ಸ್ವಾಸ್ಥ್ಯ ಸಮಾಜ ನಿರ್ಮಾಣದಲ್ಲಿ ಪತ್ರಕರ್ತರ ಮತ್ತು ಪತ್ರಕರ್ತರ ಸಂಘದ ಕೊಡುಗೆ ಅನನ್ಯ : ವೇದವ್ಯಾಸ ಕಾಮತ್

Tuesday, December 28th, 2021
Journalist

ಮಂಗಳೂರು ಸ್ವಾಸ್ಥ್ಯ ಸಮಾಜದ ನಿರ್ಮಾಣದಲ್ಲಿ ಪತ್ರಕರ್ತರ ಮತ್ತು ಪತ್ರಕರ್ತರ ಸಂಘದ ಪಾತ್ರ ಅನನ್ಯವಾದುದು ಎಂದು ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್ ಹೇಳಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ಜಿಲ್ಲಾ ಪತ್ರಕರ್ತರ ಸಮ್ಮೇಳನ ‘ಸಾಧನೆ ಸಂಭ್ರಮ-2021’ನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮಾದರಿಯಾಗಿ ಕೆಲಸ ಮಾಡುತಿದೆ. ಪತ್ರಕರ್ತರ ಸಂಘದ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಲವು ಮಂದಿ ಜನ ಪ್ರತಿನಿಧಿಗಳಿಗೆ, ಸರಕಾರಕ್ಕೆ ಪ್ರೇರಣೆಯಾಗಿದೆ. […]

ಕಾಂಗ್ರೆಸ್ ಜಿಲ್ಲೆಗೆ ಕೆಟ್ಟ ಹೆಸರು ತರುವುದಲ್ಲದೆ, ಸರಕಾರಿ ಆಸ್ಪತ್ರೆಗೆ ಬರದಂತೆ ಜನರಲ್ಲಿ ಭಯ ತುಂಬುತ್ತಿದೆ

Saturday, May 8th, 2021
vedavyas kamath

ಮಂಗಳೂರು : ವೆನ್ಲಾಕ್ ಆಸ್ಪತ್ರೆಯ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡಿ ಜಿಲ್ಲೆಗೆ ಕೆಟ್ಟ ಹೆಸರು ತರುವುದಲ್ಲದೆ, ಜನತೆ ವೆನ್ಲಾಕ್‌ಗೆ ಬರಲು ಭಯಪಡುವ ವಾತಾವರಣವನ್ನು ಕಾಂಗ್ರೆಸ್ ನಿರ್ಮಿಸುತ್ತಿದೆ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೆನ್ಲಾಕ್ ಆಸ್ಪತ್ರೆಯಲ್ಲಿ ಬಡವರಿಗೆ ಬೇಕಾದ ಎಲ್ಲಾ ವ್ಯವಸ್ಥೆಗಳಿವೆ. ಆದರೆ ಕಾಂಗ್ರೆಸ್ ಜನತೆಯ ದಿಕ್ಕು ತಪ್ಪಿಸುತ್ತಿದ್ದು, ಬಡವರು ಸರಕಾರಿ ಆಸ್ಪತ್ರೆಗೆ ಬರದಂತೆ ಭಯ ತುಂಬುತ್ತಿದೆ. ಆರೋಗ್ಯ ವಿಷಯದ ಈ ರೀತಿಯ ರಾಜಕಾರಣ ಕಾಂಗ್ರೆಸ್‌ಗೆ […]

ಡಿ ವೇದವ್ಯಾಸ ಕಾಮತ್ : ನೆರೆ ಸಂತ್ರಸ್ತರ ನೆರವಿಗೆ ಸ್ಪಂದಿಸಿ

Tuesday, August 13th, 2019
vedhavyas-kamath

ಮಂಗಳೂರು : ಕರಾವಳಿ ಸೇರಿದಂತೆ ರಾಜ್ಯದ ಜನ ಅತೀವೃಷ್ಠಿಯಿಂದ ಸಂಕಷ್ಟಕ್ಕೆ ಸಿಲುಕಿದ್ದು, ಜನತೆ ಅವರ ನೆರವಿಗೆ ಸ್ಪಂದಿಸಬೇಕು ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಮನವಿ ಮಾಡಿದ್ದಾರೆ. ವಿಪರೀತ ಮಳೆ ಮತ್ತು ನೆರೆಯಿಂದ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರ್ನಾಟಕ ರಾಜ್ಯದ ಬಹುಭಾಗ ಜಲಾವೃತವಾಗಿರುವುದರಿಂದ ಲಕ್ಷಾಂತರ ಜನರು ನಿತ್ಯಸಂಕಟವನ್ನು ಅನುಭವಿಸಿದ್ದಾರೆ. ಈ ಹಿನ್ನಲೆಯಲ್ಲಿ ಸಂತ್ರಸ್ತರ ನೆರವಿಗೆ ಧಾವಿಸಲು ಶಾಸಕ ವೇದವ್ಯಾಸ ಕಾಮತ್ ಹಾಗೂ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ನೇತೃತ್ವದಲ್ಲಿ ಯೋಜನೆಯನ್ನು ಹಾಕಿಕೊಳ್ಳಲಾಗಿದೆ. ನೆರೆ […]

ಸ್ವಾವಲಂಬಿ ಬದುಕು ರೂಪಿಸಲು ಸರ್ಕಾರದಿಂದ ಎಲ್ಲ ನೆರವು : ಸಚಿವ ಯು ಟಿ ಖಾದರ್

Tuesday, December 4th, 2018
vedvyas-kamath-2

ಮಂಗಳೂರು : ಮುಖ್ಯವಾಹಿನಿಯಲ್ಲಿ ಎಲ್ಲರೂ ಸಮಾನರಾಗಿ ಬದುಕಲು ವಿಕಲಚೇತನರಿಗೆ ಸರ್ಕಾರ ಸಂಘಸಂಸ್ಥೆಗಳ ಮೂಲಕ ಎಲ್ಲ ನೆರವು ನೀಡುತ್ತಿದ್ದು, ಈ ಸಂಬಂಧ ಸ್ವೀಕರಿಸಿದ ಮನವಿಗಳನ್ನು ಪರಿಶೀಲಿಸಿ ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ನಗರಾಭಿವೃದ್ಧಿ ಹಾಗೂ ವಸತಿ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ನೀಡಿದರು. ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಲಯನ್ಸ್ ಕ್ಲಬ್ ಗಾಂಧಿನಗರ, ವಿಕಲಚೇತನರಿಗಾಗಿ […]

ಡಿ ವೇದವ್ಯಾಸ ಕಾಮತ್ ರಿಂದ ಕುಲಶೇಖರ ಕನ್ನಗುಡ್ಡೆಯ ರಸ್ತೆ ಕಾಮಗಾರಿ ಪರಿಶೀಲನೆ

Saturday, November 3rd, 2018
vedvyas-kamath

ಮಂಗಳೂರು: ಕುಲಶೇಖರದ ಕನ್ನಗುಡ್ಡೆಯ ರಸ್ತೆ ಕಾಮಗಾರಿಯನ್ನು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಪರಿಶೀಲಿಸಿದರು. ಕುಲಶೇಖರದಿಂದ ಉಮ್ಮಿಕಾನ್ ಸರಿಪಳ್ಳದ ಮೂಲಕ ಕೊಡಕಲ್ಲು ಪ್ರದೇಶಕ್ಕೆ ಹೋಗುವ ಈ ರಸ್ತೆ ಮುಂದಿನ ದಿನಗಳಲ್ಲಿ ಅಸಂಖ್ಯಾತ ಜನರಿಗೆ ಉಪಯೋಗಕ್ಕೆ ಬರಲಿದ್ದು, ಇಂದು ಕಾಮಗಾರಿ ನಡೆಯುವ ಸ್ಥಳಕ್ಕೆ ಆಗಮಿಸಿದ ಶಾಸಕರು ಅಧಿಕಾರಿಗಳನ್ನು ಕರೆಸಿ ಕಾಮಗಾರಿಯ ಕುರಿತು ಚರ್ಚಿಸಿದರು. ಶಾಸಕರೊಂದಿಗೆ ಬಿಜೆಪಿ ಮುಖಂಡರಾದ ಅಜಯ್, ವಸಂತ ಜೆ ಪೂಜಾರಿ, ನರೇಶ್ ಸರಿಪಲ್ಲ, ಪ್ರವೀಣ್ ಶೆಟ್ಟಿ ನಿಡ್ಡೇಲ್, ಸುರೇಶ್ ಆಚಾರ್, ಗೀತಾ ಶೆಟ್ಟಿ, […]

ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ: ಸಂಸದ ನಳಿನ್ ಅವರಿಂದ ಉದ್ಘಾಟನೆ

Monday, October 8th, 2018
nalin-kumar

ಮಂಗಳೂರು: ಜಿಲ್ಲಾಡಳಿತ, ದ.ಕ. ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಯುವಜನ ಒಕ್ಕೂಟ ಇವರ ಆಶ್ರಯದಲ್ಲಿ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ ಇಂದು ಬೆಳಗ್ಗೆ ನಗರದ ಮಂಗಳಾ ಕ್ರೀಡಾಂಗಣದಲ್ಲಿ ಉದ್ಘಾಟನೆಗೊಂಡಿತು. ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಸಮಾರಂಭಕ್ಕೆ ಚಾಲನೆ ನೀಡಿದರು. ಸಂಸದ ನಳಿನ್ ಕುಮಾರ್ ಕಟೀಲು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾಸಕ ಡಿ.ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಕಸ್ತೂರಿ ಪಂಜ, ಮಮತಾ ಗಟ್ಟಿ, ಲಿಲ್ಲಿ ಪಾಯಸ್ ಮತ್ತಿತರರು […]

ರೋಟರಿ ಕ್ಲಬ್ ಸಂಘಟನೆಯ ದಾನಧರ್ಮ ಜಗತ್ತಿನೆಲ್ಲೆಡೆ ಪ್ರಸಿದ್ಧವಾಗಿದೆ: ಡಿ ವೇದವ್ಯಾಸ ಕಾಮತ್

Thursday, July 19th, 2018
vedavyas-kamath

ಮಂಗಳೂರು: ಮಂಗಳೂರು ಸರಕಾರಿ ವೆನ್ ಲಾಕ್ ಆಸ್ಪತ್ರೆಗೆ ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ಮಂಕಿಯೇಮ್ ಕಿಕ್ ಬಾಕ್ಸಿಂಗ್ ಸಂಸ್ಥೆಯ ವತಿಯಿಂದ ಪಿಸಿಯೋಥೆರಪಿ ಸಲಕರಣೆಗಳನ್ನು ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಅವರು ರೋಟರಿ ಕ್ಲಬ್ ಸಂಘಟನೆಯ ದಾನಧರ್ಮ ಜಗತ್ತಿನೆಲ್ಲೆಡೆ ಪ್ರಸಿದ್ಧವಾಗಿದೆ. ವೆನ್ ಲಾಕ್ ಆಸ್ಪತ್ರೆಗೆ ಪಿಸಿಯೋಥೆರಪಿ ಸಲಕರಣೆಗಳನ್ನು ನೀಡುವ ಮೂಲಕ ಜನಸಾಮಾನ್ಯರ ಸಂಕಷ್ಟಗಳಿಗೆ ರೋಟರಿ ಕ್ಲಬ್ ಮತ್ತು ಮಂಕಿಯೇಮ್ ಕಿಕ್ ಬಾಕ್ಸಿಂಗ್ ಸಂಸ್ಥೆ ಸ್ಪಂದಿಸಿದ ಹಾಗಾಗಿದೆ. […]

ಮಳೆಯಿಂದಾಗಿ ನಷ್ಟ ಅನುಭವಿಸುತ್ತಿರುವ ಜನರಿಗೂ ನೆರವಾಗುವುದು ಸರಕಾರದ ಕರ್ತವ್ಯ: ವೇದವ್ಯಾಸ ಕಾಮತ್

Saturday, June 2nd, 2018
vedavyas-kamath

ಮಂಗಳೂರು: ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪದವಿ ಕಾಲೇಜುಗಳ ಆಭಿವೃದ್ದಿ ಹಾಗೂ ಅದಕ್ಕೆ ಪೂರಕವಾಗುವಂತೆ ಸ್ಟಾಫ್ ಕೌನ್ಸಿಲ್ ಸಮಿತಿಗಳನ್ನು ರಚಿಸುವ ಬಗ್ಗೆ ಗಮನ ನೀಡುವುದಾಗಿ ಮಂಗಳೂರು ದಕ್ಷಿಣ ಕ್ಷೇತ್ರ ಶಾಸಕ ಡಿ.ವೇದವ್ಯಾಸ ಕಾಮತ್ ಭರವಸೆ ನೀಡಿದ್ದಾರೆ. ನಗರದ ಕೊಡಿಯಾಲ್‌ಬೈಲ್‌ನಲ್ಲಿರುವ ಅಟಲ್ ಸೇವಾ ಕೇಂದ್ರದಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ ಸಂದರ್ಭದಲ್ಲಿ ತಮ್ಮನ್ನು ಭೇಟಿ ಮಾಡಿದ ಕಾಲೇಜು ಮುಖ್ಯಸ್ಥರು, ಶಿಕ್ಷಣಾಧಿಕಾರಿಗಳಿಗೆ ಈ ಬಗ್ಗೆ ಭರವಸೆ ನೀಡಿದರು. ನಗರದಲ್ಲಿರುವ ಸರಕಾರಿ ಪದವಿ ಕಾಲೇಜು ಹಾಗೂ ಪದವಿ ಕಾಲೇಜುಗಳನ್ನು ಮಾದರಿ ಶಿಕ್ಷಣ […]

ಮೋದಿ ಜನಪರ ಯೋಜನೆಗಳ ಲಾಭ ರಾಜ್ಯದ ಜನರಿಗೂ ಸಿಗಬೇಕು- ಡಿ ವೇದವ್ಯಾಸ ಕಾಮತ್

Sunday, March 18th, 2018
vedavyasa

ಮಂಗಳೂರು  : ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಜನರಿಗೆ ತಲುಪಿಸದೇ ವಂಚಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಶ್ರೇಷ್ಟ ಯೋಜನೆಗಳ ಲಾಭವನ್ನು ಜನರು ಪಡೆಯಬೇಕು. ಭಾರತೀಯ ಜನತಾ ಪಾರ್ಟಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ತಕ್ಷಣ ಜನಪರ ಯೋಜನೆಗಳಿಗೆ ಚಾಲನೆ ನೀಡಲಿದೆ ಎಂದು ಮಂಗಳೂರು ನಗರ ದಕ್ಷಿಣ ಬಿಜೆಪಿ ಅಧ್ಯಕ್ಷ ಡಿ ವೇದವ್ಯಾಸ ಕಾಮತ್ ಹೇಳಿದ್ದಾರೆ. ಅವರು ಮಂಗಳೂರು ನಗರ ದಕ್ಷಿಣದಲ್ಲಿ ಮನೆಮನೆ ಸಂಪರ್ಕ ಅಭಿಯಾನದ ಅಂಗವಾಗಿ 51 ನೇ […]

ಹಿರಿಯರ ಮಾರ್ಗದರ್ಶನ ಮತ್ತು ಯುವಕರ ಶ್ರಮ ಪಕ್ಷಕ್ಕೆ ವರದಾನ- ಡಿ ವೇದವ್ಯಾಸ ಕಾಮತ್

Friday, March 16th, 2018
devdas-kamath

ಮಂಗಳೂರು: ರಾಜ್ಯದ ಮುಂದಿನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರನ್ನು ಸಂಘದ ಸಂಪರ್ಕಕ್ಕೆ ಕರೆ ತಂದ ಮ.ಚ.ಚಂದ್ರಹಾಸ್ ಅವರು ಎಲೆಮರೆಯ ಕಾಯಿಯಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಂತಹ ಶ್ರಮಜೀವಿಗಳ ಸಮರ್ಥ ಮಾರ್ಗದರ್ಶನ ಮತ್ತು ಯುವ ಪೀಳಿಗೆಯ ಅವಿರತ ಶ್ರಮದಿಂದ ಬಿಜೆಪಿ ಈ ಬಾರಿ ರಾಜ್ಯದಲ್ಲಿ ಅಧಿಕಾರಕ್ಕೆ ಏರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಂಗಳೂರು ನಗರ ದಕ್ಷಿಣ ಬಿಜೆಪಿ ಅಧ್ಯಕ್ಷ ಡಿ ವೇದವ್ಯಾಸ ಕಾಮತ್ ಹೇಳಿದ್ದಾರೆ. ಅವರು ಚಿಲಿಂಬಿ ವಾರ್ಡಿನ 77 ಮತ್ತು 78 ನೇ ಬೂತಿನಲ್ಲಿ ನಡೆದ ಜನಸಂಪರ್ಕ ಹಾಗೂ […]