ಕಾವೇರಿ ನೀರು : ಬೆಂಗಳೂರಿನಲ್ಲಿ ಕರ್ನಾಟಕ ಬಂದ್ ಗೆ ಉತ್ತಮ ಪ್ರತಿಕ್ರಿಯೆ, 144 ಸೆಕ್ಷನ್​ ಜಾರಿ

Friday, September 29th, 2023
cauvery-protest

ಬೆಂಗಳೂರು: ಕರ್ನಾಟಕದ ದಕ್ಷಿಣ ಭಾಗದ ಜಿಲ್ಲೆಗಳ ಜನರ ಜೀವನಾಡಿ ಕಾವೇರಿ ನೀರನ್ನು ರಾಜ್ಯದಲ್ಲಿ ತೀವ್ರ ಬರಗಾಲದ ಮಧ್ಯೆ ತಮಿಳು ನಾಡಿಗೆ ಹರಿಸುವುದನ್ನು ವಿರೋಧಿಸಿ ಇಂದು ಶುಕ್ರವಾರ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರುನಾಡು ಬಂದ್ ಗೆ ಬೆಳಗ್ಗೆಯಿಂದಲೇ ಪ್ರತಿಕ್ರಿಯೆ ಕಂಡುಬಂತು. ರಾಜಧಾನಿ ಬೆಂಗಳೂರಲ್ಲಿ 144 ಸೆಕ್ಷನ್​ ಜಾರಿ ಮಾಡಲಾಗಿದೆ. ಈಗಾಗಲೆ ಪೊಲೀಸರು ನಗರದ ಸೂಕ್ಷ್ಮ ಮತ್ತು ಪ್ರಮುಖ ಪ್ರದೇಶಗಳಲ್ಲಿ ಕಾವಲಿಗೆ ಇಳಿದಿದ್ದಾರೆ. ಬೆಂಗಳೂರಿನ ವಾಣಿಜ್ಯ, ವ್ಯಾಪಾರ ಚಟುವಟಿಕೆಗಳ ಕೇಂದ್ರ ಭಾಗವಾಗಿರುವ ಕೆಆರ್ ಮಾರುಕಟ್ಟೆಯಲ್ಲಿ ವಿವಿಧ ಸಂಘಟನೆಗಳು ವಿಭಿನ್ನ […]