Blog Archive

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ..!

Thursday, June 28th, 2018
heavy-rain

ಮಂಗಳೂರು: ಕಳೆದ 48 ಗಂಟೆಗಳಿಂದಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿಯುವ ಮಳೆಗೆ ಕೆಲವೆಡೆ ತಗ್ಗು ಪ್ರದೇಶಗಳು ಜಲಾವೃತವಾಗಿದ್ದತೆ ಹಲವೆಡೆ ವಾಹನಸಂಚಾರ, ಜನ ಸಂಚಾರಕ್ಕೆ ಕಷ್ಟವಾಗಿದೆ. ಭಾರಿ ಮಳೆಯಿದ್ರೂ ತಾಲೂಕು ಶಿಕ್ಷಣಾಧಿಕಾರಿ ರಜೆ ಘೋಷಿಸಲಿಲ್ಲ. ಆದ್ದರಿಂದ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರ ಆತಂಕ ಉಂಟಾಗಿದೆ

ರಾಜ್ಯದ ಶ್ರೀಮಂತ ದೇಗುಲಗಳಲ್ಲಿ ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಣ್ಯ ನಂಬರ್ ಒನ್ ..!

Thursday, June 28th, 2018
subramanya

ಮಂಗಳೂರು: ರಾಜ್ಯದ ಶ್ರೀಮಂತ ದೇಗುಲಗಳ ಪಟ್ಟಿ ಬಿಡುಗಡೆಯಾಗಿದ್ದು, ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಣ್ಯ ನಂಬರ್ ಒನ್ ಸ್ಥಾನದಲ್ಲಿದೆ. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಎರಡನೇ ಸ್ಥಾನದಲ್ಲಿದ್ದು, ಮೈಸೂರಿನ ಚಾಮುಂಡೇಶ್ವರಿ ದೇವಾಲಯ ತೃತೀಯ ಸ್ಥಾನದಲ್ಲಿದೆ. ಹಾಗೂ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ನಾಲ್ಕನೇ ಸ್ಥಾನದಲ್ಲಿದೆ. ಕರಾವಳಿ ಜಿಲ್ಲೆಗಳ ದೇಗುಲಗಳು ಮೊದಲ ಸ್ಥಾನದಲ್ಲಿದ್ದು, ಮುಜರಾಯಿ ಇಲಾಖೆ ಈ ಕ್ರೆಡಿಟ್ ಕೊಟ್ಟಿದೆ.

ಎಸ್ ಡಿ ಪಿ ಐ ಪಕ್ಷದ ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ಅಥಾವುಲ್ಲಾ ಜೋಕಟ್ಟೆ ಆಯ್ಕೆ!

Wednesday, June 27th, 2018
sdpi-party

ಮಂಗಳೂರು: ಎಸ್ ಡಿ ಪಿ ಐ ಪಕ್ಷದ ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ಅಥಾವುಲ್ಲಾ ಜೋಕಟ್ಟೆ ಆಯ್ಕೆಯಾಗಿದ್ದಾರೆ. ಮಿತ್ತೂರಿನ ಫ್ರೀಡಂ ಕಮ್ಯುನಿಟಿ ಹಾಲ್ ನಲ್ಲಿ ನಡೆದ ಪಕ್ಷದ ಜಿಲ್ಲಾ ಪ್ರತಿನಿಧಿಗಳ ಸಭೆಯ ಬಳಿಕ ನಡೆದ ಆಂತರಿಕ ಚುನಾವಣೆಯಲ್ಲಿ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರದ ಪ್ರತಿನಿಧಿಗಳು ಮತದಾನದ ಮೂಲಕ ಮುಂದಿನ ಮೂರು ವರ್ಷಗಳ ಅವಧಿಯ ನೂತನ ಜಿಲ್ಲಾ ಸಮಿತಿಯನ್ನು ಆಯ್ಕೆ ಮಾಡಿದರು. ಉಪಾಧ್ಯಕ್ಷರಾಗಿ ಇಕ್ಬಾಲ್ ಗೂಡಿನಬಳಿ, ಆಂಟನಿ.ಪಿ.ಡಿ, ಪ್ರಧಾನ ಕಾರ್ಯದರ್ಶಿಯಾಗಿ ಶಾಹುಲ್ ಎಸ್. ಎಚ್, ಕಾರ್ಯದರ್ಶಿಯಾಗಿ […]

ಜಿಲ್ಲೆಯಲ್ಲಿ ಮೀನಿಗೆ ರಾಸಾಯನಿಕ ಬಳಕೆ ಮಾಡಿ ಮಾರಾಟ ವದಂತಿ..ಮೀನು ಮಾರಾಟಗಾರರು ಸಂಕಷ್ಟ!

Tuesday, June 26th, 2018
fish

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೀನಿಗೆ ರಾಸಾಯನಿಕ ಬಳಕೆ ಮಾಡಿ ಮಾರಾಟ ಮಾಡುತ್ತಾರೆ ಎನ್ನುವ ವದಂತಿ ಸಾಮಾಜಿಕ ಜಾಲತಾಣಗಳ ಮೂಲಕ ಹರಡುತ್ತಿರುವುದರಿಂದ ಮೀನು ಮಾರಾಟಗಾರರು ಸಂಕಷ್ಟಕ್ಕೀಡಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಮೀನಿಗೆ ರಾಸಾಯನಿಕ ಸಿಂಪಡಣೆ ಮಾಡಿ ಮಾರಾಟ ಮಾಡುತ್ತಾರೆ ಎನ್ನುವ ಆಕ್ಷೇಪಣೆಯನ್ನು ಮಾಡುವ ಓರ್ವ ಗ್ರಾಹಕ ಮೀನು ಮಾರಾಟಗಾರರ ಬಳಿ ವಾಗ್ವಾದ ಮಾಡುವುದನ್ನು ಒಳಗೊಂಡ ವಿಡಿಯೋವೊಂದನ್ನು ವಾಟ್ಸಪ್ ಗುಂಪಿನಲ್ಲಿ ಹರಿಯಬಿಡಲಾಗಿದೆ. ಈ ಸಂಭಾಷಣೆಯಲ್ಲಿ ಗ್ರಾಹಕರು ಮೀನು ಮಾರಾಟಗಾರರನ್ನು ಆಕ್ಷೇಪಿಸುತ್ತಿದ್ದಾರೆ. ಮೀನು ಮಾರಾಟಗಾರ ತಾನು ಆ […]

ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಯೋಗ ಕಾರ್ಯಕ್ರಮ!

Thursday, June 21st, 2018
yoga-day

ಮಂಗಳೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಯೋಗ ಕಾರ್ಯಕ್ರಮ ನಡೆಯಿತು. ಮಂಗಳಾ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಯೋಗ ಕಾರ್ಯಕ್ರಮದಲ್ಲಿ ವಸತಿ ಸಚಿವ ಯು.ಟಿ. ಖಾದರ್, ಸಂಸದ ನಳಿನ್ ಕುಮಾರ್ ಕಟೀಲ್ ಭಾಗಿಯಾದರು. ಧರ್ಮಸ್ಥಳದಲ್ಲೂ ಯೋಗ ದಿನ ಪ್ರಯುಕ್ತ ಬೃಹತ್ ಕಾರ್ಯಕ್ರಮ ನಡೆಯಿತು. ಡಾ. ವೀರೇಂದ್ರ ಹೆಗ್ಗಡೆ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಗಣ್ಯರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗಿಯಾದರು.

ರಾಜ್ಯದಲ್ಲಿ ಭಾರಿ ಮಳೆ…13 ವರ್ಷಗಳ ಹಿಂದಿನ ದಾಖಲೆ ಮುರಿದ ವರುಣ

Monday, June 18th, 2018
heavy-rain

ಬೆಂಗಳೂರು: ರಾಜ್ಯದೆಲ್ಲೆಡೆ ಮುಂಗಾರು ಚುರುಕಾಗಿದ್ದು, ಕಳೆದ ಹತ್ತು ದಿನದಲ್ಲಿ ಸುರಿದ ಮಳೆ ಕಳೆದ 13 ವರ್ಷಗಳಲ್ಲೇ ಇದು ಅತ್ಯಧಿಕ ಪ್ರಮಾಣದ್ದಾಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್ಎನ್‌ಡಿಎಂಸಿ) ಮಾಹಿತಿ ನೀಡಿದೆ. ಕೆಎಸ್ಎನ್‌ಡಿಎಂಸಿ ಪ್ರಕಟಿಸಿದ ಮುಂಗಾರು ಅವಧಿಯ ಮೊದಲ 10 ದಿನಗಳ ಮಳೆಯ ವರದಿಯಲ್ಲಿ ಈ ಅಂಶ ಉಲ್ಲೇಖಿಸಲಾಗಿದೆ. ವರದಿ ಪ್ರಕಾರ ಜೂ.1ರಿಂದ ಜೂ.10ರವರೆಗೆ ವಾಡಿಕೆಯಂತೆ ರಾಜ್ಯಾದ್ಯಂತ ಸರಾಸರಿ 51 ಮಿ.ಮೀ. ಮಳೆ ದಾಖಲಾಗಬೇಕು. ಆದರೆ ಈ ವರ್ಷ 92 ಮಿ.ಮೀ. ದಾಖಲಾಗಿದ್ದು, 2004ರ ನಂತರದಲ್ಲಿ […]

ರಾಜ್ಯ ಸರಕಾರ ಕಾನೂನಿಗಿಂತ ಮಾನವೀಯತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಪರಿಹಾರ ನೀಡಿ: ವೇದವ್ಯಾಸ ಕಾಮತ್

Friday, June 15th, 2018
desh-vedavyas

ಮಂಗಳೂರು: ರಾಜ್ಯ ಸರಕಾರ ಕಾನೂನಿಗಿಂತ ಮಾನವೀಯತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಪರಿಹಾರ ನೀಡಬೇಕು ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಕಂದಾಯ ಸಚಿವ ಆರ್ ವಿ ದೇಶಪಾಂಡೆಯವರಿಗೆ ಮನವಿ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಸಭೆಯ ಬಳಿಕ ಸಚಿವ ಆರ್ ವಿ ದೇಶಪಾಂಡೆಯವರಿಗೆ ಮಂಗಳೂರು ನಗರ ದಕ್ಷಿಣದಲ್ಲಿ ಆಗಿರುವ ಹಾನಿಯ ಸಂಪೂರ್ಣ ವರದಿಯನ್ನು ನೀಡಿ ವೇದವ್ಯಾಸ ಕಾಮತ್ ಮಾಧ್ಯಮಗಳೊಂದಿಗೆ ಮಾತನಾಡಿದರು. ಮಳೆಯಿಂದ ನಷ್ಟಕ್ಕೊಳಗಾದ ಸುಮಾರು 110 ಮನೆಗಳಿಗೆ ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದೇನೆ.ಅನೇಕ […]

ರಾಜ್ಯಾದ್ಯಂತ ಮಳೆ ಹಾನಿ… 22 ಕೋಟಿ ಪರಿಹಾರ ಹಣ ಬಿಡುಗಡೆ: ಆರ್.ವಿ. ದೇಶಪಾಂಡೆ

Thursday, June 14th, 2018
r-v-deshpande

ಮಂಗಳೂರು: ಬೆಂಗಳೂರು ನಗರ ಹೊರತುಪಡಿಸಿ ರಾಜ್ಯದ್ಯಾಂತ ಭಾರಿ ಪ್ರಮಾಣದ ಮಳೆಯಿಂದ ಹಾನಿಗೀಡಾಗಿರುವ ಪ್ರದೇಶಕ್ಕೆ ಪರಿಹಾರ ನೀಡಲು 22 ಕೋಟಿ ಹಣವನ್ನು ರಾಜ್ಯ ಸರಕಾರ ‌ಬಿಡುಗಡೆ ಮಾಡಿದೆ ಎಂದು ಕಂದಾಯ ಸಚಿವ ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಹಾಮಳೆಗೆ‌ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಳೆ ಹಾನಿಯಿಂದ ಪರಿಹಾರ ನೀಡಲು ವಿಳಂಬವಾಗಬಾರದೆಂದು‌ ನಿರ್ಧರಿಸಿದ್ದು ಪ್ರತಿ ಜಿಲ್ಲೆಗೂ ಐದು ಕೋಟಿ ಹಣ ಪರಿಹಾರ ನೀಡಲಿದ್ದೇವೆ. […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿಯವರು ಅಪಪ್ರಚಾರ ಮಾಡಿದ್ದರಿಂದ ಕಾಂಗ್ರೆಸ್ ‌ಪಕ್ಷಕ್ಕೆ ಸೋಲಾಗಿದೆ: ರಮನಾಥ ರೈ

Thursday, June 14th, 2018
ramanath-rai

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿಯವರು ಅಪಪ್ರಚಾರ ಮಾಡಿದ್ದರಿಂದ ಕಾಂಗ್ರೆಸ್ ‌ಪಕ್ಷಕ್ಕೆ ಸೋಲಾಗಿದೆ ಎಂದು ಮಂಗಳೂರಿನಲ್ಲಿ ಮಾಜಿ ಸಚಿವ ರಮನಾಥ ರೈ ಹೇಳಿಕೆ ನೀಡಿದ್ದಾರೆ. ಮಂಗಳೂರಿನಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ರಮನಾಥ ರೈ ಅವರು ಚುನಾವಣೆ ನಂತರವೂ ಬಿಜೆಪಿ ನನ್ನ ವಿರುದ್ಧ ನಿರಂತರ ಅಪಪ್ರಚಾರ ದಲ್ಲಿ ನಿರತವಾಗಿದೆ.ಕಲ್ಲಡ್ಕ ಶಾಲೆಗೆ ಕೊಲ್ಲೂರು ದೇವಾಲಯದ ಹುಂಡಿಯ ಹಣ ಹೋಗುವುದನ್ನು ‌ನಿಲ್ಲಿಸಿ ಶಿಕ್ಷಣ ಇಲಾಖೆಯ ಬಿಸಿಯೂಟ ವ್ಯವಸ್ಥೆ ಮಾಡುತ್ತೇವೆ ಎಂದೆವು.ಆದರೆ ಅದನ್ನು ತೆಗೆದುಕೊಳ್ಳದೆ ನಮ್ಮ ಮೇಲೆ ಅಪಪ್ರಚಾರ ಮಾಡಲಾಯಿತು; ಇದೀಗ ಶಿಕ್ಷಣ ‌ಇಲಾಖೆಯ […]

ವಿಧಾನಪರಿಷತ್ ಚುನಾವಣೆಯಲ್ಲಿ ಬೂತ್ ನಲ್ಲಿ ಕುಳಿತು ಮತ ಯಾಚಿಸಿದ ಮಾಜಿ ಸಚಿವ ರಮನಾಥ್ ರೈ..!

Friday, June 8th, 2018
ramanath-rai

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಬಿ.ರಮನಾಥ್ ರೈ ಮತ್ತೊಮ್ಮೆ ರಾಜಕೀಯ ಪ್ರಭುತ್ವವನ್ನು ತೋರಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅವರು ಹೀನಾಯವಾಗಿ ತನ್ನ ಪ್ರತಿಸ್ಪರ್ಧಿ ರಾಜೇಶ್ ನಾಯ್ಕ್ ಅವರು ವಿರುದ್ಧ ಸೋಲನ್ನು ಕಂಡಿದ್ದರು. ಆರು ಬಾರಿ ಶಾಸಕರಾಗಿದ್ದು, ಮಾಜಿ ಸಚಿವರಾಗಿದ್ದು ಕೊಂಡು ಸೋಲು ಕಂಡಿದ್ದರು. ತನ್ನ ಸೋಲಿನ ಹಿನ್ನೆಲೆಯಲ್ಲಿ ಅವರು ರಾಜಕೀಯಕ್ಕೆ ಸನ್ಯಾಸವನ್ನು ತೆಗೆದುಕೊಳ್ಳುತ್ತಾರೆ ಎಂಬ ಸುದ್ಧಿ ಅವರ ಕೆಲವು ಅಭಿಮಾನಿಗಳಿಂದ ಬಳಗದಿಂದ, ಬೆಂಬಲಿಗರಿಂದ ಕೇಳಿ ಬರುತಿತ್ತು. ಬಿಜೆಪಿ ವಲಯದಲ್ಲೂ ಅವರ ವಿರುದ್ಧ ಸಾಕಷ್ಟು ಅಪಪ್ರಚಾರ […]