Blog Archive

ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ..ಓರ್ವ ವ್ಯಕ್ತಿ ಬಂಧನ

Friday, June 8th, 2018
gold-buiscet

ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ಮಂಗಳೂರು ಡಿ‌ಆರ್‌‌ಐ ಅಧಿಕಾರಿಗಳು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿಲದ ಉಮರ್‌ ಫಾರೂಕ್‌ ಕನ್ನದಗುಳಿ‌ ಎಂಬಾತ ಬಂಧಿತ ಆರೋಪಿ. ಬುಧವಾರದಂದು ಸಂಜೆ 6.15 ಕ್ಕೆ ದುಬೈನಿಂದ‌ ಮಂಗಳೂರಿಗೆ ಉಮರ್‌ ಫಾರೂಕ್‌ ಬಂದಿದ್ದ. ಸ್ಪೈಸ್‌ಜೆಟ್‌ ವಿಮಾನದಲ್ಲಿ ಮಂಗಳೂರಿಗೆ ಬಂದಿಳಿದಿದ್ದ ಆರೋಪಿ ಮಲ್ಟಿ ಮೀಡಿಯಾ ಸ್ಪೀಕರ್‌ ಸಿಸ್ಟಮ್‌ ಒಳಗಡೆ ಚಿನ್ನವನ್ನು ಅಡಗಿಸಿ ತಂದಿದ್ದ. ಈ ವೇಳೆ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಿದಾಗ […]

ಕರಾವಳಿಯಲ್ಲಿ ಭಾರಿ ಮಳೆ ಇಂದು ಮತ್ತು ನಾಳೆ ಶಾಲೆಗಳಿಗೆ ರಜೆ ಘೋಷಣೆ..!

Friday, June 8th, 2018
dakshina-kannada

ಮಂಗಳೂರು: ಕರಾವಳಿಯಲ್ಲಿ ಭಾರಿ ಮಳೆ ಮುಂದುವರೆದಿದ್ದು ಮುಂಜಾಗೃತಾ ಕ್ರಮವಾಗಿ ಇಂದು ಮತ್ತು ನಾಳೆ (ಜೂನ್ 08, ಜೂನ್ 9) ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ನಿನ್ನೆ ರಾತ್ರಿಯಿಂದಲೂ ಎಡಬಿಡದೆ ಮಳೆ ಸುರಿಯುತ್ತಿದ್ದು, ಬೆಳಿಗ್ಗೆ ಸಹ ಜೋರು ಮಳೆ ಬರುತ್ತಲೇ ಇರುವ ಕಾರಣ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಈ ನಿರ್ಣಯ ತೆಗೆದುಕೊಂಡಿದ್ದಾರೆ. ರಜೆಯನ್ನು ಶಾಲೆಗಳಿಗೆ ಮಾತ್ರವೇ ನೀಡಲಾಗಿದ್ದು ಕಾಲೇಜುಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ. ಮುಂಬೈನಲ್ಲಿ ಭಾರಿ ಮಳೆ ನಿರೀಕ್ಷೆ, ಕಡಲಿಗೆ ಇಳಿಯದಂತೆ ಕೇರಳ ಮೀನುಗಾರರಿಗೆ […]

ದನಕಳವು ಮಾಡುವ ವ್ಯಕ್ತಿ ಸಾವು… ಬಿಜೆಪಿ, ಸಂಘಪರಿವಾರದ ತಲೆಗೆ ಕಟ್ಟುವ ಯತ್ನ :ಶೋಭಾ ಕರಂದ್ಲಾಜೆ

Thursday, June 7th, 2018
shobha-karandlaje

ಬೆಂಗಳೂರು: ದನಗಳ ಕಳವು ಮಾಡುತ್ತಿದ್ದ ವೇಳೆ ಹಿಡಿದುಕೊಟ್ಟ ವ್ಯಕ್ತಿ ಪೊಲೀಸ್ ಜೀಪಿನಲ್ಲೇ ಸಾವನ್ನಪ್ಪಿದ್ದರೂ ಅದನ್ನು ಬಿಜೆಪಿ ಹಾಗೂ ಸಂಘ ಪರಿವಾರದ ತಲೆಗೆ ಕಟ್ಟುವ ಕೆಲಸವನ್ನು ಈ ಸರ್ಕಾರ ಮಾಡುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಉಡುಪಿ, ದಕ್ಷಿಣ ಕನ್ನಡದಲ್ಲಿ ನಿರಂತರವಾಗಿ ದನಗಳ ಕಳವು ನಡೆಯುತ್ತಿದೆ.ಸ್ಕಾರ್ಪಿಯೋ ಒಂದು ಪ್ರತಿ‌ದಿನ ರಾತ್ರಿ ಸಂಚರಿಸುತ್ತಿದ್ದು ದನ ಕಳವು ಮಾಡುತ್ತಿದೆ ಎನ್ನುವ ಮಾಹಿತಿಯನ್ನು ನಮ್ಮ ಕಾರ್ಯಕರ್ತರು ಪೊಲೀಸರಿಗೆ ನೀಡಿದ್ದರು. ಅದರಂತೆ ಮಧ್ಯರಾತ್ರಿ ಪೊಲೀಸ್ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೇ ನಿಫಾ ವೈರಸ್ ಈ ತನಕ ಪತ್ತೆಯಾಗಿಲ್ಲ: ಡಾ.ರಾಮಕೃಷ್ಣ ರಾವ್

Saturday, June 2nd, 2018
nipha-virus

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೇ ನಿಫಾ ವೈರಸ್ ಈ ತನಕ ಪತ್ತೆಯಾಗಿಲ್ಲ. ಆತಂಕ ಪಡುವುದು ಬೇಡ ಎಂದು ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಕೃಷ್ಣ ರಾವ್ ಹೇಳಿದರು. ಮಂಗಳೂರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದ.ಕ. ಜಿಲ್ಲೆಯಲ್ಲಿ ನಿಫಾ ವೈರಸ್‌ನ ಶಂಕಿತ ಪ್ರಕರಣಗಳು ಕೂಡ ದಾಖಲಾಗಿಲ್ಲ. ಜನರು ಭಯ ಪಡುವ ಅಗತ್ಯವಿಲ್ಲ ಎಂದರು. ಕೇರಳ ಸೇರಿದಂತೆ ಹಲವೆಡೆ ನಿಫಾ ವೈರಸ್‌ನಿಂದ ಜನ ಆತಂಕಕ್ಕೀಡಾಗಿದ್ದಾರೆ. ಈ ಬಗ್ಗೆ ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುತ್ತಿದೆ.

ಆರ್ಥಿಕ‌‌ ಸಂಕಷ್ಟ, ಸುಳ್ಯದಲ್ಲಿ ಉದ್ಯಮಿ‌ ಆತ್ಮಹತ್ಯೆ

Friday, June 1st, 2018
bussinessman

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಉದ್ಯಮಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅರಂಬೂರು ನಿವಾಸಿ, ಬಿ.ಎಸ್.ಶರೀಫ್(52) ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ. ಆರ್ಥಿಕ ಸಂಕಷ್ಟದಿಂದ ನೊಂದು ಇಂದು ಬೆಳಿಗ್ಗೆ ನೇಣಿಗೆ ಶರಣಾಗಿದ್ದಾರೆ. ಕೊರಿಯರ್ ಉದ್ಯಮ ನಡೆಸುತ್ತಿದ್ದ ಶರೀಫ್ ಇತ್ತೀಚೆಗೆ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದರು ಎನ್ನಲಾಗಿದೆ. ವಕೀಲರೂ ಆಗಿದ್ದ ಬಿ.ಎಸ್.ಶರೀಫ್ ಅವರು ಸುಳ್ಯ ಸಿಟಿ ರೋಟರಿ ಕ್ಲಬ್ ಅಧ್ಯಕ್ಷರಾಗಿ, ಜೇಸಿ ರಾಷ್ಟ್ರೀಯ ತರಬೇತುದಾರರಾಗಿದ್ದರು.

ಮಂಗಳೂರಲ್ಲಿ ಇಂದಿನಿಂದ ಆಳಸಮುದ್ರ ಮೀನುಗಾರಿಕೆ ಸ್ಥಗಿತ

Friday, June 1st, 2018
deep-sea-fishing

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ವಹಿವಾಟು ಮೀನುಗಾರಿಕೆ ಇಂದಿನಿಂದ ಸ್ಥಗಿತಗೊಂಡಿದೆ. ಮೀನುಗಳ ಸಂತಾನೋತ್ಪತ್ತಿ ಸಮಯ ಹಾಗೂ ಸಮುದ್ರದಲ್ಲಿ ಭಾರಿ ಏರಿಳಿತ ಉಂಟಾಗುವುದರಿಂದ ಇಂದಿನಿಂದ ಜುಲೈ 31 ರವರೆಗೆ ಆಳಸಮುದ್ರ ಮೀನುಗಾರಿಕೆ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ ಮೀನುಗಾರರು ಮೀನುಗಾರಿಕೆಗೆ ತೆರಳದೆ‌ ಮಂಗಳೂರಿನ ಬಂದರಿನಲ್ಲಿ ಬೋಟುಗಳನ್ನು ಲಂಗರು ಹಾಕಿದ್ದಾರೆ. ಇಂದಿನಿಂದ ಎರಡು ತಿಂಗಳು ಆಳಸಮುದ್ರ ಮೀನುಗಾರಿಕೆ ಸ್ಥಗಿತಗೊಂಡಿರುವುದರಿಂದ ಮಂಗಳೂರು ಬಂದರಲ್ಲಿ ಸಾವಿರಾರು ಬೋಟ್‌ಗಳು ಲಂಗರು ಹಾಕಿವೆ. ಮೀನುಗಾರಿಕೆ ಸ್ಥಗಿತವಾದ ಹಿನ್ನೆಲೆಯಲ್ಲಿ ಸದಾ ಗಿಜಿಗುಡುತ್ತಿದ್ದ ಬಂದರು ಪ್ರದೇಶದಲ್ಲಿ […]

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ, ಗುಡುಗು- ಸಿಡಿಲು ಸಹಿತ ಮಳೆಗೆ ಹಲವು ಮನೆಗಳು ಹಾನಿ..!

Tuesday, May 29th, 2018
huge-rain

ಮಂಗಳೂರು: ಕೇರಳಕ್ಕೆ ಮುಂಗಾರು ಪ್ರವೇಶಿಸಿರುವ ಹಿನ್ನೆಲೆಯಲ್ಲಿ ಮಂಗಳವಾರ ಮಂಜಾನೆಯಿಂದ ಮಂಗಳೂರಿನಲ್ಲಿ ಭಾರಿ ಮಳೆ ಸುರಿಯುತ್ತಿದೆ. ಎರಡು ದಿನಗಳಿಂದ ರಾತ್ರಿ ಮಳೆ ಸುರಿಯುತ್ತಿತ್ತು. ಅದರೆ ಮಂಗಳವಾರ ಬೆಳಗ್ಗೆಯಿಂದಲೇ ಎಡೆಬಿಡದೆ ಭಾರೀ ಮಳೆ ಸುರಿಯುತ್ತಿದೆ. ಇಂದು ಅತಿ ಹೆಚ್ಚು ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಮುನ್ನೆಚ್ಚರಿಕೆ ನೀಡಿದ್ದು, ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ ಸುರಿಯುತ್ತಿದೆ. ಹವಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಾರ ಕರಾವಳಿಯಲ್ಲಿ ಜೂನ್ 2ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ […]

‘ಮೆಕುನು’ ಚಂಡಮಾರುತ… ಕರಾವಳಿಯಲ್ಲಿ ಭಾರೀ ಗಾಳಿ, ಮಳೆ ಸಾಧ್ಯತೆ

Thursday, May 24th, 2018
floods

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ‘ಮೆಕುನು’ ಚಂಡಮಾರುತದ ಪರಿಣಾಮ ಮುಂದಿನ ಮೂರು ದಿನಗಳ ಕಾಲ ಕರಾವಳಿಯಲ್ಲಿ ಭಾರೀ ಗಾಳಿ, ಮಳೆ ಸಾಧ್ಯತೆಯಿದೆ. ಬಿರುಗಾಳಿ ಜತೆಗೆ ಮಿಂಚು, ಸಿಡಿಲು ಸಹಿತ ಭಾರೀ ಮಳೆ ಬೀಳುವ ಮುನ್ಸೂಚನೆ ಇದೆ. ಸಮುದ್ರದಲ್ಲೂ ಭಾರೀ ಅಲೆಗಳೇಳುವ ಸಾಧ್ಯತೆ ಇದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಈ ಬಗ್ಗೆ ಬಂದರು ಮತ್ತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಂಗಳೂರಲ್ಲಿ ಬಿಜೆಪಿ, ಕಾಂಗ್ರೆಸ್‌‌ ಕಚೇರಿಗೆ ಪೊಲೀಸ್ ಭದ್ರತೆ..!

Saturday, May 19th, 2018
manglore

ಮಂಗಳೂರು: ಚುನಾವಣೆ ಫಲಿತಾಂಶ ಹೊರಬಿದ್ದ ನಂತರ ರಾಜ್ಯದಲ್ಲಿ ಉಂಟಾಗಿರುವ ಅನಿಶ್ಚಿತತೆಯ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಮತ್ತು ಕಾಂಗ್ರೆಸ್‌‌‌ನ ಜಿಲ್ಲಾ ಪೊಲೀಸ್ ಕಚೇರಿಗಳಿಗೆ ಭದ್ರತೆ ನೀಡಲಾಗಿದೆ. ಮಂಗಳೂರಿನ ಕೊಡಿಯಾಲ್ ಬೈಲ್‌‌‌ನಲ್ಲಿರುವ ಬಿಜೆಪಿ ಕಚೇರಿ ಮುಂಭಾಗ ಒಂದು ಕೆಎಸ್‌ಆರ್‌‌ಪಿ ತುಕಡಿ ಕಾರ್ಯನಿರ್ವಹಿಸುತ್ತಿದ್ದರೆ, ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್‌‌ ಜಿಲ್ಲಾ ಕಚೇರಿಗೆ ನಗರ ಪೊಲೀಸರು ಭದ್ರತೆ ನೀಡಿದ್ದಾರೆ. ಇಂದು ವಿಶ್ವಾಸಮತ ಯಾಚನೆ ಇರುವ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಈ ಭದ್ರತೆಯನ್ನು ನಿಯೋಜಿಸಲಾಗಿದೆ ಎನ್ನಲಾಗುತ್ತಿದೆ.

ದಕ್ಷಿಣ ಕನ್ನಡದಲ್ಲಿ ಬಿಜೆಪಿಗೆ ಮುನ್ನಡೆ, ಕಾಂಗ್ರೆಸ್ ಗೆ ಭಾರೀ ಹಿನ್ನಡೆ

Tuesday, May 15th, 2018
janatha-party

ಮಂಗಳೂರು: ದಕ್ಷಿಣ ಕನ್ನಡದಲ್ಲಿ ಬಿಜೆಪಿ ಭಾರೀ ಮುನ್ನಡೆ ಕಾಯ್ದುಕೊಂಡಿದೆ. ಜಿಲ್ಲೆಯ 8 ಕ್ಷೇತ್ರಗಳಲ್ಲಿ 5ರಲ್ಲಿ ಬಿಜೆಪಿ ಅಭ್ಯರ್ಥಿಗಳು ಅಚ್ಚರಿಯ ರೀತಿಯಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಜಿದ್ದಾಜಿದ್ದಿನಿಂದ ಕೂಡಿದ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಸಂಜೀವ ಮಠಂದೂರು ಕಾಂಗ್ರೆಸಿನ ಶಕುಂತಳಾ ಶೆಟ್ಟಿ ವಿರುದ್ಧ 1,102 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಸುಳ್ಯ ಕ್ಷೇತ್ರದಲ್ಲಿ ಬಿಜೆಪಿಯ ಹಾಲಿ ಶಾಸಕ ಎಸ್. ಅಂಗಾರ ಕಾಂಗ್ರೆಸಿನ ರಘು ವಿರುದ್ಧ 2034 ಮತಗಳಿಂದ ಮುಂದಿದ್ದಾರೆ. ಮಂಗಳೂರು ಉತ್ತರ ಕ್ಷೇತ್ರದಲ್ಲಿ ಬಿಜೆಪಿಯ ಡಾ. ಭರತ್ ಶೆಟ್ಟಿ 2 ಸಾವಿರ […]