ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸ್ನಾತಕೋತ್ತರ ಪದವಿ ಸೀಟುಗಳ ಶುಲ್ಕ ಹೆಚ್ಚಳ – ಖಂಡನೆ

Saturday, May 9th, 2020
Madhuri Bolar

ಮಂಗಳೂರು :  ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸ್ನಾತಕೋತ್ತರ ಪದವಿ ಸೀಟುಗಳ ಶುಲ್ಕ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದನ್ನು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ದ.ಕ. ಜಿಲ್ಲಾ ಸಮಿತಿ ತೀವ್ರವಾಗಿ ವಿರೋಧ ವ್ಯಕ್ತಪಡಿಸುತ್ತದೆ. COVID 19 ಲಾಕ್ ಡೌನ್ ನಿಂದಾಗಿ ಜನರ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ.ಈ ಸಂದರ್ಭದಲ್ಲಿ ಸರಕಾರ ಜನರ ಜೊತೆ ನಿಲ್ಲಬೇಕೆ ಹೊರತು ಜನರನ್ನು ಸಂಕಷ್ಟಕ್ಕೀಡುಮಾಡಬಾರದು. ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸ್ನಾತಕೋತ್ತರ ಪದವಿ ಸೀಟುಗಳ ಶುಲ್ಕ ಹಚ್ಚಳ ಮಾಡಿ ವೈದ್ಯಕೀಯ ಶಿಕ್ಷಣದ […]

ಸುಳ್ಯದ ಖಾಸಗಿ ಕಾಲೇಜಿನ ದಂತ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ..!

Thursday, September 27th, 2018
sulya

ಮಂಗಳೂರು: ಸುಳ್ಯದ ಖಾಸಗಿ ಕಾಲೇಜಿನ ದಂತ ವೈದ್ಯಕೀಯ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ದಂತ ವೈದ್ಯಕೀಯ ಪ್ರಥಮ ವರ್ಷದ ವಿದ್ಯಾರ್ಥಿನಿ ಕೇರಳದ ನೇಹ ಎ. ಥಾಮ್ಸನ್ ತಮ್ಮ ಪಿಜಿ ಕೊಠಡಿಯಲ್ಲಿ ಬುಧವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ಕುರಿತು ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.