ಡಿ.ಕೆ.ಶಿವಕುಮಾರ್​ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದ ಹೈಕೋರ್ಟ್

Monday, October 14th, 2019
DKShivkumar

ನವ ದೆಹಲಿ : ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ನಾಳೆಗೆ ಮುಂದೂಡಿದ್ದು ಅಲ್ಲಿಯವರೆಗೆ ಅವರು ತಿಹಾರ್ ಜೈಲಿನಲ್ಲಿಯೇ ಇರಬೇಕಾಗಿದೆ. ವಕೀಲ ಅಭಿಷೇಕ್ ಮನುಸಿಂಘ್ವಿ ಕೋರ್ಟ್ಗೆ ತೆರಳಲು ಸಾಧ್ಯವಾಗದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಮಧ್ಯಾಹ್ನ 3.30 ಕ್ಕೆ ಮುಂದೂಡಲಾಯಿತು. ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿ ಇದ್ದಾರೆ. ಇಡಿ ವಿಶೇಷ ಕೋರ್ಟ್ ಜಾಮೀನು ಅರ್ಜಿ ವಜಾಗೊಳಿಸಿದ ಹಿನ್ನೆಲೆಯಲ್ಲಿ ಈಗ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.  

ಪಿ ಚಿದಂಬರಂ ಬಂಧನಕ್ಕೆ ಅಡ್ಡಿಯಿಲ್ಲ : ಸುಪ್ರೀಂಕೋರ್ಟ್ ಆದೇಶ

Thursday, September 5th, 2019
P.-chidambaram

ನವದೆಹಲಿ : ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಸಿಬಿಐ ಕಸ್ಟಡಿಯಲ್ಲಿರುವ ಕೇಂದ್ರದ ಮಾಜಿ ವಿತ್ತ ಸಚಿವ ಪಿ ಚಿದಂಬರಂಗೆ ಗುರುವಾರದಂದು ಸುಪ್ರೀಂಕೋರ್ಟಿನಿಂದ ಕಹಿ ಸುದ್ದಿ ಸಿಕ್ಕಿದೆ. ಬಂಧನದಿಂದ ರಕ್ಷಣೆ ಕೋರಿ ಚಿದಂಬರಂ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ಸಿಬಿಐ ವಶದಲ್ಲಿರುವ ಪಿ.ಚಿದಂಬರಂ ಅವರ ವಿಚಾರಣೆಯನ್ನು ಸಿಬಿಐ ಮುಗಿಸಿದ್ದು, ಈಗಾಗಲೇ ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ. ಜಾರಿ ನಿರ್ದೇಶನಾಲಯವು ಸೆ.05ರ ತನಕ ಬಂಧಿಸದಂತೆ ಕೋರ್ಟ್ ಸೂಚಿಸಿದೆ. ಆದರೆ, ನಿರೀಕ್ಷಣಾ ಜಾಮೀನು ಕೋರಿ ಚಿದಂಬರಂ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿತ್ತು. ಹೈಕೋರ್ಟ್ […]