ಮಂಗಳೂರು : ಪಾಲಿಕೆಯ ವ್ಯಾಪ್ತಿಯಲ್ಲಿ ಅಳವಡಿಸಿದ ಅನಧಿಕೃತ ಬ್ಯಾನರ್ ತೆರೆವುಗೊಳಿಸದೆ ಇದ್ದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲು

Wednesday, January 17th, 2024
cl-anand

ಮಂಗಳೂರು : ಮಂಗಳೂರು ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಳವಡಿಸಿದ ಬ್ಯಾನರ್ ಗಳನ್ನು ಶೀಘ್ರವಾಗಿ ತೆರವುಗೊಳಿಸಬೇಕು ಎಂದು ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ. ಇಲ್ಲವಾದಲ್ಲಿ ಅಂತಹವರ ವಿರುದ್ಧ ಕ್ರಿಮಿನಲ್ ದೂರು ದಾಖಲಿಸಲಾಗುವುದು ಎಂದು ಆಯುಕ್ತರು ಹೇಳಿದ್ದಾರೆ. ಕೆಲವು ಜಾಹೀರಾತು ಸಂಸ್ಥೆ ಹಾಗೂ ಖಾಸಗಿ ವ್ಯಕ್ತಿಗಳು ವಾಣಿಜ್ಯ ಉದ್ದೇಶಗಳಿಗಾಗಿ ಮತ್ತು ರಾಜಕೀಯ, ಧಾರ್ಮಿಕ, ಖಾಸಗಿ ಕಾರ್ಯಕ್ರಮಗಳ ಪ್ರಚಾರಕ್ಕಾಗಿ ಅನಧಿಕೃತ ಬ್ಯಾನರ್, ಕಟೌಟ್, ಬಂಟಿಂಗ್ಸ್, ಪ್ಲೆಕ್ಸ್ ಇತ್ಯಾದಿಗಳನ್ನು ಹಾಕಿದ್ದು ಅದನ್ನು ಶೀಘ್ರವಾಗಿ ತೆರವುಗೊಳಿಸಬೇಕು ಎಂದು ಹೇಳಿದ್ದಾರೆ. ಅನಧಿಕೃತ […]

ವ್ಯಾಪಾರ ಮಾಡಲು ಕಾರ್ಡ್‌ ಇದ್ದರೂ, ಫುಟ್‌ಪಾತ್‌ ಗೂಡಂಗಡಿಗಳನ್ನು ತೆರವುಗೊಳಿಸಿದ ಪಾಲಿಕೆ

Thursday, December 23rd, 2021
petty-shop

ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಹಾಗೂ ಫುಟ್‌ಪಾತ್‌ಗಳನ್ನು ಅತಿಕ್ರಮಿಸಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ ಗೂಡಂಗಡಿಗಳ ತೆರವು ಕಾರ್ಯಾಚರಣೆ ಗುರುವಾರ ಆರಂಭವಾಗಿದೆ. ಮೇಯರ್‌ ಹಾಗೂ ಆಯುಕ್ತರ ಸೂಚನೆಯಂತೆ ಕಂದಾಯ, ಆರೋಗ್ಯ ಇಲಾಖೆ ಮತ್ತು ಪೊಲೀಸ್‌ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರದ ಸ್ಟೇಟ್‌ಬ್ಯಾಂಕ್‌ ಭಾಗದಲ್ಲಿ ಕಾರ್ಯಾಚರಣೆ ಆರಂಭಿಸಲಾಗಿದ್ದು, ಮುಂದಕ್ಕೆ ಸೆಂಟ್ರಲ್‌ ಮಾರುಕಟ್ಟೆ, ಕಂಕನಾಡಿ ಭಾಗದಲ್ಲಿ ಕಾರ್ಯಾಚರಣೆ ನಡೆಸುವುದಾಗಿ ತಿಳಿಸಿದ್ದಾರೆ. ಕಾರ್ಯಾಚರಣೆಗೆ ವ್ಯಾಪಾರಿಗಳಿಂದ ಆಕ್ರೋಶ ವ್ಯಕ್ತವಾಗಿದ್ದು, ತಮ್ಮ ಬಳಿ ಬೀದಿಬದಿ ವ್ಯಾಪಾರ ಮಾಡಲು ಪಾಲಿಕೆ ನೀಡಿರುವ ಕಾರ್ಡ್‌ […]