ಲೋಕ್ ಜನಶಕ್ತಿ ಪಾರ್ಟಿ(ಎಲ್‌ಜೆಪಿ) ಸಂಸ್ಥಾಪಕ, ದಲಿತ ನಾಯಕ ರಾಮ್ ವಿಲಾಸ್ ಪಾಸ್ವಾನ್ ನಿಧನ

Friday, October 9th, 2020
Ramvilas Paswan

ನವದೆಹಲಿ: ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ವಿಧಿವಶರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಅವರಿಗೆ ಬುಧವಾರ  ಹೃದಯ ಶಸ್ತ್ರಚಿಕಿತ್ಸೆ ನಡೆದಿತ್ತು. ಕೆಲ ವಾರಗಳ ಹಿಂದೆ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದ್ದು ಇತ್ತೀಚೆಗಷ್ಟೇ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಆದರೆ ಇದೀಗ ಅವರು ಮೃತಪಟ್ಟಿದ್ದಾರೆ ಎಂದು ಪಾಸ್ವಾನ್ ಪುತ್ರ ಚಿರಾಗ್ ಮಾಹಿತಿ ನೀಡಿದ್ದಾರೆ. ಲೋಕ್ ಜನಶಕ್ತಿ ಪಾರ್ಟಿ(ಎಲ್‌ಜೆಪಿ) ಸಂಸ್ಥಾಪಕ, ದಲಿತ ನಾಯಕ ರಾಮ್ ವಿಲಾಸ್ ಪಾಸ್ವಾನ್ ಅವರು 5 ದಶಕಗಳಿಂದ ರಾಜಕೀಯದಲ್ಲಿ ಸಕ್ರೀಯರಾಗಿದ್ದರು. ಎನ್ ಡಿಎ ಮೈತ್ರಿಕೂಟದಲ್ಲಿದ್ದ ಎಲ್ ಜೆಪಿ ಪಕ್ಷದಿಂದ ಪಾಸ್ವಾನ್ […]