ದಸರಾ ಹೆಸರಲ್ಲಿ ಜನರ ತೆರಿಗೆ ಹಣ ಲೂಟಿ – ಸುನೀಲ್‌ ಕುಮಾರ್ ಬಜಾಲ್

Tuesday, October 12th, 2021
Dasara Protest

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯು ದಸರಾ ಹಬ್ಬಕ್ಕೆ ದಾರಿ ದೀಪಾಲಂಕಾರಕ್ಕಾಗಿ 38 ಲಕ್ಷ ಹಣವನ್ನು ಪೋಲು ಮಾಡುತ್ತಿರುವ ಹಿಂದೆ ಬಿಜೆಪಿ ಪಕ್ಷದ ವೋಟ್ ಬ್ಯಾಂಕ್ ರಾಜಕಾರಣವು ಅಡಗಿದೆ ಮಾತ್ರವಲ್ಲ ಇದು ಜನತೆಯ ತೆರಿಗೆಯ ಹಣವನ್ನು ದಸರಾ ಹೆಸರಲ್ಲಿ ಲೂಟಿ ಮಾಡಲು ಹೊರಟಿದೆ ಎಂದು ಸಿಪಿಐಎಂ ಪಕ್ಷದ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ಇಂದು ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಮುಂಭಾಗದಲ್ಲಿ ಸಮಾನ ಮನಸ್ಕ ಸಂಘಟನೆ, ಪಕ್ಷಗಳ ಒಕ್ಕೂಟದ ಆಶ್ರಯದಲ್ಲಿ ನಡೆದ ಪ್ರತಿಭಟನೆಯನ್ನು […]

ದಸರಾ ಉದ್ಘಾಟನೆಗೆ ಎಸ್. ಎಂ. ಕೃಷ್ಣ ಅವರಿಗೆ ಆಹ್ವಾನ

Tuesday, September 28th, 2021
SM Krishana

ಬೆಂಗಳೂರು  : ಈ ಬಾರಿ ಮೈಸೂರು ದಸರಾ ಉದ್ಘಾಟಕರನ್ನಾಗಿ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರನ್ನು ಆಹ್ವಾನಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಮಾಧ್ಯಮದವರಿಗೆ ಈ ವಿಷಯ ತಿಳಿಸಿದ ಮುಖ್ಯಮಂತ್ರಿಯವರು, ದಸರಾ ದಿನದಂದು ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ದಸರಾ ಉದ್ಘಾಟನೆ ಮಾಡಲು ಹಿರಿಯ ಮುತ್ಸದ್ದಿ ಎಸ್.ಎಂ. ಕೃಷ್ಣ ಅವರನ್ನು ಆಹ್ವಾನಿಸಲಾಗುವುದು. ಅವರು ಮುಖ್ಯಮಂತ್ರಿಯಾಗಿ ಹಾಗೂ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ, ನಾಡಿನ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಆಹ್ವಾನಿಸಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು […]

ದೇವಿಯರ ಹಬ್ಬ “ನವರಾತ್ರಿ – ದಸರಾ”

Saturday, October 24th, 2020
Nava durge

ಹಬ್ಬಗಳ ತವರೂರಾದ ಭಾರತ ದೇಶದಲ್ಲಿ ನವರಾತ್ರಿ ಅಥವಾ `ದಸರಾ’ ಹಬ್ಬಕ್ಕೆ ತನ್ನದೇ ಆದ ಮಹತ್ವ, ಪೌರಾಣಿಕ ಹಿನ್ನೆಲೆ ಇದೆ. ಭಾರತಾದ್ಯಂತ `ದಸರಾ’ ಹಬ್ಬವನ್ನು ತುಂಬಾ ಉತ್ಸಾಹದಿಂದ ವಿಜೃಂಭಣೆಯಿಂದ ಆಚರಿಸುತ್ತಾರೆ. ಪಶ್ಚಿಮ ಬಂಗಾಳದಲ್ಲಿ 9 ದಿನಗಳಲ್ಲಿ ದುರ್ಗಾದೇವಿಯ ವಿಶಾಲವಾದ ಸುಂದರ ಮೂರ್ತಿಗಳನ್ನು ದೊಡ್ಡ ಪ್ರಮಾಣದಲ್ಲಿ, ಅಲಂಕೃತ ಮಂಟಪಗಳಲ್ಲಿ ಕೂರಿಸಿ ಪೂಜಿಸಲಾಗುತ್ತದೆ. ವಿಜಯದಶಮಿಯ ದಿನ ಭವ್ಯ ಮೆರವಣಿಗೆಯ ಮೂಲಕ ವಿಸರ್ಜಿಸಲಾಗುತ್ತದೆ. ಇದು ಬಂಗಾಳಿಯವರಿಗೆ ನಾಡಹಬ್ಬವಾಗಿದೆ, ಪಂಜಾಬ್ನಲ್ಲಿ ಭಕ್ತರು 7 ದಿನಗಳ ಕಾಲ ಉಪವಾಸ ಮಾಡಿದ ನಂತರ ಎಂಟನೇ ದಿನ ಪುಟ್ಟ್ […]

ದಸರಾ ಸ್ವಾಗತಿಸಲು ಮೈಸೂರು ನಗರಕ್ಕೆ ದೀಪಾಲಂಕಾರ!

Sunday, October 18th, 2020
Mysuru Dasara

ಮೈಸೂರು: ಮೈಸೂರು ಅರಮನೆಯಲ್ಲಿ ಈ ಬಾರಿ ದಸರಾ ಸರಳವಾಗಿ ಸಾಂಪ್ರದಾಯಿಕವಾಗಿ ನಡೆಯುತ್ತಿದ್ದು, ಇದುವರೆಗೆ ಕಾಣುತ್ತಿದ್ದ ಸಂಭ್ರಮವೂ ಇಲ್ಲದಾಗಿದೆ. ಆದರೆ ದಸರಾ ನಡೆಯುತ್ತಿದೆ ಎಂಬುದನ್ನು ನಗರಕ್ಕೆ ಮಾಡಿರುವ ದೀಪಾಲಂಕಾರಗಳು ಮಾತ್ರ ಹೇಳುತ್ತಿವೆ. ಮೈಸೂರಿಗೂ ದೀಪಾಲಂಕಾರಕ್ಕೂ ಬಿಡಿಸಲಾರದ ನಂಟಿದೆ. ಮೈಸೂರಿಗೆ ವಿದ್ಯುದ್ದೀಪಗಳು ಬರುವ ಮೊದಲು ನಗರದ ಪ್ರಮುಖ ಬೀದಿಗಳಲ್ಲಿ ಹಾಗೂ ವ್ಯಾಪಾರ ವಹಿವಾಟು ನಡೆಸುತ್ತಿದ್ದ ಸ್ಥಳಗಳಲ್ಲಿ ಹರಳೆಣ್ಣೆ ಮತ್ತು ಸೀಮೆ ಎಣ್ಣೆಯ ಬುಡ್ಡಿದೀಪಗಳನ್ನು ಹಚ್ಚಲಾಗುತ್ತಿತ್ತು. ಬೀದಿಯಲ್ಲಿರುವ ಮರ ಅಥವಾ ಕಲ್ಲಿನ ಕಂಬಗಳಲ್ಲಿ ಇಡಲಾಗುತಿದ್ದ ದೀಪಕ್ಕೆ ಅದರ ಉಸ್ತುವಾರಿಗೆ ನೇಮಿಸಿದ್ದ ನೌಕರ […]

ಮೈಸೂರು ದಸರಾ ಉತ್ಸವಕ್ಕೆ ಚಾಲನೆ ನೀಡಿದ ಇನ್ಫೋಸಿಸ್ ಅಧ್ಯಕ್ಷೆ ಸುಧಾಮೂರ್ತಿ

Thursday, October 11th, 2018
kumarswamy

ಮೈಸೂರು: ಕರ್ನಾಟಕ ಸರ್ಕಾರ ಭೂಮಿ ನೀಡಿದರೆ ಇನ್ಫೋಸಿಸ್ ವತಿಯಿಂದ ಕೊಡಗು ಜಿಲ್ಲೆಯ ಪ್ರವಾಹ ಪೀಡಿತರಿಗೆ ವಸತಿ ಕಲ್ಪಿಸಿಕೊಡಲಾಗುವುದು ಎಂದು ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ತಿಳಿಸಿದ್ದಾರೆ. ಅವರು ಇಂದು ಬೆಳಗ್ಗೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದೇವಿ ಚಾಮುಂಡಿಗೆ ಪುಷ್ಪಾರ್ಚನೆ ಸಲ್ಲಿಸಿ 9 ದಿನಗಳ ನವರಾತ್ರಿ ಹಾಗೂ 10ನೇ ದಿನ ವಿಜಯದಶಮಿಯ ನಾಡಹಬ್ಬಕ್ಕೆ ಅಧಿಕೃತ ಚಾಲನೆ ನೀಡಿ ಮಾತನಾಡಿದರು. ಸರ್ಕಾರ ಮಾಡುವ ಯಾವುದೇ ಕೆಲಸದಲ್ಲಿ ನಾವು ಕೈಜೋಡಿಸುವುದು ನಮ್ಮ ಕೆಲಸವಾಗಿದೆ, ನಮಗೆ ಸಮಾಜದಿಂದ ಸಿಕ್ಕಿದ ಹಣ ಮತ್ತೆ ಸಮಾಜಕ್ಕೆ […]

ಮಾಣಿಲ ಶ್ರೀ ಮಹಾಲಕ್ಷ್ಮೀ ಧಾಮದಲ್ಲಿ ದಸರಾ ಪ್ರಯುಕ್ತ ಕೊಪ್ಪರಿಗೆ ಮುಹೂರ್ತ

Tuesday, October 9th, 2018
Manila Dasara

ವಿಟ್ಲ : ಮಾಣಿಲ ಶ್ರೀ ಮಹಾಲಕ್ಷ್ಮೀ ಧಾಮದಲ್ಲಿ ಅಕ್ಟೋಬರ್ 9ರಿಂದ ಅಕ್ಟೋಬರ್ 21ರ ವರೆಗೆ ನಡೆಯಲಿರುವ ಶರನ್ನವರಾತ್ರಿ ಮಹೋತ್ಸವದ ಕೊಪ್ಪರಿಗೆ ಮುಹೂರ್ತ ಸಮಾರಂಭ ಅಕ್ಟೋಬರ್ 9 ರಂದು ಬೆಳಿಗ್ಗೆ ಶ್ರೀ ಕ್ಷೇತ್ರದಲ್ಲಿ ನಡೆಯಿತು. ಈ ಸಂದರ್ಭ ಟ್ರಸ್ಟಿಗಳಾದ ರಮೇಶ್ ಪಣೋಳಿ ಬೈಲು, ಚಂದ್ರಶೇಖರ್ ತುಂಬೆ, ಆಶೋಕ್ ರೈ ಅರ್ಪೀನಿ ಗುತ್ತು, ಮಂಜು ವಿಟ್ಲ, ಜಯರಾಜ್ ಪ್ರಕಾಶ್, ರಾಧಾಕೃಷ್ಣ ಚೆಲ್ಲಡ್ಕ, ಶ್ರೀ ಧಾಮ ಮಿತ್ರ ವೃಂದ ಮತ್ತು ಶ್ರೀ ಧಾಮ ಮಹಿಳಾ ಸೇವಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ಶ್ರೀ […]

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ: ಜನಾರ್ದನ ಪೂಜಾರಿ ದೋಷ ಮುಕ್ತಿ

Saturday, October 6th, 2018
poojary

ಮಂಗಳೂರು: ಚುನಾವಣೆಯ ವೇಳೆ ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಅವರ ಮೇಲೆ ಇದ್ದ ಪ್ರಕರಣ ಖುಲಾಸೆಯಾಗಿದ್ದು, ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಿಂದ ಜನಾರ್ದನ ಪೂಜಾರಿ ನಿರಾಳರಾಗಿದ್ದಾರೆ. ಈ ಬಗ್ಗೆ ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾದ ಬಗ್ಗೆ ಮಾಹಿತಿ ನೀಡಲು ಕರೆಯಲಾದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಸಮ್ಮುಖದಲ್ಲಿ ವಕೀಲ ಪದ್ಮರಾಜ್ ಅವರು ಈ ಮಾಹಿತಿ ನೀಡಿದರು. ನೀರಿನ ದರ ಏರಿಕೆ ಸಂಬಂಧಿಸಿದಂತೆ ಚುನಾವಣಾ […]

ಶಾಲಾ ಮಕ್ಕಳಿಗೆ ಈ ಬಾರಿಯ ದಸರಾ ರಜೆಯಲ್ಲಿ ಯಾವುದೇ ಕಡಿತ ಮಾಡುವುದಿಲ್ಲ: ಯು.ಟಿ.ಖಾದರ್

Thursday, September 27th, 2018
U-T-Khader

ಮಂಗಳೂರು: ಶಾಲಾ ಮಕ್ಕಳಿಗೆ ಈ ಬಾರಿಯ ದಸರಾ ರಜೆಯಲ್ಲಿ ಯಾವುದೇ ಕಡಿತ ಮಾಡುವುದಿಲ್ಲ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಸರಾ ರಜೆ ಕಡಿತ ಮಾಡದಂತೆ ಜಿಲ್ಲಾಧಿಕಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಡಿಡಿಪಿಐ ಜೊತೆಗೆ ಮಾತನಾಡಿದ್ದೇನೆ. ಶಾಲಾ ಮಕ್ಕಳಿಗೆ ದಸರಾ ರಜೆ ಕಡಿಮೆ ಮಾಡದಂತೆ ಸೂಚಿಸಲಾಗಿದೆ ಎಂದರು. ಇದೇ ವೇಳೆ ಮೂಲರಪಟ್ಣ ಸೇತುವೆ‌ ಕುಸಿದಿರುವುದರಿಂದ ಹೊಸ ಸೇತುವೆ ನಿರ್ಮಿಸಲು 50 ಕೋಟಿ ಬಿಡುಗಡೆ ಮಾಡಲಾಗಿದೆ. ಗುರುಪುರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ […]

ದಸರಾ ರಜೆ ಕಡಿತಗೊಳಿಸಿರುವುದಕ್ಕೆ ಬಜರಂಗದಳ ವಿರೋಧ

Tuesday, September 25th, 2018
bajarangdal

ಮಂಗಳೂರು: ನಮ್ಮ ಜಿಲ್ಲೆಯಲ್ಲಿ ದಸರಾ ಸಮಯದಲ್ಲಿ ಮಕ್ಕಳಿಗೆ ರಜೆ ನೀಡುವುದು ಹಿಂದಿನ ಕಾಲದಿಂದ ನಡೆದುಬಂದ ಪದ್ದತಿಯಾಗಿದ್ದು, ಮಳೆಗಾಲದ ಪ್ರಕೃತಿ ವಿಕೋಪಕ್ಕೆ ನೀಡಿದ ರಜೆಯನ್ನು ಈ ರಜೆಯಲ್ಲಿ ಕಡಿತಗೊಳಿಸಲು ಸರಕಾರ ಹೊರಡಿಸಿರುವ ಸುತ್ತೋಲೆಯನ್ನು ನಾವು ಖಂಡಿಸುವ ಮೂಲಕ ಅಕ್ಟೋಬರ್ 7 ರಿಂದ 21 ರ ವರಗೆ ನಿಗದಿಗೊಳಿಸಿದ ರಜೆಯನ್ನು ನೀಡಬೇಕೆಂದು ವಿಶ್ವಹಿಂದೂ ಪರಿಷದ್ ಬಜರಂಗದಳ ಆಗ್ರಹಿಸಿದೆ ನವರಾತ್ರಿಗೆ ನೀಡುವ ರಜೆಯನ್ನು ಯಾವುದೇ ಕಾರಣಕ್ಕೂ ಕಡಿತಗೊಳಿಸಬಾರದೆಂದು ಮಾನ್ಯ ಜಿಲ್ಲಾಧಿಕಾರಿಯವರಿಗೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಶಿಕ್ಷಣಾಧಿಕಾರಿಯವರಿಗೆ ಮನವಿ ನೀಡಿತು ಮಕ್ಕಳ […]