶುಗರ್ ಉಂಟಾಗಿ ಚಿತ್ರದುರ್ಗದ ಬಸವೇಶ್ವರ  ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಿವಮೊಗ್ಗದಲ್ಲಿ ಬಿಜೆಪಿ ಸಭೆ ಮುಗಿಸಿ ಬರುವಾಗ ಘಟನೆ ನಡೆದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸಹಜಸ್ಥಿತಿಗೆ ಬಂದಿದ್ದು ಕುಟುಂಬದವರ ಜೊತೆ ಮಾತಾಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗುವುದು ಎಂದು ಮೂಲಗಳು ತಿಳಿಸಿವೆ

ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ ರಿಗೆ ಕೋವಿಡ್​ ಸೋಂಕು ದೃಢ

Thursday, November 19th, 2020
DV Sadananda Gowda

ಮಂಗಳೂರು  : ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಅವರಿಗೆ ಕೋವಿಡ್ ಸೋಂಕು ದೃಢವಾಗಿದೆ. ಈ ಕುರಿತು ಅಧಿಕೃತವಾಗಿ ಟ್ವಿಟರ್ನಲ್ಲಿ ತಿಳಿಸಿರುವ ಸಚಿವರು, ಕೊರೋನಾ ಸೋಂಕಿನ ಪ್ರಾಥಮಿಕ ಲಕ್ಷಣಗಳ ಹಿನ್ನಲೆ ಪರೀಕ್ಷೆಗೆ ಒಳಗಾಗಿದ್ದೆ. ಈ ವೇಳೆ ಸೋಂಕು ದೃಢಪಟ್ಟಿದೆ. ಈ ಹಿನ್ನಲೆ ಪ್ರತ್ಯೇಕ ವಾಸಕ್ಕೆ ಒಳಗಾಗಿತ್ತಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಒಳಗಾದವರು ಮುಂಜಾಗ್ರತೆ ವಹಿಸುವುದರೊಂದಿಗೆ ಪರೀಕ್ಷೆಗೆ ಒಳಪಡಿ ಎಂದು ಮನವಿ ಮಾಡಿದ್ದಾರೆ. ಇನ್ನು ಸಚಿವರು ಕೊರೋನಾ ಸೋಂಕಿಗೆ ಒಳಗಾಗಿದ್ದ ಸುದ್ದಿ ತಿಳಿಯುತ್ತಿದ್ದಂತೆ […]