ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ
Wednesday, August 10th, 2016ಮಂಗಳೂರು: ನರಭಕ್ಷಕರಾಗಿ, ಗೋಮುಖ ವ್ಯಾಘ್ರರಂತೆ ದಲಿತರ ಚರ್ಮ ಸುಲಿಯುತ್ತಿರುವ ಸಂಘ ಪರಿವಾರಕ್ಕೆ ದಲಿತರ ಮೇಲೆ ಹಲ್ಲೆ ಮಾಡಲು ಅಧಿಕಾರ ಕೊಟ್ಟವರು ಯಾರು ಎಂದು ಕಾಂಗ್ರೆಸ್ ಹಿರಿಯ ಮುಖಂಡೆ ಮೋಟಮ್ಮ ಪ್ರಶ್ನಿಸಿದ್ದಾರೆ. ದೇಶಾದ್ಯಂತ ನಡೆಯುತ್ತಿರುವ ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ನಗರದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಪ್ರಶ್ನಿಸಿದ ಮೋಟಮ್ಮ, ಧರ್ಮ, ಜಾತಿ, ಭಾಷೆ ಎಲ್ಲವನ್ನೂ ಬದಿಗಿಟ್ಟು ಎಲ್ಲರನ್ನೂ ಸಮನಾಗಿ ರಕ್ಷಿಸುವ ಕಾರ್ಯವನ್ನು ಕೇಂದ್ರ ಸರ್ಕಾರ ಮರೆತಿದೆ. ದಲಿತರ ಮೇಲಿನ ದೌರ್ಜನ್ಯದ ಪ್ರಕರಣಗಳು ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಹೆಚ್ಚಿದೆ. […]