ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ತಳ್ಳಿ ಹಾಕಿದ ಯುವ ಕಾಂಗ್ರೆಸ್ ಕಾರ್ಯಕರ್ತರು

Tuesday, January 18th, 2022
Ramanatha Rai

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ  ಮಾಜಿ ಸಚಿವ ಬಿ.ರಮಾನಾಥ ರೈ ಹಾಗು ಯುವ ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದು, ರೈ ಅವರನ್ನು ತಳ್ಳುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಘಟನೆ ಮಂಗಳವಾರ ನಡೆಯಿತು. ಗಣರಾಜ್ಯೋತ್ಸವ ಪರೇಡ್‌ನಲ್ಲಿ ನಾರಾಯಣ ಗುರುಗಳ ಟ್ಯಾಬ್ಲೋ ಪ್ರದರ್ಶನಕ್ಕೆ ಕೇಂದ್ರ ಸರ್ಕಾರ ಅವಕಾಶ ನಿರಾಕರಿಸಿರುವುದನ್ನು ವಿರೋಧಿಸಿ ಯುವ ಕಾಂಗ್ರೆಸ್ ಕಾಲ್ನಡಿಗೆ ಜಾಥಾ ಹಮ್ಮಿಕೊಂಡಿತ್ತು. ಏಕಾಏಕಿ ನಿರ್ಧಾರ ಕೈಗೊಂಡು ಜಾಥಾ ನಡೆಸಿದ ವಿಚಾರದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಅಸಮಾಧಾನ ವ್ಯಕ್ತಪಡಿಸಿದರು. ಆಗ ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ […]

ದ.ಕ ಜಿಲ್ಲಾ ಕಾಂಗ್ರೆಸ್ ಸ ಮಿತಿಯ ಹಿಂದುಳಿದ ವರ್ಗಗಳ ನೂತನ ಅಧ್ಯಕ್ಷರಾಗಿ ವಿಶ್ವಾಸ್ ಕುಮಾರ್ ದಾಸ್ ಪದಗ್ರಹಣ

Monday, August 2nd, 2021
Vishwas Kumara Das

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸ ಮಿತಿಯ ಹಿಂದುಳಿದ ವರ್ಗಗಳ ನೂತನ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್ ಅವರ ಪದಗ್ರಹಣ ಕಾರ್ಯಕ್ರಮ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಆಗಸ್ಟ್ 1, ರವಿವಾರ ನಡೆಯಿತು. ಕಾಂಗ್ರೆಸ್ ರಾಜ್ಯ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉದ್ಘಾಟನೆ ಬಳಿಕ ಮಾತನಾಡಿದ ಅವರು ಸಂವಿಧಾನ ಉಳಿಸುವ ಹೋರಾಟ ಗಟ್ಟಿಯಾದಲ್ಲಿ ಮಾತ್ರ ಹಿಂದುಳಿದ ವರ್ಗಗಳು, ದಲಿತರು, ಆದಿವಾಸಿಗಳು, ಅಲ್ಪಸಂಖ್ಯಾತರೆಲ್ಲಗೂ ದೇಶದಲ್ಲಿ ಅವಕಾಶಗಳು ದೊರೆಯಲು ಸಾಧ್ಯ. ಅಧಿಕಾರ ಬರುತ್ತೆ, […]

ನಗರದ ನೆಹರೂ ಮೈದಾನದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ

Wednesday, March 13th, 2013
congress convention

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಮಾರ್ಚ್ 18 ರಂದು ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದ್ದು ಕೇಂದ್ರ ಸರ್ಕಾರದ ಪೆಟ್ರೋಲಿಯಂ ಖಾತೆ ಸಚಿವ ವೀರಪ್ಪ ಮೊಯಿಲಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಸ್ಕರ್ ಫೆರ್ನಾಂಡಿಸ್, ಮಾಜಿ ಸಂಸದ ವಿನಯ್ ಕುಮಾರ್ ಸೊರಕೆ ಹಾಗೂ ಇತರ ರಾಜ್ಯ ಮತ್ತು ಜಿಲ್ಲಾ ನಾಯಕರು ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂಬುದಾಗಿ ಕಾಂಗ್ರೆಸ್ ಮುಖಂಡ ಮಾಜಿ ಕೇಂದ್ರ ಸಚಿವ ಬಿ.ಜನಾರ್ಧನ ಪೂಜಾರಿ  ತಿಳಿಸಿದರು. ಅವರು […]

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ `ಮುಸ್ಲಿಂ’ ನಾಯಕ?

Wednesday, January 30th, 2013

ಮಂಗಳೂರು : ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿಯ ಸೂಚನೆಯಂತೆ ಮುಂದಿನ ವಿಧಾನ ಸಭ ಚುನಾವಣೆ ಸಂದರ್ಭ ಅನುಸರಿಸಬೇಕಾದ ಮಾರ್ಗಸೂತ್ರದ ಅನ್ವಯ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯಲ್ಲಿ ಒಂದಷ್ಟು ಬದಲಾವಣೆಯ ಗಾಳಿ ಬೀಸತೊಡಗಿದೆ. `ಒಬ್ಬ ವ್ಯಕ್ತಿಗೆ ಒಂದು ಹುದ್ದೆ’ ಸೂತ್ರವನ್ನು ಅನುಸರಿಸಿ ಎಂದು ಹೈಕಮಾಂಡ್ ಸ್ಪಷ್ಟ ಸೂಚನೆ ಹೊರಡಿಸಿದರೆ, ಬಂಟ್ವಾಳ ಶಾಸಕರೂ ಆಗಿರುವ ರಮಾನಾಥ ರೈ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಲು ನಿರ್ಧರಿಸಿದ್ದಾರೆ. ಹಾಗಾಗಿ ಸಹಜವಾಗಿ ಅಧ್ಯಕ್ಷ ಸ್ಥಾನಕ್ಕೆ ಹೊಸಬರ […]