ತುಳು ಅಧಿಕೃತ ಭಾಷೆ : ಶಾಸಕರುಗಳಿಗೆ ತುಳು ಅಕಾಡೆಮಿ ಅಧ್ಯಕ್ಷರ ಒತ್ತಾಯ

Monday, July 15th, 2024
Tulu-Language

ಮಂಗಳೂರು: ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯಾಗಿ ಘೋಷಿಸುವ ನಿಟ್ಟಿನಲ್ಲಿ ಕರಾವಳಿಯ ಶಾಸಕರು ಪ್ರಸಕ್ತ ವಿಧಾನ ಮಂಡಲದ ಅಧಿವೇಶನದಲ್ಲಿ ವಿಚಾರ ಪ್ರಸಾಪ ಮಾಡಬೇಕೆಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರು ಮನವಿ ಮಾಡಿದ್ದಾರೆ. ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯಾಗಿ ಘೋಷಿಸಬೇಕೆಂದು ತುಳು ಭಾಷಿಕರ ಬೇಡಿಕೆಗೆ ಕಳೆದ ಅಧಿವೇಶನದಲ್ಲಿ ಸರಕಾರ ಪೂರಕವಾಗಿ ಸ್ಪಂದಿಸಿರುತ್ತದೆ. ಕಳೆದ ವಿಧಾನಸೌಧ ಅಧಿವೇಶನದಲ್ಲಿ ಈ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಚರ್ಚೆಯ ವೇಳೆ ಒಂದಕ್ಕಿಂತ ಹೆಚ್ಚು ಭಾಷೆಗಳನ್ನು ರಾಜ್ಯದ ಅಧಿಕೃತ ಭಾಷೆಯಾಗಿ ಹೊಂದಿರುವ ಹೊರ […]

ತುಳು ಭಾಷೆ ಉಳಿಸಿ ಬೆಳೆಸುವಲ್ಲಿ ಹೊರನಾಡ ತುಳುವರ ಕೊಡುಗೆ ಅನನ್ಯವಾದುದು : ತಾರಾನಾಥ್ ಗಟ್ಟಿ ಕಾಪಿಕಾಡ್

Saturday, June 29th, 2024
bhadravathi

ಮಂಗಳೂರು : ತುಳು ಭಾಷೆ ಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಹೊರನಾಡಿನ ತುಳುವರು ಗಣನೀಯ ಕೊಡುಗೆ ನೀಡಿದ್ದಾರೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಹೇಳಿದರು. ಅವರು ಭದ್ರಾವತಿಯ ಬಂಟರ ಭವನದಲ್ಲಿ ಶುಕ್ರವಾರ ಸಂಜೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ತುಳು ಕೂಟ ಭದ್ರಾವತಿ ಆಯೋಜಿಸಿದ ತುಳು ಉತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ತುಳು ಭಾಷೆ ಹಾಗೂ ಸಂಸ್ಕೃತಿ ಎಲ್ಲರನ್ನೂ ಜೊತೆಯಾಗಿ ಒಳಗೊಳ್ಳುವ ಗುಣಧರ್ಮವನ್ನು ಹೊಂದಿದೆ. ಈ ಕಾರಣದಿಂದಾಗಿ ಹೊರನಾಡಿನಲ್ಲಿ […]

ಗೂಗಲ್ ಟ್ರಾನ್ಸೇಲಟರ್ ನಲ್ಲಿ ತುಳು ಭಾಷೆ ಸೇರ್ಪಡೆ

Friday, June 28th, 2024
Tharanath-Gatty

ಮಂಗಳೂರು : ತುಳು ಭಾಷೆಗೆ ಜಾಗತಿಕವಾಗಿ ಸ್ಥಾನ ಮಾನ ದೊರಕಲು ಪ್ರಯತ್ನಗಳು ನಡೆಯುತ್ತಿದ್ದು ಅದರ ಭಾಗವಾಗಿ ಗೂಗಲ್ ಟ್ರಾನ್ಸೇಲಟರ್ ನಲ್ಲಿ ಇತರ ಭಾಷೆಗಳಿಂದ ತುಳು ಭಾಷೆಯ ಅರ್ಥಗಳನ್ನು ಸುಲಭವಾಗಿ ಪಡೆಯಬಹುದಾಗಿದೆ. ಇದು ತುಳುವರು ಸಂಭ್ರಮಪಡುವಂತವ ವಿಚಾರವಾಗಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಹೇಳಿದ್ದಾರೆ. ಗೂಗಲ್ ಟ್ರಾನ್ಸೇಲಟರ್ ನಲ್ಲಿ ತುಳು ಸೇರ್ಪಡೆಗೊಂಡಿರುವುರಿಂದ ತುಳುನಾಡಿಗೆ ಬರುವ ಪ್ರವಾಸಿಗರಿಗೆ ತುಳುವರೊಂದಿಗೆ ಮಾತನಾಡಲು ಅನುಕೂಲವಾಗಲಿದೆ. ಕೆಲವು ಸಂದರ್ಭದಲ್ಲಿ ಶಬ್ದಗಳು ತಪ್ಪಾಗಿ ಉಲ್ಲೇಖವಾಗುವುದು ಸಾಮಾನ್ಯ ವಿಚಾರ. ಇಂತಹ […]

ಮಂಗಳೂರು : ಪ್ರಥಮ ಬಾರಿಗೆ ವಿದ್ಯಾರ್ಥಿ ತುಳು ಸಮ್ಮೇಳನ

Monday, September 16th, 2019
thulu-sanmelana

ಮಂಗಳೂರು : ತುಳು ಪರಿಷತ್ ಆಶ್ರಯದಲ್ಲಿ ಪ್ರಥಮ ಬಾರಿಗೆ ವಿದ್ಯಾರ್ಥಿ ತುಳು ಸಮ್ಮೇಳನ ಡಿಸೆಂಬರ್ನಲ್ಲಿ ನಗರದ ಪುರಭವನದಲ್ಲಿ ನಡೆಯಲಿದೆ. ವಿದ್ಯಾರ್ಥಿ ತುಳು ಸಮ್ಮೇಳನ ಆಯೋಜನಾ ಸಮಿತಿಯ ಗೌರವಾಧ್ಯಕ್ಷ ಸ್ವರ್ಣ ಸುಂದರ್ ಅವರು ಮಾತನಾಡಿ, ಯುವ ಸಮುದಾಯದಲ್ಲಿ ತುಳು ಭಾಷೆ, ಸಂಸ್ಕೃತಿಯ ಬಗ್ಗೆ ಅಭಿಮಾನ ಹಾಗೂ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿದ್ಯಾರ್ಥಿ ತುಳು ಸಮ್ಮೇಳನವು ಅತ್ಯಂತ ಮಹತ್ವದ ಕಾರ್ಯಕ್ರಮವಾಗಲಿದೆ. ತುಳು ಭಾಷಿಗರೆಲ್ಲರೂ ಈ ಸಮ್ಮೇಳನದ ಯಶಸ್ಸಿಗೆ ಸಹಕರಿಸಬೇಕೆಂದು ಹೇಳಿದರು. ಸಮ್ಮೇಳನ ಸಮಿತಿಯ ಪ್ರಧಾನ ಕಾರ್ಯದರ್ಶಿ ತಾರಾನಾಥ್ ಗಟ್ಟಿ ಕಾಪಿಕಾಡ್ […]