ಕೊಲೆ ಯತ್ನ ಪ್ರಕರಣ : ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಅಸಮಾಧಾನ ಹೊರಹಾಕಿದ ತನ್ವೀರ್ ಸೇಠ್

Friday, March 6th, 2020
tanveer-shet

ಬೆಂಗಳೂರು : ರಾಜ್ಯ ಸರ್ಕಾರಕ್ಕೆ ಪತ್ರ ಬರೆಯುವದರ ಮೂಲಕ ಮಾಜಿ ಸಚಿವ ತನ್ವೀರ್ ಸೇಠ್ ಅವರು ಅಸಮಾಧಾನ ಹೊರಹಾಕಿದ್ದಾರೆ. ಇತ್ತೀಚೆಗೆ ಅವರ ಮೇಲೆ ನಡೆದ ಹಲ್ಲೆ ವಿಚಾರವಾಗಿ ಗೃಹ ಸಚಿವರಿಗೆ ಪತ್ರ ಬರೆದ ತನ್ವೀರ್ ಸೇಠ್, ನನ್ನ ಮೇಲೆ ಹಲ್ಲೆ ಮಾಡಿದ ವ್ಯಕ್ತಿಯನ್ನ ಮಾತ್ರ ಪೊಲೀಸರು ಬಂಧಿಸಿದ್ದಾರೆ. ಆದರೆ ಈ ಪ್ರಕರಣದ ಹಿಂದೆ ಯಾರು ಇದ್ದಾರೆ ಅನ್ನೋದು ಪತ್ತೆ ಹಚ್ಚುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂದು ದೂರಿದ್ದಾರೆ. ನನ್ನ ಮೇಲೆ ಹಲ್ಲೆ ಮಾಡಿರುವ ಪ್ರಕರಣದಲ್ಲಿ ಸೂಕ್ತವಾಗಿ ತನಿಖೆ ನಡೆಯುತ್ತಿಲ್ಲ. […]

ಮೈಸೂರು : ತನ್ವೀರ್​ ಸೇಠ್​ ಆಪ್ತ ಸಹಾಯಕನ ಮೇಲೆ ಮಾರಣಾಂತಿಕ ಹಲ್ಲೆ

Friday, March 6th, 2020
rajani-annayya

ಮೈಸೂರು : ಕಳೆದ ಕೆಲ ದಿನಗಳ ಹಿಂದೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಕೊಲೆ ಯತ್ನ ನಡೆದಿತ್ತು. ಆ ಸುದ್ದಿ ಮಾಸುವ ಮುನ್ನವೇ ಇದೀಗ ಅವರ ಆಪ್ತನ ಕೊಲೆ ಯತ್ನ ಸಹ ನಡೆದಿದೆ. ಮೈಸೂರು ಮಹಾನಗರ ಪಾಲಿಕೆ ಮಾಜಿ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದ್ದು, ರಜನಿ ಅಣ್ಣಯ್ಯ ಎಂಬುವವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಮೈಸೂರಿನ ಯರಗನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಗ್ರಾಮದೇವತೆಯ ಹಬ್ಬದ ವೇಳೆ ಲಾಂಗು ಬೀಸಿರುವ ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದಾರೆ. ಕಾಂಗ್ರೆಸ್ ಮುಖಂಡರಾಗಿರುವ […]

ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣ ಮುಗಿಸಲು ಇನ್ನೂ ಒಂದು ತಿಂಗಳು ಬೇಕಾಗಲಿದೆ : ಕೆ.ಟಿ.ಬಾಲಕೃಷ್ಣ

Tuesday, December 17th, 2019
mysuru

ಮೈಸೂರು : ಶಾಸಕ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣ ಮುಗಿಸಲು ಇನ್ನೂ ಒಂದು ತಿಂಗಳು ಬೇಕಾಗಲಿದೆ ಎಂದು ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ ಹೇಳಿದರು. ನಗರದಲ್ಲಿ ಜನಸ್ನೇಹಿ ಕಾರ್ಯಾಗಾರ ಉದ್ಘಾಟನೆಯ ಬಳಿಕ ಶಾಸಕ ತನ್ವೀರ್ ಸೇಠ್ ಪ್ರಕರಣ ನಡೆದು ಒಂದು ತಿಂಗಳಾದರೂ ಆರೋಪಿ ಸ್ಥಳದಲ್ಲೇ ಸಿಕ್ಕರೂ ಅಂತ್ಯ ಕಂಡಿಲ್ಲ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು ಪ್ರಕರಣ ಮುಗಿಸಲು ಇನ್ನೂ ಒಂದು ತಿಂಗಳು ಬೇಕಾಗುತ್ತೆ. ನಾವು ಯಾವುದೇ ಅಥವಾ ಯಾರದ್ದೇ ಒತ್ತಡಕ್ಕೂ ಮಣಿದಿಲ್ಲ. ಇಲ್ಲಿಯವರೆಗೆ ಪ್ರಕರಣದಲ್ಲಿ […]

ತನ್ವೀರ್ ಸೇಠ್​​ ಮೇಲೆ ಹಲ್ಲೆ ಪ್ರಕರಣದಲ್ಲಿ ಹಲವರನ್ನು ಬಂಧಿಸಿ ತನಿಖೆ ನಡೆಸುತ್ತಿದ್ದೇವೆ : ಪೋಲಿಸ್ ಕಮೀಷನರ್ ಕೆ.ಟಿ.ಬಾಲಕೃಷ್ಣ

Monday, November 18th, 2019
K-C-Balakrishna

ಮೈಸೂರು : ಶಾಸಕ ತನ್ವೀರ್ ಸೇಠ್ ಮೇಲೆ ಹಲ್ಲೆ ನಡೆಸಿದ ವ್ಯಕ್ತಿ ಸೇರಿದಂತೆ ಹಲವರನ್ನು ಬಂಧಿಸಿ ತನಿಖೆ ನಡೆಸುತ್ತಿದ್ದೇವೆ ಎಂದು ನಗರ ಪೋಲಿಸ್ ಕಮೀಷನರ್ ಕೆ.ಟಿ.ಬಾಲಕೃಷ್ಣ ಆಸ್ಪತ್ರೆಯ ಬಳಿ ಹೇಳಿಕೆ ನೀಡಿದ್ದಾರೆ. ಇಂದು ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶಾಸಕರ ಮೆಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಜನರನ್ನು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದೇವೆ. ಪ್ರಮುಖ ಆರೋಪಿ ಉದಯಗಿರಿ ನಿವಾಸಿಯಾಗಿದ್ದು, ಮರಗೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ ಎಂದರು. ಈ ವ್ಯಕ್ತಿಯೇ 2-3 ಬಾರಿ […]

ಮದುವೆ ಸಮಾರಂಭದ ವೇಳೆ ಕಾಂಗ್ರೆಸ್​​ ಶಾಸಕ ತನ್ವೀರ್ ಸೇಠ್ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಬಂಧನ

Monday, November 18th, 2019
Gowsiya-Nagara

ಮೈಸೂರು : ಭಾನುವಾರ ರಾತ್ರಿ ಮದುವೆ ಸಮಾರಂಭದಲ್ಲಿ ಭಾಗಿಯಾಗಿದ್ದ ವೇಳೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರ ಕತ್ತಿನ ಭಾಗಕ್ಕೆ ಮಚ್ಚಿನಿಂದ ಹಲ್ಲೆ ನಡೆಸಿದ್ದ ಆರೋಪಿಯನ್ನ ಬಂಧಿಸಲಾಗಿದೆ. ಬನ್ನಿಮಂಟಪದ ಪಂಜಿನ ಕವಾಯತು ಮೈದಾನದ ಹಿಂಭಾಗವಿರುವ ಕಲ್ಯಾಣ ಮಂಟಪವೊಂದರಲ್ಲಿ ಶಾಸಕ ತನ್ವೀರ್ ಸೇಠ್ ಊಟ ಮಾಡಿ ನಂತರ ಸಮಾರಂಭದ ಹಾಲ್ಗೆ ಬಂದು ಸ್ನೇಹಿತರೊಂದಿಗೆ ಸಂಗೀತ ಕಾರ್ಯಕ್ರಮ ವೀಕ್ಷಿಸುತ್ತಿದ್ದರು. ಇದೇ ವೇಳೆ ಕೆಂಪು ಬಣ್ಣದ ಜಾಕೆಟ್ ಧರಿಸಿದ್ದ ಯುವಕನೋರ್ವ ಕೈಯಲ್ಲಿ ಮಾರಕಾಸ್ತ್ರ ಹಿಡಿದುಕೊಂಡು ನಿಧಾನವಾಗಿ ಬಂದು ವೇದಿಕೆಯ ಮುಂಭಾಗದಲ್ಲಿ ಕುಳಿತಿದ್ದ […]

ಶಾ ಧಮ್ಕಿಗೆ ಹೆದರೋಕೆ ನಾವು ಕೈಗೆ ಬಳೆ ತೊಟ್ಟಿಲ್ಲ: ತನ್ವೀರ್‌ ಸೇಠ್ ಗುಡುಗು

Friday, January 26th, 2018
amit-shah

ರಾಯಚೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ರಾಜ್ಯಕ್ಕೆ ಧಮ್ಕಿ ಹಾಕೋಕೆ ಬರುತ್ತಾರೆ. ಅವರ ಧಮ್ಕಿಗೆ ಯಾರು ಹೆದರುವವರಿಲ್ಲ. ಇಲ್ಲಿ ಯಾರು ಕೈಗೆ ಬಳೆ ಹಾಕಿಕೊಂಡಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ತನ್ವೀರ್‌ಸೇಠ್ ಗುಡುಗಿದ್ದಾರೆ. ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, 5 ವರ್ಷಗಳ ಭ್ರಷ್ಟಾಚಾರ ರಹಿತ ಆಡಳಿತವನ್ನು ಕಾಂಗ್ರೆಸ್ ನೀಡಿದೆ. ಬಿಜೆಪಿಯವರು ಕಾಂಗ್ರೆಸ್‌ ಸರ್ಕಾರದ ಮೇಲೆ ವಿನಾಕಾರಣ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ರಾಯಚೂರು ಜಿಲ್ಲಾ ಉಸ್ತುವಾರಿ ಬದಲಾವಣೆ ವಿಚಾರವಾಗಿ ನನಗೆ ಇನ್ನೂ ಯಾವುದೇ […]

ಜಿಲ್ಲಾ ವಕ್ಫ್ ಸಲಹಾ ಸಮಿತಿ ಸದಸ್ಯರಾಗಿ ಹನೀಫ್ ಕೆ.ಎಂ ನೇಮಕ

Saturday, December 16th, 2017
muneef-k-m

ಪುತ್ತೂರು: ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿ ಸದಸ್ಯರಾಗಿ ಕೆಯ್ಯೂರು ಗ್ರಾ.ಪಂ.ಸದಸ್ಯ ಹನೀಫ್ ಕೆ.ಎಂ. ಅವರು ನೇಮಕಗೊಂಡಿದ್ದಾರೆ. ವಕ್ಫ್ ಸಚಿವ ತನ್ವೀರ್ ಸೇಠ್ ಮುಂದಾಳತ್ವದಲ್ಲಿ, ದ.ಕ.ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ. ಖಾದರ್ ಮತ್ತು ಶಾಸಕಿ ಶಕುಂತಳಾ ಶೆಟ್ಟಿ ಅವರ ಶಿಫಾರಸ್ಸಿನಂತೆ ಹನೀಫ್ ಕೆ.ಎಂ. ಅವರನ್ನು ನೇಮಕಗೊಳಿಸಲಾಗಿದೆ. ಪ್ರಸ್ತುತ ಕೆಯ್ಯೂರು ಗ್ರಾ.ಪಂ. ಸದಸ್ಯರಾಗಿ, ಕೆಯ್ಯೂರು ಗ್ರಾಮೀಣ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿರುವ ಹನೀಫ್ ಕೆ.ಎಂ. ಅವರು ಕೆದಂಬಾಡಿ ಗ್ರಾ.ಪಂನ […]

ಅಲ್ಪಸಂಖ್ಯಾತರು ವಾಸಿಸುತ್ತಿರುವ ಪ್ರದೇಶಗಳಲ್ಲಿ ಯೋಜನೆ, ಅನುದಾನ ಮಂಜೂರು : ತನ್ವೀರ್ ಸೇಠ್

Thursday, October 12th, 2017
thanvir-set

ಮಂಗಳೂರು: ಅಲ್ಪಸಂಖ್ಯಾತರು ವಾಸಿಸುತ್ತಿರುವ ಪ್ರದೇಶಗಳಲ್ಲಿ ರಸ್ತೆ ನಿರ್ಮಾಣಕ್ಕೆ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ನಡೆಸಲು ವಿಶೇಷ ಯೋಜನೆಯೊಂದನ್ನು ರೂಪಿಸಲಾಗಿದ್ದು, ಮೊದಲ ಕಂತಿನಲ್ಲಿ ರೂ.400 ಕೋಟಿ ಅನುದಾನ ಮಂಜೂರಾಗಿದೆ. ಎರಡನೇ ಕಂತಿನಲ್ಲಿ ಇನ್ನೂ ರೂ.400 ಕೋಟಿ ಅನುದಾನ ಮಂಜೂರು ಮಾಡಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ, ವಕ್ಫ್ ಮತ್ತು ಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದರು. ಅವರು ತಾಲ್ಲೂಕಿನ ಗುರುವಾಯನಕೆರೆಯ ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಮತ್ತು ಜುಮಾ ಮಸೀದಿಯಲ್ಲಿ ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅನುದಾನದಿಂದ ನೂತನವಾಗಿ ನಿರ್ಮಿಸಲಾಗಿರುವ ಶಾದಿಮಹಲ್ ಸಭಾಭವನವನ್ನು […]

ನೈತಿಕತೆಯಿದ್ದರೆ ಪಕ್ಷಕ್ಕೆ ಮುಜುಗರ ಉಂಟು ಮಾಡಿದ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿ: ಜನಾರ್ದನ ಪೂಜಾರಿ

Saturday, November 12th, 2016
Janardana poojary

  ಮಂಗಳೂರು: ಸಿಎಂ ಅವರೇ, ನಿಮಗೆ ನೈತಿಕತೆಯಿದ್ದರೆ ಸರ್ಕಾರಕ್ಕೆ ಹಾಗೂ ಪಕ್ಷಕ್ಕೆ ಮುಜುಗರ ಉಂಟು ಮಾಡಿದ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರನ್ನು ಸಂಜೆಯೊಳಗೆ ಸಚಿವ ಸಂಪುಟದಿಂದ ವಜಾ ಮಾಡಿ ಎಂದು ಕಾಂಗ್ರೆಸ್ ಮುಖಂಡ ಬಿ. ಜನಾರ್ದನ ಪೂಜಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ. ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, `ಸಿಎಂ ಅವರೇ ತನ್ವೀರ್ ಸೇಠ್‌ ರಾಜೀನಾಮೆ ತೆಗೆದುಕೊಳ್ಳಲು ಆಗದಿದ್ದರೆ. ಅದನ್ನು ಜನತೆಯ ಮುಂದೆ ನೀವು ದುರ್ಬಲಾಗಿದ್ದೀರಿ ಎಂಬುದನ್ನು ಒಪ್ಪಿಕೊಳ್ಳಿ. ಈಗ ನೀವು ನಿದ್ದೆ ಮಾಡಿದರೆ ಚುನಾವಣೆ ಸಂದರ್ಭದಲ್ಲಿ ಜನರೇ […]