Blog Archive

ಕಟ್ಟಡ ನಿರ್ಮಾಣದ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವು: ಐವರು ಸಿಲುಕಿರುವ ಶಂಕೆ

Tuesday, April 24th, 2018
building

ಮಂಗಳೂರು: ಕಟ್ಟಡದ ನಿರ್ಮಾಣದ ವೇಳೆ ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವಿಗೀಡಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರಿನ ಅನಿತಾ ಅಯಿಲ್ ಮಿಲ್ಸ್‌ನ ಕಟ್ಟಡದಲ್ಲಿ ದುರ್ಘಟನೆ ನಡೆದಿದ್ದು, ಮಣ್ಣಿನಡಿ ಐವರು ಕಾರ್ಮಿಕರು ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ. ಇಬ್ಬರು ಕಾರ್ಮಿಕರ ರಕ್ಷಣೆ ಮಾಡಲಾಗಿದೆ. ಮೃತಪಟ್ಟ ಕಾರ್ಮಿಕ ಹಾಗೂ ಮಣ್ಣಿನಡಿ ಸಿಲುಕಿದ ಕಾರ್ಮಿಕರೆಲ್ಲರೂ ಉತ್ತರ ಕರ್ನಾಟಕ ಮೂಲದವರೆಂದು ತಿಳಿದು ಬಂದಿದೆ.

ದಕ್ಷಿಣ ಕನ್ನಡದ 8 ವಿಧಾನ ಸಭಾ ಕ್ಷೇತ್ರಗಳ ಪೈಕಿ 4 ಕ್ಷೇತ್ರಗಳಲ್ಲಿ ಬಂಟ ಸಮುದಾಯಕ್ಕೆ ಟಿಕೇಟು

Saturday, April 21st, 2018
Bjp 4 bunts

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಪಾಳಯದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಜಿಲ್ಲೆಯ ಎಲ್ಲಾ 8 ವಿಧಾನ ಸಭಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ಬಿಜೆಪಿ ಘೋಷಿಸಿದ್ದು 8 ಕ್ಷೇತ್ರಗಳ ಪೈಕಿ 4 ಕ್ಷೇತ್ರಗಳಲ್ಲಿ ಜಿಲ್ಲೆಯ ಪ್ರಭಾವಿ ಬಂಟ ಸಮುದಾಯಕ್ಕೆ ಬಿಜೆಪಿ ವರಿಷ್ಠರು ಟಿಕೆಟ್ ನೀಡಿರುವುದು ಅಸಮಾಧಾನಕ್ಕೆ ಕಾರಣವಾಗಿದ್ದು ಜಿಲ್ಲೆಯ ಕಮಲ ಪಾಳಯದಲ್ಲಿ ಬಂಡಾಯ ಸ್ಪೋಟಗೊಳ್ಳುವ ಪರಿಸ್ಥಿತಿ ಸೃಷ್ಠಿಯಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಹರೀಶ್ ಪೂಂಜಾ, ಬಂಟ್ವಾಳ ಕ್ಷೇತ್ರಕ್ಕೆ ರಾಜೇಶ್ ನಾಯ್ಕ್‌ ಉಳಿಪಾಡಿಗುತ್ತು, ಮಂಗಳೂರು ವಿಧಾನ ಸಬಾ […]

ದಕ್ಷಿಣ ಕನ್ನಡ ವಿಧಾನ ಸಭಾ ಚುನಾವಣೆಗೆ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Saturday, April 21st, 2018

ಸಂಭ್ರಮದಿಂದ ಮತ ಚಲಾಯಿಸಿ: ಶಶಿಕಾಂತ್‌ ಸೆಂಥಿಲ್‌

Wednesday, April 18th, 2018
police

ಬಂಟ್ವಾಳ: ಸಜ್ಜನರು ಮತ ಚಲಾಯಿಸಿದರೆ ಸಜ್ಜನರೇ ಜನಪ್ರತಿನಿಧಿಗಳಾಗಿ ಆಯ್ಕೆಯಾಗುತ್ತಾರೆ. ಚುನಾವಣೆಯನ್ನು ಹಬ್ಬವನ್ನು ಆಚರಿಸುವ ರೀತಿಯಲ್ಲಿ ಸಂಭ್ರಮದಿಂದ ಆಚರಿಸಿ ಮತ ಚಲಾಯಿಸಿರಿ ಎಂದು ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌ ಅವರು ಹೇಳಿದರು. ಅವರು ಎ. 16ರಂದು ರಾತ್ರಿ ಫರಂಗಿ ಪೇಟೆ ಸೇವಾಂಜಲಿ ಪ್ರತಿಷ್ಠಾನದ ಭವನ ದಲ್ಲಿ ನಡೆದ ಪುದು ಮತ್ತು ಮೇರ ಮಜಲು ಗ್ರಾಮದ ಬೀಟ್‌ ಸಭೆ, ಚುನಾವಣೆಯಲ್ಲಿ ನಾನೇಕೆ ಮತ ಚಲಾಯಿ ಸಬೇಕು ಕಾರ್ಯಕ್ರಮದಲ್ಲಿ ಬೀಟ್‌ ಸದಸ್ಯರು, ಜನರನ್ನು ಉದ್ದೇಶಿಸಿ ಮಾತನಾಡಿದರು. ಐದು ವರ್ಷಗಳಿಗೊಮ್ಮೆ ಜನರಿಗೆ ಬೇಕಾದವರನ್ನು ಆಯ್ಕೆ […]

ಕೈತಪ್ಪಿದ ಟಿಕೆಟ್: ಮೂಡಬಿದ್ರೆಯಲ್ಲಿ ಬಂಡಾಯ ಬಾವುಟ ಹಾರಿಸಿದ ಜಗದೀಶ್ ಅಧಿಕಾರಿ

Tuesday, April 17th, 2018
moodbidre

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಕ್ಷೇತ್ರದಲ್ಲಿ ಬಿಜೆಪಿ ಉಮಾನಾಥ್ ಕೋಟ್ಯಾನ್ ಅವರಿಗೆ ಟಿಕೆಟ್ ನೀಡಿರುವುದು ಬಿಜೆಪಿ ಪಾಳಯದಲ್ಲಿ ಭಿನ್ನಮತ ಸ್ಪೋಟಕ್ಕೆ ಕಾರಣವಾಗಿದೆ. ಮುಲ್ಕಿ ಮೂಡಬಿದ್ರೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಗದೀಶ್ ಅಧಿಕಾರಿ, ತಮ್ಮನ್ನು ಕಡೆಗಣಿಸಿ ಉಮಾನಾಥ್ ಕೋಟ್ಯಾನ್ ಅವರಿಗೆ ಟಿಕೆಟ್ ನೀಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಮೂಡಬಿದ್ರೆಯಲ್ಲಿ ಗೆಲ್ಲುವ ಕುದುರೆಯನ್ನು ನಿಲ್ಲಿಸಿಲ್ಲ. ಅದರ ಬದಲಿಗೆ ಸತ್ತ ಕತ್ತೆಯನ್ನು ‌ನಿಲ್ಲಿಸಲಾಗಿದೆ ಎಂದು ಅಕ್ರೋಶ ವ್ಯಕ್ತಪಡಿಸಿದ್ದಾರೆ. ಟಿಕೆಟ್ ಕೈತಪ್ಪಿರುವುದರಿಂದ ಸಿಟ್ಟಿಗೆದ್ದಿರುವ ಅವರು […]

ದಕ್ಷಿಣ ಕನ್ನಡದ 7 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಅಂತಿಮ ?

Friday, April 13th, 2018
election

ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಕಣ ರಂಗೇರುತ್ತಿದ್ದು, ವಿವಿಧ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಆಯ್ಕೆಯ ಕಸರತ್ತು ನಡೆಸುತ್ತಿವೆ. ಈ ನಡುವೆ ಬಿಜೆಪಿ ಈಗಾಗಲೇ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಬಿಜೆಪಿ ಭದ್ರಕೋಟೆಯಂತಿದ್ದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿ ಮಾರ್ಪಟ್ಟಿತ್ತು. ಮೊದಲ ಪಟ್ಟಿಯಲ್ಲಿ ದಕ್ಷಿಣಕನ್ನಡದ ಕೇವಲ ಒಂದು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಮಾತ್ರ ಘೋಷಿಸಿತ್ತು. ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಹಾಲಿ ಶಾಸಕ ಎಸ್. ಅಂಗಾರ ಮತ್ತೆ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರು. ಉಳಿದ 7 […]

ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಗುಡುಗು ಸಹಿತ ಉತ್ತಮ ಮಳೆ

Wednesday, April 4th, 2018
dakshina-kannada

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಮಂಗಳವಾರ ಸಂಜೆ ವೇಳೆಗೆ ಮಳೆ ಬಂದಿದ್ದು, ಬೆಳ್ತಂಗಡಿ ತಾಲೂಕಿನಲ್ಲಿ ಗುಡುಗು ಸಹಿತ ಉತ್ತಮ ಮಳೆ ಸುರಿದಿದೆ. ಬೆಳ್ತಂಗಡಿ, ಕನ್ಯಾಡಿ, ಉಜಿರೆ, ಮುಂಡಾಜೆಯಲ್ಲಿ ಸಿಡಿಲು, ಗಾಳಿ ಸಹಿತ ಮಳೆಯಾಗಿದೆ. ಭಾರೀ ಮಳೆಗೆ ಕನ್ಯಾಡಿಯಲ್ಲಿ ವಿದ್ಯುತ್‌ ಕಂಬದ ಮೇಲೆ ಮರ ಬಿದ್ದು, ಮರ ರಸ್ತೆಗೆ ಉರುಳಿರುವುದರಿಂದ ಸಂಚಾರ ಅಸ್ತವ್ಯಸ್ತಗೊಂಡಿದೆ. ಇದರಿಂದ ಉಜಿರೆ-ಧರ್ಮಸ್ಥಳ ರಸ್ತೆಯಲ್ಲಿ ಸ್ವಲ್ಪ ಕಾಲ ಬ್ಲಾಕ್‌ ಉಂಟಾಗಿದ್ದು, ಬಳಿಕ ಮರ ತೆರವುಗೊಳಿಸಲಾಯಿತು. ನೀರ ಚಿಲುಮೆ ಬಳಿಯೂ ರಸ್ತೆ ಮೇಲೆ ಅಡ್ಡಲಾಗಿ ಮರ […]

ಚುನಾವಣಾ ನೀತಿ ಸಂಹಿತೆ… ತಪಾಸಣಾ ಕಾರ್ಯ ಚುರುಕು

Friday, March 30th, 2018
election

ಮಂಗಳೂರು: ರಾಜ್ಯದಲ್ಲಿ ಚುನಾವಣಾ ದಿನ ಘೋಷಣೆಯಾಗಿ ನೀತಿ ಸಂಹಿತೆ ಜಾರಿಯಾಗಿದೆ. ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ತಪಾಸಣಾ ಕಾರ್ಯ ಚುರುಕುಗೊಳಿಸಲಾಗಿದೆ. ಪ್ರಮುಖ ರಸ್ತೆಗಳಲ್ಲಿ ತಪಾಸಣಾ ತಂಡಗಳು ಕಾರ್ಯನಿರ್ವಹಿಸುತ್ತಿವೆ. ಸಾರ್ವಜನಿಕ ಸ್ಥಳಗಳಲ್ಲಿರುವ ಫ್ಲೆಕ್ಸ್, ಕಟೌಟ್‌ಗಳನ್ನು ತೆರವುಗೊಳಿಸುವ ಕಾರ್ಯ ತೀವ್ರಗತಿಯಲ್ಲಿ ನಡೆಯುತ್ತಿದೆ. ಮಂಗಳೂರಿನ ತಲಪಾಡಿ ಮೂಲಕ ಕೇರಳ ರಾಜ್ಯಕ್ಕೆ ಸಂಪರ್ಕಿಸುವ ತಲಪಾಡಿ ಅಂತಾರಾಜ್ಯ ಗಡಿಯಲ್ಲಿ ಕೂಡಾ ತಪಾಸಣೆಯನ್ನು ತೀವ್ರಗೊಳಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾರರ ಸಂಖ್ಯೆ ಶೇ. 11 ಹೆಚ್ಚಳ

Tuesday, March 27th, 2018
sesikanth-senthil

ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಸಕ್ರಿಯಗೊಂಡಿದೆ. ಚುನಾವಣೆಯ ಪೂರ್ವ ತಯಾರಿಯ ಕುರಿತು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಈ ಕುರಿತು ವಿವರ ನೀಡಿದರು.ಜಿಲ್ಲೆಗೆ ಇವಿಎಂ ಯಂತ್ರಗಳು ಈಗಾಗಲೇ ಬಂದಿದ್ದು, ಪರಿಶೀಲನೆ ನಡೆಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 16,67,194 ಮತದಾರರಿದ್ದು, ಕಳೆದ ಸಾಲಿಗಿಂತ ಶೇ.11ರಷ್ಟು ಮತದಾರರು ಹೆಚ್ಚುವರಿಯಾಗಿ ಸೇರ್ಪಡೆಗೊಂಡಿದ್ದಾರೆ ಎಂದು ಹೇಳಿದರು. ಜಿಲ್ಲೆಯಲ್ಲಿ 8,21,123 ಪುರುಷ ಹಾಗೂ 8,46,030 ಮಹಿಳೆ ಮತದಾರರು ಜಿಲ್ಲೆಯಲ್ಲಿದ್ದಾರೆ. ಈ ಬಾರಿ ಚುನಾವಣೆಯಲ್ಲಿ 41 […]

ಕೇರಳ ಸಮುದ್ರದಲ್ಲಿ ಒತ್ತಡ: ಸಮುದ್ರಕ್ಕಿಳಿಯದಂತೆ ದ.ಕ. ಜಿಲ್ಲಾಡಳಿತ ಸೂಚನೆ

Monday, March 12th, 2018
dakshina-kannada

ಮಂಗಳೂರು: ಕನ್ಯಾಕುಮಾರಿಯಿಂದ ಕಲ್ಲಿಕೋಟೆಯವರೆಗಿನ ಕರಾವಳಿ ತೀರದಲ್ಲಿ ಸಮುದ್ರದಲ್ಲಿ ನಿಮ್ನ ಒತ್ತಡ ಉಂಟಾಗಿ ಸಮುದ್ರ ಅಲೆಗಳ ಎತ್ತರ ಏರಿಕೆಯಾಗುವ ಸಾಧ್ಯತೆ ಇದೆ ಎಂಬ ಸೂಚನೆ ದಕ್ಷಿಣ ಜಿಲ್ಲೆಯ ಮೀನುಗಾರರಿಗೆ ಮನ್ಸೂಚನೆ ನೀಡಲಾಗಿದೆ. ಪ್ರಸಕ್ತ ಈ ಸಮುದ್ರ ಒತ್ತಡ ದಕ್ಷಿಣ ಶ್ರೀಲಂಕಾದಿಂದ ವಾಯವ್ಯ ದಿಕ್ಕಿನತ್ತ ಚಲಿಸುತ್ತಿದೆ. ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಮುಂದಿನ 3 ದಿನಗಳಲ್ಲಿ ಕೇರಳ ಕರಾವಳಿ ತೀರದಲ್ಲಿ 2.5 ರಿಂದ 3.2 ಮೀಟರ್ ವರೆಗೆ ಸಮುದ್ರ ಅಲೆಗಳು ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ದಕ್ಷಿಣ ಕೇರಳದಲ್ಲಿ ಮುಂದಿನ […]