“ಕನ್ನಡ ಭವನ ಕಾಸರಗೋಡಿನ” ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷೆಯಾಗಿ ಸಂಘಟಕಿ, ಲೇಖಕಿ , ಕವಯತ್ರಿ ರೇಖಾ ಸುದೇಶ್ ರಾವ್ ಆಯ್ಕೆ.

Thursday, December 12th, 2024
"ಕನ್ನಡ ಭವನ ಕಾಸರಗೋಡಿನ" ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷೆಯಾಗಿ ಸಂಘಟಕಿ, ಲೇಖಕಿ , ಕವಯತ್ರಿ ರೇಖಾ ಸುದೇಶ್ ರಾವ್ ಆಯ್ಕೆ.

ಕಾಸರಗೋಡು :ವಿವಿಧ ಸಂಘಟನೆಗಳ ಪದಾಧಿಕಾರಿಯಾಗಿ, ವಿಶ್ವ ಸಾಹಿತ್ಯ ಬಳಗದ ಸಂಚಾಲಕಿಯಾಗಿ, ಸಾಹಿತ್ಯ, ಸಾಮಾಜಿಕ ಸೇವಾ ಧರ್ಮವನ್ನು ನಿರಂತರತೆಯ ಹಾದಿಯಲ್ಲಿ ಮುನ್ನಡೆಯುತ್ತಿರುವ ಇವರನ್ನು ಕೇರಳ ರಾಜ್ಯದ ಕಾಸರಗೋಡು ಕನ್ನಡ ಭವನದ ದಕ್ಷಿಣ ಕನ್ನಡ ಜಿಲ್ಲಾ ಜಿಲ್ಲಾಧ್ಯಕ್ಷೆಯಾನ್ನಾಗಿ ಸಂಘಟಕಿ, ಲೇಖಕಿ, ಕವಯತ್ರಿ ರೇಖಾ ಸುದೇಶ್ ರಾವ್ ಇವರನ್ನು ಆಯ್ಕೆ ಮಾಡಲಾಗಿದೆ. ಕನ್ನಡ ಭವನದ “ರಜತ ಸಂಭ್ರಮ “ವರ್ಷವಾದ 2025.ರಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕನ್ನಡಪರ ಕಾರ್ಯಕ್ರಮ ಹಾಗೂ “ಮನೆಗೊಂದು ಗ್ರಂಥಾಲಯ,-ಪುಸ್ತಕ ಸತ್ಯ -ಪುಸ್ತಕ ನಿತ್ಯ, ಜನಜಾಗೃತಿ ಮೂಡಿಸುವ ಸಲುವಾಗಿ […]

ಭಾರೀ ಮಳೆ : ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಜುಲೈ 15 ರಂದು ರೆಡ್ ಅಲರ್ಟ್

Sunday, July 14th, 2024
Red-Alert

ಮಂಗಳೂರು : ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಜುಲೈ 15 ರಂದು ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಉಭಯ ಜಿಲ್ಲೆಗಳಲ್ಲಿ ನಾಳೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿರುವ ಹಿನ್ನಲೆ ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜುಲೈ16 ರಿಂದ 18ರವರೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜಿಲ್ಲೆಯಾದ್ಯಂತ ರವಿವಾರ ದಿನವಿಡೀ ಉತ್ತಮ ಮಳೆ ಮುಂದುವರೆದಿದೆ. ಭಾರೀ ಮಳೆ ಹಿನ್ನಲೆಯಲ್ಲಿ ಕಾಸರಗೋಡು ಜಿಲ್ಲೆಯ ಶಾಲೆಗಳಿಗೆ ನಾಳೆ […]

ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಸಹಕರಿಸುವಂತೆ ಕೇಂದ್ರ ಸಚಿವರನ್ನು ಭೇಟಿಯಾಗಿ ಕೇಳಿಕೊಂಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

Thursday, July 4th, 2024
Brijesh-Chowta

ನವದೆಹಲಿ : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ಸಂಸದನಾಗಿ ಪ್ರತಿಜ್ಞೆ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಮೊದಲ ಅಧಿವೇಶನದ ಸಮಯದಲ್ಲಿ ಹಲವು ಕೇಂದ್ರ ಸಚಿವರುಗಳನ್ನು ಭೇಟಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮುನ್ನುಡಿ ಬರೆದಿದ್ದಾರೆ. ಕೇಂದ್ರ ಬಂದರು, ಶಿಪ್ಪಿಂಗ್‌ ಮತ್ತು ಜಲಮಾರ್ಗಗಳ ಸಚಿವರಾದ ಶ್ರೀ ಸರ್ಬಾನಂದ ಸೋನೋವಾಲ್‌ ಅವರನ್ನು ಅವರ ದೆಹಲಿಯ ನಿವಾಸದಲ್ಲಿ ಭೇಟಿಯಾಗಿ ಎನ್‌ಎಮ್‌ಪಿ‌ಎ ಯ ಅಭಿವೃದ್ಧಿಯ ದೃಷ್ಟಿಯಿಂದ ಇರುವ ಸಾಧ್ಯತೆಗಳು, ಸಾಗರ್‌ಮಾಲಾ ಯೋಜನೆ ಅಡಿಯಲ್ಲಿ ಲಕ್ಷದ್ವೀಪಕ್ಕೆ […]

ಮಂಗಳೂರಿನ ಸರ್ವತೋಮುಖ ಅಭಿವೃದ್ಧಿಗೆ ಜೊತೆಯಾಗೋಣ : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

Thursday, June 20th, 2024
Brijesh-Felicitation

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದನಾಗಿ ಆಯ್ಕೆಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟರವರನ್ನು ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ಅಭಿನಂದಿಸಿದರು. ಕಾರ್ಯಕ್ರಮದಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಂಗಳೂರಿನ ಯುದ್ಧ ಸ್ಮಾರಕವನ್ನು ಪಾಲಿಕೆಯ ವತಿಯಿಂದ ಅಭಿವೃದ್ಧಿಪಡಿಸಲು ಮಂಗಳೂರಿನ ಪ್ರಥಮ ಪ್ರಜೆ‌ ಮತ್ತು ನಗರದ ಜನಪ್ರತಿನಿಧಿಗಳಿಗೆ ಸಭೆಯಲ್ಲಿ ಪ್ರಸ್ತಾಪ ಮಾಡಿದರು. ಈ ಸಂದರ್ಭದಲ್ಲಿ ಮ.ನ.ಪಾ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಉಪಮೇಯರ್ ಸುನೀತಾ, ಸಚೇತಕರಾದ ಪ್ರೇಮಾನಂದ ಶೆಟ್ಟಿ, ಪ್ರತಿಪಕ್ಷ ನಾಯಕರಾದ ಪ್ರವೀಣ್ ಚಂದ್ರ ಆಳ್ವ, ಮ.ನ.ಪಾ ಆಯುಕ್ತರಾದ ಆನಂದ್, […]

ಶ್ರೀ ನರೇಂದ್ರ ಮೋದಿ 3, ಧನ್ಯವಾದಗಳು ದಕ್ಷಿಣ ಕನ್ನಡ

Monday, June 10th, 2024
ಶ್ರೀ ನರೇಂದ್ರ ಮೋದಿ 3,  ಧನ್ಯವಾದಗಳು ದಕ್ಷಿಣ ಕನ್ನಡ

ದಕ್ಷಿಣ ಕನ್ನಡ, ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ

Tuesday, June 4th, 2024
ದಕ್ಷಿಣ ಕನ್ನಡ, ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 97 ಸಾವಿರ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಎಂಟನೇ ಸುತ್ತಿನ ಮತ ಎಣಿಕೆ ಮುಗಿದಿದ್ದು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 4,02,107 ಮತ ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ 30,50,93 ಮತ ಗಳಿಸಿದ್ದಾರೆ. ಸದ್ಯಕ್ಕೆ ಬಿಜೆಪಿ ಅಭ್ಯರ್ಥಿ 97,014 ಮತಗಳ ಅಂತರದ ಮುನ್ನಡೆ ಸಾಧಿಸಿದ್ದಾರೆ. ನೋಟಾ ಪರವಾಗಿ 12,734 ಮತಗಳು ಬಿದ್ದಿವೆ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ […]

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಬ್ರಿಜೇಶ್ ಚೌಟ

Wednesday, March 13th, 2024
Brijesh chow

ಮಂಗಳೂರು : ಬಹಳ ಕುತೂಹಲ ಮೂಡಿಸಿದ್ದ ದಕ್ಷಿಣ ಕನ್ನಡ ಬಿಜೆಪಿ ಟಿಕೆಟ್ ಹಂಚಿಕೆ ಕೊನೆಗೆ ಬ್ರಿಜೇಶ್ ಚೌಟ ಅವರಿಗೆ ದಕ್ಕಿದೆ. ಕಳೆದ ಚುನಾವಣೆಯಲ್ಲಿ ಪ್ರಚಂಡ ಬಹುಮತದಿಂದ ವಿಜಯ ಗಳಿಸಿದ ನಳಿನ್ ಕುಮಾರ್ ಕಟೀಲ್ ಈ ಬಾರಿ ಬಿಜೆಪಿ ಹೈಕಮಾಂಡ್ ನಿರ್ಧಾರಕ್ಕೆ ಮಣಿದು ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಬ್ರಿಜೇಶ್ ಚೌಟ ಆಯ್ಕೆಯ ಈ ವಿಷಯವನ್ನು ಸ್ವತಃ ನಳಿನ್ ಕುಮಾರ್ ಕಟೀಲ್ ಅವರೇ ಹಂಚಿಕೊಂಡಿದ್ದಾರೆ. ನಿವೃತ್ತ ಸೇನಾಧಿಕಾರಿ, ಯುವ ನಾಯಕ, ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರೇ […]

ಬೆಂಕಿ ನಂದಿಸಲು ಕಾಡಿಗೆ ಹೋದ ವೃದ್ಧ ದಂಪತಿ ದುರ್ಮರಣ

Monday, January 29th, 2024
Bantwal-elder-couple

ಮಂಗಳೂರು: ಬೆಂಕಿ ಕಾಡಿಗೆ ವ್ಯಾಪಿಸುತ್ತದೆ ಎಂದು ವೃದ್ಧ ದಂಪತಿ ಗಳಿಬ್ಬರು ಬೆಂಕಿಹಾರಿಸಲು ಹೋಗಿ ಜೀವವನ್ನೇ ಕಳೆದುಕೊಂಡ ಘಟನೆ ತುಂಡು ಪದವು ಎಂಬಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಅಮ್ಟಾಡಿ‌ ಬಳಿಯ ತುಂಡು ಪದವು ಎಂಬಲ್ಲಿ ಈ ಘಟನೆ ನಡೆದಿದ್ದು ಮೃತ ದಂಪತಿಯನ್ನು ಗಿಲ್ಬರ್ಟ್ ಕಾರ್ಲೋ(78) ಪತ್ನಿ ಕ್ರಿಸ್ಟಿನಾ ಕಾರ್ಲೋ(70) ಎಂದು ಗುರುತಿಸಲಾಗಿದೆ. ಮನೆ ಪಕ್ಕದ ಕಸಕ್ಕೆ ಹಾಕಿದ್ದ ಬೆಂಕಿ ಕಾಡಿಗೆ ವ್ಯಾಪಿಸುತ್ತದೆ ಎಂದು ತಿಳಿದು ಬೆಂಕಿಯನ್ನು ನಂದಿಸಲು ಯತ್ನಿಸಿದ್ದ ವೃದ್ಧ ದಂಪತಿ ಸಜೀವದಹನವಾಗಿದ್ದಾರೆ. ಬಂಟ್ವಾಳ ಗ್ರಾಮಾಂತರ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ

Wednesday, December 20th, 2023
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಉಡುಪಿ ಮೂಲದ 82 ವರ್ಷದ ವೃದ್ಧರೋರ್ವರಲ್ಲಿ ಪಾಸಿಟಿವ್ ಪತ್ತೆಯಾಗಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಗೆ ನರ ಸಂಬಂಧಿ ಕಾಯಿಲೆಗೆ ಬಂದಿರುವ ಅವರನ್ನು ರಾಟ್ ಟೆಸ್ಟ್ ಮಾಡಿಸಿದಾಗ ಅದರಲ್ಲಿ ಪಾಸಿಟಿವ್ ಪತ್ತೆಯಾಗಿದೆ. ಕೊರೋನಾ ಟೆಸ್ಟಿಂಗ್ ಆರಂಭಿಸಿದ ಮೊದಲ ದಿನವೇ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು. ಅವರನ್ನು ಖಾಸಗಿ ಆಸ್ಪತ್ರೆಯ ಐಸೋಲೇಷನ್ ವಾರ್ಡ್ ಗೆ ದಾಖಲಿಸಲಾಗಿದ್ದು ಅಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.

7 ಅಭ್ಯರ್ಥಿಗಳ 13 ನಾಮಪತ್ರಗಳು ಕ್ರಮಬದ್ಧ, ಹಿಂಪಡೆಯಲು ನ.26 ರ ವರೆಗೆ ಅವಕಾಶ

Wednesday, November 24th, 2021
nomination Fie

ಮಂಗಳೂರು  :  ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಗೆ ಸ್ಪರ್ಧೆ ಬಯಸಿ ಒಟ್ಟು 8 ಮಂದಿ ಅಭ್ಯರ್ಥಿಗಳು 14 ನಾಮಪತ್ರ ಸಲ್ಲಿಸಿದ್ದರು. ಅವುಗಳ ಪರಿಶೀಲನೆ ನ.24ರ ಬುಧವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಅವುಗಳಲ್ಲಿ 13 ನಾಮಪತ್ರಗಳು ಕ್ರಮಬದ್ಧವಾಗಿದ್ದು, ಒಬ್ಬರು ಪಕ್ಷೇತರ ಅಭ್ಯರ್ಥಿಯ ನಾಮಪತ್ರ ತಿರಸ್ಕತಗೊಂಡಿದೆ. 13 ನಾಮಪತ್ರಗಳು ಕ್ರಮಬದ್ಧ: ಸಲ್ಲಿಕೆಯಾಗಿದ್ದ ಒಟ್ಟು 14 ನಾಮಪತ್ರಗಳಲ್ಲಿ 7 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ. ಅದರಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ […]