ಮಂಗಳೂರು ತಾ.ಪಂ: ಅಧ್ಯಕ್ಷೆ-ರಜನಿ, ಉಪಾಧ್ಯಕ್ಷ ಪ್ರಕಾಶ್
Saturday, June 7th, 2014ಮಂಗಳೂರು : ಮಂಗಳೂರು ತಾಲೂಕ್ ಪಂಚಾಯತ್ ನ ಪ್ರಸಕ್ತ ಆಡಳಿತದ 3ನೇ ಅವಧಿಯ ಅಧ್ಯಕ್ಷೆಯಾಗಿ ರಜನಿ (ಕಾಂಗ್ರೆಸ್) ಹಾಗೂ ಉಪಾಧ್ಯಕ್ಷರಾಗಿ ಪ್ರಕಾಶ್(ಬಿಜೆಪಿ) ಆಯ್ಕೆಯಾಗಿದ್ದಾರೆ. ಶುಕ್ರವಾರ ತಾ.ಪಂ. ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಇಬ್ಬರೂ ಅವಿರೋಧವಾಗಿ ಆಯ್ಕೆಯಾದರು. ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆಗೆ ಹಾಗೂ ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಅ ವರ್ಗಕ್ಕೆ ಮೀಸಲಾಗಿತ್ತು. ಅಧ್ಯಕ್ಷರಾಗಿ ಆಯ್ಕೆಯಾದ ರಜನಿ ಅವರು ಪಡುಮಾರ್ನಾಡು ಕ್ಷೇತ್ರ ಹಾಗೂ ಉಪಾಧ್ಯಕ್ಷ ಪ್ರಕಾಶ್ ಅವರು ಬಡಗ ಎಡಪದವು ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಮಂಗಳೂರು ಉಪವಿಭಾಗಾಧಿಕಾರಿ ಡಾ.ಪ್ರಶಾಂತ್ […]