ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳ, ಉಜಿರೆ ಭೇಟಿ ನಾಳೆ
Saturday, October 28th, 2017ಮಂಗಳೂರು: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಆಮಂತ್ರಣದಂತೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ಆಗಮಿಸಲಿದ್ದಾರೆ. ಅಲ್ಲಿ ದೇವರ ದರ್ಶನದ ಬಳಿಕ ಉಜಿರೆಗೆ ರಸ್ತೆ ಮೂಲಕ ಆಗಮಿಸುವರು. ಉಜಿರೆಯಲ್ಲಿ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಮಧ್ಯಾಹ್ನ 12 ಗಂಟೆಗೆ ನಡೆಯುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವ-ಸಹಾಯ ಸಂಘಗಳ ಸದಸ್ಯರ ಸಮಾವೇಶದಲ್ಲಿ ಹೆಗ್ಗಡೆಯವರ ನೂತನ ಸಂಕಲ್ಪವಾದ ಭೂಮಿ ತಾಯಿಯನ್ನು ರಕ್ಷಿಸಿ, ಮುಂದಿನ ಪೀಳಿಗೆಗೆ ವರ್ಗಾಯಿಸಿ ಅಭಿಯಾನವನ್ನು ಪ್ರಧಾನಿ ಉದ್ಘಾಟಿಸುವರು. ಸ್ವ-ಸಹಾಯ ಸಂಘಗಳ ಸದಸ್ಯರಿಗೆ ಪ್ರಧಾನ ಮಂತ್ರಿ ಜನ್ ಧನ್ […]