ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಯ ನೂತನ ಅಧ್ಯಕ್ಷರಾಗಿ ತಾರಾನಾಥ್ ಗಟ್ಟಿ ಅಧಿಕಾರ ವಹಿಸಿಕೊಂಡರು

Thursday, June 13th, 2024
Tharnatha-Gatty

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಯ ನೂತನ ಅಧ್ಯಕ್ಷರಾಗಿ ತಾರಾನಾಥ್ ಗಟ್ಟಿ ಕಾಪಿಕಾಡ್ ಗುರುವಾರ ಅಧಿಕಾರ ಸ್ವೀಕರಿಸಿದರು. ನಗರದ ಉರ್ವಸ್ಟೋರ್ ನ ತುಳು ಭವನದಲ್ಲಿರುವ ತುಳು ಅಕಾಡೆಮಿ ಕಚೇರಿಯಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಪೂರ್ಣಿಮಾ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಬ್ಯಾರಿ ಸಾಹಿತ್ಯ ಅಕಾಡೆಮಿ ಯ ಅಧ್ಯಕ್ಷ ಉಮರ್ ಯು. ಎಚ್, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟ್ಯಾನಿ ಅಲ್ವಾರಿಸ್, ಬ್ಯಾರಿ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ರಾಜೇಶ್ ಜಿ, ಶುಭೋದಯ ಅಳ್ವ, ಗಣೇಶ್ […]

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಗೆ ಸಚಿವ ವಿ. ಸುನಿಲ್‌ಕುಮಾರ್ ಭೇಟಿ

Wednesday, January 5th, 2022
Tulu-Academy

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಇಂಧನ ಇಲಾಖೆಯ ರಾಜ್ಯ ಸಚಿವರಾದ ವಿ. ಸುನಿಲ್‌ಕುಮಾರ್ ಜ. 5ರಂದು ಭೇಟಿ ನೀಡಿ ತುಳು ಭವನದ ಅಪೂರ್ಣ ಕಾಮಗಾರಿ ಹಾಗೂ ವಿವಿಧ ಬೇಡಿಕೆಯ ಬಗ್ಗೆ ಪರಿಶೀಲನೆ ನಡೆಸಿದರು. ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್‌ಸಾರ್ ಅವರು ಅಕಾಡೆಮಿಯ ಬಗ್ಗೆ ಮಾಹಿತಿ ನೀಡಿ, ತುಳು ಭವನ ಸಂಪೂರ್ಣಗೊಳ್ಳಲು ಮಂಜೂರಾಗಿರುವ ರೂ. 3.6 ಕೋಟಿ ಸಹಿತ ಹೆಚ್ಚುವರಿಯಾಗಿ 2 ಕೋ. ರೂ.ವಿನ ಅಗತ್ಯವಿದೆ. ಇದು ಸಂಪೂರ್ಣ […]

ತುಳು ಭವನ ಕಾಮಗಾರಿ ಪೂರ್ಣಗೊಳಿಸಲು ಶೀಘ್ರವೇ ಕ್ರಮ: ಸಚಿವ ಯು.ಟಿ.ಖಾದರ್ ಭರವಸೆ

Wednesday, September 26th, 2018
U-T-Khader

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ತುಳು ಭವನ ಕಟ್ಟಡದ ಬಾಕಿ ಉಳಿದಿರುವ ಕಾಮಗಾರಿ ಹಾಗೂ ಯೋಜನೆಗಳನ್ನು ಶೀಘ್ರವಾಗಿ ಕೈಗೆತ್ತಿಕೊಳ್ಳುವ ನಿಟ್ಟಿನಲ್ಲಿ ಸರಕಾರದಿಂದ ಆಗಬೇಕಾದ ಕೆಲಸಗಳನ್ನು ತಾನು ಮಾಡಿಸುವುದಾಗಿ ರಾಜ್ಯ ವಸತಿ ಮತ್ತು ನಗರಾಭಿವೃದ್ಧಿ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಯು.ಟಿ.ಖಾದರ್ ಅವರು ಹೇಳಿದ್ದಾರೆ. ಅವರು ಇಂದು ಉರ್ವಾಸ್ಟೋರ್ ಬಳಿ ಇರುವ ತುಳು ಭವನಕ್ಕೆ ಭೇಟಿ ನೀಡಿ ತುಳು ಭವನದಲ್ಲಿ ಇದುವರೆಗೆ ನಡೆದಿರುವ ಕಾಮಗಾರಿಯನ್ನು ಪರಿಶೀಲನೆ ನಡೆಸಿ , ಬಾಕಿ ಉಳಿದಿರುವ ಕಾಮಗಾರಿಯ ಬಗ್ಗೆ […]

ಮಂಗಳೂರಲ್ಲಿ ಹಳ್ಳಿ ಸೊಗಡಿನ ಸುಗ್ಗಿ-ಹುಗ್ಗಿಯ ರಂಗು

Monday, March 12th, 2018
suggi-habba

ಮಂಗಳೂರು: ಜನಪದ ಸೊಗಡನ್ನು ಪರಿಚಯಿಸುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಸುಗ್ಗಿ-ಹುಗ್ಗಿ ಕಾರ್ಯಕ್ರಮ ಮಾರ್ಚ್ 15ರಂದು ಮಂಗಳೂರಿನ ಸಿಸಿ ಚಾವಡಿ ತುಳು ಭವನ ಉರ್ವಸ್ಟೋರ್ ನಲ್ಲಿ ಹಮ್ಮಿಕೊಂಡಿದೆ. ಕಾರ್ಯಕ್ರಮದಲ್ಲಿ ಬಯಲಾಟ, ಜನಪದ ನೃತ್ಯ, ಹಗಲು ವೇಷ ಸೇರಿದಂತೆ ಅನೇಕ ಬಗೆಯ ಜನಪದ ಕಲಾಪ್ರಕಾರವನ್ನು ಪರಿಚಯಿಸಲಾಗುತ್ತದೆ. ಕಣ್ಣಿಗೆ ಹಬ್ಬ ತರುವ ಹತ್ತು ಹಲವಾರು ವಿಶೇಷ ನೋಟಗಳಿಗೆ ಸುಗ್ಗಿ ಹಬ್ಬ ಕಾರಣವಾಗುತ್ತಿದೆ. ಬೆಳಗ್ಗೆ 10ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನೆರವೇರಲಿದೆ. ಮಂಗಳೂರು ಶಾಸಕ ಜೆ.ಆರ್. ಲೋಬೋ ಅಧ್ಯಕ್ಷತೆವಹಿಸಲಿದ್ದು, ಸಚಿವ ಬಿ.ರಮಾನಾಥ ರೈ […]

ಉರ್ವಸ್ಟೋರ್‌ನಲ್ಲಿ ‘ತುಳು ಭವನ’ ನಿರ್ಮಾಣಕ್ಕೆ ಶಿಲಾನ್ಯಾಸ

Sunday, October 2nd, 2011
Foundation laying ceremony for the Tulu Bhavana

ಮಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಉರ್ವಸ್ಟೋರ್‌ನಲ್ಲಿ ಸುಮಾರು 5 ಕೋ. ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಅಕಾಡೆಮಿ  ಕಟ್ಟಡ ‘ತುಳು ಭವನ’ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜೆ. ಕೃಷ್ಣ ಪಾಲೆಮಾರ್‌ ಜಿಲ್ಲಾ ಉಸ್ತುವಾರಿ ಅವರು ಶನಿವಾರ ಶಿಲಾನ್ಯಾಸ ನೆರವೇರಿಸಿದರು. ಮೂರು ಮಹಡಿಗಳನ್ನು ಒಳಗೊಂಡಿರುವ ‘ತುಳು ಭವನ’ ಮೊದಲ ಮಹಡಿಯಲ್ಲಿ ಕಾರು ಪಾರ್ಕಿಂಗ್‌ ಹಾಗೂ ಕಚೇರಿ. ಎರಡನೇ ಮಹಡಿಯಲ್ಲಿ ಸಭಾಂಗಣ. ಮೂರನೇ ಮಹಡಿಯಲ್ಲಿ ಮ್ಯೂಸಿಯಂ, ಅತಿಥಿಗೃಹ, ದಾಸ್ತಾನು ಕೊಠಡಿಯನ್ನು ಹೊಂದಿದೆ. ‘ತುಳು […]