ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಜುಲೈ 16ರಂದು ಶಾಲೆ- ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Monday, July 15th, 2024
Red Alert

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜುಲೈ 16ರಂದು ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆ ಕೂಡ ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ. ನಾಳೆ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಆದೇಶ ನೀಡಿದ್ದಾರೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 6ರಂದು ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ

Saturday, July 6th, 2024
school-haoliday

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ , ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು.6ರಂದು ರಜೆ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂನೆಯಂತೆ ರೆಡ್ ಆಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮುನ್ನಚ್ಚರಿಕಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಸಾರಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ. […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಎರಡು ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆ

Sunday, May 17th, 2020
mangaluru-corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಮತ್ತೆ ಇಬ್ಬರಿಗೆ ಕೊರೊನಾ ದೃಢಪಟ್ಟಿದೆ. ಶನಿವಾರ ಜಿಲ್ಲೆಯಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 50 ಕ್ಕೆ ಏರಿತ್ತು. ಇದೀಗ ಮಹಾರಾಷ್ಟ್ರದಿಂದ ಬಂದ 35 ವರ್ಷದ ಓರ್ವ ಮಹಿಳೆಯಲ್ಲಿ ಕೊರೊನಾ ಪಾಸಿಟಿವ್‌ ಆಗಿದ್ದು ಜೊತೆಗೆ ಜಪ್ಪಿನಮೊಗರುವಿನ  31 ವರ್ಷದ ಪುರುಷನಿಗೂ ಕೊರೊನಾ ದೃಢಪಟ್ಟಿದೆ.  ಇದು ಹೊಸ ಪ್ರಕರಣವಾಗಿದ್ದು ಅದರ ಮೂಲ ಪತ್ತೆಹಚ್ಚಲಾಗುತ್ತಿದೆ ಎಂದು ಅರೋಗ್ಯ ಅಧಿಕಾರಿಗಳು ಹೇಳಿದ್ದಾರೆ. ಜಪ್ಪಿನಮೊಗರು ನಿವಾಸಿ 31 ವರ್ಷದ ಪುರುಷ P1094 ಕೊರೊನಾ ಶಂಕೆಯಿಂದಾಗಿ ಆಸ್ಪತ್ರೆಗೆ ಬಂದು ಸ್ವಯಂ ಆಗಿ ಪರೀಕ್ಷೆ ಮಾಡಿಸಿಕೊಂಡಿದ್ದು ವರದಿಯಲ್ಲಿ […]