ನಿರಂತರವಾಗಿ ಸುರಿದ ಮಳೆಗೆ ಪಂಪ್ ವೆಲ್ ಜಲಾವೃತ್ತ
Saturday, May 29th, 2021ಮಂಗಳೂರು : ನಿರಂತರವಾಗಿ ಸುರಿದ ಮಳೆಗೆ ಪಂಪ್ ವೆಲ್ ಜಲಾವೃತ್ತ ವಾಗಿದ್ದು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಪಂಪ್ವೆಲ್ ಮೇಲ್ಸೇತುವೆ ಕೆಳಭಾಗದಲ್ಲಿ ಕೃತಕ ನೆರೆ ಸೃಷ್ಟಿಯಾದ ಕಾರಣ ಬೆಳಗ್ಗೆ ಹೊತ್ತು ಮಂಗಳೂರಿಗೆ ವಾಹನದಲ್ಲಿ ಬಂದವರು ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು. ಶನಿವಾರ ತಡರಾತ್ರಿಯಿಂದ ಬೆಳಗ್ಗೆ ಸುಮಾರು 8 ಗಂಟೆಯವರೆಯೂ ಸುರಿದ ಮಳೆಯಿಂದಾಗಿ ನಗರದ ಹಲವು ರಾಜಕಾಲುವೆಗಳು, ಚರಂಡಿ ತೋಡುಗಳು ತುಂಬಿ ಹರಿದವು. 9 ಗಂಟೆಯ ಬಳಿಕ ಮಳೆ ಪ್ರಮಾಣ ಕಡಿಮೆಯಾಗಿದೆ. ನಗರದ ಪಂಪ್ವೆಲ್ ಸೇತುವೆ ಕೆಳಭಾಗ ಸೇರಿದಂತೆ ಬೆಳಗ್ಗಿನ ಹೊತ್ತು […]