ಭಾರತವನ್ನು ಒಗ್ಗೂಡಿಸುವಲ್ಲಿ ಸಂವಿಧಾನ ಮಹತ್ವದ ಪಾತ್ರ ವಹಿಸಿದೆ : ಸಿಎಂ ಬಸವರಾಜ ಬೊಮ್ಮಾಯಿ

Friday, November 26th, 2021
Constitution Day

ದಾವಣಗೆರೆ : ಭಾರತವನ್ನು ಒಗ್ಗೂಡಿಸುವಲ್ಲಿ ಸಂವಿಧಾನ ಮಹತ್ವದ ಪಾತ್ರ ವಹಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಸಂವಿಧಾನ ದಿನದ ಅಂಗವಾಗಿ ದಾವಣಗೆರೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾರತ ಸಂವಿಧಾನದ ಪ್ರಸ್ತಾವನೆಯನ್ನು ಓದಿದ ನಂತರ ಮಾತನಾಡಿದರು. ಈ ದಿನ ಸಂವಿಧಾನ ವನ್ನು ಅಂಗೀಕರಿಸಿದ ಮಹತ್ವದ ದಿನ. ಭಾರತದ ಸಂವಿಧಾನ ಇಶ್ವದ ಅತ್ಯಂತ ಶ್ರೇಷ್ಠ ಸಂವಿಧಾನ. ಅಭಿವ್ಯಕ್ತಿ ಸ್ವಾತಂತ್ರ್ಯ, ವಾಕ್ ಸ್ವಾತಂತ್ರ್ಯ, ಸಾಮಾಜಿ, ಆರ್ಥಿಕ, ಧಾರ್ಮಿಕ ಚಟುವಟಿಕೆಗಳಿಗೆ ಸ್ವಾತಂತ್ರ್ಯ ಜೊತೆಗೆ ಸಮಾನತೆ, ಭ್ರಾತೃತ್ವ, ಪರಸ್ಪರ ಪ್ರೀತಿ ವಿಶ್ವಾಸ, […]

ಕ್ರೀಡಾ ಪಟುಗಳಿಗೆ ಪ್ರೋತ್ಸಾಹ ಸಿಕ್ಕರೆ ಮತ್ತಷ್ಟು ಸಾಧನೆ ಸಾಧ್ಯ: ಸಚಿವ ಆರ್ ಅಶೋಕ

Sunday, September 19th, 2021
Davanagere-tennis-court

ದಾವಣಗೆರೆ : ದಾವಣಗೆರೆಯಲ್ಲಿ ಸಿದ್ಧಗೊಂಡಿರುವ ಟೆನಿಸ್ ಕೋರ್ಟ್ ಗಳನ್ನು ಕಂದಾಯ ಸಚಿವ ಆರ್ ಅಶೋಕ್ ಪರಿಶೀಲನೆ ನಡೆಸಿದರು. ಡಿಸ್ಟ್ರಿಕ್ಟ್ ಟೆನಿಸ್ ಅಸೋಸಿಯೇಷನ್ ದಾವಣಗೆರೆ ಜಿಲ್ಲೆ ಇವರ ವತಿಯಿಂದ ಜನವರಿ 2022 ರಲ್ಲಿ ನಡೆಯಲಿರುವ ITTF ಪಂದ್ಯಾವಳಿಯನ್ನು ಆಯೋಜಿಸುವ ಕುರಿತು ಮನವಿ ಸ್ವೀಕರಿಸಿ, ಸಚಿವರು ಮಾತನಾಡಿದರು. “ನಮ್ಮ ದೇಶ ಎಲ್ಲಾ ಕ್ರೀಡೆಗಳಲ್ಲೂ ಸಾಧನೆ ಮಾಡಬೇಕು. ಅಂತಹ ಕ್ರೀಡಾ ಪಟುಗಳು ನಮ್ಮಲ್ಲಿ ಸಿದ್ಧರಾಗಬೇಕು. ಆ ನಿಟ್ಟಿನಲ್ಲಿ ಕ್ರೀಡೆ ಮತ್ತು ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಬೇಕಾಗುತ್ತದೆ. ಈ ಉದ್ದೇಶಕ್ಕೆ ಮಕ್ಕಳು, ಯುವಕರು ಹಾಗೂ […]

ಪುತ್ತೂರಿನ ಜೋಸ್ ಆಲುಕ್ಕಾಸ್ ಮಳಿಗೆಯಿಂದ ಚಿನ್ನ ಕಳವು, ಮೂವರು ಮಹಿಳೆಯರ ಬಂಧನ

Tuesday, September 14th, 2021
jos Alukas

ಪುತ್ತೂರು :  ಪುತ್ತೂರಿನ ಜೋಸ್ ಆಲುಕ್ಕಾಸ್ ಮಳಿಗೆಗೆ ಸೆ.1ರಂದು ಬಂದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಸೋಮವಾರ ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ಜಿಲ್ಲೆ ನಿವಾಸಿಗಳಾದ ಬೀಬಿಜಾನ್, ಹುಸೇನ್ ಬಿ, ಜೈತುಂಬಿ ಬಂಧಿತ ಆರೋಪಿಗಳು. ಚಿನ್ನಾಭರಣ ಖರೀದಿಸುವ ಗ್ರಾಹಕರ ಸೋಗಿನಲ್ಲಿ ಇವರು ಸೆ.1ರಂದು ಜೋಸ್ ಆಲುಕ್ಕಾಸ್‌ಗೆ ಬಂದು ಚಿನ್ನವನ್ನು ಖರೀದಿಸಿದ್ದರು. ಇದೇ ಸಂದರ್ಭದಲ್ಲಿ 2,60,400 ರೂ. ಮೌಲ್ಯದ ಕಿವಿಯ ಚಿನ್ನಾಭರಣವನ್ನು ವಂಚಿಸಿ ಕಳವು ಮಾಡಿಕೊಂಡು ಹೋಗಿದ್ದರು. ಅಲ್ಲದೆ […]

ದಾವಣಗೆರೆಯಲ್ಲಿ ಹೊಸ ಸರ್ಕಾರಿ ಆಸ್ಪತ್ರೆ ನಿರ್ಮಾಣ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

Sunday, July 11th, 2021
Davanagere Hospital

ದಾವಣಗೆರೆ :  ದಾವಣಗೆರೆಯಲ್ಲಿ ಹೊಸ ಸರ್ಕಾರಿ ಆಸ್ಪತ್ರೆ ನಿರ್ಮಾಣ ಮಾಡಬೇಕೆಂಬ ಉದ್ದೇಶವಿದ್ದು, ಇದಕ್ಕಾಗಿ ಪರಿಶೀಲನೆ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ದಾವಣಗೆರೆ ಜಿಲ್ಲಾ ಪ್ರವಾಸದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ನಿರ್ಮಾಣ ಮಾಡಬೇಕೆಂಬ ಉದ್ದೇಶವಿದೆ. ಈ ಬಗ್ಗೆ ಸ್ಥಳ ಪರಿಶೀಲನೆ ನಡೆಸಿದ್ದೇನೆ. ಪಿಪಿಪಿ ಮಾದರಿಯಲ್ಲಿ ಆಸ್ಪತ್ರೆ ನಿರ್ಮಿಸುವ ಬಗ್ಗೆ ಚರ್ಚೆಯಾಗಿದೆ. 9 ಜಿಲ್ಲೆಗಳಲ್ಲಿ ಪಿಪಿಪಿ ಮಾದರಿಯಲ್ಲಿ ಮೆಡಿಕಲ್ ಕಾಲೇಜು ನಿರ್ಮಿಸುವ ಉದ್ದೇಶವಿದೆ. ರಾಜ್ಯದಲ್ಲಿ 18 […]

ಗಂಭೀರ ಗಾಯಗೊಂಡಿದ್ದ ಛಾಯಾಗ್ರಾಹಕ ಆಸ್ಪತ್ರೆಯಲ್ಲಿ ಸಾವು

Tuesday, July 6th, 2021
Ashok Shetty

ಕುಂದಾಪುರ : ದಾವಣಗೆರೆಯಲ್ಲಿ ಕಂಟೈನರ್ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕುಂದಾಪುರದ ಛಾಯಾಗ್ರಾಹಕ ಗಂಭೀರ ಗಾಯಗೊಂಡಿದ್ದು, ಇಂದು ಬೆಳ್ಳಗ್ಗೆ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಗಂಭೀರಗೊಂಡು ಮೃತಪಟ್ಟವರನ್ನು ಕುಂದಾಪುರದ ಹಿರಿಯ ಛಾಯಾಚಿತ್ರಗಾರ, ಕುಂದಾಪುರ ತಾಲೂಕು ಛಾಯಾಗ್ರಾಹಕರ ಸಂಘ ಹಾಗೂ ರಾಜ್ಯ ಛಾಯಾಗ್ರಾಹಕರ ಸಂಘಟನೆಯ ಮಾಜೀ ಅಧ್ಯಕ್ಷ, ಹಾಲೀ ಸಂಚಾಲಕ ಹೇರೂರು ಅಶೋಕ ಕುಮಾರ್ ಶೆಟ್ಟಿ(58) ಎಂದು ಗುರುತಿಸಲಾಗಿದೆ. ನಾವುಂದದಲ್ಲಿ ಮಾನಸ ಸ್ಟುಡಿಯೋ ಮಾಲಕರಾಗಿರುವ ಅಶೋಕ್ ಕುಮಾರ್ ಶೆಟ್ಟಿ ಮದುವೆ ಕಾರ್ಯಕ್ರಮವೊಂದರ ಚಿತ್ರೀಕರಣಕ್ಕಾಗಿ ಮಗ ಪನ್ನಗ ಹಾಗೂ ಕುಮಾರ್ ಎಂಬುವರ […]

ದಾವಣಗೆರೆ ಮಹಾನಗರ ಪಾಲಿಕೆ ಸದಸ್ಯರ ಖಾತೆಗೆ ಭರ್ಜರಿ ಹಣ, ತಿಂಗಳ ಸಂಬಳ 6 ಲಕ್ಷ ರೂ. !

Saturday, June 5th, 2021
Davanagere

ದಾವಣಗೆರೆ : ಇಲ್ಲಿನ ಮಹಾನಗರ ಪಾಲಿಕೆ ಸದಸ್ಯರ ಖಾತೆಗೆ ಭರ್ಜರಿ ಹಣ ಬಿದ್ದಿದೆ ಅದು  ಆರು ಲಕ್ಷ ರೂ. ಹೀಗೆ ಒಟ್ಟು 50 ಸದಸ್ಯರಿಗೆ ತಲಾ ಆರು ಲಕ್ಷದಂತೆ ಮೂರು ಕೋಟಿ ಹಣವನ್ನು ಪಾಲಿಕೆ ಅಧಿಕಾರಿಗಳು ಹಾಕಿದ್ದಾರೆ. ಮಹಾನಗರ ಪಾಲಿಕೆಯ ಹಣಕಾಸು ವಿಭಾಗದ ಅಧಿಕಾರಿಗಳು ಆರು ಸಾವಿರ ರೂಪಾಯಿ ಹಾಕುವ ಬದಲಿಗೆ ಆರು ಲಕ್ಷ ರೂ. ಹಾಕಿ ಎಡವಟ್ಟು ಮಾಡಿದ್ದಾರೆ. ಪ್ರತಿ ತಿಂಗಳ ಪಾಲಿಕೆ ಸದಸ್ಯರಿಗೆ ಆರು ಸಾವಿರ ರೂಪಾಯಿ ಸಹಾಯ ಧನವನ್ನು ಸರ್ಕಾರದಿಂದ ನೀಡಲಾಗುತ್ತದೆ. ಆದರೆ ಹಣಕಾಸು ವಿಭಾಗದ ಅಧಿಕಾರಿಗಳು ಆರು […]

ಕೋವಿಡ್‌ ಕೇರ್ ಸೆಂಟರ್‌ನಲ್ಲಿ ದಾಖಲಾಗಿದ್ದ ಇಬ್ಬರು ಯುವತಿಯರು ಪರಾರಿ

Thursday, May 20th, 2021
Corona Girls

ದಾವಣಗೆರೆ:  ಕೋವಿಡ್‌ ಕೇರ್ ಸೆಂಟರ್‌ ನಲ್ಲಿ ದಾಖಲಾಗಿದ್ದ ಕೊರೋನಾ ಸೋಂಕಿತ ಇಬ್ಬರು ಯುವತಿಯರು ಪರಾರಿಯಾಗಿದ್ದಾರೆ. ಕೋವಿಡ್ ಸೋಂಕು ಪತ್ತೆಯಾಗಿ ದಾವಣಗೆರೆ ಜೆ.ಎಚ್‌. ಪಟೇಲ್‌ ಬಡಾವಣೆಯ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಇವರನ್ನು ಇರಿಸಲಾಗಿತ್ತು. ರಾತ್ರಿ ವಾಚ್‌ಮನ್‌ ಊಟಕ್ಕೆ ಹೋಗಿದ್ದ ಸಮಯದಲ್ಲಿ ಪರಾರಿಯಾಗಿದ್ದಾರೆ. ವಿದ್ಯಾನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇವರು  ರಾಜ್ಯ ಮಹಿಳಾ ನಿಲಯ ನಿವಾಸಿಗಳಾಗಿದ್ದ 21 ಮತ್ತು 19 ವರ್ಷದ ಯುವತಿಯರು. ನಾಲ್ಕು ವರ್ಷಗಳ ಹಿಂದೆ ಪ್ರೀತಿಸಿ ಅಂತರ್‌ಧರ್ಮೀಯ ಯುವಕನನ್ನು ಒಬ್ಬರು ಮದುವೆಯಾಗಿದ್ದರು. ಆದರೆ, ಆಗ […]

ಶಾಸಕ ಯು.ಟಿ.ಖಾದರ್ ಸಂಚರಿಸುತ್ತಿದ್ದ ಕಾರು ಅಪಘಾತ, ಖಾದರ್ ಹಾಗೂ ಕಾರು ಚಾಲಕನಿಗೆ ಗಾಯ

Wednesday, April 14th, 2021
UT Khader

ಮಂಗಳೂರು : ಮಾಜಿ ಸಚಿವ, ಶಾಸಕ ಯು.ಟಿ.ಖಾದರ್ ಅವರು ಸಂಚರಿಸುತ್ತಿದ್ದ ಕಾರು  ಬುಧವಾರ ಬೆಳಗ್ಗೆ 8:45ರ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ ದಾವಣಗೆರೆ ಸಮೀಪದ ಒಲಾಲ್ ಕ್ರಾಸ್ ಎಂಬಲ್ಲಿ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಖಾದರ್ ಅವರು ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ. ಕಾರು ಚಾಲಕ ಕೂಡಾ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಬೆಳಗಾವಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಬೆಂಗಳೂರಿನಿಂದ ಬೆಳಗಾವಿಗೆ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ದಾವಣಗೆರೆ-ಆನಗೋಡು ಮಧ್ಯೆ ರಾಷ್ಟ್ರೀಯ ಹೆದ್ದಾರಿ 4ರ ಒಲಾಲ್ ಕ್ರಾಸ್ ಬಳಿ ಖಾದರ್ […]

ತವರಿನಿಂದ ಹಣ ಹಾಗೂ ಬೈಕ್‍ ಕೊಡಿಸುವಂತೆ ಪೀಡಿಸುತ್ತಿದ್ದ ಪತಿ, ಮದ್ವೆಯಾಗಿ 8 ತಿಂಗಳಲ್ಲೇ ಪತ್ನಿಆತ್ಮಹತ್ಯೆ

Friday, March 19th, 2021
Hajira

ದಾವಣಗೆರೆ : ವ್ಯಾಪಾರ ಮಾಡಲು ತವರಿನಿಂದ ಹಣ ತರಲು ಪೀಡಿಸುತ್ತಿದ್ದ ಪತಿಯ ಕಾಟ ತಾಳಲಾರದೆ  ಗೃಹಿಣಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ದಾವಣಗೆರೆಯ ಬಂಬೂ ಬಜಾರ್ ನ ಮನೆಯೊಂದರಲ್ಲಿ ನಡೆದಿದೆ. ಬಿಬೀ ಅಜೀರಾ (19) ಆತ್ಮಹತ್ಯೆಗೀಡಾದ ಗೃಹಿಣಿ. ಈಕೆ ವರದಕ್ಷಿಣೆ ಕಿರುಕುಳಕ್ಕೆ ಮನನೊಂದು ಅತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಬಿಬೀ ಅಜಿರಾ-ಇಮ್ರಾನ್ ಮದುವೆಯಾಗಿ 8 ತಿಂಗಳಷ್ಟೆ ಕಳೆದಿತ್ತು. ಅಜಿರಾ ಕುಟುಂಬಸ್ಥರು 1ಲಕ್ಷ ರೂ ನಗದು, 3 ತೊಲೆ ಚಿನ್ನಾಭರಣ ಕೊಟ್ಟು ಮದುವೆ ಮಾಡಿ ಕೊಟ್ಟಿದ್ದರು. ಆದರೆ ಇತ್ತೀಚಿಗೆ ಪತಿ ಹಾಗೂ […]

ಗೋವಾ ಪ್ರವಾಸ ಹೋರಾಟ ಮಿನಿ ಬಸ್ ಅಪಘಾತ, 11 ಮಹಿಳೆಯರ ದುರ್ಮರಣ, ಸಾವಿನ ಸಂಖ್ಯೆ ಏರಿಕೆ

Friday, January 15th, 2021
Goa Tour

ಧಾರವಾಡ :  ದಾವಣಗೆರೆಯಿಂದ ಮುಂಜಾನೆ ಮೂರು ಗಂಟೆಗೆ ಹೊರಟಿದ್ದ ಮಿನಿಬಸ್ ಧಾರವಾಡ ಸಮೀಪ ಟಿಪ್ಪರ್ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ 6 ಜನ ಸಾವನ್ನಪ್ಪಿದ್ದರು. ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಐದು ಮಂದಿ ಅಸುನೀಗಿದರು. ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ದಾವಣಗೆರೆಯ ವಿದ್ಯಾನಗರ, ಎಂಸಿಸಿ ಎ ಬ್ಲಾಕ್ ಮತ್ತು ಎಂಸಿಸಿ ಬಿ ಬ್ಲಾಕ್ ನಿವಾಸಿಯ ಕೆಲ ಮಹಿಳೆಯರು ಒಂದೆಡೆ ಸೇರಿ ಎಂಜಾಯ್ ಮಾಡಲು ಗೋವಾದ ಪಣಜಿಗೆ ಖಾಸಗಿ ಮಿನಿ ಬಸ್ವೊಂದನ್ನು ಬುಕ್ ಮಾಡಿ ಪ್ರವಾಸ  ಕೈಗೊಂಡಿದ್ದರು. ಇಂದು ಬೆಳಗ್ಗೆ ಸರಿಸುಮಾರು 3 ಗಂಟೆ […]