Blog Archive

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಾ. 31ರ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ

Monday, March 23rd, 2020
SindhuB Roopesh

ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಾ. 22ರ ರಾತ್ರಿ 9 ಗಂಟೆಯಿಂದ ಮಾ. 31ರ ಮಧ್ಯರಾತ್ರಿ 12 ಗಂಟೆಯವರೆಗೆ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರನ್ವಯ ನಿಷೇಧಾಜ್ಞೆ ವಿಧಿಸಿ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ ಆದೇಶಿಸಿದ್ದಾರೆ. ಕೋವಿಡ್‌- 19 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ನಿಷೇಧಾಜ್ಞೆ ವೇಳೆ ಸಾರ್ವಜನಿಕರು ತುರ್ತು ಮತ್ತು ಆವಶ್ಯಕ ಕಾರ್ಯಗಳನ್ನು ಹೊರತುಪಡಿಸಿ ಇನ್ನಾವುದೇ ಕಾರಣಗಳಿಗೆ ಮನೆಗಳಿಂದ ಹೊರಬರುವುದನ್ನು ಕಡ್ಡಾಯ ವಾಗಿ ನಿರ್ಬಂಧಿಸಲಾಗಿದೆ. ಸಾರ್ವಜನಿಕರು ತಮ್ಮ […]

ಕೋವಿಡ್-19 ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಕಾರಿ ಸೇವೆಗಳು ಬಂದ್

Friday, March 20th, 2020
dc office Mangalore

ಮಂಗಳೂರು: ಕೋವಿಡ್-19 ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ಸರಕಾರಿ ಸೇವೆಗಳನ್ನು ಮಾ. 31ರ ವರೆಗೆ ಸ್ಥಗಿತಗೊಳಿಸಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ ಆದೇಶಿಸಿದ್ದಾರೆ. ಸಾರ್ವಜನಿಕರು ಸರಕಾರದ ವಿವಿಧ ಸೇವೆಗಳನ್ನು ಪಡೆಯುವ ಉದ್ದೇಶದಿಂದ ಹೆಚ್ಚಿನ ಸಂಖ್ಯೆ ಯಲ್ಲಿ ಜಿಲ್ಲೆ, ತಾಲೂಕು, ಹೋಬಳಿ ಮಟ್ಟದ ಕಚೇರಿಗಳಿಗೆ ಭೇಟಿ ನೀಡುವುದರಿಂದ ಜನದಟ್ಟಣೆ ಉಂಟಾಗುತ್ತಿದ್ದು, ಇದು ವೈರಾಣು ಹರಡಲು ಅನುಕೂಲ ವಾತಾವರಣ ಮಾಡಿಕೊಟ್ಟಂತಾಗು ತ್ತದೆ. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಗುರುವಾರ ಹೊರಡಿಸಿರುವ ಆದೇಶ ದಲ್ಲಿ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆ.7ರಿಂದ ಎರಡು ದಿನ ರೆಡ್ ಅಲರ್ಟ್

Tuesday, August 6th, 2019
house-collapse

ಮಂಗಳೂರು:  ಆ.7ರಿಂದ ಎರಡು ದಿನ ದ.ಕ. ಜಿಲ್ಲೆಯಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಿಸಿ ರುವುದಾಗಿ ದ.ಕ ಜಿಲ್ಲಾಧಿ ಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ. ಭಾರಿ ಮಳೆ ಆಗುವ ಸಾಧ್ಯತೆ ಇದ್ದು, ಸೋಮವಾರ ರಾತ್ರಿ ಸುರಿದ ಮಳೆಗೆ ಅಲ್ಲಲ್ಲಿ ಗುಡ್ಡಕುಸಿತ, ರಸ್ತೆಗೆ ಮರ ಬಿದ್ದಿದ್ದು, ಕಡಲ್ಕೊರೆತವು ಕಾಣಿಸಿಕೊಂಡಿದೆ ಎಂದು ಅವರು ತಿಳಿಸಿದರು. ನೆರೆ ಪೀಡಿತ ಪ್ರದೇಶಗಳ ಜನರು ಎಚ್ಚರಿಕೆಯಿಂದ ಇರಬೇಕು. ನೆರೆ ಹಾವಳಿ ಆಗುವ ಸಂದರ್ಭದಲ್ಲಿ ಅಧಿಕಾರಿಗಳ ಸೂಚನೆ ಪಾಲಿಸಿ ಎಂದು ಜಿಲ್ಲಾಧಿಕಾರಿ ಮಾಹಿತಿ […]

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಜಿಲ್ಲೆಗೆ ಮುಸ್ಲಿಂ ಆಭ್ಯರ್ಥಿ

Friday, November 2nd, 2018
Muslims Candidate

ಮಂಗಳೂರು : ಲೋಕಸಭಾ ಚುನಾವಣೆಗೆ ದಿನ ಸಮೀಪಿಸುತ್ತಿದ್ದಂತೆ ನಾನಾ ರಾಜಕೀಯ ಬದಲಾವಣೆಗಳು ನಡೆಯುತ್ತಿದ್ದು ಕಾಂಗ್ರೆಸ್ಸ್ ಅಭ್ಯರ್ಥಿಗಳ ಅಂತಿಮ ಸುತ್ತಿನ ಪಟ್ಟಿಯಲ್ಲಿ ನಾಲ್ವರು ಮುಸ್ಲಿಂ ಅಭ್ಯರ್ಥಿಗಳ ಹೆಸರನ್ನು ಸೂಚಿಸಲಾಗಿದ್ದು ಅದರಲ್ಲಿ ಯಾರ ಹೆಸರು ಅಂತಿಮಗೊಳ್ಳುತ್ತದೆ ಎಂಬ ಕುತೂಹಲ ಕಾಂಗ್ರೆಸ್ಸ್ ಕಾರ್ಯಕರ್ತರಲ್ಲಿ ಹೆಚ್ಚ ತೊಡಗಿದೆ. ಜಿ,ಎ ಬಾವ ನಿವೃತ್ತ ಪೊಲೀಸ್ ಅಧಿಕಾರಿ ಹಾಗೂ ಕೆಪಿಸಿಸಿ ಕಾರ‍್ಯದರ್ಶಿ, ಕೆ.ಎಸ್.ಅಮೀರ್ ಅಹಮ್ಮದ್ ತುಂಬೆ ಕಾಂಗ್ರೆಸ್ ಕಾರ್ಮಿಕ ವಿಭಾಗದ ಸಕ್ರೀಯ ಕಾರ್ಯಕರ್ತ, ವಕ್ಫ್ ಬೋರ್ಡಿನ ಅಧ್ಯಕ್ಷ ಕಣಚೂರು ಮೋನು ಹಾಗೂ ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಎಂಎಲ್‌ಎ […]

ದಕ್ಷಿಣ ಕನ್ನಡದಲ್ಲಿ ಅತಿವೃಷ್ಟಿ ನಷ್ಟ ಸಮೀಕ್ಷೆ ನಡೆಸಿದ ಕೇಂದ್ರ ತಂಡ

Friday, September 14th, 2018
mangaluru-2

ಮಂಗಳೂರು: ರಾಜ್ಯದ ಅತಿವೃಷ್ಟಿ ಪೀಡಿತ ಪ್ರದೇಶಗಳ ಹಾನಿಯ ಪರಿಶೀಲಿಸಿ ವರದಿ ನೀಡಲು ಕೇಂದ್ರ ಸರಕಾರದ ಹಿರಿಯ ಅಧಿಕಾರಿಗಳ ತಂಡ ಗುರುವಾರ ದಕ್ಷಿಣ ಜಿಲ್ಲೆಯ ಮಳೆ ಬಾಧಿತ ಪ್ರದೇಶಗಳಿಗೆ ಭೇಟಿ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ ತಾಲೂಕಿನಲ್ಲಿ ಅತಿವೃಷ್ಠಿಯಿಂದ ಹಾನಿಗೀಡಾದ ಪ್ರದೇಶಗಳಿಗೆ ತಂಡ ಭೇಟಿ ನೀಡಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ನೇತೃತ್ವದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ತಂಡಕ್ಕೆ ಮಾಹಿತಿ ನೀಡಿದರು. ಮೊದಲಿಗೆ ತಂಡವು ಮಂಗಳೂರು ನಗರಕ್ಕೆ ಕುಡಿಯುವ […]

ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳ ಆಭ್ಯರ್ಥಿಗಳ ಮತಗಳಿಕೆ ವಿವಿರ

Wednesday, May 16th, 2018
election

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳ ಆಭ್ಯರ್ಥಿಗಳ ಕ್ಷೇತ್ರವಾರು ವಿವರ ಹಾಗೂ, ಯಾರು ಎಲ್ಲಿ ಎಷ್ಟು ಮತಗಳ ಅಂತರದಲ್ಲಿ ಜಯಗಳಿಸಿದ್ದಾರೆ, ಸೋತಿದ್ದಾರೆ ಎನ್ನುವ ಲೆಕ್ಕಾಚಾರದ ಪಟ್ಟಿ 200 ಬೆಳ್ತಂಗಡಿ ಕ್ಷೇತ್ರ 1) ಕೆ. ವಸಂತ ಬಂಗೇರ(ಕಾಂಗ್ರೆಸ್) -75443 2) ಸುಮತಿ ಎಸ್. ಹೆಗ್ಡೆ(ಜೆ.ಡಿ.ಎಸ್)-1612 3) ಹರೀಶ್ ಪೂಂಜಾ (ಬಿ.ಜೆ.ಪಿ) -98417 4) ವೆಂಕಟೇಶ್ ಬೆಂಡೆ (ಪಕ್ಷೇತರ)-654 5) ಜಗನ್ನಾಥ(ಎಂಇಪಿ) -1806 6) ಸೈಯದ್ ಹಸನ್(ಪಕ್ಷೇತರ) -373 7) ನೋಟಾ – 1245 201 […]

ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲೆಯ ಎಂಟು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ

Monday, April 16th, 2018
Abhaya

ಮಂಗಳೂರು : ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳ ಹಿಂದಿನ ಚುನಾವಣೆಯಲ್ಲಿ ಗೆದ್ದ ಹಾಗೂ ಸೋತ ಅಭ್ಯರ್ಥಿಗಳನ್ನು ಸೇರಿಸಿ ಮತ್ತೆ ಕಣಕ್ಕಿಳಿಸಿದೆ. ಮಂಗಳೂರು ಉತ್ತರ ದಕ್ಷಿಣ ಕೇತ್ರದಿಂದ ಶಾಸಕರದ ಜೆ.ಆರ್.ಲೋಬೊ, ಉತ್ತರ ಕ್ಷೇತ್ರದಿಂದ ಬಿ.ಎ.ಮೊಯ್ದಿನ್ ಬಾವ, ಮಂಗಳೂರು ಕ್ಷೇತ್ರದಿಂದ ಸಚಿವ ಯು.ಟಿ.ಖಾದರ್, ಮೂಡುಬಿದ್ರೆ ಕ್ಷೇತ್ರದಿಂದ ಅಭಯ ಚಂದ್ರ ಜೈನ್, ಬಂಟ್ವಾಳ ಕ್ಷೇತ್ರದಿಂದ ಸಚಿವ ರಮಾನಾಥ ರೈ, ಬೆಳ್ತಂಗಡಿ ಕ್ಷೇತ್ರದಿಂದ ವಸಂತ ಬಂಗೇರ ಹಾಗೂ ಪುತ್ತೂರು ಕ್ಷೇತ್ರದಿಂದ ಶಕುಂತಳಾ ಶೆಟ್ಟಿ ಹಾಗೂ ಸುಳ್ಯ ಕ್ಷೇತ್ರದಿಂದ […]

ನೆಲ್ಲಿತೀರ್ಥ ಗುಹಾ ದೇವಾಲಯ… ಆಸ್ತಿಕರು ಭೇಟಿ ಕೊಡಲೇಬೇಕಾದ ಸ್ಥಳ

Tuesday, January 2nd, 2018
Nellithirtha

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವೈಶಿಷ್ಟ್ಯಪೂರ್ಣ ದೇವಾಲಯಗಳಲ್ಲಿ ಬಡಗ ಎಕ್ಕಾರು ಗ್ರಾಮದ ‘ನೆಲ್ಲಿತೀರ್ಥ’ ಸೋಮನಾಥೇಶ್ವರ ಗುಹಾ ದೇವಾಲಯವೂ ಒಂದು. ಭಕ್ತರ ಪಾಲಿಗೆ ಅತ್ಯಂತ ಕಾರ್ಣಿಕದ ದೇವಾಲಯವಾಗಿರುವ ಇಲ್ಲಿ ವರ್ಷದ ಆರು ತಿಂಗಳ ಕಾಲ ಮಾತ್ರವೇ ಶಿವನಿಗೆ ಪೂಜೆ ಸಲ್ಲುತ್ತದೆ. ಉಳಿದ ಆರು ತಿಂಗಳು ದೇವತೆಗಳು, ಮುನಿಗಳು ಶಿವನ ಆರಾಧನೆಯಲ್ಲಿ ತೊಡಗಿರುತ್ತಾರೆ ಎಂಬುದು ಪ್ರತೀತಿ. ಜನರ ಪ್ರಕಾರ ನೆಲ್ಲಿತೀರ್ಥ ದೇವಾಲಯವು ಅಸ್ತಿತ್ವಕ್ಕೆ ಬಂದಿದ್ದು ಕ್ರಿ.ಶ. 1487ರಲ್ಲಿ. ಅದಕ್ಕಿಂತಲೂ ಅದೆಷ್ಟೋ ವರ್ಷಗಳ ಹಿಂದೆಯೇ ಈ ಗುಹಾಲಯವಿತ್ತೆನ್ನುತ್ತವೆ ಪುರಾಣಗಳು. ಮಂಗಳೂರು ತಾಲೂಕಿನಿಂದ […]

ಮಂಗಳೂರಿಗರಿಗೆ ಸಂತಸದ ಸುದ್ದಿ, ಉಳ್ಳಾಲದಲ್ಲಿ ಸ್ಕೂಬಾ ಡೈವಿಂಗ್ ಆರಂಭ

Monday, January 1st, 2018
scuba-driving

ಮಂಗಳೂರು: ಸಮುದ್ರದ ಆಳಕ್ಕಿಳಿದು ಅಲ್ಲಿಯ ಪ್ರಾಕೃತಿ ವಿಸ್ಮಯಗಳನ್ನು ಕಣ್ತುಂಬಿಕೊಳ್ಳುವ ಕನಸು ಕಾಣುವ ಮಂಗಳೂರಿಗರಿಗೆ ಸಂತಸದ ಸುದ್ದಿ ಇಲ್ಲಿದೆ. ಇನ್ಮುದೆ ಸ್ಕೂಬಾ ಡೈವಿಂಗ್ ನ ರೋಮಾಂಚಕ ಅನುಭವ ಪಡೆಯಲು ಉತ್ತರ ಕನ್ನಡ ಜಿಲ್ಲೆಯ ನೆತ್ರಾಣಿ ಅಥವಾ ಉಡುಪಿಯ ಕಾಪುಗೆ ಹೋಗಬೇಕಾಗಿಲ್ಲ. ಸ್ಕೂಬಾ ಡೈವಿಂಗ್ ನ ಸಹಾಸಿ ಅನುಭವ ಮಂಗಳೂರಿನಲ್ಲಿಯೂ ದೊರೆಯಲಿದೆ. ಹೌದು..ಸ್ಕೂಬಾ ಡೈವಿಂಗ್ ಮೂಲಕ ಕಡಲಾಳದ ಬೆರಗುಗಳಿಗೆ ಸಾಕ್ಷಿಯಾಗುವ ಸಾಹಸ ಜಲಕ್ರೀಡೆ ಮಂಗಳೂರು ಹೊರವಲಯದ ಉಳ್ಳಾಲ ಕಡಲತೀರದಲ್ಲಿ ಆರಂಭಗೊಳ್ಳಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಜಿಲ್ಲಾಡಳಿತ ಸ್ಕೂಬಾ […]

ಕೊಳವೆ ಬಾವಿ ನಿಷೇಧ ಹಿಂಪಡೆಯಲು ಸರ್ಕಾರಕ್ಕೆ ಪತ್ರ ಬರೆದ ಜಿಲ್ಲಾಧಿಕಾರಿ

Thursday, January 19th, 2017
dc-borewell

ಮಂಗಳೂರು:  ಕೊಳವೆ ಬಾವಿ ಕೊರೆಯಲು ಇರುವ ನಿಷೇಧ  ಹಿಂಪಡೆಯಬೇಕು ಎಂದು ವಿನಂತಿಸಿ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ಜಿ.ಜಗದೀಶ್ ತಿಳಿಸಿದ್ದಾರೆ. ಸರ್ಕಾರಕ್ಕೆ ಪತ್ರ ಬರೆದಿರುವ ವಿಷಯವನ್ನು ಬಹಿರಂಗಪಡಿಸಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರ ಇಲ್ಲ. ಈ ಭಾಗದಲ್ಲಿ ಕೃಷಿಗಾಗಿ ಯಾವುದೇ ನೀರಾವರಿ ಯೋಜನೆಗಳಿಲ್ಲ. ಅದೇ ರೀತಿ ಕೆಲವೊಂದು ಭಾಗಗಳಿಗೆ ಕೊಳವೆ ಮೂಲಕ ನೀರು ಒದಗಿಸುವ ಯೋಜನೆಗಳೂ ಇಲ್ಲ. ಆದುದರಿಂದ ದಕ್ಷಿಣ ಕನ್ನಡದಲ್ಲಿ ಕೊಳವೆ ಬಾವಿಗಳನ್ನು ಕೊರೆಯಲು ಅವಕಾಶ ಕಲ್ಪಿಸಬೇಕು ಎಂಬ ಆಗ್ರಹಗಳು ಬಂದಿದ್ದವು ಎಂದು ಅವರು […]