ತುಳುನಾಡಿಗೆ ಮಾರಕವಾದ ಅವೈಜ್ಙಾನಿಕ ಬಜೆಟ್‌

Friday, March 4th, 2022
shailesh RJ

ಬೆಳ್ತಂಗಡಿ : ತುಳುನಾಡಿನ ಜೀವನಾಡಿಗೆ ಮಾರಕವಾದ ಅವೈಜ್ಙಾನಿಕ ಎತ್ತಿನಹೊಳೆ ಯೋಜನೆಗೆ ಕರ್ನಾಟಕ ರಾಜ್ಯ ಬಜೆಟ್‌ನಲ್ಲಿ 3000 ಕೋಟಿ ರೂಪಾಯಿ ಮೀಸಲಿರಿಸಿದ್ದು ಖಂಡನೀಯ. ಈ ಮೂಲಕ ತುಳುನಾಡನ್ನು ಬರಡು ಭೂಮಿಯಾಗಿಸುವ ವ್ಯವಸ್ಥಿತ ಷಡ್ಯಂತ್ರವನ್ನು ಮುಂದುವರಿಸಿದ್ದು ತುಳುವರಿಗೆ ಎಚ್ಚರಿಕೆ ಗಂಟೆಯಾಗಿದೆ. ತುಳುವರ ಎತ್ತಿನಹೊಳೆ ಯೋಜನೆ ವಿರೋಧಿ ಹೋರಾಟದಲ್ಲಿ ನುಸುಳಿ ನಾಟಕವಾಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರು ಮತ್ತು ಶಾಸಕರು ಈ ಕೂಡಲೇ ತಮ್ಮ ಶಾಸಕ/ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ ತಮ್ಮ ಬದ್ಧತೆಯನ್ನು ನಾಡಿನ ಜನಕ್ಕೆ ತೋರಿಸಬೇಕು. ನಿರಂತರವಾಗಿ ತುಳುನಾಡಿನ ನೆಲ, […]

ಚಳಿಗಾಲದ ಅಧಿವೇಶನದಲ್ಲಿ ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡಿ : ತುಳುವೆರೆ ಪಕ್ಷ

Monday, November 29th, 2021
Shailesh

ಬೆಳ್ತಂಗಡಿ : ತುಳುವರ ಶತಮಾನದ ಬೇಡಿಕೆ ತುಳು ಭಾಷೆಗೆ ಸ್ಥಾನಮಾನ ಮತ್ತು ತುಳು ರಾಜ್ಯ ರಚನೆ ಆದರೆ ಆಳುವ ಸರ್ಕಾರಗಳ ದಿವ್ಯ ನಿರ್ಲಕ್ಷ ಇಂದು ತುಳು ಭಾಷೆಯನ್ನು ಅಳಿವಿನ ಅಂಚಿಗೆ ತಂದು ನಿಲ್ಲಿಸಿದೆ. ನಿರಂತರ ನಿರ್ಲಕ್ಷದಿಂದಾಗಿ ತುಳುವರು ನಮ್ಮನ್ನು ಆಳಿದ ರಾಷ್ಟ್ರೀಯ ಪಕ್ಷಗಳ ಮೇಲೆ ನಂಬಿಕೆಯನ್ನು ಕಳೆದುಕೊಂಡಿದ್ದಾರೆ. ಕರ್ನಾಟಕ ಮತ್ತು ಕೇರಳ ರಾಜ್ಯಗಳ ಅಧಿಕೃತ ಭಾಷೆಯ ಸ್ಥಾನಮಾನದ ಬೇಡಿಕೆಗೆ ನಮ್ಮ ಶಾಸಕರುಗಳು ಮತ್ತು ಸಚಿವರುಗಳು ಸ್ಪಂದಿಸುತ್ತಿಲ್ಲ ಹಾಗೂ ತುಳುವರ ಬೇಡಿಕೆಗೆ ತದ್ವಿರುದ್ದವಾಗಿ ತುಳುನಾಡಿನಲ್ಲಿ ಕನ್ನಡ ಹೇರಿಕೆಯಲ್ಲಿ ನಿರತರಾಗಿದ್ದಾರೆ, […]

ತುಳುವೆರೆ ಪಕ್ಷದ ವೆಬ್‌ಸೈಟ್ ಲೋಕಾರ್ಪಣೆ ಮತ್ತು ಸದಸ್ಯತ್ವ ಅಭಿಯಾನಕ್ಕೆ ಚಾಲನೆ

Monday, September 27th, 2021
Tuluvere Paksha

ಬೆಳ್ತಂಗಡಿ : ತುಳುವೆರೆ ಪಕ್ಷದ ವೆಬ್‌ಸೈಟ್ ಲೋಕಾರ್ಪಣೆ ಮತ್ತು ಸದಸ್ಯತ್ವ ಅಭಿಯಾನಕ್ಕೆ ಅಂಬೇಡ್ಕರ್ ಭವನದಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಚಾಲನೆ ನೀಡಲಾಯಿತು. ಕಾರ್ಯಕರ್ತರ ಸಮಾವೇಶ ಮತ್ತು ಸಮಾರಂಭದ ಅಧ್ಯಕ್ಷತೆಯನ್ನು ಪಕ್ಷದ ಸ್ಥಾಪಕ ಅಧ್ಯಕ್ಷರಾದ ಶೈಲೇಶ್ ಆರ್.ಜೆ.ಯವರು ವಹಿಸಿ ಮಾತನಾಡುತ್ತ ತುಳು ಭಾಷೆಯ ಸ್ಥಾನಮಾನ ಮತ್ತು ತುಲುನಾಡ್ ರಾಜ್ಯ ರಚನೆಯ ಬೇಡಿಕೆಗೆ ಸುಧೀರ್ಘಕಾಲದಿಂದ ತುಳುವರು ಹೋರಾಟ ನಡೆಸುತ್ತಿದ್ದರು ತುಳು ಭಾಷೆಗೆ ಕರ್ನಾಟಕ ಮತ್ತು ಕೇರಳ ರಾಜ್ಯಗಳ ಅಧಿಕೃತ ಭಾಷೆಯೆಂಬ ಸ್ಥಾನಮಾನ ನೀಡಲು ವಿಫಲವಾಗಿದೆ, 8ನೇ ಪರಿಚ್ಛೇದಕ್ಕೆ ಸೇರಿಸಲು […]

ತುಳುವರ ನಾಡು ನುಡಿಯ ಹೋರಾಟವನ್ನು ಅವಮಾನಿಸಿದ ಶೋಭಾ ಕರಂದ್ಲಾಜೆ : ತುಳುವೆರೆ ಪಕ್ಷ ಖಂಡನೆ

Tuesday, June 22nd, 2021
Shailesh

ಬೆಳ್ತಂಗಡಿ: ಉಡುಪಿ-ಚಿಕ್ಕಮಗಳೂರು ಸಂಸದರಾದ ಶೋಭಾ ಕರಂದ್ಲಾಜೆಯವರು ಇತ್ತೀಚೆಗೆ ತುಳು ರಾಜ್ಯದ ಬೇಡಿಕೆಯು ಕುಚೋದ್ಯದ ಬೇಡಿಕೆ ಎಂದಿದ್ದು ಖಂಡನೀಯ. ಕನ್ನಡ ಏಕೀಕರಣ ಚಳವಳಿಯನ್ನು ಸಮರ್ಥಿಸಿರುವ ಇವರು ಅದೇ ತುಳು ಏಕೀಕರಣ ಚಳವಳಿಯನ್ನು ಕುಚೋದ್ಯದ ಬೇಡಿಕೆ ಎಂದಿದ್ದು ಇವರ ದ್ವಿಮುಖ ನೀತಿಯನ್ನು ತೋರಿಸುತ್ತದೆ. ತುಳುವರ ನಾಡು ನುಡಿಯ ಹೋರಾಟವನ್ನು ಅವಮಾನಿಸುವ ಮೂಲಕ ಸಮಸ್ತ ತುಳುವರ ಭಾವನೆಗಳಿಗೆ ನೋವು ತಂದಿದ್ದಾರೆ. ತುಳು ಅಸ್ಮಿತೆಯ ವಿಚಾರಗಳನ್ನು ಯಾರೇ ಕುಚೋದ್ಯ ಮಾಡಿದರೂ ಅದನ್ನು ತುಳುವೆರೆ ಪಕ್ಷ ಖಂಡಿಸುತ್ತದೆ ಎಂದು ಪಕ್ಷದ ಅದ್ಯಕ್ಷರಾದ ಶೈಲೇಶ್ ಆರ್.ಜೆ. […]