ಆಂಧ್ರ ಪ್ರದೇಶದ ಮುಖ್ಯಮಂತ್ರಿ ಪರಿಹಾರ ನಿಧಿಗೆ 117 ಕೋಟಿ ರೂ. ವಂಚಿಸಲು ಪ್ಲಾನ್, ದಕ್ಷಿಣ ಕನ್ನಡದ ಆರು ಮಂದಿ ವಶ
Tuesday, October 6th, 2020ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಆರು ಮಂದಿಯನ್ನು ಆಂಧ್ರ ಪ್ರದೇಶದ ಪೊಲೀಸರು ಅಲ್ಲಿನ ಮುಖ್ಯಮಂತ್ರಿ ಪರಿಹಾರ ನಿಧಿಗೆ ವಂಚಿಸಲು ಯೋಜನೆ ರೂಪಿಸಿದ ಹಿನ್ನಲೆಯಲ್ಲಿ ಬಂಧಿಸಿದ್ದಾರೆ. ಮೂಡಬಿದ್ರೆ ನಿವಾಸಿಗಳಾದ ಯೋಗೀಶ್ ಆಚಾರ್ಯ (40), ಉದಯ ಶೆಟ್ಟಿ ಕಾಂತಾವರ( 35), ಮಂಗಳೂರಿನ ಬ್ರಿಜೆಶ್ ರೈ(35) ಬೆಳ್ತಂಗಡಿಯ ಗಂಗಾಧರ ಸುವರ್ಣ (45) ಸೇರಿದಂತೆ ಆರು ಮಂದಿಯನ್ನು ಬಂಧಿಸಿ ಕರೆದೊಯ್ದಿದ್ದಾರೆ. ಆಂಧ್ರದ ಕಂದಾಯ ಇಲಾಖೆಯ ಸಹಾಯಕ ಕಾರ್ಯದರ್ಶಿ ಪಿ.ಮುರಳೀಕೃಷ್ಣ ರಾವ್ ನೀಡಿದ ದೂರಿನ ಆಧಾರ ಮೇರೆಗೆ ಸೆ. 21ರಂದು ಆಂಧ್ರ ಪ್ರದೇಶದ ತುಲ್ಲೂರು ಪೊಲೀಸ್ ಠಾಣೆಯಲ್ಲಿ […]