ಭೂಗತ ಪಾತಕಿ ಛೋಟಾ ರಾಜನ್ ಗೆ ತೀವ್ರ ಹೊಟ್ಟೆನೋವು, ಏಮ್ಸ್ ಆಸ್ಪತ್ರೆಗೆ ದಾಖಲು
Thursday, July 29th, 2021ದೆಹಲಿ : ತಿಹಾರ್ ಜೈಲಿನಲ್ಲಿರುವ ಭೂಗತ ಪಾತಕಿ ರಾಜೇಂದ್ರ ನಿಕಲ್ಜೆ ಅಲಿಯಾಸ್ ಛೋಟಾ ರಾಜನ್, ಅನಾರೋಗ್ಯ ನಿಮಿತ್ತ ಇಂದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾನೆ. ಬೆಳಗ್ಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಏಪ್ರಿಲ್ನಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟ ಕಾರಣ ಇದೇ ಏಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖನಾಗಿದ್ದನು.