Blog Archive

ಮಾರ್ಚ್ ಮೊದಲ ವಾರದಲ್ಲಿ ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿರುವ ರಾಹುಲ್ ಗಾಂಧಿ

Thursday, February 15th, 2018
karavali

ಮಂಗಳೂರು : ನಾಲ್ಕು ದಿನಗಳ ಹೈದರಾಬಾದ್ ಕರ್ನಾಟಕ ಪ್ರವಾಸ ಮುಗಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು, ಎರಡನೇ ಹಂತದಲ್ಲಿ ಫೆ.24ರಿಂದ ಮೂರು ದಿನಗಳ ಮುಂಬೈ ಕರ್ನಾಟಕದಲ್ಲಿ ಸಂಚರಿಸಿದ ನಂತರ, ಮೂರನೇ ಹಂತದಲ್ಲಿ ಮಾರ್ಚ್ ನಲ್ಲಿ ಕರಾವಳಿಗೆ ಕಾಲಿಡಲಿದ್ದಾರೆ. ಮಾರ್ಚ್ ತಿಂಗಳ ಮೊದಲ ವಾರದಲ್ಲಿ ರಾಹುಲ್ ಗಾಂಧಿ ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ನಡೆಸಲಿದ್ದಾರೆ. 4 ದಿನಗಳ ಕಾಲ ಕರಾವಳಿಯ ಉಭಯ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿರುವ ರಾಹುಲ್ ಗಾಂಧಿ ಅಲ್ಲಲ್ಲಿ ರೋಡ್ ಶೋ, ಸಾರ್ವಜನಿಕರ ಸಭೆಗಳಲ್ಲಿ […]

ಕಟೀಲು ದುರ್ಗಾಪರಮೇಶ್ವರಿ ದೇವರ ಮೊರೆ ಹೋದ ರಮಾನಾಥ್ ರೈ

Wednesday, February 14th, 2018
kateelu

ಮಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ 2018 ಸಮೀಪಿಸುತ್ತಿರುವ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಯಕ್ಷಗಾನದ ಮೊರೆ ಹೋಗಿದ್ದಾರೆ. ತಮ್ಮ ಮನೆಯಲ್ಲಿ ಕಟೀಲು ಮೇಳದ ಶ್ರೀದೇವಿ ಮಹಾತ್ಮೆ ಯಕ್ಷಗಾನವನ್ನು ಅವರು ಆಯೋಜಿಸಿದ್ದಾರೆ. ಮುಂಬರುವ ಚುನಾವಣೆಯಲ್ಲಿ ತಮ್ಮ ಸಫಲತೆಗೆ ಪ್ರಾರ್ಥಿಸಿ ಅವರು ಕಟೀಲು ದುರ್ಗಾಪರಮೇಶ್ವರಿ ದೇವರ ಮೊರೆ ಹೋಗಿದ್ದಾರೆ. ಹಾಗೆ ನೋಡಿದರೆ ರಮಾನಾಥ ರೈ ಅವರ ಮನೆಯಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ ನಡೆಯುತ್ತಿರುವುದು ಇದೇ ಮೊದಲು ಎನ್ನಲಾಗಿದೆ. ಫೆ. 24 ರಂದು ರಮನಾಥ್ ರೈ […]

ಡಾ. ಎಸ್.ಡಿ. ಶೆಟ್ಟಿ ಅವರಿಗೆ ಮಹಾಕವಿ ರತ್ನಾಕರವರ್ಣಿ ಪ್ರಶಸ್ತಿ

Wednesday, January 31st, 2018
mahakavi

ಉಜಿರೆ: ಬೆಂಗಳೂರಿನಲ್ಲಿರುವ ದಕ್ಷಿಣ ಕನ್ನಡ ಜೈನ ಮೈತ್ರಿ ಕೂಟದ ವತಿಯಿಂದ ಉಜಿರೆಯಲ್ಲಿ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿರುವ ಡಾ. ಹಾ.ಮಾ.ನಾ. ಸಂಶೋಧನಾ ಕೇಂದ್ರದ ನಿರ್ದೇಶಕ ಡಾ. ಎಸ್.ಡಿ. ಶೆಟ್ಟಿ ಅವರಿಗೆ ಮಹಾಕವಿ ರತ್ನಾಕರವರ್ಣಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬೆಂಗಳೂರಿನಲ್ಲಿರುವ ಎಸ್.ಡಿ.ಎಂ. ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಕೊಳದಮಠದ ಶಾಂತವೀರ ಸ್ವಾಮೀಜಿ ಪ್ರಶಸ್ತಿ ಪ್ರದಾನ ಮಾಡಿದರು. ದಕ್ಷಿಣ ಕನ್ನಡ ಜೈನ ಮೈತ್ರಿ ಕೂಟದ ಅಧ್ಯಕ್ಷ ಡಿ. ಸುರೇಂದ್ರ ಕುಮಾರ್, ಕಾರ್ಯಾಧ್ಯಕ್ಷ ಕೆ.ಬಿ. ಯುವರಾಜ ಬಳ್ಳಾಲ್, ಅನಿತಾ ಸುರೇಂದ್ರ ಕುಮಾರ್ […]

ಬೀಡಿ ಉದ್ಯಮದ ಸ್ಥಿತಿಗತಿ ಕುರಿತು ಪ್ರಧಾನಿ ಗಮನ ಸೆಳೆಯುತ್ತೇನೆ: ನಳಿನ್‌‌

Wednesday, January 31st, 2018
nalin-kumar

ಮಂಗಳೂರು: ಜಿಲ್ಲೆಯ ಅಭಿವೃದ್ಧಿಗೆ ಬೀಡಿ ಕಾರ್ಮಿಕರು ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಜಿಲ್ಲೆಯ ಬೀಡಿ, ಗೇರು, ಹೆಂಚು ಉದ್ಯಮ ನಶಿಸಬಾರದು. ಇದರ ಪುನಶ್ಚೇತನಕ್ಕೆ ಎಲ್ಲರ ಸಹಕಾರ ಅಗತ್ಯ. ಬೀಡಿ ಉದ್ಯಮದ ಸ್ಥಿತಿಗತಿ ಮತ್ತದರ ಆವಶ್ಯಕತೆಯ ಬಗ್ಗೆ ಪ್ರಧಾನಿ ಸಹಿತ ಸಂಬಂಧಿತ ಸಚಿವರ ಗಮನ ಸೆಳೆಯುವುದಾಗಿ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್‌ ಹೇಳಿದರು. ಸೌತ್ ಕೆನರಾ ಉಡುಪಿ ಜಿಲ್ಲಾ ಬೀಡಿ ಗುತ್ತಿಗೆದಾರರ ಸಂಘದ ವತಿಯಿಂದ ನಗರದ ಪುರಭವನದಲ್ಲಿ ನಡೆದ ಬೀಡಿ ಕಾರ್ಮಿಕರ ಮತ್ತು ಗುತ್ತಿಗೆದಾರರ ಜಂಟಿ […]

ಕರ್ನಾಟಕ ಬಂದ್ : ದಕ್ಷಿಣ ಕನ್ನಡದಲ್ಲಿ ಬಂದ್‌ಗೆ ಬೆಂಬಲವಿಲ್ಲ

Thursday, January 25th, 2018
mangaluru

ಮಂಗಳೂರು: ಕನ್ನಡ ಒಕ್ಕೂಟ ಕರೆ ನೀಡಿರುವ ಜ.25ರ ಕರ್ನಾಟಕ ಬಂದ್‌ಗೆ ಮಂಗಳೂರಿನಲ್ಲಿ ಬೆಂಬಲ ಸಿಕ್ಕಿಲ್ಲ. ಮಂಗಳೂರಿನ ಸಾಮಾನ್ಯ ಜನರು ಬಂದ್ ಕರೆಗೆ ನೋ ಎಂದಿದ್ದಾರೆ.ಗುರುವಾರದ ಕರ್ನಾಟಕ ಬಂದ್‌ಗೆ ಮಂಗಳೂರಿನ ಯಾವೊಂದು ಸಂಘಟನೆ ಬೆಂಬಲ ಘೋಷಿಸಿಲ್ಲ. ಆದರೆ, ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ ಬಣದ ಮಂಗಳೂರು ಶಾಖೆಯ ಕಾರ್ಯಕರ್ತರು ರೈಲು ತಡೆದು ಸಾಂಕೇತಿಕ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ. ಬಂದ್ ಕರೆಗೆ ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಯಾವೊಂದು ಸಂಘಟನೆಗಳು ಬೆಂಬಲ ಕೊಟ್ಟಿಲ್ಲ. ಆದ್ದರಿಂದ, ಬಂದ್ ಬಿಸಿ […]

ಇದು ರಾಮ v/s ಅಲ್ಲಾಹು ನಡುವಿನ ಚುನಾವಣೆ; MLA ಸುನೀಲ್ ಹೇಳಿದ್ದೇನು?

Tuesday, January 23rd, 2018
sunil

ಬಂಟ್ವಾಳ: ಇದು ಅಲ್ಲಾಹು ಮತ್ತು ಶ್ರೀರಾಮನ ನಡುವಿನ ಚುನಾವಣೆ. ರಾಮನನ್ನು ಪ್ರೀತಿಸುವ ವ್ಯಕ್ತಿಯನ್ನು ಗೆಲ್ಲಿಸ್ತೀವಾ, ಅಲ್ಲಾನನ್ನು ಪ್ರೀತಿಸುವ ವ್ಯಕ್ತಿಯನ್ನು ಗೆಲ್ಲಿಸ್ತೀವಾ ಎಂಬುದು ತೀರ್ಮಾನವಾಗಬೇಕು…ಇದು ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರ ವಿವಾದಾತ್ಮಕ ಹೇಳಿಕೆ. ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ನಡೆದ ಬಿಜೆಪಿ ಪರಿವರ್ತನಾ ರಾಲಿಯಲ್ಲಿ ಮಾತನಾಡುತ್ತ ಈ ಹೇಳಿಕೆ ನೀಡಿರುವುದಾಗಿ ಖಾಸಗಿ ಮಾಧ್ಯಮಗಳು ವರದಿ ಮಾಡಿವೆ. ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ರಾಜೇಶ್ ನಾಯಕ್ ರಾಮನಂತೆ, ಕಾಂಗ್ರೆಸ್ ಅಭ್ಯರ್ಥಿ(ರಮಾನಾಥ್ ರೈ)ಅಲ್ಲಾಹು..ಹೀಗಾಗಿ ಕ್ಷೇತ್ರದ ಜನರು […]

ಪುತ್ತೂರಿನಲ್ಲಿ ಕಂಬಳ… ಕೋಣಗಳ ಕಾಲಿನಡಿ ಸಿಲುಕಿದ್ದ ಬಾಲಕ ಅಪಾಯದಿಂದ ಪಾರು

Tuesday, January 23rd, 2018
kambala

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಿನ್ನೆ ನಡೆದ ಕಂಬಳದಲ್ಲಿ ಕೋಣಗಳಿಂದ ತುಳಿಯಲ್ಪಟ್ಟ ಬಾಲಕ ಕೂದಳೆಲೆಯ ಅಂತರದಲ್ಲಿ ಪಾರಾದ ಘಟನೆ ನಡೆಯಿತು. ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪರೈ ನೇತೃತ್ವದಲ್ಲಿ 25 ನೇ ವರ್ಷದ ಅದ್ಧೂರಿ ಕಂಬಳ ನಡೆದಿತ್ತು. ಕಂಬಳ ಗದ್ದೆಯಿಂದ ಫಿನಿಶಿಂಗ್ ಪಾಯಿಂಟ್‌ಗೆ ಕೋಣಗಳು ಓಡಿಕೊಂಡು ಬಂದಾಗ ಕಂಬಳ ನೋಡುತ್ತಿದ್ದ ಬಾಲಕನೋರ್ವ ಕೋಣದ ಕಾಲಿನಡಿಗೆ ಬಿದ್ದಿದ್ದ. ಆದರೆ ಯಾವುದೇ ಗಾಯವಾಗದೇ ಪವಾಡ ಸದೃಶವಾಗಿ ಬಾಲಕ ಪಾರಾಗಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ […]

ದಕ್ಷಿಣ ಕನ್ನಡ ಎಸ್‌ಪಿ ವರ್ಗಾವಣೆ : ಪೂಜಾರಿ ವಾಗ್ದಾಳಿ!

Tuesday, January 23rd, 2018
sudheer-kumar

ಮಂಗಳೂರು:’ದಕ್ಷಿಣ ಕನ್ನಡದ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಪದೇ-ಪದೇ ವರ್ಗಾವಣೆ ಮಾಡುವುದು ಸರಿಯಲ್ಲ. ವರ್ಗಾವಣೆ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಇದ್ದರೆ ಅದರ ಪರಿಣಾಮವನ್ನು ಅವರು ಅನುಭವಿಸುತ್ತಾರೆ’ ಎಂದು ಜನಾರ್ದನ ಪೂಜಾರಿ ಹೇಳಿದರು. ಸೋಮವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ‘ತಪ್ಪು ನಿರ್ಧಾರಗಳ ಬಗ್ಗೆ ಮುಖ್ಯಮಂತ್ರಿ, ಸಚಿವರನ್ನು ಹೇಳುವವರು, ಕೇಳುವವರು ಇಲ್ಲವೇ ? ಎಂದು ಪ್ರಶ್ನಿಸಿದರು’. ‘ದಕ್ಷಿಣ ಕನ್ನಡದ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ಅವರ ವರ್ಗಾವಣೆ ಹಿಂದೆ ಮುಖ್ಯಮಂತ್ರಿಗಳ ಕೈವಾಡವಿದ್ದರೆ ಅದನ್ನು ನಾನು ಖಂಡಿಸುತ್ತೇನೆ. ಜಿಲ್ಲಾ […]

ದಕ್ಷಿಣ ಕನ್ನಡ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ವರ್ಗಾವಣೆ

Monday, January 22nd, 2018
sudheer-kumar

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಎಸ್ಪಿಯಾಗಿ ಡಾ.ರವಿಕಾಂತೇ ಗೌಡ ಅವರನ್ನು ನೇಮಕ ಮಾಡಲಾಗಿದೆ. ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಡಾ. ರವಿಕಾಂತೇ ಗೌಡ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ದಕ್ಷಿಣ ಕನ್ನಡ ಎಸ್ಪಿಯಾಗಿ ನೇಮಿಸಲಾಗಿದೆ. ಸುಧೀರ್ ಕುಮಾರ್ ರೆಡ್ಡಿ ಅವರನ್ನು ಬೆಳಗಾವಿಗೆ ವರ್ಗಾವಣೆ ಮಾಡಲಾಗಿದೆ. 23 ಕೇಸಿನಲ್ಲಿದ್ದ ರೌಡಿ ಇಲ್ಯಾಸ್ ಕೊಲೆಯಾಗಿದ್ದು ಹೇಗೆ? ಬಂಟ್ವಾಳದ ಕಲ್ಲಡ್ಕದಲ್ಲಿ ಚೂರಿ ಇರಿತ ಪ್ರಕರಣ ನಡೆದ ಸಂದರ್ಭದಲ್ಲಿ ಆಗಿನ […]

ಕಾಂಗ್ರೆಸ್‌ v/s ಬಿಜೆಪಿ ನೇರ ಹಣಾಹಣಿ

Wednesday, January 17th, 2018
j-r-lobo

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣಾ ಕಣ ರಂಗೇರುತ್ತಿದೆ. ವಿಧಾನಸಭೆ ಚುನಾವಣೆಯಲ್ಲಿ ಕುತೂಹಲ ಕೆರೆಳಿಸಿರುವ ಕ್ಷೇತ್ರ ಮಂಗಳೂರು ದಕ್ಷಿಣ. ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ಇಲ್ಲಿ ನೇರಾನೇರ ಸ್ಪರ್ಧೆ. ಕ್ಷೇತ್ರದ ಹಾಲಿ ಶಾಸಕರು ಕಾಂಗ್ರೆಸ್‌ನ ಜೆ.ಆರ್.ಲೋಬೋ. ವಿಧಾನಪರಿಷತ್ ಸದಸ್ಯ ಐವಾನ್ ಡಿಸೋಜಾ ಅವರು ಕ್ಷೇತ್ರದ ಟಿಕೆಟ್‌ಗೆ ಪ್ರಯತ್ನ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತರು ಅವರಾದರೂ ಜೆ.ಆರ್.ಲೋಬೋಗೆ ಟಿಕೆಟ್ ನಿರಾಕರಿಸಲು ಕಾರಣಗಳು ಇಲ್ಲ. ಬಿಜೆಪಿ ಕ್ಷೇತ್ರದಿಂದ ಯುವ ಅಭ್ಯರ್ಥಿಯನ್ನು ಕಣಕ್ಕಿಳಿಸಲು ನಿರ್ಧರಿಸಿದೆ ಎಂಬುದು ಸದ್ಯದ ಸುದ್ದಿ. ಉದ್ಯಮಿಗಳಾದ […]