ಡೆಂಗ್ಯೂ ಜ್ವರ ಭೀತಿ : ಚಿಕಿತ್ಸೆಗೆ ಸ್ಪಂದಿಸದೆ ಮಹಿಳೆ ಮೃತ
Thursday, June 27th, 2019ಮಂಗಳೂರು: ಡೆಂಗ್ಯೂ ಜ್ವರ ಜ್ವರದಿಂದ ಬಳಲುತ್ತಿದ್ದ ಮಹಿಳೆವೋರ್ವರು ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ. ಕೋಡಿಂಬಾಳ ಗ್ರಾಮದ ಕುಕ್ಕರೆಬೆಟ್ಟು ನಿವಾಸಿ ಆನಂದ ನಾಯ್ಕ್ ಎಂಬುವರ ಪತ್ನಿ ವೀಣಾ (43) ಮೃತರು. ಕಳೆದ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ವೀಣಾ ಅವರಿಗೆ ಕಡಬದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಅವರ ದೇಹದಲ್ಲಿ ಬಿಳಿ ರಕ್ತಕಣ ಕಡಿಮೆಯಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಈ ಬಗ್ಗೆ ದ.ಕ. […]