ಲಾಡ್ಜ್‌ನಲ್ಲಿದ್ದ 19 ವರ್ಷದ ಯುವತಿ ನಾಪತ್ತೆ

Wednesday, April 6th, 2022
Prema

ಮಂಗಳೂರು :  ಲಾಡ್ಜ್‌ನಲ್ಲಿದ್ದ ತುಮಕೂರಿನ 19 ವರ್ಷದ ಯುವತಿಯೊಬ್ಬಳು ಮಂಗಳೂರಿನಿಂದ ನಾಪತ್ತೆಯಾಗಿರುವ ಘಟನೆ ನಡೆದಿದೆ. ಕಾಣೆಯಾದ ಬಾಲಕಿಯನ್ನು ತುಮಕೂರು ಜಿಲ್ಲೆ ಸಿರಾ ತಾಲೂಕಿನ ಕೆಂಚಪ್ಪನ ಹಳ್ಳಿಯ ಕೆ ವಡ್ಡರಹಳ್ಳಿಯ ನಿವಾಸಿ ಪ್ರೇಮಾ ಎಂದು ಗುರುತಿಸಲಾಗಿದೆ. ಪ್ರೇಮಾ ಕಳೆದ ಭಾನುವಾರ ಚಿಕ್ಕಮ್ಮ ಲಕ್ಷ್ಮಿ ಅವರೊಂದಿಗೆ ಮಂಗಳೂರಿಗೆ ಬಂದಿದ್ದಳು.  ಏಪ್ರಿಲ್ 4ರ ಸೋಮವಾರ ಬೆಳಗ್ಗೆ 7.15ಕ್ಕೆ ಟೀ ತರಲು ಹೋದ ಯುವತಿ ಮಧ್ಯಾಹ್ನದ ನಂತರವೂ ವಾಪಸ್ ಬಂದಿಲ್ಲ. ಪ್ರೇಮಾ ತನ್ನ ಹೆತ್ತವರನ್ನು ಕಳೆದುಕೊಂಡಿದ್ದರಿಂದ ಅವಳನ್ನು ತನ್ನ ಚಿಕ್ಕಮ್ಮನವರು ನೋಡಿಕೊಳುತ್ತಿದ್ದು, ಅವಳಿಗೆ ಓದು ಬರಹ […]

ಪಾವಗಡ ಖಾಸಗಿ ಬಸ್ಸ್ ದುರಂತದಲ್ಲಿ ಮೃತರ ಸಂಖ್ಯೆ ಏರಿಕೆ

Saturday, March 19th, 2022
Pavgad-Bus-Accident

ತುಮಕೂರು: ಪಾವಗಡ ತಾಲೂಕಿನ ಪಳವಳ್ಳಿ ಗ್ರಾಮದ ಬಳಿ  ಖಾಸಗಿ ಬಸ್ಸೊಂದು ಮಗುಚಿ ಬಿದ್ದ ಪರಿಣಾಮ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಕನಿಷ್ಠ ಎಂಟು ಮೃತಪಟ್ಟು ಮೂವತ್ತೈದು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಬಸ್ಸಿನಲ್ಲಿ 100ಕ್ಕೂ ಹೆಚ್ಚು ಪ್ರಯಾಣಿಕರಿದ್ದರೆ 30ಕ್ಕೂ ಅಧಿಕ ಮಂದಿ ಬಸ್ಸಿನ ಮೇಲೆ ಕುಳಿತು ಸಾಗುತ್ತಿದ್ದರು. ಬೆಳಗ್ಗೆ ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳು, ಆಫೀಸಿಗೆ ಜನರು ಹೋಗುವ ಹೊತ್ತು. ಈ ದಾರಿಯಲ್ಲಿ ಸಂಚಾರಕ್ಕೆ ಬೇರೆ ಸಾರಿಗೆ ಸೌಕರ್ಯಗಳಿಲ್ಲದ ಕಾರಣ ಸಿಕ್ಕಿದ್ದ ಎಸ್ ವಿಟಿ ಬಸ್ಸಿನಲ್ಲಿ ಸಾಧ್ಯವಾದಷ್ಟು ಜನ ಹತ್ತಿದ್ದರು, […]

ಸೋಂಕಿನ ಪ್ರಮಾಣ ಇಳಿಸಲು ಗ್ರಾ.ಪಂ. ಕಾರ್ಯಪಡೆಗಳನ್ನು ಮತ್ತಷ್ಟು ಬಲಪಡಿಸಲು ಕ್ರಮ ಕೈಗೊಳ್ಳಿ : ಸಿಎಂ

Friday, May 28th, 2021
Tumkuru Covid

ಬೆಂಗಳೂರು / ತುಮಕೂರು : ಗ್ರಾಮೀಣ ಪ್ರದೇಶಗಳಲ್ಲಿಯೂ ಹೆಚ್ಚಾಗಿ ಹರಡುತ್ತಿರುವ ಕೋವಿಡ್19 ಎರಡನೇ ಅಲೆ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡುವುದರೊಂದಿಗೆ ಹಳ್ಳಿಗಳ ಕೋವಿಡ್ ನಿರ್ವಹಣೆಗೆ ಗ್ರಾಮ ಪಂಚಾಯ್ತಿ ಕಾರ್ಯಪಡೆಗಳನ್ನು ಮತ್ತಷ್ಟು ಬಲಪಡಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾಡಳಿತಕ್ಕೆ ಸೂಚಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಕೋವಿಡ್-19 ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸೋಂಕಿನ ಪಾಸಿಟಿವ್ ಪ್ರಮಾಣದ ಇಳಿಕೆಗೂ ಸೂಚನೆ ನೀಡಿದರು. ಕೋವಿಡ್ 19 ಎರಡನೇ ಅಲೆ ರಾಜ್ಯವನ್ನು ತೀವ್ರವಾಗಿ ಬಾಧಿಸಿದೆ. ಬೆಂಗಳೂರಿನ ನೆರೆಯ ಜಿಲ್ಲೆಯಾದ […]

ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ, ಗರ್ಭಪಾತ ಮಾಡಿಸಿದ ಯುವಕ

Tuesday, January 19th, 2021
Rakshith

ಸುಬ್ರಹ್ಮಣ್ಯ: ಫೇಸ್‌ಬುಕ್ ಮೂಲಕ ಪರಿಚಯವಾಗಿ ಯುವತಿಯನ್ನು ಮದುವೆಯಾಗುವುದಾಗಿ  ನಂಬಿಸಿ  ದೈಹಿಕ ಸಂಪರ್ಕ ಬೆಳೆಸಿ ಗರ್ಭಪಾತ ಮಾಡಿಸಿ ದ್ದಾನೆಂದು ಯುವತಿ ದೂರು ನೀಡಿದ್ದಾಳೆ. ಕಡಬ ತಾಲೂಕಿನ ಸುಬ್ರಹ್ಮಣ್ಯದ ರಕ್ಷಿತ್ ಎಂಬಾತ  ಮದುವೆಯಾಗುವ ಭರವಸೆ ನೀಡಿ ತನ್ನನ್ನು ದೈಹಿಕವಾಗಿ ಬಳಸಿಕೊಂಡಿದ್ದಾನೆ ಎಂದು ಆಕೆ ಹೇಳಿದ್ದು, ಗರ್ಭಪಾತ ಸಹ ಮಾಡಿಸಿದ್ದಾನೆ ಎಂದು ತಿಳಿಸಿದ್ದಾನೆ. ಆದರೆ ಇದೀಗ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡುತ್ತಿದ್ದಾನೆಂದು ತುಮಕೂರಿನ ವಸಂತಾ ಎಂಬ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ. ಯುವತಿ ನೀಡಿರುವ ದೂರಿನ ಆಧಾರದ ಮೇರೆಗೆ ಕ್ರಮ ಕೈಗೊಂಡ […]

ತುಮಕೂರು-ಚಿತ್ರದುರ್ಗ-ದಾವಣಗೆರೆ ರೈಲು ಮಾರ್ಗ ಜನವರಿಯಲ್ಲಿ ಆರಂಭ

Wednesday, June 24th, 2020
vinut-priya

ಚಿತ್ರದುರ್ಗ: ಹಲವಾರು ದಿನಗಳಿಂದ ಬಹುಜನರ ಬೇಡಿಕೆಯಾಗಿದ್ದ ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲು ಮಾರ್ಗ ನಿರ್ಮಾಣ ಕಾಮಗಾರಿಯು 2021 ರ ಜನೇವರಿಯಲ್ಲಿ ಆರಂಭವಾಗುವ ಬಗ್ಗೆ ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ. ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಭವನದಲ್ಲಿ ಜರುಗಿದ ಜಿಲ್ಲಾ ಮಟ್ಟದ ಸಭೆಯಲ್ಲಿ ರೈಲ್ವೆ ಅಧಿಕಾರಿಗಳು ಕಾಮಗಾರಿ ಆರಂಭವಾಗುವ ಬಗ್ಗೆ ಮಾಹಿತಿ ನೀಡಿದರು. ಈಗಾಗಲೇ ಆರಂಭವಾಗಿರುವ ಭೂಸ್ವಾಧೀನ ಪ್ರಕ್ರಿಯೆ, ಪರಿಹಾರ ವಿತರಣೆ ಪ್ರಕ್ರಿಯೆ ಈ ವರ್ಷದ ಡಿಸೆಂಬರ್‌ ಅಂತ್ಯಕ್ಕೆ ಮುಗಿಯಲಿದ್ದು, ನಂತರ ಕಾಮಗಾರಿಯ ಕುರಿತು ೨೦೨೧ ರ ಜನೇವರಿಯಲ್ಲಿ ಟೆಂಡರ್ ಕರೆಯಲಾಗುವುದು ಎಂದು […]

ತುಮಕೂರು : ಓಮ್ನಿ ಕಾರು-ಖಾಸಗಿ ಬಸ್​ ಮುಖಾಮುಖಿ ಡಿಕ್ಕಿ; ಮೂವರು ಸಜೀವ ದಹನ

Saturday, January 4th, 2020
tumakuru

ತುಮಕೂರು : ಓಮ್ನಿ ಕಾರು ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ಸಜೀವ ದಹನಗೊಂಡಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ದೊಡ್ಡಗುಣಿ ಬಳಿ ನಡೆದಿದೆ. ದೊಡ್ಡಗುಣಿ ಕೆರೆ ಏರಿ ಮೇಲೆ ಬಸ್ ಮತ್ತು ಕಾರು ಮುಖಾಮುಖಿಯಾಗಿವೆ. ಡಿಕ್ಕಿಯಾದ ರಭಸಕ್ಕೆ ಬಸ್ ಮತ್ತು ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಾರಿನಲ್ಲಿದ್ದ ಮೂರು ಮಂದಿ ಸ್ಥಳದಲ್ಲೇ ಸಜೀವ ದಹನಗೊಂಡಿದ್ದಾರೆ. ಬಸ್ ಮತ್ತು ಕಾರು ಸಂಪೂರ್ಣ ಬೆಂಕಿಗಾಹುತಿಯಾಗಿವೆ. ಮೃತರನ್ನು ವಸಂತ್ಕುಮಾರ್(45), ನರಸಮ್ಮ(60), ರಾಮಯ್ಯ(55) ಎಂದು ಗುರುತಿಸಲಾಗಿದೆ. ನಾಲ್ವರಿಗೆ […]

ರೈತರ ಮೇಲಿನ ಎಲ್ಲಾ ಕೇಸ್ ವಾಪಸ್ ಪಡೆದ ಸರ್ಕಾರ..!

Saturday, October 6th, 2018
farmers

ತುಮಕೂರು: ತಾಲೂಕಿನ ಅಜ್ಜಗೊಂಡನಹಳ್ಳಿ ಘನತ್ಯಾಜ್ಯ ವಿಲೇವಾರಿ ಘಟಕದ ವಿರುದ್ಧ ಹೋರಾಟ ನಡೆಸುತ್ತಿದ್ದ ರೈತರ ಮೇಲೆ ಹೂಡಿದ್ದ ಪ್ರಕರಣಗಳನ್ನು ಸರ್ಕಾರ ವಾಪಸ್ ಪಡೆದಿದೆ. ಘಟಕ ವಿರೋಧಿಸಿ 116 ರೈತರ ಮೇಲೆ 307 ಪ್ರಕರಣ ದಾಖಲಿಸಲಾಗಿತ್ತು. ಎಲ್ಲಾ ಮೊಕದ್ದಮೆಗಳನ್ನು ಸರ್ಕಾರ ಯಾವುದೇ ಷರತ್ತಿಲ್ಲದೆ ವಾಪಸ್ ತೆಗೆದುಕೊಂಡಿದೆ. ತುಮಕೂರು ಮಹಾನಗರ ಪಾಲಿಕೆ ವತಿಯಿಂದ 2000 ರಿಂದಲೂ ಘನತ್ಯಾಜ್ಯ ವಸ್ತು ವಿಲೇವಾರಿ ಘಟಕ ತೆರೆಯಲು ರೈತರಿಗೆ ಯಾವುದೇ ರೀತಿ ಸೂಚನೆ ನೀಡದೆ ಜಮೀನನ್ನು ಭೂಸ್ವಾಧೀನ ಪಡಿಸಿಕೊಳ್ಳಲಾಗಿತ್ತು. ಘಟಕ ಆರಂಭಿಸಬಾರದು ಎಂದು ಸುತ್ತಮುತ್ತಲ ಗ್ರಾಮದ […]

ವಿದೇಶಿಗರ ಬಳಿ ಅಧಿಕೃತ ಪತ್ರ ಇಲ್ಲದಿದ್ದರೆ ತಕ್ಷಣ ವಾಪಸ್ ಕಳುಹಿಸಲು ಎಲ್ಲಾ ಕ್ರಮ ತೆಗೆದುಕೊಳ್ಳುತ್ತೇವೆ: ಡಾ. ಜಿ. ಪರಮೇಶ್ವರ್

Wednesday, August 15th, 2018
parameshwara

ತುಮಕೂರು: ಬಾಂಗ್ಲಾದೇಶ ಸೇರಿದಂತೆ ವಿದೇಶಿಗರ ಬಳಿ ಅಧಿಕೃತ ಪತ್ರ ಇಲ್ಲದಿದ್ದರೆ ತಕ್ಷಣ ವಾಪಸ್ ಕಳುಹಿಸಲು ಎಲ್ಲಾ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದರು. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ವೀಸಾ ಅವಧಿ ಪೂರ್ಣಗೊಂಡಿದ್ದರೂ ಇಲ್ಲಿಯೇ ಉಳಿದುಕೊಂಡು ಡ್ರಗ್ಸ್ ದಂಧೆ ಮಾಡುತ್ತಿದ್ದ 107 ಜನ ಆಫ್ರಿಕಾ ಪ್ರಜೆಗಳನ್ನು ವಾಪಸ್ ಕಳುಹಿಸುವ ಕ್ರಮಕ್ಕೆ ಮುಂದಾಗಿದ್ದೇವೆ. ಇಡೀ ರಾಜ್ಯದಲ್ಲಿ ಸೂಕ್ಷ್ಮವಾಗಿ ಗಮನಿಸಿ ಅಂತಹವರನ್ನು ವಾಪಸ್ ಕಳುಹಿಸಲಾಗುವುದು ಎಂದರು. ಸೈಬರ್ ಕ್ರೈಂ ಅನ್ನು ತಡೆಗಟ್ಟಲು ಪ್ರತ್ಯೇಕ ಸೈಬರ್ […]

ಎ. ಕೃಷ್ಣಪ್ಪ ಸಾವಿಗೆ ದೇವೇಗೌಡರೇ ಕಾರಣ… ಕಿಡಿ ಹೊತ್ತಿಸಿದ ಮಾಜಿ ಸಂಸದರ ಆರೋಪ

Tuesday, July 17th, 2018
krishnappa

ತುಮಕೂರು: ಕಳೆದ ಬಾರಿಯ ಲೋಕಸಭಾ ಚುನಾವಣೆಯ ಫಲಿತಾಂಶಕ್ಕೂ ಮುನ್ನವೇ ಜೆಡಿಎಸ್ ಅಭ್ಯರ್ಥಿ ಎ.ಕೃಷ್ಣಪ್ಪ ಮೃತಪಟ್ಟಿದ್ದರು. ಅವರ ಸಾವಿನ ಏನ್ ಕಾರಣ ಅನ್ನೋದರ ಕುರಿತು ಮಾಜಿ ಸಂಸದ ಜಿ.ಎಸ್ ಬಸವರಾಜು ಗಂಭೀರ ಆರೋಪ ಮಾಡಿದ್ದಾರೆ. ಹೌದು.., ಇಂದು ನಗರದಲ್ಲಿ ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡರೇ ಎ ಕೃಷ್ಣಪ್ಪ ಸಾವಿಗೆ ಕಾರಣವೆಂದು ದೂರಿದ್ದಾರೆ. “ನನ್ನ ಮನೆ ಹಾಳಾಗೋಯ್ತು, ದೇವೇಗೌಡರು ನನ್ನ ಮನೆ ಹಾಳು ಮಾಡಿದರು ಎಂದು ಎ.ಕೃಷ್ಣಪ್ಪ ನನ್ನಲ್ಲಿ ಅಳಲು ತೋಡಿಕೊಂಡಿದ್ದರು. ಹೀಗಾಗಿ ಅವರ […]

ಶಿರಾ ಬಳಿ ಭೀಕರ ಸರಣಿ ಅಪಘಾತ… ಬಸ್ ಚಾಲಕ ಸಾವು

Friday, July 13th, 2018
accident

ತುಮಕೂರು: ಲಾರಿ, ಕೆಎಸ್ಆರ್ಟಿಸಿ ಬಸ್, ಖಾಸಗಿ ಬಸ್ ನಡುವೆ ಸರಣಿ ಡಿಕ್ಕಿ ಸಂಭವಿಸಿ ಕೆಎಸ್ ಆರ್ ಟಿಸಿ ಬಸ್ ನಲ್ಲಿದ್ದ ಹೆಚ್ಚುವರಿ ಚಾಲಕ ಮೃತಪಟ್ಟಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಬುವನಹಳ್ಳಿ ಬಳಿ ನಡೆದಿದೆ. ಮೃತ ಚಾಲಕನನ್ನು ಹನುಮಂತರಾಯಪ್ಪ ಎಂದು ಗುರುತಿಸಲಾಗಿದೆ. ಟೈರ್ ಬ್ಲಾಸ್ಟ್ ಆಗಿ ರಸ್ತೆ ಪಕ್ಕ ನಿಂತಿದ್ದ ಲಾರಿಗೆ ಬಸ್ ಡಿಕ್ಕಿ ಡಿಕ್ಕಿ ಹೊಡೆದಿದೆ. ಇದೇ ವೇಳೆ ಕೆಎಸ್ಆರ್ಟಿಸಿ ಬಸ್ಗೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. […]