ಕೊರೊನಾ ಸೋಂಕಿನಿಂದ ಇಂಡಿಯಾ ಆಸ್ಪತ್ರೆಯಲ್ಲಿ ಮೃತರಾದ ವೈದ್ಯೆ 8 ತಿಂಗಳ ಹಿಂದೆಯಷ್ಟೇ ಮದುವೆಯಾದ್ದರು
Wednesday, April 28th, 2021ಮಂಗಳೂರು: ಕೇರಳ ಮೂಲದ ಯುವ ವೈದ್ಯೆ ಕೊರೊನಾ ಸೋಂಕಿನಿಂದ ಇಂಡಿಯಾನ ಆಸ್ಪತ್ರೆ ಯಲ್ಲಿ ಮೃತಪಟ್ಟಿದ್ದಾರೆ. ನಗರದ ಪಂಪ್ ವೆಲ್ ಬಳಿಯ ಇಂಡಿಯಾನ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮಹಿಳೆಗೆ ಇತ್ತೀಚೆಗೆ ಕೊರೊನಾ ಸೋಂಕು ತಗುಲಿತ್ತು. ಈ ಹಿನ್ನೆಲೆಯಲ್ಲಿ ಆಕೆಯನ್ನು ಅದೇ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಅವರು ಉಸಿರಾಟದ ಸಮಸ್ಯೆಯಿಂದ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಬೆಳಗ್ಗೆ ಮೃತಪಟ್ಟಿದ್ದಾರೆ. ದೇರಳಕಟ್ಟೆಯಲ್ಲಿರುವ ಕಣಚೂರು ಆಸ್ಪತ್ರೆಯಲ್ಲಿಯೂ ಆಕೆ ವೈದ್ಯೆಯಾಗಿ ಸೇವೆ ಸಲ್ಲಿಸಿದ್ದರು. ವೈದ್ಯೆಗೆ ವಿವಾಹವಾಗಿ ಕೇವಲ 8 ತಿಂಗಳಾಗಿದ್ದು, ಪತಿ-ಪತ್ನಿ ಇಬ್ಬರೂ ಇಂಡಿಯಾನ ಆಸ್ಪತ್ರೆಯಲ್ಲಿಯೇ ಕರ್ತವ್ಯ ನಿರ್ವಹಿಸುತ್ತಿದ್ದರು. […]