ನೇಪಾಳ ಮೂಲದ ಅಪ್ರಾಪ್ತ ಬಾಲಕಿ, ತೊಕ್ಕೊಟ್ಟು ಸಮೀಪದ ಮನೆಯಲ್ಲಿ ಆತ್ಮಹತ್ಯೆ

Saturday, June 8th, 2024
Rabina

ಮಂಗಳೂರು : ತೊಕ್ಕೊಟ್ಟು, ಚೆಂಬುಗುಡ್ಡೆಯ ಮನೆಯೊಂದರಲ್ಲಿ ನೇಪಾಳ ಮೂಲದ ಅಪ್ರಾಪ್ತ ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. ನೇಪಾಳ ಮೂಲದ ರಬೀನ ಬಿ.ಕೆ (16)ಮೃತ ಅಪ್ರಾಪ್ತ ಬಾಲಕಿ. ತೊಕ್ಕೊಟ್ಟು ವೃಂದಾವನ ಹೊಟೇಲಿನ ಪಕ್ಕದಲ್ಲಿ ಫಾಸ್ಟ್ ಫುಡ್ ಕಮ್ ಕ್ಯಾಂಟೀನ್ ನಡೆಸುತ್ತಿದ್ದ ನೇಪಾಳ ಮೂಲದ ರಾಮ್ ಶರಣ್ ಎಂಬವರು ತನ್ನ ಪತ್ನಿ ಮತ್ತು ನಾಲ್ಕು ಮಕ್ಕಳೊಂದಿಗೆ ತೊಕ್ಕೊಟ್ಟು, ಚೆಂಬುಗುಡ್ಡೆಯಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ರಾಮ್ ಶರಣ್ ಅವರ ಎರಡನೇ ಮಗಳಾದ ರಬೀನಾ ನೇಪಾಳದಲ್ಲಿ ಎಂಟನೇ […]

ಗಾಂಜಾ ಸಾಗಿಸುತ್ತಿದ್ದ ಇಬ್ಬರು ವಿದ್ಯಾರ್ಥಿಗಳ ಬಂಧನ

Monday, December 13th, 2021
Ganja students

ಮಂಗಳೂರು : ತೊಕ್ಕೊಟ್ಟು ಸಮೀಪದ ಬಗಂಬಿಲ ಎಂಬಲ್ಲಿ ಗಾಂಜಾ ಸಾಗಿಸುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಉಳ್ಳಾಲ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಬಂಧಿತರನ್ನು ಕೇರಳ ತ್ರಿಶ್ಶೂರ್‌ನ ಆದರ್ಶ್ ಜ್ಯೋತಿ (22) ಮತ್ತು ಕೊಟ್ಟಾಯಂನ ಯೋಯಲ್ ಜೋಯ್ಸ್ (22) ಎಂದು ಗುರುತಿಸಲಾಗಿದೆ. ಆದರ್ಶ್ ಬಿಡಿಎಸ್ ಮತ್ತು ಯೋಯಲ್ ನರ್ಸಿಂಗ್ ವಿದ್ಯಾರ್ಥಿಗಳು ಎಂದು ಪ್ರಕರಣ ದಾಖಲಿಸಿರುವ ಪೊಲೀಸರು ತಿಳಿಸಿದ್ದಾರೆ. ಸೋಮವಾರ ಬಗಂಬಿಲ ಪರಿಸರದಲ್ಲಿ ಇವರು ಸ್ಕೂಟರ್‌ನಲ್ಲಿ ತೆರಳುತ್ತಿದ್ದಾಗ ಪೊಲೀಸರು ತಪಾಸಣೆ ನಡೆಸಿದರು. ಈ ವೇಳೆ ಸುಮಾರು 220 ಗ್ರಾಂ ತೂಕದ ಗಾಂಜಾ ಇವರ […]

ಚಾಲಕನ ನಿಯಂತ್ರಣ ತಪ್ಪಿ ಪಂಪ್‌ವೆಲ್ ಮೇಲ್ಸೇತುವೆಯಿಂದ ಸರ್ವಿಸ್ ರಸ್ತೆಗೆ ಇಳಿದ ಕಾರು

Thursday, July 15th, 2021
Pumpwell-Car

ಮಂಗಳೂರು : ಚಾಲಕನ ನಿಯಂತ್ರಣ ತಪ್ಪಿದ ಕಾರು ಪಂಪ್‌ವೆಲ್ ಮೇಲ್ಸೇತುವೆಯಿಂದ ಸರ್ವಿಸ್ ರಸ್ತೆಗೆ ಜಾರಿದ ಘಟನೆ ಗುರುವಾರ ಸಂಜೆ ನಡೆದಿದೆ. ತೊಕ್ಕೊಟ್ಟು ಕಡೆಯಿಂದ ಮಂಗಳೂರಿಗೆ ಆಗಮಿಸುಸುತ್ತಿದ್ದ ಕಾರು ಎದುರಿನಿಂದ ವೇಗವಾಗಿ ಬಂದ ವಾಹನಕ್ಕೆ ಸೈಡ್ ಕೊಡುವ ಭರದಲ್ಲಿ  ಚಾಲಕನ ನಿಯಂತ್ರಣ ತಪ್ಪಿದ ಕಾರು ಸರ್ವಿಸ್ ರಸ್ತೆಗೆ ಜಾರಿಕೊಂಡಿದೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರೊಬ್ಬರು ಚಲಾಯಿಸುತ್ತಿದ್ದ ಕಾರನ್ನು ಸ್ಥಳೀಯರು ಸಹಕಾರದೊಂದಿಗೆ ಪೊಲೀಸರು ರಸ್ತೆಗೆ ತಳ್ಳಿ ನಿಲ್ಲಿಸಿದರು. ಸ್ಥಳಕ್ಕೆ ಮಂಗಳೂರು ದಕ್ಷಿಣ ಸಂಚಾರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ಕಾರು ಮತ್ತು ಸ್ಕೂಟರ್ ಡಿಕ್ಕಿ, ಮಹಿಳೆ ಮೃತ್ಯು

Thursday, May 20th, 2021
Thokkottu Accident

ಉಳ್ಳಾಲ : ಕಾರು ಮತ್ತು ಸ್ಕೂಟರ್ ನಡುವೆ ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ಉಂಟಾದ ಅಪಘಾತದಲ್ಲಿ ಮಹಿಳೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ನಡೆದಿದೆ. ಕುಂಪಲ ಆಶ್ರಯ ಕಾಲನಿ ನಿವಾಸಿ ವಸಂತಿ ನಾಯರ್ (45) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ವಸಂತಿ ಅವರು ಇಂದು ಬೆಳಗ್ಗೆ ಜಪ್ಪಿನ ಮೊಗರಿನಲ್ಲಿರುವ ತನ್ನ ತಾಯಿಯನ್ನು ನೋಡಲು ಮಗಳ ಜೊತೆ ತೆರಳುತ್ತಿರುವ ವೇಳೆ ಅಪಘಾತ ನಡೆದಿದೆ. ತಲಪಾಡಿ ಕಡೆಗೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ನೆಗೆದು ಸ್ಕೂಟರಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ […]

ತೊಕ್ಕೊಟ್ಟು ಕೊರಗಜ್ಜನ ಕೋಲದಲ್ಲಿ ಕಲ್ಲೆಸೆದು ಗಲಭೆ ಸೃಷ್ಟಿಸಲು ಯತ್ನ, ಓರ್ವನ ಬಂಧನ

Tuesday, April 13th, 2021
Hafiz

ಮಂಗಳೂರು  : ತೊಕ್ಕೊಟ್ಟು ಜಂಕ್ಷನ್ ಬಳಿ ಕೊರಗಜ್ಜನ ಕೋಲ ನಡೆಯುತ್ತಿದ್ದ ಪಕ್ಕದ ಕಟ್ಟಡದ ಮೇಲಿಂದ ಕಲ್ಲೆಸೆದು ಗಲಭೆ ಸೃಷ್ಟಿಸಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಪೊಲೀಸರೊಂದಿಗೆ ಸ್ಥಳೀಯರು ಸೇರಿ ಆರೋಪಿ ಮಹಮ್ಮದ್ ಹಫೀಝ್  ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೋಡಿ ನಿವಾಸಿ ಮಹಮ್ಮದ್ ಹಫೀಝ್ ತೊಕ್ಕೊಟ್ಟು ಜಂಕ್ಷನ್ ಬಳಿ ಕೊರಗಜ್ಜನ ಕೋಲ ನಡೆಯುತ್ತಿದ್ದು ಅಲ್ಲೇ ಇರುವ ವಾಣಿಜ್ಯ ಸಂಕೀರ್ಣ ದ ಮೇಲಿನಿಂದ ಕಲ್ಲೆಸೆದಿದ್ದು ಈ ಸಂದರ್ಭದಲ್ಲಿ‌ಪೊಲೀಸರು ಮತ್ತು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜನರು ಆರೋಪಿಯನ್ಬು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. […]

ತೊಕ್ಕೊಟ್ಟುವಿನಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಮರಳು ಸಾಗಾಟದ ಲಾರಿ ಢಿಕ್ಕಿ ಹೊಡೆದು ಮೃತ್ಯು

Sunday, January 24th, 2021
Tipper Lorry

ಉಳ್ಳಾಲ :  ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟುವಿನಲ್ಲಿ ರಸ್ತೆ  ದಾಟುತ್ತಿದ್ದ ವ್ಯಕ್ತಿಯೊಬ್ಬರು ಮರಳು ಸಾಗಾಟದ ಲಾರಿ ಢಿಕ್ಕಿ ಹೊಡೆದ ಪರಿಣಾಮ ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ಮೃತರನ್ನು ಪಾಣೆಮಂಗಳೂರು ನಿವಾಸಿ ಹಮ್ಮಬ್ಬ(60) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ತೊಕ್ಕೊಟ್ಟಿನ ಸಹರಾ ಆಸ್ಪತ್ರೆಯ ಎದುರು ಹೆದ್ದಾರಿ ದಾಟುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಪರಾರಿಯಾಗಿದೆ. ಇದರಿಂದ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಹಮ್ಮಬ್ಬ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಹಮ್ಮಬ್ಬ ತೊಕ್ಕೊಟ್ಟು ಬಳಿಯ ಕಲ್ಲಾಪುವಿನಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು. ನಾಗುರಿ ಸಂಚಾರಿ ಠಾಣಾ ಪೊಲೀಸರು […]

ಹಲವು ಬಾರಿ ಅದೇ ಅಂಗಡಿಯಿಂದ ಮಾಂಸ ಖರೀದಿಸಿದ ವ್ಯಕ್ತಿಯೇ ತೊಕ್ಕೊಟ್ಟು ಬೀಫ್ ಸ್ಟಾಲ್ ಗಳಿಗೆ ಬೆಂಕಿ ಹಚ್ಚಿದ್ದ !

Saturday, January 16th, 2021
N.ShashiKumar

ಮಂಗಳೂರು :  ತೊಕ್ಕೊಟ್ಟುವಿನಲ್ಲಿ ಬೀಫ್ ಸ್ಟಾಲ್ ಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೋರ್ವನನ್ನು ಪೊಲೀಸರು ಶನಿವಾರ ಬೆಳಗ್ಗೆ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ತೊಕ್ಕೊಟ್ಟು ಒಳಪೇಟೆಯಲ್ಲಿ ತಾಯಿ ಜೊತೆ ವಾಸವಿದ್ದ ನಿವಾಸಿ ನಾಗರಾಜ (37) ಎಂದು ಗುರುತಿಸಲಾಗಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ  ಆರೋಪಿ ನಾಗರಾಜ ತೊಕ್ಕೊಟ್ಟಿನ ಇದೇ ಬೀಫ್ ಸ್ಟಾಲ್‌ನಿಂದ ಹಲವು ಬಾರಿ ಮಾಂಸ ಖರೀದಿಸಿ ತನ್ನ ಸ್ನೇಹಿತನ ಮನೆಯಲ್ಲಿ ಅಡುಗೆ ಮಾಡಿ ಸೇವಿಸಿದ್ದ ಎಂದು ತಿಳಿಸಿದ್ದಾರೆ. ಆತ  ಈ ಹಿಂದೆ ಬೀಫ್ ಸ್ಟಾಲ್‌ ಮಾಲಕ […]

ಚೆನ್ನ ಫಾರೂಕ್ ಹತ್ಯೆ ಪ್ರಕರಣದ ಮತ್ತಿಬ್ಬರು ಆರೋಪಿಗಳ ಬಂಧನ

Saturday, November 7th, 2020
Chenne Farooq

ಬಂಟ್ವಾಳ :  ಚೆನ್ನ ಫಾರೂಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಎಸ್ ಐ ಅವಿನಾಶ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ತೊಕ್ಕೊಟ್ಟು ಸಮೀಪದಿಂದ ಬಂಧಿಸಿದ್ದಾರೆ. ತೊಕ್ಕೊಟ್ಟುವಿನಲ್ಲಿ ವಾಸವಾಗಿರುವ ಹಫೀಸ್ ಯಾನೆ ಅಪ್ಪಿ ಹಾಗೂ ಅಕ್ಕರಂಗಡಿ ನಿವಾಸಿ ಇರ್ಶಾದ್ ಬಂಧಿತ ಆರೋಪಿಗಳು. ಮೆಲ್ಕಾರ್ ಸಮೀಪ ಫಾರೂಕ್ ಯಾನೆ ಚೆನ್ನ ಫಾರೂಕ್ ಕಲ್ಲಡ್ಕ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಟ್ವಾಳ ಎಸ್.ಐ ಅವಿನಾಶ್ ನೇತೃತ್ವದ ತಂಡ ಗುರುವಾರ ಸಂಜೆ ಬಂಧಿಸಿದೆ. ಮೂಲತಃ ನಂದಾವರ ನಿವಾಸಿ […]

ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ನವದಂಪತಿ ದಾರುಣ ಸಾವು

Tuesday, October 27th, 2020
Rayan-priya

ಮಂಗಳೂರು  : ಟ್ರಕ್  ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನವದಂಪತಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಓವರ್ ಬ್ರಿಡ್ಜ್ ನಲ್ಲಿ ಮಂಗಳವಾರ  ಸಂಜೆ ಸಂಭವಿಸಿದೆ. ಬಜಾಲ್ ನಿವಾಸಿ ರಯಾನ್ ಫೆರ್ನಾಂಡಿಸ್(30) ಮತ್ತು ಪ್ರಿಯಾ ಫೆರ್ನಾಂಡಿಸ್(32) ಮೃತರು. ಕಂಕನಾಡಿ ಫಾದರ್ ಮುಲ್ಲಸ್೯ ಆಸ್ಪತ್ರೆಯಲ್ಲಿ ಸಿಬ್ಬಂದಿಯಾಗಿರುವ ಇಬ್ಬರು ಕರ್ತವ್ಯ ಮುಗಿಸಿ ಉಳ್ಳಾಲ ಬಂಗೇರಲೇನ್ ನಲ್ಲಿರುವ ಬಾಡಿಗೆ ಮನೆಗೆ ತೆರಳುವ ಸಂದರ್ಭ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಅಪಘಾತ ಸಂಭವಿಸಿದೆ. ದಂಪತಿಗಳು ಬೈಕ್ ಮೂಲಕ  ಉಳ್ಳಾಲ ಕಡೆಗೆ ತಿರುಗುವ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಆರು ಜನರನ್ನು ಬಲಿ ಪಡೆದ ಕೋವಿಡ್ ಮಹಾಮಾರಿ

Friday, July 10th, 2020
covid-death

ಮಂಗಳೂರು:   ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಒಂದೇ ದಿನ ಆರು ಮಂದಿ ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 36ಕ್ಕೆ ಏರಿಕೆಯಾಗಿದೆ. ಉಳ್ಳಾಲದ 67 ವರ್ಷದ ವೃದ್ಧ, ತೊಕ್ಕೊಟ್ಟುವಿನ 58 ವರ್ಷದ ಮಹಿಳೆ, ಫಳ್ನೀರ್ ಮೂಲದ 65 ವರ್ಷದ ವ್ಯಕ್ತಿ ಮತ್ತು ಹೊಸಬೆಟ್ಟುವಿನ 35 ವರ್ಷ ಪ್ರಾಯದ ಯುವಕ ಇಂದು ಕೋವಿಡ್-19 ಸೋಂಕಿನ ಕಾರಣದಿಂದ ಮರಣ ಹೊಂದಿದ್ದಾರೆ. ಉಳಿದ ಇಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ. ಇಂದಿನ ಆರು ಕೋವಿಡ್ 19 […]